ದಾವಣಗೆರೆ: ಡ್ರಗ್ಸ್ ಮಾಫಿಯಾದಲ್ಲಿ ಕೇವಲ ಸ್ಯಾಂಡಲ್‍ವುಡ್ ನಟ, ನಟಿಯರು ಮಾತ್ರವಲ್ಲ ಯುವ ಪೀಳಿಯೇ ಇದೆ. ಈ ಡ್ರಗ್ಸ್ ಮಾಫಿಯಾವನ್ನು ನಮ್ಮ ಸರ್ಕಾರ ಬೇರು ಸಮೇತ ಕಿತ್ತು ಹಾಕಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ಸ್ಯಾಂಡಲ್‍ವುಡ್ ನಟ, ನಟಿಯರು ಮಾತ್ರ ಡ್ರಗ್ಸ್ ಮಾಫಿಯಾದಲ್ಲಿಲ್ಲ. ಯುವ ಪೀಳಿಗೆಯೂ ಇದೆ. ನಮ್ಮ ಸರ್ಕಾರದ ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತು ಹಾಕಲಿದೆ. …
Read More »Yearly Archives: 2020
ಸೋದರಿ ಜೊತೆ ಅನುಚಿತವಾಗಿ ವರ್ತಿಸಬೇಡ ಅಂದಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ
ಗದಗ: ತನ್ನ ಸಹೋದರಿ ಜೊತೆಗೆ ಮಾತನಾಡುವುದು, ಭೇಟಿ ಮಾಡಿ ಅನುಚಿತವಾಗಿ ವರ್ತಿಸಬೇಡಿ ಅಂದಿದ್ದಕ್ಕೆ ಸಹೋದರರಿಬ್ಬರು ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. 23 ವರ್ಷದ ಮುಸ್ತಾಕ್ ಅಲಿ ನದಾಫ್ ಕೊಲೆಯಾದ ಯುವಕ. ದಾವಲ್ ಸಾಬ್ ಮಲ್ಲಾಡದ ಹಾಗೂ ಮಹ್ಮದ್ ಅಲಿ ಮಲ್ಲಾಡದ ಎಂಬ ಸಹೋದರರು ಒಟ್ಟಾಗಿ ಮುಸ್ತಾಕ್ ಅಲಿ ಜೊತೆ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದ ವೇಳೆ …
Read More »ಸೋತು ಎರಡು ವರ್ಷದ ಬಳಿಕ ಕ್ಷೇತ್ರಕ್ಕೆ ಕಾಲಿಟ್ಟ ಸಂತೋಷ್ ಲಾಡ್
ಹುಬ್ಬಳ್ಳಿ: ಕಲಘಟಗಿ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಆತ್ಮಾವಲೋಕನ ಮಾಡಿಕೊಳ್ಳಲು ನನಗೆ ಸ್ವಲ್ಪ ಸಮಯ ಬೇಕಿತ್ತು. ಹೀಗಾಗಿ ಎರಡು ವರ್ಷ ಬಂದಿರಲಿಲ್ಲ. ಆದರೆ ಈ ಕ್ಷೇತ್ರದ ಜನರನ್ನು ಯಾವತ್ತೂ ಮರೆತಿಲ್ಲ. ಮರೆಯೋದು ಇಲ್ಲ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು. ತಾಲೂಕಿನ ಮಡಕಿಹೊನ್ನಿಹಳ್ಳಿಯ ತಮ್ಮ ಅಮೃತ ನಿವಾಸದಲ್ಲಿ ನಡೆದ ಕಾರ್ಯಕರ್ತ ಸಭೆ ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸಿ ಈ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. …
Read More »ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ
ಕಾರವಾರ: ಕಪ್ಪೆಗಳನ್ನು ಹಾವು ನುಂಗುವುದು ಸಾಮಾನ್ಯ. ಹಾಗೆಯೇ ಅಪರೂಪಕ್ಕೆ ಕಪ್ಪೆಗಳೇ ಹಾವನ್ನು ನುಂಗಿದ ಘಟನೆ ಕೂಡ ನಡೆದಿದೆ. ಆದರೆ ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡ ಗ್ರಾಮದಲ್ಲಿ ನಡೆದಿದೆ. ಗೋಂಕರು ಕಪ್ಪೆ ಸಂಶೋಧಕರು ಹೇಳುವಂತೆ ಸುಮಾರು ಏಳು ಕೆಜಿ ತೂಕದ ವರೆಗೆ ದೂಡ್ಡ ಗಾತ್ರದಲ್ಲಿ ಬೆಳೆಯುತ್ತವೆ. ಈ ಕಪ್ಪೆಗಳು ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಹೆಚ್ಚು ಕಾಣಸಿಗುತ್ತವೆ. …
Read More »ನಟಿ ಸಂಜನಾ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರ ದಾಳಿ
ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ದಾಳಿ ಮಾಡಿದ್ದಾರೆ. ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ ಸಿಸಿಬಿ ಬಂಧಿಸಿತ್ತು. ಕಳೆದ ವಾರವೇ ಸಂಜನಾ …
Read More »ಬೆಳಗಾವಿ ಜಿಲ್ಲೆಯಾದ್ಯಂತ ಪೊಲೀಸರ ಭರ್ಜರಿ ದಾಳಿ ; 144 ಕೆ.ಜಿ ಗಾಂಜಾ ವಶ
