Breaking News

Yearly Archives: 2020

ಕೊಡಗಿನಲ್ಲಿ ಗಾಂಜಾ ಮಾರಾಟ ದಂಧೆ ಹೊಸದೇನು ಅಲ್ಲ.ಪೊಲೀಸ್ ಇಲಾಖೆಯಲ್ಲಿ ಕೆಲ ಅಧಿಕಾರಿಗಳು ಕಳ್ಳರಿದ್ದಾರೆ……………….?

ಮಡಿಕೇರಿ: ಕೊಡಗಿನಲ್ಲಿ ಗಾಂಜಾ ಮಾರಾಟ ದಂಧೆ ಹೊಸದೇನು ಅಲ್ಲ. ಹಿಂದಿನಿಂದಲೂ ಗಾಂಜಾ ಮಾರಾಟ ತುಂಬಾ ಇದೆ. ಆದರೆ ಪೊಲೀಸ್ ಇಲಾಖೆಯ ಕೆಲವು ಅಧಿಕಾರಿಗಳು ಕಳ್ಳರಿದ್ದಾರೆ. ಅವರು ಗಾಂಜಾ ಮಾರಾಟಗಾರರಿಂದ ಮಾಮೂಲು ಪಡೆದು ಪ್ರಕರಣಗಳನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಪೊಲೀಸ್ ಇಲಾಖೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಗಾಂಜಾ ಮಾರಾಟ ಕೊಡಗಿನಲ್ಲಿ ಹೊಸದೇನು ಅಲ್ಲ. ಪೊಲೀಸರು ಮಾತ್ರ ಸುಮ್ಮನಾಗಿದ್ದು ಏಕೆ?, ಈಗ ಒಂದೇ ಬಾರಿ ಎಲ್ಲವನ್ನೂ …

Read More »

ಸಂಜನಾ, ಜಮೀರ್ ಸಹಾಯ ಕೇಳಿದ್ದೇಕೆ?- ಡ್ರಗ್ಸ್ ಪ್ರಕರಣದಲ್ಲಿ ರಾಹುಲ್‍ಗೆ ಬಿಜೆಪಿ ಟಾಂಗ್

ಬೆಂಗಳೂರು: ದೇಶದಲ್ಲಿ ಡ್ರಗ್ಸ್ ಮಾಫಿಯಾ ಸಾಕಷ್ಟು ಸದ್ದು ಮಾಡುತ್ತಿದೆ. ಇದೇ ವೇಳೆ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸಂಜನಾ ಹಾಗೂ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರಿಗೂ ಇರುವ ಸಂಬಂಧವನ್ನು ಪ್ರಶ್ನಿಸಿರುವ ಕರ್ನಾಟಕ ಬಿಜೆಪಿ, ರಾಹುಲ್ ಗಾಂಧಿ ಅವರಿಗೆ ಟಾಂಗ್ ನೀಡಿದೆ. ಡ್ರಗ್ಸ್ ಮಾಫಿಯಾ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಡ್ರಗ್ಸ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ನಟಿ ಸಂಜನಾ ಕಾಂಗ್ರೆಸ್ ನ ಹಿರಿಯ ನಾಯಕ, ಶಾಸಕ …

Read More »

