Breaking News

Yearly Archives: 2020

ಕಿಮ್ಸ್ ಸಂಸ್ಥೆಯನ್ನು ನಾಡಿಗೆ ಸಂಜೀವಿನಿಯಾಗುವಂತೆ ಮಾದರಿಯಾಗಿ ರೂಪಿಸಿದ್ದಾರೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೋವಿಡ್ ಸಂದರ್ಭದಲ್ಲಿ ಕಿಮ್ಸ್ ನ ಎಲ್ಲಾ ವೈದ್ಯರು ರೋಗಿಗಳ ಬಗೆಗೆ ಬಹಳ ಮುತುವರ್ಜಿ ವಹಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಗಂಭೀರ ಪ್ರಕರಣಗಳನ್ನು ಸಹ ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಗುಣಪಡಿಸುವ ಮೂಲಕ ವೈದ್ಯಕೀಯ ವೃತ್ತಿ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು. ನಗರದ ಸರ್ಕ್ಯೂಟ್ ಹೌಸಿನಲ್ಲಿ ಇಂದು ಬೆಳಗಾವಿಯ ಏಕಸ್ ಇನ್ಫ್ರಾ ಮತ್ತು ಏಕಸ್ ಫೌಂಡೇಶನ್ ಕೋವಿಡ್-19 ರೋಗಿಗಳ …

Read More »

ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ

ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ. ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು ಐವರು ಸ್ನೇಹಿತರು ತೆರಳಿದ್ದಾರೆ. ಇದರಲ್ಲಿ ಅಬ್ದುಲ್‍ನನ್ನು ದಡದಲ್ಲಿ ನಿಲ್ಲಿಸಿ, ಯಾದಗಿರಿಯ ಅಮಾನ್ (16), ಅಯಾನ್ (16), ರೆಹಮಾನ್ (16), ಕಲಬುರಗಿ ಮೂಲದ ರೆಹಮಾನ್ (15 ) ನಾಲ್ವರು ನದಿಗೆ ಈಜಲು ಇಳಿದಿದ್ದಾರೆ. ಈ …

Read More »

ಪಿಪಿಇ ಕಿಟ್ ಧರಿಸಿ ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಚಿಕ್ಕಮಗಳೂರು: ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರವನ್ನು ನಾನೇ ಮಾಡಬೇಕೆಂದು ಹಠ ಹಿಡಿದು ಮಗಳೇ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಬಿಡದಿಯ ಟೊಯೋಟಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 45 ವರ್ಷದ ವ್ಯಕ್ತಿಗೆ ಕೊರೊನಾ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕೊನೆಗೆ ಕೊರೋನಾ ಚಿಕಿತ್ಸೆಯಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗಿ ವ್ಯಾಪಿಸುತ್ತಿದ್ದರಿಂದ ಇತ್ತೀಚಿಗಷ್ಟೆ ಊರಿಗೆ ಬಂದಿದ್ದ ಕುಟುಂಬ ಇಬ್ಬರು ಹೆಣ್ಣು ಮಕ್ಕಳನ್ನು …

Read More »

ಮದ್ಯಪಾನ ಮಾಡಿ ಬಸ್ ಓಡಿಸುತ್ತಿದ್ದ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯಲ್ಲಿ ನಡೆದಿದೆ.ಸಂಜೆ 8 ಗಂಟೆಗೆ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು, ಎಂಟನೇ ಮೈಲಿಯಲ್ಲಿರುವ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಬಸ್ ನಿಲ್ದಾಣದ ಕಂಬಿಯೊಳಗೆ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಬಸ್ …

Read More »

ಶೀಘ್ರ ಬಿಎಸ್‍ವೈ ಸಂಪುಟ ಪುನಾರಚನೆ?ಪ್ರಹ್ಲಾದ್ ಜೋಷಿ ರಮೇಶ್ ಜಾರಕಿಹೊಳಿ ಭೇಟಿ ಊಹಾಪೋಹಗಳಿಗೆ ಎಡೆ