ಬೆಳಗಾವಿ : ಇತ್ತಿಚೀನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಡ್ರಗ್ ಮಾಫಿಯಾ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ದೊಡ್ಡ ದೊಡ್ಡ ರಾಜಕಾರಣಿಗಳ ಮಕ್ಕಳು ಚಿತ್ರರಂಗದ ದೊಡ್ಡ ದೊಡ್ಡ ನಟ, ನಟಿಯರು ಡ್ರಗ್ ಮಾಫಿಯಾ ದಲ್ಲಿ ಸಿಲುಕಿಕೊಂಡಿದ್ದಾರೆ. ಒಂದೆಡೆ ಡ್ರಗ್ ಮಾಫಿಯಾ ಸದ್ದು ಮಾಡುತ್ತಿದ್ದರೆ ಇತ್ತ ಬೆಳಗಾವಿಯಲ್ಲಿ ಗಾಂಜಾ ನಶೆ ಸದ್ದು ಮಾಡುತ್ತಿದೆ. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಅವ್ಯಾಹತವಾಗಿ ಗಾಂಜಾ ಬೆಳೆದು ರಾಜ್ಯದ ಜೊತೆಗೆ ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಮಾರಾಟ …
Read More »ಮದುವೆಗಳಲ್ಲಿ ಬ್ಯಾಂಡ್‌ಗೆ ಅನುಮತಿ: ಅಗ್ರಹ
ಬೆಳಗಾವಿ: ಮದುವೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಮಂಗಳವಾದ್ಯ ಮತ್ತು ಬ್ರಾಸ್ ಬ್ಯಾಂಡ್‌ಗಳನ್ನು ನುಡಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಮಂಗಳವಾದ್ಯ ಹಾಗೂ ಬ್ಯಾಂಡ್ ಕಲಾವಿದರ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ‘ಈ ವೃತ್ತಿಯನ್ನು ಸಾವಿರಾರು ಮಂದಿ ಅವಲಂಬಿಸಿದ್ದೇವೆ. ಕೋವಿಡ್-19 ಲಾಕ್‌ಡೌನ್‌ನಿಂದಾಗಿ ಸಭೆ, ಸಮಾರಂಭ, ಮದುವೆ, ಜಯಂತಿ, ಜಾತ್ರೆ ಮೊದಲಾದ ಕಾರ್ಯಕ್ರಮಗಳಿಗೆ ಹಲವು ತಿಂಗಳವರೆಗೆ ನಿರ್ಬಂಧ ವಿಧಿಸಲಾಗಿತ್ತು. ಇದರಿಂದಾಗಿ ದುಡಿಮೆ ಇಲ್ಲದೆ, ಗಳಿಕೆಯೂ ಇಲ್ಲದೆ ನಾವು …
Read More »ಬಸ್ ಕಡೆ ಜನರ ಒಲವು: ಸಾರಿಗೆ ಆದಾಯ ಚೇತರಿಕೆ
ಚಿಕ್ಕೋಡಿ: ಕಳೆದ ಆರು ತಿಂಗಳಿಂದ ಕೋವಿಡ್ ಹೊಡೆತಕ್ಕೆ ನಷ್ಟ ಅನುಭವಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗವು ಈಗ ಹಂತ ಹಂತವಾಗಿ ಆದಾಯದಲ್ಲಿ ಚೇತರಿಸಿಕೊಳ್ಳುತ್ತಿದೆ. ಲಾಕ್‌ಡೌನ್ ತೆರವುಗೊಂಡಿರುವ ಪರಿಣಾಮ ದಿನದಿಂದ ದಿನಕ್ಕೆ ಪ್ರಯಾಣಿಕರು ಬಸ್ ಕಡೆ ವಾಲುತ್ತಿದ್ದಾರೆ. ಕಳೆದ ಮಾರ್ಚ್ ಮೂರನೇ ವಾರದಿಂದ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರಕಾರ ಲಾಕ್‌ಡೌನ್ ಜಾರಿ ಮಾಡಿ ಬಸ್ ಸಂಚಾರ ನಿಷೇಧಿಸಿತ್ತು. ಹೀಗಾಗಿ ನಾಲ್ಕು ತಿಂಗಳು ಬಸ್ …
Read More »ಬೆಳಗಾವಿ: ಸಕ್ಕರೆ ಕಾರ್ಖಾನೆ ಎದುರು ರೈತರ ಧರಣಿ
ಎಂ.ಕೆ. ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಕಬ್ಬಿನ ಬಾಕಿ ಬಿಲ್ ಹಾಗೂ ಕಾರ್ಮಿಕರ ವೇತನ ಪಾವತಿಗೆ ಆಗ್ರಹಿಸಿ ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ರೈತರು ಸೋಮವಾರ ಧರಣಿ ಆರಂಭಿಸಿದ್ದಾರೆ. ‘2017-18ನೇ ಸಾಲಿನ ಕಬ್ಬಿನ ಬಾಕಿ ಬಿಲ್ ₹ 7.8 ಕೋಟಿ, 2018-19 ಮತ್ತು 2019-20ನೇ ಸಾಲಿನ ಕಬ್ಬು ಕಟಾವು ಮತ್ತು ಸಾಗಾಣಿಕೆಯ ಬಾಕಿ ₹ 1.2 ಕೋಟಿ ಹಾಗೂ 2019-20ನೇ ಸಾಲಿನಲ್ಲಿ ಜನವರಿ ನಂತರ ಕಬ್ಬು ಪೂರೈಸಿದ ರೈತರ ₹ …
Read More »ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿಗೆ ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಇಂದು ಸಿಸಿಬಿ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ನಟಿ ರಾಗಿಣಿಯನ್ನು 1 ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದ್ದರು. ರಾಗಿಣಿ 3 ದಿನ ಕಸ್ಟಡಿಯಲ್ಲಿ ವಿಚಾರಣೆಗೆ ಸರಿಯಾಗಿ ಸ್ಪಂದಿಸಿಲ್ಲ. ಹೀಗಾಗಿ ಮತ್ತೆ ಮತ್ತೆ 5 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ …
Read More »