ಉಡುಪಿ: ಕೊರೊನಾ ಸಂಕಷ್ಟ ಕಾಲದಲ್ಲಿ ಉಡುಪಿ ಶ್ರೀಕೃಷ್ಣ ಮಠ ಸಾಲ ಮಾಡಲು ಮುಂದಾಗಿದೆ. ಮಠದ ನಿರ್ವಹಣೆಗೆ ಒಂದು ಕೋಟಿ ರೂ. ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದಾರೆ. ಕೃಷ್ಣಮಠ ಸಾಲ ಮಾಡಲು ಮುಂದಾಗಿದ್ದು ಮಠದ ಭಕ್ತರಿಗೆ ನೋವುಂಟು ಮಾಡಿದೆ. ಉಡುಪಿ ಕೃಷ್ಣಮಠದ ಪರ್ಯಾಯ ಅದಮಾರು ಮಠ ಕಳೆದ ಐದು ತಿಂಗಳಿಂದ ತೆರೆದಿಲ್ಲ. ಯಾವುದೇ ಧಾರ್ಮಿಕ ಸೇವೆ ನಡೆಯದೆ ಆರ್ಥಿಕ ಚಟುವಟಿಕೆ ಆರಂಭವಾಗಿದೆ. ದಿನಕ್ಕೆ ಒಂದೂವರೆ ಲಕ್ಷ ರೂ. ಖರ್ಚು ಬರುತ್ತಿದೆ. ಈ ಬಗ್ಗೆ …
Read More »Yearly Archives: 2020
ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್……………..
ಹಾಸನ: ಕಳೆದ ಭಾನುವಾರದಂದು ಚನ್ನರಾಯಪಟ್ಟಣದಲ್ಲಿ ನಡೆದ ಜೋಡಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆದರೆ ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಎರಡೇ ದಿನದಲ್ಲಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆಯಲ್ಲಿ ಆರೋಪಿಯು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಈ …
Read More »ಇಂದಿನಿಂದ ಅನ್‍ಲಾಕ್ 4.0 ಜಾರಿ – ವ್ಯಾಪಾರಕ್ಕೆ ಮುಕ್ತವಾಯ್ತು ಕೆ.ಆರ್ ಮಾರ್ಕೆಟ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ ಮತ್ತೆ ಆರಂಭವಾಗಿದೆ. ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ- ವ್ಯವಹಾರ ಕಳೆದ ಐದು ತಿಂಗಳಿನಿಂದ ಸ್ಥಗಿತಗೊಂಡಿತ್ತು. ಮಾರ್ಕೆಟ್ ನ ಮಳಿಗೆಗಳಲ್ಲಿ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಿಲಾಗಿತ್ತು. ಬೀದಿ ಬದಿಯ ವ್ಯಾಪಾರಕ್ಕೆ ಅವಕಾಶವಿರಲಿಲ್ಲ. ಇದೀಗ ಇಂದಿನಿಂದ ಅನ್‍ಲಾಕ್ 4.0 ಜಾರಿಯಾಗುತ್ತಿದ್ದು, ಕೆ.ಆರ್ ಮಾರ್ಕೆಟ್ ಬೀದಿ ಬದಿಯ ವ್ಯಾಪರ ಬಲು ಜೋರಾಗಿದೆ. ಮಾರ್ಕೆಟ್ ಹೊರಗಡೆ ಸಾಮಾಜಿಕ ಅಂತರ ಮರೆತು …
Read More »ಇಂದು 6,495 ಮಂದಿಗೆ ಸೋಂಕು- 7,238 ಮಂದಿ ಡಿಸ್ಚಾರ್ಜ್
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ 6 ಸಾವಿರ ದಾಟಿದ್ದು, ಸಾವಿನ ಸಂಖ್ಯೆಯೂ ಎಂದಿನಂತೆ ಶತಕ ದಾಟಿದೆ. ಚೇತರಿಕೆ ಪ್ರಮಾಣವೂ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ರಾಜ್ಯದಲ್ಲಿ ಇಂದು 6,495 ಹೊಸ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು, 7,238 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ. 113 ಮಂದಿ ಸೋಂಕಿಗೆ ಬಲಿಯಾಗಿದ್ದು, 747 ಮಂದಿ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ …
Read More »ಮಂಗಳವಾರದಿಂದ ಬಾರ್, ಪಬ್, ರೆಸ್ಟೋರೆಂಟ್ ಓಪನ್ ……………