ಬೆಂಗಳೂರು: ಕೊರೊನಾ ಅಟ್ಟಹಾಸ, ಡಿಜೆ ಹಳ್ಳಿ ಗಲಾಟೆ, ಡ್ರಗ್ಸ್ ರಂಪಾಟದ ನಡುವೆ ರಾಜ್ಯ ರಾಜಕಾರಣದಲ್ಲಿ ಸೈಲೆಂಟ್ ಆಗಿ ವಿದ್ಯಮಾನಗಳು ಚುರುಕು ಪಡೆದಿವೆ. ಸಂಪುಟ ಪುನಾರಚನೆಯ ಚರ್ಚೆಗಳು ಜೋರಾಗಿ ಕೇಳಿಬರುತ್ತಿವೆ. ಈ ಬೆನ್ನಲ್ಲೇ ಸೋಮವಾರ ಸಂಜೆ 6 ಗಂಟೆಗೆ ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಸಂಪುಟ ಸಭೆ ಕರೆದಿದ್ದಾರೆ. ಮುಂದಿನ ವಾರ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ. ಸಂಪುಟ ಪುನಾರಚನೆಯಾದರೆ …

Read More »

ಹೆತ್ತ ಮಗಳನ್ನೇ ಎರಡನೇ ಗಂಡನ ಜೊತೆ ಸೇರಿ ಕೊಂದ ತಾಯಿ

ಮೈಸೂರು : ಸ್ವಂತ ತಾಯಿಯೇ ಹೆತ್ತ ಮಗುವನ್ನು ಕೊಲೆ ಮಾಡಿದ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಪವಿತ್ರ ಎಂಬಾಕೆ ಮಗಳು ಜಯಲಕ್ಷ್ಮೀ (6) ಹತ್ಯೆ ಮಾಡಿದ್ದಾಳೆ.ತನ್ನ ಮೊದಲ ಗಂಡನ ಪುತ್ರಿಯನ್ನು ಎರಡನೇ ಗಂಡ ಸೂರ್ಯ ಹಾಗೂ ಅತ್ತೆ ಗೌರಮ್ಮನ ಜೊತೆ ಸೇರಿ ಹತ್ಯೆ ಮಾಡಿದ್ದಾಳೆ. ತಾನು ಹೆತ್ತ ಮಗಳನ್ನೇ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ತಾಯಿ ಪವಿತ್ರ, ಆಕೆಯ ಪತಿ ಸೂರ್ಯ ಹಾಗೂ ಗೌರಮ್ಮನನ್ನು ಮೇಟಗಳ್ಳಿ ಪೊಲೀಸರು …

Read More »

ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಈಗ ಆಟೋ ಚಾಲಕ

ದಾವಣಗೆರೆ: ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ, ಲಕ್ಷಾಂತರ ಮಕ್ಕಳ ಭವಿಷ್ಯಕ್ಕಾಗಿ ನಿರಂತರ ದುಡಿದ ವೈದ್ಯ, ಮೇಲಾಗಿ ಈಗ ಕೋವಿಡ್ ಕಾಲದ ಪರಿಸ್ಥಿತಿಯಲ್ಲಿ ದಿನದ ಕನಿಷ್ಟ 18 ಗಂಟೆಗಳ ಕಾಲ ಸೇವೆ ಸಲ್ಲಿಸುವ ಉತ್ಸಾಹದಲ್ಲಿ ಇರುವ ವೈದ್ಯ ಆಟೋ ಓಡಿಸಿ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಬಳ್ಳಾರಿ ಜಿಲ್ಲಾ ಲಸಿಕಾಧಿಕಾರಿ ಆಗಿದ್ದ ವ್ಯಕ್ತಿ ಆಟೋ ಚಾಲಕರಾಗಿದ್ದಾರೆ. ಆ ಆಟೋದ ಹೆಸರೇ “ಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ’ ಎಂದು. ಇಷ್ಟಕ್ಕೂ ವೈದ್ಯ ಡಾ.ರವೀಂದ್ರನಾಥ್ …

Read More »

ಪ್ರೀತಿಸಿದ ಹುಡುಗಿಗೆ ಯುವಕನ್ನು ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಘಟನೆ:ಗ್ರಾಮಸ್ಥರಿಗೆ ಸಂಕಟ