ಇನ್ನೆರಡು ದಿನಗಳಲ್ಲಿ ಜಮೀರ್ ಬಂಧನವಾಗುತ್ತದೆ ಎಂದ ಬಿಜೆಪಿ ವಕ್ತಾರ ರವಿ ಕುಮಾರ್

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಇಬ್ಬರು ನಟಿಯರು ಅರೆಸ್ಟ್ ಆದ ಬಳಿಕ ಕೇಸ್‍ನಲ್ಲಿ ರಾಜಕೀಯ ನಂಟಿನ ಕುರಿತ ಚರ್ಚೆ ಜೋರಾಗಿದೆ. ಶಾಸಕ ಜಮೀರ್ ಅಹ್ಮದ್ ಅವರ ಹೆಸರನ್ನು ಪ್ರಕರಣದಲ್ಲಿ ಬಿಜೆಪಿ ಎಳೆದು ತಂದಿದೆ. ಇದರ ಬೆನ್ನಲ್ಲೇ ಇನ್ನೆರಡು ದಿನಗಳಲ್ಲಿ ಜಮೀರ್ ಬಂಧನವಾಗುತ್ತದೆ ಎಂದು ಬಿಜೆಪಿ ವಕ್ತಾರ ರವಿ ಕುಮಾರ್ ಹೇಳಿದ್ದಾರೆ.ಮಾತನಾಡಿದ ರವಿ ಕುಮಾರ್ ಅವರು, ಇನ್ನು ಕೆಲ ದಿನಗಳಲ್ಲಿ ಶಾಸಕ ಜಮೀರ್ ಅವರನ್ನು ಪ್ರಕರಣದಲ್ಲಿ ಬಂಧನ ಮಾಡುವ ಸಮಯ …

Read More »

ಸಂಜನಾ ಅವರೊಂದಿಗೆ ಕೊಲಂಬೋಗೆ ಹೋಗಿದ್ದು ಸಾಬೀತಾದರೆ ನನ್ನ ಆಸ್ತಿಯೆಲ್ಲ ಸರ್ಕಾರಕ್ಕೆ ಬರೆದುಕೊಡುತ್ತೇನೆ

ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ನಟಿ ಸಂಜನಾ ಅವರೊಂದಿಗೆ ನಾನು ಕೊಲಂಬೋಗೆ ಹೋಗಿದ್ದು ಸಾಬೀತಾದರೆ ನನ್ನ ಆಸ್ತಿಯೆಲ್ಲ ಸರ್ಕಾರಕ್ಕೆ ಬರೆದುಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಸವಾಲು ಎಸೆದಿದ್ದಾರೆ. ನಟಿ ಸಂಜನಾ ಅವರ ವಿಚಾರದಲ್ಲಿ ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳ ಕುರಿತು ಕೊನೆಗೂ ಮೌನ ಮುರಿದ ಜಮೀರ್ ಅವರು, ಸಂಜನಾ ಹಾಗೂ ನಾನು ಕೊಲಂಬೋಗೆ ಹೋಗಿರುವ ಬಗ್ಗೆ ಖುದ್ದು ಸಿಎಂ ತನಿಖೆ ಮಾಡಲಿ ಎಂದು …

Read More »

ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಇಟ್ಟಿದ್ದ ಆರೋಪಿ ಮುಜಾಯಿದ್‍ನನ್ನು ಕೊನೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಇಟ್ಟಿದ್ದ ಆರೋಪಿ ಮುಜಾಯಿದ್‍ನನ್ನು ಕೊನೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ವಾಟರ್ ಮ್ಯಾನ್ ಕೆಲಸ ಮಾಡ್ಕೊಂಡಿದ್ದ ಮುಜಾಯಿದ್, ಗಲಭೆ ದಿನ ನೂರಕ್ಕೂ ಹೆಚ್ಚು ಮಂದಿಯನ್ನು ಡಿಜೆ ಹಳ್ಳಿ ಠಾಣೆ ಬಳಿಯಿಂದ ಅಖಂಡ ಮನೆ ಬಳಿ ಕರೆದೊಯ್ದಿದ್ದ. ಇಷ್ಟು ದಿನ ಒಂದೊಂದು ದಿನ ಒಂದೊಂದು ಜಿಲ್ಲೆಯಲ್ಲಿ ತಲೆಮರೆಕೊಂಡಿದ್ದ ಎಂಬ ಮಾಹಿತಿ ಲಭಿಸಿದೆ. ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಇಡಲು …

Read More »

