Breaking News

Yearly Archives: 2020

ಸೆ.5ರಂದು ಶಾಸಕ ಬಾಲಚಂದ್ರ ಅಧ್ಯಕ್ಷತೆಯಲ್ಲಿ ಸೆ.5ರಂದು ಶಿಕ್ಷಕರ ದಿನ ಆಚರಣೆ

ಮೂಡಲಗಿ:  ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ  ಸೆ.5ರಂದು ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲ್ಕರ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಮೂಡಲಗಿ ವಲಯ ಶಿಕ್ಷಣಾಧಿಕಾರಗಳ ಕಚೇರಿಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಸಲಾಗುತ್ತದೆ.  ಉದ್ಘಾಟಕರಾಗಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಆಗಮಿಸಲಿದ್ದಾರೆ. ಮೂಡಲಗಿ  ತಹಶೀಲ್ದಾರ್ ಡಿ.ಜೆ.ಮಹಾತ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ, ಕಾರ್ಯನಿರ್ವಾಹಕ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಬಿಇಒ ಅಜೀತ ಮನ್ನಿಕೇರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More »

ಚಂದನವನದ ನಿರ್ಮಾಪಕ ಹಾಗೂ ನಿರ್ದೇಶಕ ಸ್ಟಿಲ್ ಸೀನು ಚಿಕಿತ್ಸೆ ಫಲಿಸದೆ ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ಬೆಂಗಳೂರು, ಸೆ.3- ಅಪಘಾತದಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದ ಚಂದನವನದ ನಿರ್ಮಾಪಕ ಹಾಗೂ ನಿರ್ದೇಶಕ ಸ್ಟಿಲ್ ಸೀನು ಚಿಕಿತ್ಸೆ ಫಲಿಸದೆ ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಗಹನ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದ ಸ್ಟಿಲ್ ಸೀನು ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದ್ದರಿಂದ ಕೋಮಾ ಸ್ಥಿತಿಗೆ ಹೋಗಿದ್ದರು. ಅಂದಿನಿಂದಲೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಸಾವನ್ನಪ್ಪಿದ್ದಾರೆ. ಪಾರ್ವತಮ್ಮ ರಾಜ್‍ಕುಮಾರ್ ಅವರು ತಮ್ಮ ವಜ್ರೇಶ್ವರಿ ಕಂಬೈನ್ಸ್‍ನಡಿ ನಿರ್ಮಾಣ …

Read More »

ಸ್ಯಾಂಡಲ್‍ವುಡ್ ಡ್ರಗ್ಸ್ ಗೆ ಬಾಲಿವುಡ್ ನಂಟು : ಸಂಬರಗಿ

ಬೆಂಗಳೂರು, ಸೆ.3- ಸ್ಯಾಂಡಲ್‍ವುಡ್‍ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.ಸ್ಯಾಂಡಲ್‍ವುಡ್‍ನ ಡ್ರಗ್ಸ್ ನಂಟಿಗೂ ಬಾಲಿವುಡ್‍ಗೂ ಸಂಬಂಧವಿದೆ. ಈ ಬಗ್ಗೆ ತನಿಖೆಯಾಗಬೇಕು. ಬಾಲಿವುಡ್‍ನ ನಂಟು ಹೊಂದಿರುವ ಇಮ್ತಿಯಾಜ್ ಖಾತ್ರಿ ಎಂಬುವವರ ಬಗ್ಗೆ ತನಿಖೆ ನಡೆಸಿದರೆ ಮತ್ತಷ್ಟು ವಿಷಯಗಳು ಹೊರ ಬರಲಿವೆ ಎಂದು ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಇಮ್ತಿಯಾಜ್ ಖಾತ್ರಿ ಎಂಬುವ ವರಿಗೆ ಬಾಲಿವುಡ್‍ನ ನಟ-ನಟಿಯರು, ನಿರ್ಮಾಪಕರ ನಂಟಿದೆ. ಮುಂಬೈನಲ್ಲಿ ನಡೆದ …

Read More »

ಗ್ಲೋಬಲ್ ಇನ್ನೋವೇಷನ್ ಲಿಸ್ಟ್‍ನಲ್ಲಿ ಸ್ಥಾನ ಪಡೆದಿರುವ ವಿಶ್ವದ 50 ಅಗ್ರಮಾನ್ಯ ದೇಶಗಳಲ್ಲಿ ಭಾರತ ಇದೇ ಮೊದಲ ಬಾರಿ ಸೇರ್ಪಡೆ