ದಾವಣಗೆರೆ: ಪ್ರೀತಿಸಿದ ಹುಡುಗಿಗೆ ಯುವಕನೊಬ್ಬ ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಸ್ವಾರಸ್ಯಕರ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೇಮಂತ್ ಎಂಬ ಯುವಕ ತಾನು ಪ್ರೀತಿಸಿದ ಯುವತಿಗೆ ನಡು ರಸ್ತೆಯಲ್ಲೇ ತಾಳಿಕಟ್ಟಿದ್ದಾನೆ. ಹೇಮಂತ್​ ಕಳೆದ 4 ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಆದರೆ, ಇವರ ಪ್ರೀತಿಗೆ ಜಾತಿ ಅಡ್ಡಬಂದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಇದಕ್ಕೆ ಒಪ್ಪದೆ ಹೇಮಂತ್​ನಿಗೆ ತಮ್ಮ ಜಾತಿಯ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ. …

Read More »

ಡಾ. ಪಂ. ಪುಟ್ಟರಾಜ ಗವಾಯಿಗಳವರ ಬಸ್ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಪ್ರತಿಭಟನೆ : ಪೂಜಾ ಕಾರ್ಯ ಮುಂದಕ್ಕೆ

ಗದಗ :  ನಗರದ ನವೀಕರಣಗೊಂಡ ಹಳೆ ಬಸ್ ನಿಲ್ದಾಣಕ್ಕೆ ಪಂ.ಪುಟ್ಟರಾಜ ಗವಾಯಿಗಳ ಹೆಸರನ್ನು ನಾಮಕರಣ ಮಾಡುವಂತೆ ಆಗ್ರಹಿಸಿ ಹೋರಾಟ ಮುಂದುವರೆಸಿದ್ದರಿAದ  ಶಾಸಕ ಎಚ್.ಕೆ.ಪಾಟೀಲ ಅವರು ಭರವಸೆ ನೀಡಿದ್ದರಿಂದ ಸಾರಿಗೆ ಅಧಿಕಾರಿಗಳು ಭಾನುವಾರ ಬಸ್ ನಿಲ್ದಾಣಕ್ಕೆ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮವನ್ನು ಮುಂದೂಡಿದ್ದಾರೆ. ನಗರದಲ್ಲಿ ನವೀಕರಣವಾಗುತ್ತಿರುವ ಹಳೆ ಬಸ್ ನಿಲ್ದಾಣಕ್ಕೆ  ಡಾ. ಪಂ. ಪುಟ್ಟರಾಜ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಆಗ್ರಹಿಸಿ ಸ್ನೇಹ ಬಳಗ, ಕ್ರಾಂತಿ ಸೇನಾ ಹಾಗೂ ವಿವಿಧ …

Read More »

ಕೊರೋನಾ ಸೋಂಕಿತೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದ ಆಯಂಬುಲೆನ್ಸ್ ಚಾಲಕನೋರ್ವ ಆಕೆಯ ಮೇಲೆ ಅತ್ಯಾಚಾರ

ತಿರುವನಂತಪುರ: ಕೊರೋನಾ ಸೋಂಕಿತೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದ ಆಯಂಬುಲೆನ್ಸ್ ಚಾಲಕನೋರ್ವ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಪಥನಂತ್ತಟ್ಟದ ಅರಣ್ಮುಲಾದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, 19 ವರ್ಷದ ಕೊರೊನಾ ಸೋಂಕಿತೆಯನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ, ಆಕೆಯ ಮೇಲೆ ಅಂಬ್ಯುಲೆನ್ಸ್‌ ಚಾಲಕ ಕಾಯಂಕುಲಂ ಮೂಲದ 28 ವರ್ಷ ನೌಫಲ್‌ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆಯಂಬುಲೆನ್ಸ್ ಚಾಲಕ ನೌಫಲ್‌ ಇಬ್ಬರು ಯುವತಿಯನ್ನು ಅಂಬ್ಯುಲೆನ್ಸ್‌ನಲ್ಲಿ …

Read More »