ನಾನು ಪ್ರತಿನಿತ್ಯ ಗೋಮೂತ್ರ ಸೇವಿಸುತ್ತೇನೆ: ಅಕ್ಷಯ್ ಕುಮಾರ್

ಮುಂಬೈ: ನಾನು ಪ್ರತಿ ನಿತ್ಯ ಗೋಮೂತ್ರ ಸೇವಿಸುತ್ತೇನೆ ಎಂದು ಬಾಲಿವುಡ್ ನಟ ಕಿಲಾಡಿ ಅಕ್ಷಯ್ ಕುಮಾರ್ ಹೇಳಿದ್ದಾರೆ.ವೈಲ್ಡ್ ಮ್ಯಾನ್ ಎಂದೇ ಖ್ಯಾತರಾಗಿರುವ ಬಿಯರ್ ಗ್ರಿಲ್ಸ್ ಹಾಗೂ ಹುಮಾ ಖುರೇಶಿ ನಡೆಸಿದ ಇನ್‍ಸ್ಟಾಗ್ರಾಮ್ ಲೈವ್‍ನಲ್ಲಿ ಭಾಗವಹಿಸಿದ ವೇಳೆ ಸ್ವತಃ ಅಕ್ಷಯ್ ಕುಮಾರ್ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಆಯುರ್ವೇದ ಕಾರಣಗಳಿಂದಾಗಿ ಕಾಡಿನಲ್ಲಿ ಸ್ಟಂಟ್ ಮಾಡುವುದು ನನಗೆ ಸಮಸ್ಯೆ ಆಗಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಇದೇ ವೇಳೆ ಪ್ರತಿ ನಿತ್ಯ ಗೋಮೂತ್ರವನ್ನು ಸೇವಿಸುತ್ತೇನೆ …

Read More »

ಶ್ರೀ ಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಶಿರಸಿ ಮಾರುಕಟ್ಟೆ ಪೊಲೀಸರು

ಶಿರಸಿ: ಅಕ್ರಮವಾಗಿ ಶ್ರೀ ಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಶಿರಸಿ ಮಾರುಕಟ್ಟೆ ಪೊಲೀಸರು ಈರ್ವರನ್ನು ಬಂಧಿಸಿ ಅವರಿಂದ ಸುಮಾರು ೨೬ ಸಾವಿರ ರೂಪಾಯಿ ಶ್ರೀಗಂಧವನ್ನು ಹಾಗೂ ಸಾಗಿಸಲು ಬಳಸಿದ ಬೈಕ್ ನ್ನು ವಶಪಡಿಸಿಕೊಂಡಿರುವ ಘಟನೆ ನಗರದ ಕರಿಗುಂಡಿ ರಸ್ತೆಯಲ್ಲಿ ನಡೆದಿದೆ.  ಶಿರಸಿ – ಕರಿಗುಂಡಿ ರಸ್ತೆಯ ಲಿಡ್ಕರ್ ಕಾಲೋನಿ ಕ್ರಾಸ್ ಹತ್ತಿರ ಮೊಟಾರ್ ಸೈಕಲ್ ನಂ ಕೆ.ಎ ೧೫ ಆರ್ ೧೪೯೯ ರ ಮೇಲೆ  ಇರ್ಷಾದ್ …

Read More »