ಮುಂಬೈ, ಸೆ.3- ಭಾರತದ ಅನ್ವೇಷಣೆ ಮತ್ತು ವಿಜ್ಞಾನ-ತಂತ್ರಜ್ಞನ ಕೀರ್ತಿಯ ಮುಕುಟಕ್ಕೆ ಮತ್ತೊಂದು ಹೆಮ್ಮೆಯ ಗರಿ ಸೇರ್ಪಡೆಯಾಗಿದೆ. ಜಾಗತಿಕ ಅನ್ವೇಷಣೆ ಪಟ್ಟಿ-2020ರಲ್ಲಿ ಭಾರತಕ್ಕೆ 48ನೆ ಸ್ಥಾನ ಲಭಿಸಿದೆ. ಗ್ಲೋಬಲ್ ಇನ್ನೋವೇಷನ್ ಲಿಸ್ಟ್‍ನಲ್ಲಿ ಸ್ಥಾನ ಪಡೆದಿರುವ ವಿಶ್ವದ 50 ಅಗ್ರಮಾನ್ಯ ದೇಶಗಳಲ್ಲಿ ಭಾರತ ಇದೇ ಮೊದಲ ಬಾರಿ ಸೇರ್ಪಡೆಯಾಗಿರುವುದು ಮತ್ತೊಂದು ಹೆಗ್ಗಳಿಕೆ. ಅಲ್ಲದೆ, ಉದ್ಯಾನನಗರಿ ಬೆಂಗಳೂರು, ದೇಶದ ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ರಾಷ್ಟ್ರ ರಾಜಧಾನಿ ನವದೆಹಲಿ ವಿಜ್ಞಾನ ಮತ್ತು ತಂತ್ರಜ್ಞನ ತಾಣದಲ್ಲಿ …

Read More »

ಡಿಜೆಹಳ್ಳಿ-ಕೆಜಿಹಳ್ಳಿ ಗಲಭೆ ಕುರಿತು ಕೇಂದ್ರಕ್ಕೆ ವರದಿ

ಬೆಂಗಳೂರು,ಸೆ.3- ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿಜೆಹಳ್ಳಿ, ಕೆಜಿಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ. ನವೀನ್ ಎಂಬುವರು ಮುಹಮ್ಮದ್ ಪೈಗಂಬರ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ರಾತ್ರೋ ರಾತ್ರಿ ವಾಹನಗಳು ಹಾಗೂ ಶಾಸಕರ ಮನೆಗೂ …

Read More »

ಮೋದಿಜಿ ನಿರುದ್ಯೋಗಿಗಳ ಕಷ್ಟ ನೋಡಲು ಯಾವ ಕನ್ನಡಕ ಬೇಕು ಹೇಳಿ, ತರಿಸಿಕೊಡ್ತೀವಿ”

ಬೆಂಗಳೂರು, ಸೆ.3- ನಿರುದ್ಯೋಗಿಗಳ ಕಷ್ಟ ನೋಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಯಾವ ರೀತಿಯ ಕನ್ನಡಕಬೇಕು ಹೇಳಿ. ಅದು ಎಷ್ಟೇ ಖರ್ಚಾರಲಿ, ಎಲ್ಲೇ ಇರಲಿ ತರಿಸಿಕೊಡುತ್ತೇವೆ ಎಂದು ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂರ್ಯಗ್ರಹಣ ನೋಡುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎರಡುವರೆ ಲಕ್ಷ ರೂಪಾಯಿ ಖರ್ಚು ಮಾಡಿ ಜಪಾನ್‍ನಿಂದ ಕನ್ನಡಕವೊಂದನ್ನು ತರಿಸಿಕೊಂಡಿದ್ದರು. ದುರಾದೃಷ್ಟವಶಾತ್ ಮೋಡ ಕವಿದಿದ್ದರಿಂದ ಸೂರ್ಯಗ್ರಹಣ …

Read More »

ಬೆಳಗಾವಿ ಸೂಪರ್ ಕಾಪ್ ಮಾರ್ಕೆಟ್ ಸ್ಟೇಷನ್ ಇಂದ ವರ್ಗಾವಣೆ………

ಬೆಳಗಾವಿ- ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆಯಾಗಿದ್ದು ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ಮಾರ್ಕೆಟ್ ಎಸಿಪಿಯಾಗಿ ಸದಾಶಿವ ಕಟ್ಟೀಮನಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇಂದು ನಾರಾಯಣ ಭರಮಣಿ ಅವರು ಸದಾಶಿವ ಕಟ್ಟೀಮನಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು ನಾರಾಯಣ ಭರಮಣಿ ಅವರನ್ನು ಸರ್ಕಾರ ಖಾನಾಪೂರ ತರಬೇತಿ ಶಾಲೆಗೆ ವರ್ಗಾವಣೆ ಮಾಡಿದೆ. ಮಾರ್ಕೆಟ್ ಎಸಿಪಿಯಾಗಿ ನಾರಾಯಣ ಭರಮಣಿ ಅವರು ಬೆಳಗಾವಿ ಮಹಾನಗರದಲ್ಲಿ ಕಾನೂನು ಸುವ್ಯೆವಸ್ಥೆ ಕಾಪಾಡುವಲ್ಲಿ ಪ್ರಮುಖ …

Read More »

ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ, ಸಂಜನಾ ಬಳಿಕ ಇದೀಗ ಮತ್ತೊಬ್ಬ ನಟಿಗೆ ಢವಢವ ಶುರು ಆಗಿದೆ.