ಬೆಂಗಳೂರು: ಮಂಗಳವಾರದಿಂದ ದೇಶ, ರಾಜ್ಯದಲ್ಲಿ ಅನ್‍ಲಾಕ್-4 ಪ್ರಕ್ರಿಯೆ ಆರಂಭವಾಗುತ್ತಿದೆ. ರಾಜ್ಯ ಸರ್ಕಾರ, ಕೇಂದ್ರ ಪ್ರಕಟಿಸಿದ್ದ ಅನ್‍ಲಾಕ್ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಜಾರಿಗೆ ತಂದಿದೆ. ಲಾಕ್‍ಡೌನ್‍ನಿಂದಾಗಿ ಆರು ತಿಂಗಳಿಂದ ಬಂದ್ ಆಗಿದ್ದ ಬಾರ್, ಪಬ್, ರೆಸ್ಟೋರೆಂಟ್‍ಗಳು ನಾಳೆಯಿಂದ ಓಪನ್ ಆಗಲಿವೆ. ಆದರೆ ಶೇ.50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ಕೊಡಬೇಕು ಎಂದು ಸೂಚಿಸಿದೆ. ಮಾರ್ಗಸೂಚಿಯಲ್ಲಿ ಏನಿದೆ? – ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ. ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಸಂತೋಷ ಜಾರಕಿಹೊಳಿ ಸಂತಾಪ
ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ ನಷ್ಟವಾಗಿದೆ. …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ …
Read More »ಶವವಾಗಿರುವ ಎಂಇಎಸ್: ನಾರಾಯಣಗೌಡ ಟೀಕೆ
ಬೆಳಗಾವಿ: ‘ಇಲ್ಲಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಶವವಾಗಿದೆ. ಮರುಜೀವ ಕೊಡುವುದಕ್ಕೋಸ್ಕರ ಕೆಲವರು ಆಗಾಗ ವಿವಾದಗಳನ್ನು ಸೃಷ್ಟಿಸುತ್ತಿರುತ್ತಾರೆ. ಇದಕ್ಕೆ ಕನ್ನಡಿಗರು ಅಂಜುವುದಿಲ್ಲ. ತಕ್ಕ ಉತ್ತರ ಕೊಡುತ್ತೇವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ. ನಾರಾಯಣಗೌಡ ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ರಾಯಣ್ಣನ ಪುಣ್ಯಭೂಮಿ. ಇಲ್ಲಿ ಆ ನಾಯಕನ ಪ್ರತಿಮೆ ಪ್ರತಿಷ್ಠಾಪನೆಗೆ ಯಾವುದೇ ದೊಡ್ಡ ನಾಯಕರ ಅನುಮತಿ ಬೇಕಿಲ್ಲ. ಯಾರೋ ವಿವಾದ ಸೃಷ್ಟಿಸಿ …
Read More »ಆರ್‌ಸಿಯು: ಪೂರಕ ತರಗತಿ ಸೆ.1ರಿಂದ
ಬೆಳಗಾವಿ: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕ ಕೋರ್ಸ್‍ಗಳ 6ನೇ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಕೋರ್ಸ್‍ಗಳ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸೆ.1ರಿಂದ ಪೂರಕ ತರಗತಿ ನಡೆಸಲಾಗುತ್ತದೆ. ಆದರೆ, ಈ ತರಗತಿಗಳು ಕಡ್ಡಾಯವಾಗಿರುವುದಿಲ್ಲ’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದ್ದಾರೆ. ‘ವಿಶ್ವವಿದ್ಯಾಲಯ ವ್ಯಾಪ್ತಿಯ ಸ್ನಾತಕ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವವರ ಪೈಕಿ ಹೆಚ್ಚಿನವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಆಗಿದ್ದಾರೆ. ಆನ್‍ಲೈನ್ ತರಗತಿಗಳ ಅಲಭ್ಯತೆ ಹಿನ್ನೆಲೆಯಲ್ಲಿ ಪರೀಕ್ಷಾ ಸಿದ್ಧತೆಗೆ ಅವರಿಗೆ ತೊಂದರೆಯಾಗಿದೆ. ಪರೀಕ್ಷೆ ಬರೆಯುವುದಕ್ಕಾಗಿ …
Read More »ಮಹಾಪುರುಷರ ಅವಹೇಳನ ಖಂಡಿಸಿ ಪ್ರತಿಭಟನೆ
ಬೆಳಗಾವಿ: ‘ಛತ್ರಪತಿ ಶಿವಾಜಿ ಮಹಾರಾಜ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಇಬ್ಬರೂ ವೀರಸೇನಾನಿಗಳು. ಈ ಮಹಾಪುರುಷರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್-ಬಜರಂಗ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ‘ಪ್ರಚೋದನಕಾರಿ ಪೋಸ್ಟ್ ಹಾಕಿದವರು, ಭಾಷೆ, ಜಾತಿ ಹಾಗೂ ಧರ್ಮದ ವಿಷಯ ಮುಂದಿಟ್ಟುಕೊಂಡು ಸಮಾಜದ ಶಾಂತಿ-ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ …
Read More »