Breaking News

Yearly Archives: 2020

ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ

ಸವದತ್ತಿ / ಉಗರಗೋಳ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕರೂ ಆದ ಆನಂದ ಮಾಮನಿ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ. ‘2018ರ ಮಾರ್ಚ್‌ 23ರಂದು 16 ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರ ಅಧಿಕಾರದ ಅವಧಿ ಮುಗಿದಿದ್ದು, ಹೊಸದಾಗಿ ರಚನೆ ಆಗಬೇಕಿದೆ. ಅಲ್ಲಿವರೆಗೆ ಅಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ನೇಮಿಸಲಾಗಿದೆ’ ಎಂದು …

Read More »

ಕರ್ಮ ನಿಮ್ಮನ್ನ ಬಿಡಲ್ಲ- ರಿಯಾ ಬಂಧನಕ್ಕೆ ಅಂಕಿತಾ ಪ್ರತಿಕ್ರಿಯೆ

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿಯ ಬಂಧನವಾಗಿದ್ದು, ಸುಶಾಂತ್ ಸಿಂಗ್ ರಜಪೂತ್ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕರ್ಮ ನಿಮ್ಮ ವಿಧಿಯನ್ನ ನಿರ್ಧರಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಅದೃಷ್ಟದಿಂದ ಏನು ಸಾಧಿಸಲು ಸಾಧ್ಯವಿಲ್ಲ. ಅದು ಕೇವಲ ಕ್ಷಣಿಕ. ನೀವು ಮಾಡುವ ಕೆಲಸಗಳು ನಿಮ್ಮ ಅದೃಷ್ಟವನ್ನ ಬದಲಾಯಿಸುತ್ತದೆ. ಅದುವೇ ಕರ್ಮ ಎಂದು ಬರೆದಿರುವ ಸಾಲುಗಳ ಫೋಟೋವನ್ನ ಅಂಕಿತಾ ಲೋಖಂಡೆ ಹಂಚಿಕೊಂಡಿದ್ದಾರೆ. ಮೂರು ದಿನದ …

Read More »

ರಾಜ್ಯದಲ್ಲಿ ಕೊರೋನಾಕ್ಕೆ 2ನೇ ಗರಿಷ್ಠ ಸಾವು

ಬೆಂಗಳೂರು : ರಾಜ್ಯದಲ್ಲಿ ಮಂಗಳವಾರ ಕೊರೋನಾ ಹೆಮ್ಮಾರಿಗೆ 146 ಮಂದಿ ಬಲಿಯಾಗಿದ್ದು, ಹೊಸದಾಗಿ 8,225 ಮಂದಿ ಕೊರೋನಾ ಸೋಂಕಿತರಾಗಿದ್ದಾರೆ. ತನ್ಮೂಲಕ ರಾಜ್ಯದಲ್ಲಿನ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.12 ಲಕ್ಷ ತಲುಪಿದೆ. ಕರೋನಾ ಸೋಂಕಿಗೆ ಮಂಗಳವಾರ 146 ಮಂದಿ ಬಲಿಯಾಗಿರುವುದು ಇದುವರೆಗಿನ ಎರಡನೇ ಗರಿಷ್ಠ ಸಾವಿನ ಪ್ರಮಾಣವಾಗಿದೆ. ಆಗಸ್ಟ್‌ 25 ರಂದು 148 ಮಂದಿ ಸೋಂಕಿಗೆ ಮೃತಪಟ್ಟಿದ್ದು ಇದುವರೆಗಿನ ದಾಖಲೆ. ರಾಜ್ಯದಲ್ಲಿ ಸದ್ಯ 96,918 ಸಕ್ರೀಯ ಕೊರೋನಾ ಪ್ರಕರಣಗಳಿದ್ದು ಇದರಲ್ಲಿ …

Read More »