ಗಾಂಜಾ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದವರ ಮೇಲೆ   ಎಸಿಪಿ ದಾಳಿ

ಬೆಳಗಾವಿ – ಬೆಳಗಾವಿ -ಬಾಗಲಕೋಟ್ ರಸ್ತೆ, ಸಿಂಧೊಳ್ಳಿ ಕ್ರಾಸ್ ಕುಬೇರ ವೈನ್ಸ್ ಮತ್ತು ಅಯ್ಯಂಗಾರ ಬೇಕರಿ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದವರ ಮೇಲೆ   ಎಸಿಪಿ ಮಾಹಾಂತೇಶ್ವರ ಜಿದ್ದಿ ಮಾರ್ಗದರ್ಶನದಲ್ಲಿ  ದಾಳಿ ಮಾಡಿ ನಾಲ್ವರನ್ನು ಬಂಧಿಸಲಾಗಿದೆ. ಸಿದ್ದಪ್ಪಾ ಬಸವಂತ ಕುರುಬರ (೩೫) (ಸಾ|| ನಡಕಿನ ಓಣಿ ಹಣ್ಣಿಕೇರಿ ತಾ: ಬೈಲಹೊಂಗಲ ಜಿ: ಬೆಳಗಾವಿ),  ಸೋಮನಾಥ ಶಿವಪ್ಪಾ ಮಾದನಶೆಟ್ಟಿ (೩೪) (ಸಾ|| ನಡಕಿನ ಓಣಿ ಹಣ್ಣಿಕೇರಿ …

Read More »

ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ೧೨.೧೨ ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶಕ್ಕೆ…

ಖಾನಾಪುರ: ಪಟ್ಟಣದ ತಹಸೀಲ್ದಾರ್ ಕಚೇರಿಯ ಆಹಾರ ಮತ್ತು ನಾಗರಿಕ ಪೂರೈಕೆ ಶಾಖೆಯ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ೧೨.೧೨ ಲಕ್ಷ ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಐವರನ್ನು ಬಂಧಿಸಿದ ಘಟನೆ ಬುಧವಾರ ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಬುಧವಾರ ತಾಲೂಕಿನ ಗೋಲಿಹಳ್ಳಿ ಗ್ರಾಮದ ಬಳಿ ಬೆಳಗಾವಿ ತಾಳಗುಪ್ಪ ಹೆದ್ದಾರಿಯಲ್ಲಿ ಹುಬ್ಬಳ್ಳಿಯಿಂದ ಅಕ್ಕಿಯ ಮೂಟೆಗಳನ್ನು ಹೊತ್ತುಕೊಂಡು ಮಹಾರಾಷ್ಟ್ರದತ್ತ ಹೊರಟಿದ್ದ ಎರಡು ಸರಕು ಸಾಗಾಣಿಕೆ ಲಾರಿಗಳನ್ನು ಪತ್ತೆ ಹಚ್ಚಿದ ಆಹಾರ ಇಲಾಖೆಯ …

Read More »

ಕಿತ್ತೂರು ಚೆನ್ನಮ್ಮನ ಮೂರ್ತಿಯ ಮುಖಕ್ಕೆ ಜೇನು ಹುಳುಗಳು……………

ಹುಬ್ಬಳ್ಳಿ: ಸೂಕ್ತ ನಿರ್ವಹಣೆ ಹಾಗೂ ಸ್ವಚ್ಛತೆ ಕಾಪಾಡದ ಹಿನ್ನೆಲೆ ಹುಬ್ಬಳಿಯ ಐಕಾನ್, ಸುಪ್ರಸಿದ್ಧ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಪುತ್ಥಳಿಗೆ ಜೇನು ಹುಳುಗಳು ಮುತ್ತಿಕೊಂಡಿವೆ. ಚೆನ್ನಮ್ಮನ ಮುಖ ಕಾಣದಂತೆ ದಟ್ಟವಾಗಿ ಹುಳುಗಳು ಮುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರ ವಾಸಿಗಳು ಕಿಡಿಕಾರಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಹುಬ್ಬಳ್ಳಿಯ ಜನನಿಬೀಡ ಪ್ರದೇಶವಾಗಿದ್ದು, ಎಲ್ಲರಿಗೂ ತಿಳಿದ ವಿಚಾರ. ಹುಬ್ಬಳ್ಳಿಯನ್ನು ಇದೇ ವೃತ್ತದಿಂದಲೂ ಹಲವರು ಗುರುತಿಸುತ್ತಾರೆ. ಹುಬ್ಬಳ್ಳಿಯ ಐಕಾನ್ ಎಂದೇ ಈ ವೃತ್ತವನ್ನು ಕರೆಯಲಾಗುತ್ತದೆ. …

Read More »