Breaking News

Yearly Archives: 2020

ದೆಹಲಿ ರೈತ ಪ್ರತಿಭಟನೆ: ಚಳಿ ತಾಳಲಾರದೆ ಕಳೆದ 20 ದಿನಗಳಲ್ಲಿ 22 ರೈತರು ಸಾವು

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 20 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ವೇಳೆ 22 ರೈತರು ಸಾವನ್ನಪ್ಪಿದ್ದಾರೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿದೆ. ದೆಹಲಿ ಹಾಗೂ ಹರಿಯಾಣದ ಸಿಂಗು ಹಾಗೂ ಟಿಕ್ರಿ ಗಡಿ ಪ್ರದೇಶಗಳಲ್ಲಿ ರೈತರು ಭಾರಿ ಪ್ರಮಾಣದಲ್ಲಿ ಸೇರಿದ್ದು, ತೀವ್ರ ಚಳಿಯ ನಡುವೆಯೂ ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಟಿಕ್ರಿ ಹಾಗೂ ಸಿಂಘು …

Read More »

ಬೆಳಗಾವಿಯ ಸಾಹುಕಾರ್ ಗೆ ಶಾಕ್ ನೀಡಿದ ಸಿಎಂ ಬಿಎಸ್ ವೈ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ. ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ ಸಭೆಯಲ್ಲಿ …

Read More »

ಮೋದಿಯ ಬಣ್ಣದ ಮಾತಿಗೆ ದೇಶ ಮರುಳಾಗಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ರಾಯಬಾಗ: ‘ ಪ್ರಧಾನಿ ಮೋದಿಯ ಬಣ್ಣದ ಮಾತಿಗೆ ಈಗಾಗಲೇ ದೇಶ ಮರುಳಾಗಿದೆ. ಇದೇನು ಹೊಸದೆನಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ. 1965ರಲ್ಲಿಯೇ ನೆಹರು ಅವರು ಜಾರಿಗೆ ತಂದಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳೆದು, ಅಲಂಕರಿಸಿ ಹೊರಟ್ಟಿದ್ದಾರೆ. ದೇಶದ ಜನರು ಬಣ್ಣದ ಮಾತಿಗೆ …

Read More »

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.20ರಂದು ಸಂಜೆ 5 ಗಂಟೆಯಿಂದ ಡಿ.22 ಸಂಜೆ 5 ಗಂಟೆವರೆಗೆ ಸಾರಾಯಿ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಹತ್ವದ ಆದೇಶ ಹೊರಡಿಸಿದ್ದಾರೆ. ಅದೇ ರೀತಿ 2ನೇ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.25ರಂದು ಸಾಯಂಕಾಲ 5 ಗಂಟೆಯಿಂದ ಡಿ.27ರಂದು …

Read More »

ಸಭಾಪತಿ ಬಂದಾಗ ಬಾಗಿಲು ಹಾಕಿ, ಉಪಸಭಾಪತಿಯನ್ನು ಪೀಠದಲ್ಲಿ ಕೂರಿಸಿದ್ದೆ ಮಹಾಪರಾಧ; ಸಿದ್ದರಾಮಯ್ಯ

ಬೆಂಗಳೂರು; ಪರಿಷತ್​ನಲ್ಲಿ ಪ್ರಜಾಪ್ರಭುತ್ವ ಯಾವ ರೀತಿ ಕಗ್ಗೊಲೆ ಆಯ್ತು ಅಂತಾ ನಾನು ನೋಡಿದೆ. ಸಭಾಪತಿ ವಿದೇಶಕ್ಕೆ ಹೋದಾಗ, ಅನಾರೋಗ್ಯ ಇದ್ದಾಗ, ನನ್ನ ಗೈರು ಹಾಜರಿಯಲ್ಲಿ ಕೆಲಸ ಮಾಡಿ ಅಂತಾ ಉಪಸಭಾಪರಿಗೆ ಹೇಳ್ತಾರೆ. ರೂಲ್ಸ್ ಬುಕ್ ಕೂಡ ಮಾಡಿಕೊಂಡಿದ್ದೇವೆ. ರೂಲ್ಸ್ ಕಮಿಟಿ ರೂಲ್ಸ್ ಮಾಡಿರ್ತಾರೆ. ಈ ನಿಯಮಾವಳಿಗಳ ಚೌಕಟ್ಟಿನಲ್ಲಿ ಸಭಾಪತಿಗಳು ಸದನ ನಡೆಸುತ್ತಾರೆ. ಗುರುವಾರ 10ನೇ ತಾರೀಖು ಸಭಾಪತಿ ಸದನ ನಡೆಸಿದ್ದಾರೆ. ಕಾನೂನು ಸಚಿವರ ಆದೇಶದ ಮೇರೆಗೆ ಕೌನ್ಸಿಲ್‌ ಮೀಟಿಂಗ್ ಕರೆದು ಆ ಲೆಟರ್ ನಲ್ಲಿ ಡಿಸ್ಕಷನ್ ಮಾಡಿ …

