ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಸೆ.8ರಿಂದ 11ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.3. ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು …
Read More »Yearly Archives: 2020
ಮಳೆ ಹಾನಿ: ಬೆಳಗಾವಿ ಜಿಲ್ಲೆಗೆ ಬಂದ ಕೇಂದ್ರ ತಂಡ
ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಬಂದಿರುವ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಜಿಲ್ಲೆಯ ಸ್ಥಿತಿಗತಿ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಹಿತಿ ನೀಡಿದರು. ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಪಾಲ್ಗೊಂಡಿದ್ದರು. ತಂಡವು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಲಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ …
Read More »ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರಿಗೆ ಗುಂಡೇಟು: ಗಡಿ ಉದ್ವಿಗ್ನ
ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಗುಂಡಿನ ಕಾಳಗ ನಡೆದಿದೆ ಎಂದು ಹೇಳಲಾಗಿದೆ. ಪಾಂಗಾಂಗ್ ಸರೋವರದ ಬಳಿ ಚೀನಿ ಸೈನಿಕರು ಹಾಗೂ ಭಾರತೀಯ ಯೋಧರು ಬೀಡುಬಿಟ್ಟಿದ್ದಾರೆ. ಚೀನಿ ಯೋಧರು ಗಡಿ ನುಸುಳಲು ಯತ್ನಿಸಿದ ವೇಳೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು ಮತ್ತೆ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಚೀನಾ ಸರ್ಕಾರದ ಒಡೆತನದ ಗ್ಲೋಬಲ್ ಟೈಮ್ಸ್ ಸೋಮವಾರ ಭಾರತೀಯ …
Read More »ಖಾಸಗಿ ಶಾಲೆಗಳಿಗೆ ಶಿಕ್ಷಣ ಸಚಿವರ ಖಡಕ್ ವಾರ್ನಿಂಗ್ :`ಒನ್ ಟರ್ಮ್ ಪ್ರವೇಶ ಶುಲ್ಕ ಮಾತ್ರ ಪಡೆಯಲು ಸೂಚನೆ
ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಖಾಸಗಿ ಶಾಲೆಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದು, ಒಂದು ಅವಧಿಯ (ಟರ್ಮ್) ಪ್ರವೇಶ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಪಡೆಯಬೇಕು ಎಂದು ಸೂಚಿಸಿದ್ದಾರೆ. ‘ಜೂನ್‌ನಿಂದ ಶಾಲೆಗಳು ಆರಂಭವಾಗಿಲ್ಲ. ಅನೇಕ ಖಾಸಗಿ ಶಾಲೆಗಳ ಶಿಕ್ಷಕರು ಕಷ್ಟದಲ್ಲಿದ್ದಾರೆ. ಹೀಗಾಗಿ, ಮಕ್ಕಳ ದಾಖಲಾತಿಗೆ ಅನುಮತಿ ನೀಡಿ, ಒಂದು ಅವಧಿಯ ಅಧಿಕೃತ ಶುಲ್ಕವನ್ನು ಮಾತ್ರ ಪಡೆಯುವಂತೆ ಸೂಚಿಸಿದ್ದೇವೆ ಮತ್ತು ಸಂಗ್ರಹಿಸಿದ ಶುಲ್ಕವನ್ನು ಶಿಕ್ಷಕರ ವೇತನಕ್ಕೆ ಪಾವತಿಸಲು ಬಳಸುವಂತೆ ತಿಳಿಸಲಾಗಿದೆ …
Read More »ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ: ಸತೀಶ ಜಾರಕಿಹೊಳಿ
ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ್ ಹೇಳಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಮಣ್ಣಿಕೇರಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರು, ಶಾಲಾ ಅಭಿವೃದ್ದಿ ಪದಾಧಿಕಾರಿಗಳು ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಯುವಕ, …
Read More »ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಆಧಾರದ ಮೇಲೆ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ದಾಳಿ
ಬೆಂಗಳೂರು: ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿರುವ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಆಧಾರದ ಮೇಲೆ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ದಾಳಿ ನಡೆಸಿದೆ ಎನ್ನಲಾಗಿದೆ. ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಇಂದು ಬೆಳ್ಳಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ …
Read More »ಐಸಿಐಸಿಐ ಬ್ಯಾಂಕ್ ನ ಮಾಜಿ ಸಿಇಓ ಚಂದಾ ಕೋಚ ಜಾರಿ ನಿರ್ದೇಶನಾಲಯ ಬಂಧಿಸಿದೆ .