ಬೆಂಗಳೂರು: ಸ್ಯಾಂಡಲ್‍ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ, ಸಂಜನಾ ಬಳಿಕ ಇದೀಗ ಮತ್ತೊಬ್ಬ ನಟಿಗೆ ಢವಢವ ಶುರು ಆಗಿದೆ. ಹೌದು. ರಾಗಿಣಿ, ಸಂಜನಾ ಹೆಸರು ಥಳುಕು ಹಾಕಿಕೊಳ್ಳುತ್ತಿದ್ದಂತೆಯೇ ಇದೀಗ ನಟಿ ಶರ್ಮಿಳಾ ಮಾಂಡ್ರೆ ಆಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆಯೊಳಗೆ ಶರ್ಮಿಳಾಗೂ ನೋಟಿಸ್ ನೀಡುವ ಸಾಧ್ಯತೆಗಳು ಇವೆ. ಈಗಾಗಲೇ ರಾಗಿಣಿ ಆಪ್ತ ರವಿಶಂಕರ್ ನೀಡಿದ ಮಾಹಿತಿ ಆಧರಿಸಿ ಕಾರ್ತಿಕ್ ರಾಜುವನ್ನು ಸಿಸಿಬಿ …

Read More »

ಧಗ ಧಗನೆ ಹೊತ್ತಿ ಉರಿದ ಚಲಿಸುತ್ತಿದ್ದ ಖಾಸಗಿ ಬಸ್

ಬೀದರ್: ಚಲಿಸುತ್ತಿದ್ದ ಖಾಸಗಿ ಬಸ್ ಎಂಜಿನ್‍ನಲ್ಲಿ ಉಂಟಾದ ಅಗ್ನಿ ಅವಘಡದಿಂದಾಗಿ ನೋಡು ನೋಡುತ್ತಲೇ ಬಸ್ ತುಂಬೆಲ್ಲ ಬೆಂಕಿ ಆವರಿಸಿಕೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಜಿಲ್ಲೆಯ ಹುಮನಾಬಾದ್ ಸಮಿಪದ ಬೀದರ್- ಕಲಬುರಗಿ ಹೆದ್ದಾರಿಯ ಧುಮ್ಮನಸೂರು ಗ್ರಾಮದ ಬಳಿ ತಡರಾತ್ರಿ ಘಟನೆ ನಡೆದಿದೆ. ಡ್ರೈವರ್ ಸಮಯ ಪ್ರಜ್ಞೆಯಿಂದಾಗಿ ಬಸ್‍ನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೀದರ್ ನಿಂದ ಬೆಂಗಳೂರಿಗೆ ಹೊರಟಿದ್ದಾಗ ರೋಡ್ ಬ್ರೇಕರ್ ಬಳಿ ಒಮ್ಮಲೆ ಜಂಪ್ ಆಗಿದ್ದು, …

Read More »

ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ ಆಗಿದ್ದಾರೆ ಇಂದ್ರಜಿತ್ ಲಂಕೇಶ್ ಅವರು ಸ್ಯಾಂಡಲ್‍ವುಡ್ ಕೆಲ ಯುವ ನಟಿ-ನಟಿಯರು ಡ್ರಗ್ ವ್ಯಸನಿಗಳಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಹೀಗಾಗಿ ಸಿಸಿಬಿ ಪೊಲೀಸರು ಇಂದ್ರಜಿತ್‍ಗೆ ನೋಟಿಸ್ ನೀಡಿದ್ದರು. ಆದರೆ ಇಂದ್ರಜಿತ್ ಅವರು ಮಾಹಿತಿ ಮಾತ್ರ ನೀಡಿ ಸೂಕ್ತ ದಾಖಲೆಗಳನ್ನು ನೀಡರಲಿಲ್ಲ. ಈಗ ವಿಚಾರಣೆಗೆ ಮತ್ತೆ ಹಾಜರಾಗಿರುವ ಇಂದ್ರಜಿತ್ ಇಂದು ಕೂಡ ಕೇವಲ ಮಾಹಿತಿ ನೀಡಿ ದಾಖಲೆ ನೀಡಿಲ್ಲ. …

Read More »