Read More »

ಲಂಚ ಪಡೆಯುತ್ತಿದ್ದ ಕುಂದಗೋಳ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಹುಬ್ಬಳ್ಳಿ (ಡಿ. 16): ಲಂಚ ಪಡೆಯುತ್ತಿದ್ದ ಕುಂದಗೋಳ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಹುಬ್ಬಳ್ಳಿಯ ಮುತ್ತುಗೌಡ ಗಂಗನಗೌಡರ ಎಂಬುವವರ ಜಮೀನು ಕುಂದಗೋಳದ ಬೆಳ್ಳಿಗಟ್ಟಿ ಬಳಿ ಇದೆ‌. ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಹೆದ್ದಾರಿ ಪ್ರಾಧಿಕಾರದವರು ಜಮೀನನ್ನು ವಶಕ್ಕೆ ಪಡೆದಿದ್ದಾರೆ. ಜಮೀನು ಸ್ವಾಧೀನ ಪಡಿಸಿಕೊಂಡ ನಂತರ ಅದರಲ್ಲಿ ಎಷ್ಟು ಮರಗಳಿದ್ದವು ಎಂಬ ಮಾಹಿತಿಯನ್ನ ತೋಟಗಾರಿಕೆ ಇಲಾಖೆಯಿಂದ ಪಡೆಯಬೇಕಿತ್ತು. ಮರಗಳ ಮಾಹಿತಿ ನೀಡಿದರೆ ಹೆದ್ದಾರಿ ಪ್ರಾಧಿಕಾರದವರು ಪರಿಹಾರ ಹಣವನ್ನು ಕೊಡುತ್ತಿದ್ದರು. …

Read More »

ಉಪಯೋಗಕ್ಕಿಲ್ಲದ ಸಿಸಿ ಟಿವಿ ಕ್ಯಾಮೆರಾಗಳು!

ಪುತ್ತೂರು(ಡಿಸೆಂಬರ್​.16): ನಗರ ಪ್ರದೇಶವಾಗಿ ಬೆಳೆಯುತ್ತಿರುವ ಪುತ್ತೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ, ಕಳ್ಳತನ ಪ್ರಕರಣಗಳೂ ಹೆಚ್ಚಾಗಲಾರಂಭಿಸಿದೆ. ಹಾಡುಹಗಲೇ ಕಾರುಗಳ ಕಳ್ಳತನ ಸೇರಿದಂತೆ ಹಲವು ಅಪರಾಧ ಕೃತ್ಯಗಳು ನಡೆಯುತ್ತಿದ್ದರೂ, ಕಳ್ಳರನ್ನು ಪತ್ತೆ ಹಚ್ಚಲು ಮಾತ್ರ ಪೋಲೀಸರು ವಿಫಲರಾಗುತ್ತಿದ್ದಾರೆ. ಇಂಥಹ ಅಪರಾಧ ಕೃತ್ಯಗಳ ತಡೆಗೆಂದೇ ಪುತ್ತೂರು ನಗರದ ಸುತ್ತಮತ್ತ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದರೂ, ಅವುಗಳಲ್ಲಿ ಹಲವು ಇದೀಗ ಸರಿಯಾಗಿ ಕಾರ್ಯಾಚರಿಸುತ್ತಿಲ್ಲ. ಈ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಸಿಸಿ ಕ್ಯಾಮೆರಾ ಅಳವಡಿಸಲು ತೀರ್ಮಾನಿಸಲಾಗಿದ್ದು, ಕಳ್ಳತನ, ಹಿಟ್ …