ನವದೆಹಲಿ: ಐಸಿಐಸಿಐ ಬ್ಯಾಂಕ್ ನ ಮಾಜಿ ಸಿಇಓ ಚಂದಾ ಕೋಚರ್ ಪತಿ, ಉದ್ಯಮಿ ದೀಪಕ್ ಕೊಚರ್ ಅವರ ಜಾರಿ ನಿರ್ದೇಶನಾಲಯ ಬಂಧಿಸಿದೆ . ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಅವರ ಬಂಧನವಾಗಿದೆ.ಬ್ಯಾಂಕ್ ಮತ್ತು ವಿಡಿಯೋಕಾನ್ ಗ್ರೂಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಕೋಚರ್ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಹೆಚ್ಚಿನ ವಿಚಾರಣೆ ಹಿನ್ನೆಲೆ ದೀಪಕ್ ಕೋಚರ್ ಅವರನ್ನ ಇಡಿ ಬಂಧಿಸಿದೆ. ಕಳೆದ …
Read More »ಜಮೀರ್, ರಾಗಿಣಿ ಯಾರೇ ಆಗಲಿ-ಡ್ರಗ್ಸ್ ಮಾಫಿಯಾ ಕುರಿತು ತನಿಖೆ ಮಾಡಲಿ: ಸಿದ್ದರಾಮಯ್ಯ
ಬೆಂಗಳೂರು: ಸೆಪ್ಟಂಬರ್ 21 ರಿಂದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಡ್ರಗ್ಸ್ ಮಾಫಿಯದ ವಿರುದ್ಧ ಧ್ವನಿ ಎತ್ತೋಣ. ಡ್ರಗ್ಸ್ ಮಾಫಿಯದ ಬಗ್ಗೆಯೇ ಮೊದಲ ದಿನ ಸದನದಲ್ಲಿ ಚರ್ಚೆ ಮಾಡೋಣ. ಆನಂತರ ಬೇರೆ ವಿಷಯ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಶಾಸಕರಿಗೆ ಸೂಚನೆ ನೀಡಿದ್ದಾರೆ. ಇಂದು ಪಕ್ಷದ ಎಂಎಲ್‍ಎ, ಎಂಎಲ್‍ಸಿಗಳ ಜೊತೆಗೆ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ವಿಧಾನಮಂಡಲ ಅಧಿವೇಶನದ …
Read More »ಈ ಬಾರಿಯ ಪ್ರವಾಹದಿಂದಾಗಿ ರಾಜ್ಯದಲ್ಲಿ ಒಟ್ಟು 8,071 ಕೋಟಿ ರೂ.ಗಳಷ್ಟು ನಷ್ಟ:B.S.Y.
ಬೆಂಗಳೂರು: ಪ್ರವಾಹದಿಂದಾಗಿ ಈ ಬಾರಿ ಸಹ ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, 8,071 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೇಂದ್ರ ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪ್ರವಾಹದ ಹಾನಿಯ ಸಮೀಕ್ಷೆಗೆ ಕೇಂದ್ರ ಗೃಹ ಮಂತ್ರಾಲಯದ ಕೆ.ವಿ.ಪ್ರತಾಪ್ ನೇತೃತ್ವದ ತಂಡ ಆಗಮಿಸಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ತಂಡ ಭೇಟಿ ಮಾಡಿ ವಿವರ ಪಡೆಯಿತು. ಈ ವೇಳೆ ರಾಜ್ಯದಲ್ಲಿ ಹಾನಿಯಾಗಿರುವ ಕುರಿತು ಸಿಎಂ ವಿವರಿಸಿದರು. ಈ …
Read More »ಛೋಟಾ ಮುಂಬೈ ಯಲ್ಲಿ ಗಾಂಜಾ ಮಾರಾಟ ಮಾಡುವವರ ಮೇಲೆ ಪೊಲೀಸರ ದಾಳಿ ಮುಂದುವರಿದಿದೆ.
ಹುಬ್ಬಳ್ಳಿ: ಛೋಟಾ ಮುಂಬೈ ಎಂದು ಹೆಸರುವಾಸಿಯಾಗಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುವವರ ಮೇಲೆ ಪೊಲೀಸರ ದಾಳಿ ಮುಂದುವರಿದಿದೆ. ಸೋಮವಾರ ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ, 14 ಸಾವಿರಕ್ಕೂ ಹೆಚ್ಚಿನ ಮೊತ್ತದ ಒಂದು ಕೆಜಿಗೂ ಹೆಚ್ಚಿನ ಗಾಂಜಾ ವಶಕ್ಕೆ ಪಡೆದಿದ್ದಾರೆ. ಕೇಶ್ವಾಪುರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ-ಗದಗ ರಸ್ತೆಯ ರೈಲ್ವೇ ಪ್ಲೈ ಓವರ್ ಬ್ರಿಡ್ಜ್ ಬಳಿ ಮೂವರನ್ನು ಬಂಧಿಸಿ, 6 ಸಾವಿರ ಮೌಲ್ಯದ 600 …
Read More »