ರಾಜಕೀಯದ ನಿಖರ ಭವಿಷ್ಯದ ಮೂಲಕ ಖ್ಯಾತಿಗಳಿಸಿದ್ದ ಪಂ.ಶ್ರೀಪಾಲ್‌ ಇನ್ನಿಲ್ಲ

ಅಥಣಿ  : ರಾಜಕೀಯ ಭವಿಷ್ಯ ನುಡಿಯುವ ಮೂಲಕ ಖ್ಯಾತಿಗಳಿಸಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿಯ ಪಂಡಿತ ಶ್ರೀಪಾಲ್‌ ಉಪಾಧ್ಯೆ (78) ಮಂಗಳವಾರ ಬೆಳಗ್ಗೆ ನಿಧನರಾದರು. ನ್ಯುಮೋನಿಯಾದಿಂದ ಬಳಲುತ್ತಿದ್ದ ಉಪಾಧ್ಯೆ ಅವರು ಬೆಳಗಿನ ಜಾವ 6.30ಕ್ಕೆ ನಿಧನರಾದರು.1985ರಲ್ಲಿ ಚುನಾವಣೆಗೆ ಸ್ಪರ್ಧಿಸದ ಆ ಧೀಮಂತ ವ್ಯಕ್ತಿ ಮುಖ್ಯಮಂತ್ರಿ ಆಗ್ತಾರೆ ಎಂದು ಕವಡೆ ಭವಿಷ್ಯ ನುಡಿದಿದ್ದರು. ಅದರಂತೆ ಅಂದು ಚುನಾವಣೆಗೆ ಸ್ಪರ್ಧಿಸದ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದರು. 2018ರ ವಿಧಾನಸಭೆ ಚುನಾವಣೆ ವೇಳೆ ಎಚ್‌.ಡಿ.ಕುಮಾರಸ್ವಾಮಿಯೇ …

Read More »

ಕೊರೋನಾಗೆ ಸೋಂಕಿಗೆ ಇಬ್ಬರು ವೈದ್ಯರು ಬಲಿ

ಕುಣಿಗಲ್‌/ಗಂಗಾವತಿ  : ಕೊರೋನಾ ಸೋಂಕಿಗೆ ವೈದ್ಯರಿಬ್ಬರು ಮಂಗಳವಾರ ಬಲಿಯಾಗಿರುವ ಘಟನೆ ತುಮಕೂರಿನ ಕುಣಿಗಲ್‌ ಹಾಗೂ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಕುಣಿಗಲ್‌ನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ದೇವರಾಜ್‌(37) ಅವರಿಗೆ 5 ದಿನಗಳ ಹಿಂದೆ ಕೊರೋನಾ ಸೋಂಕು ಕಾಣಿಸಿಕೊಂಡು ತಾಲೂಕಿನ ಚಿನ್ನತಿಮ್ಮನಪಾಳ್ಯದ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಮಂಗಳವಾರ ಕೂಡ ಕೊರೋನಾ ಅಬ್ಬರ: ಗುಣಮುಖ ಸಂಖ್ಯೆಯಲ್ಲೂ ಹೆಚ್ಚಳ . ಗಂಗಾವತಿಯ ಖ್ಯಾತ …

Read More »

45 ವರ್ಷ ಬಳಿಕ ಚೀನಾ ಗಡಿಯಲ್ಲಿ ಗುಂಡಿನ ಸದ್ದು, ತೀವ್ರವಾದ ಯುದ್ಧಾತಂಕ!

ನವದೆಹಲಿ :ಲಡಾಖ್‌ನ ಗಡಿಯಲ್ಲಿ ನಾಲ್ಕೈದು ತಿಂಗಳಿನಿಂದ ಭಾರತದ ಸ್ಥಳಗಳನ್ನು ಆಕ್ರಮಿಸಿಕೊಳ್ಳಲು ಯತ್ನಿಸುತ್ತಲೇ ಇರುವ ಚೀನಾ ಸೇನೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮೊದಲ ಬಾರಿ ಗುಂಡು ಹಾರಿಸಿದೆ. ಗಾಳಿಯಲ್ಲಿ ಗುಂಡು ಹಾರಿಸಿ ನಡೆಸಿದ ಈ ಬೆದರಿಕೆ ಯತ್ನಕ್ಕೆ ಭಾರತೀಯ ಸೇನೆ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದು, ಗಡಿಯಲ್ಲಿ ಯುದ್ಧದ ಆತಂಕ ಇನ್ನಷ್ಟುತೀವ್ರವಾಗಿದೆ. ಸೋಮವಾರ ರಾತ್ರಿ ಪೂರ್ವ ಲಡಾಖ್‌ನ ಪ್ಯಾಂಗಾಂಗ್‌ ಸರೋವರದ ದಕ್ಷಿಣದ ದಂಡೆಯ ಮುಖ್‌ಪರಿ ಎಂಬಲ್ಲಿ ಈ …

Read More »

ಇಂದಿನಿಂದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಸ್ಕಾಂ ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಇರುವುದರಿಂದ ಸೆ.9ರಿಂದ 13ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.     ವ್ಯತ್ಯಯವಾಗುವ ಸ್ಥಳಗಳು: ಸೆ.9ರಂದು ಗೃಹಲಕ್ಷ್ಮೀ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, 10ರಂದು ದುಗಲಮ್ಮ ಬಡಾವಣೆ, ಕಂಠೀರವ ಸ್ಟುಡಿಯೊ ರಸ್ತೆ, ನರಸಿಂಹುಲು ಬಡಾವಣೆ, ಇಟ್ಟಮಡು ಮುಖ್ಯರಸ್ತೆ, ಮಾರುತಿ ನಗರ, ಶ್ರೀನಿವಾಸ ಕಾಲೊನಿ, ಮಂಜುನಾಥ ನಗರ, ಸೀತಾ ವೃತ್ತ, 11ರಂದು ದ್ವಾರಕಾ ನಗರ, ಹೊಸಕೆರೆಹಳ್ಳಿ, ಜನಶಕ್ತಿ …

Read More »

ಅಧಿವೇಶನಕ್ಕೆ ಹಾಜರಾಗುವ ಸಚಿವರು-ಶಾಸಕರು-ಅಧಿಕಾರಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ಬೆಂಗಳೂರು,ಸೆ.8- ಇದೇ 21ರಂದು ಆರಂಭವಾಗಲಿರುವ ಮಳೆಗಾಲದ ಅಧಿವೇಶನದ ಕಲಾಪದಲ್ಲಿ ಪಾಲ್ಗೊಳ್ಳುವ ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಮಾಧ್ಯಮದವರು ಸೇರಿದಂತೆ ಪ್ರತಿಯೊಬ್ಬರು ಕಡ್ಡಾಯವಾಗಿ ಮೂರು ದಿನ ಮುಂಚಿತವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಜನಪ್ರತಿನಿಧಿಗಳು, ಅಧಿಕಾರಿ ವರ್ಗ ಸೇರಿದಂತೆ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯ ಅಧಿಕಾರಿಗಳು ದೃಢೀಕರಿಸಿದ ಪ್ರಮಾಣ ಪತ್ರವನ್ನು ಪ್ರದರ್ಶಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ …

Read More »

ದೇಶದ 17 ಜಿಲ್ಲೆಗಳಲ್ಲಿ ಕೊರೊನಾ ಡೇಂಜರ್………..

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಹಾಟ್‍ಸ್ಪಾಟ್ ಜಿಲ್ಲೆಗಳ ಮೇಲೆ ನೇರ ನಿಗಾಯಿಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಪ್ರದೇಶಗಳಲ್ಲಿ ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ ಮೆಂಟ್ ವಿಚಾರದಲ್ಲಿ ಆಗಿರುವ ತಪ್ಪುಗಳನ್ನು ತಿದ್ದಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದ 17 ಹಾಟ್‍ಸ್ಪಾಟ್ ಜಿಲ್ಲೆಗಳ ಮುಖ್ಯ ಆರೋಗ್ಯ ಅಧಿಕಾರಿಗಳ ಜೊತೆಗೆ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಗಳು ಸಭೆ ನಡೆಸಿದ್ದಾರೆ. ಭಾರತದ ಒಟ್ಟು ಸೋಂಕಿತರ ಸಂಖ್ಯೆ …

Read More »

5 ದಿನ ಸಿಸಿಬಿ ಕಸ್ಟಡಿಗೆಸಂಜನಾ

ಬೆಂಗಳೂರು:  ಡ್ರಗ್ಸ್ ಮಾಫಿಯಾ ಆರೋಪದಡಿ ನಟಿ ರಾಗಿಣಿ ಬಂಧನ ಬೆನ್ನಲ್ಲೇ ಇಂದು ಮತ್ತೊಬ್ಬ ಖ್ಯಾತ ನಟಿ ಸಂಜನಾಳನ್ನು  ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಸಿಸಿಬಿ ಅಧಿಕಾರಿಗಳು  ನಟಿ ಸಂಜನಾ ಗಿಲ್ರಾನಿ ಮನೆ ಮೇಳೆ ದಾಳಿ ನಡೆಸಿದ್ದರು. ನಂತರ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಬಳಿಕ 8 ನೇ ಎಸಿಎಂಎ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು.  ಇದೀಗ  ಸಂಜನಾ ಅವರನ್ನು 5 ದಿನ ಸಿಸಿಬಿ ಕಸ್ಟಡಿಗೆ ಒಪ್ಪಿಸಿ  ಕೋರ್ಟ್ ಆದೇಶ …

Read More »