Read More »

ನಿವೃತ್ತ ಸೈನಿಕನ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜ್ಯ ಮಟ್ಟದಲ್ಲಿ ಸದ್ದು

ಕಾರವಾರ; ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಬಿರಂಪಾಲಿಯಲ್ಲಿ ನಿವೃತ್ತ ಸೈನಿಕನ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹಲ್ಲೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಪಕ್ಷಪಾತ ಮಾಡಿದ್ದಾರೆ ಎಂದು ಪೋಲಿಸ್ ಇಲಾಖೆ ವಿರುದ್ದ ರಾಜ್ಯ ಮಾಜಿ ಸೈನಿಕರ ಸಂಘ ಆರೋಪದ ಜತೆ ಅಸಮಾಧಾನ ವ್ಯಕ್ತ ಪಡಿಸಿದೆ. ಕಳೆದ ನಾಲ್ಕು ದಿನದ ಹಿಂದೆ ಜಿಲ್ಲೆಯ ಜೋಯಿಡಾ ತಾಲೂಕಿನ ಬಿರಂಪಾಲಿಯಲ್ಲಿ ಹತ್ತು ಜನರ ಗುಂಪೊಂದು ಜಮೀನು ದಾರಿಯ ವಿವಾದಕ್ಕೆ …

Read More »

ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ

ಬೆಂಗಳೂರು, – ಕೊರೊನಾ ಎರಡನೇ ಅಲೆಯ ಆತಂಕಕ್ಕೆ ಬೆಚ್ಚಿರುವ ಬಿಬಿಎಂಪಿ ಮತ್ತು ಸರ್ಕಾರ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಿಷೇಧಕ್ಕೆ ಮುಂದಾಗಿದೆ. ಎಂ.ಜಿ.ರೋಡ್, ಚರ್ಚ್‍ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಮುಂತಾದ ಕಡೆಗಳಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಸಾರ್ವಜನಿಕವಾಗಿ ಹೊಸ ವರ್ಷಾಚಣೆ ಮಾಡಿದರೆ ದಂಡ ವಿಧಿಸಲು ನಿರ್ಧರಿಸಿದೆ. ಆ ಕಳೆದ ಒಂದು ವಾರದ ಹಿಂದೆ ಬಿಬಿಎಂಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಸಿದ್ದಮಾಡಿದೆ. ನಿಯಮಗಳನ್ನು …

Read More »

ಆಸ್ತಿ ತೆರಿಗೆ ಹೆಚ್ಚಳಕ್ಕೆ ಸದ್ದಿಲ್ಲದೆ ತಯಾರಿ

ಬೆಂಗಳೂರು, ಡಿ.- ಆಸ್ತಿ ತೆರಿಗೆ ಹೆಚ್ಚಳಕ್ಕೆ ಸದ್ದಿಲ್ಲದೆ ತಯಾರಿ ನಡೆದಿದೆ. ವಸತಿ ಕಟ್ಟಡಗಳಿಗೆ ಶೇ.25 ಹಾಗೂ ವಸತಿಯೇತರ ಕಟ್ಟಡಗಳಿಗೆ ಶೇ.30ರಷ್ಟು ಆಸ್ತಿ ತೆರಿಗೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಲಯವಾರು ಗೈಡ್‍ಲೈನ್ಸ್ ಆಧಾರದಲ್ಲಿ ಆಸ್ತಿ ತೆರಿಗೆ ವಿಧಿಸುವ ಕುರಿತಂತೆ ಟಿಪ್ಪಣಿ ತಯಾರಿಸಿ ನೀಡುವಂತೆ ಗೌರವ್ ಗುಪ್ತ ಆದೇಶ ನೀಡಿದ್ದು ಜನವರಿಯಿಂದ ಬೆಂಗಳೂರಿನ ನಾಗರಿಕರು ಹೆಚ್ಚುವರಿ ಆಸ್ತಿ ತೆರಿಗೆ ಪಾವತಿಸಬೇಕಾಗುವುದು ಬಹುತೇಕ ಖಚಿತಪಟ್ಟಿದೆ. …

Read More »