ಬೆಂಗಳೂರು: ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಪದವಿ ಕಾಲೇಜುಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿವೆ. ಸೆಪ್ಟೆಂಬರ್ 1 ರಿಂದ ಆನ್‍ಲೈನ್ ತರಗತಿಗಳು ಮತ್ತು ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿ ಪ್ರಾರಂಭಿಸಲಾಗುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಮೂಲಗಳ ಮಾಹಿತಿ ತಿಳಿದು ಬಂದಿದೆ. ಯುಜಿಸಿ ಸೂಚನೆ ಮೇರೆಗೆ ರಾಜ್ಯದಲ್ಲಿ ತರಗತಿ ಪ್ರಾರಂಭಕ್ಕೆ ಸರ್ಕಾರದ ನಿರ್ಧಾರ ಮಾಡಿದೆ ಎನ್ನಲಾಗಿದೆ. ಅನ್‍ಲಾಕ್ 4.O ಮಾರ್ಗಸೂಚಿಗಾಗಿ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಈ …
Read More »Yearly Archives: 2020
ಕಾಮದಾಹ ತೀರಿಸದ್ದಕ್ಕೆ ಕಲ್ಲು ಎತ್ತಾಕಿ ಕೊಂದು ಅತ್ಯಾಚಾರ…………..
ಹಾಸನ: ಸೋಮವಾರ ರಾತ್ರಿ ರಸ್ತೆ ಪಕ್ಕದಲ್ಲೇ ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಮದ ದಾಹ ತೀರಿಸಲು ಒಪ್ಪದ ನಿರ್ಗತಿಕ ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ, ಬಳಿಕ ಕಾಮುಕ ಅತ್ಯಾಚಾರ ಎಸಗಿದ್ದಾನೆ .ನಗರದ ಬಿಎಂ ರಸ್ತೆಯಲ್ಲಿನ ಎನ್‍ಆರ್ ವೃತ್ತದ ಸಮೀಪವಿರುವ ಶ್ರೀ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್ ಎದುರು ಕೊಲೆ ನಡೆದಿತ್ತು. ಮಹಿಳೆ ಸುಮಾರು 45 ವರ್ಷದವಳಾಗಿದ್ದರು. ತನ್ನ …
Read More »ಬೆಳೆ ಹಾಳಾಗಬಾರದೆಂದು ಪ್ರಾಣ ಒತ್ತೆಯಿಟ್ಟು ಸಾಗಿಸಿದ ರೈತರು…..
ಕೊಪ್ಪಳ: ರೈತರು ತಾವು ಬೆಳೆದ ಬೆಳೆ ಹಾಳಾಗಬಾರದೆಂದು ಪ್ರಾಣವನ್ನೇ ಒತ್ತೆಯಿಟ್ಟು, ಹರಸಾಹಸ ಪಟ್ಟು ಬೆಳೆ ಸಾಗಿಸುತ್ತಿದ್ದಾರೆ. ಪ್ರವಾಹದ ನೀರಿನ ಮಧ್ಯೆ ಬೆಳೆ ಸಾಗಿಸುತ್ತಿರುವ ದೃಶ್ಯ ಎದೆ ಜೆಲ್ ಎನಿಸುತ್ತದೆ ಕೊಪ್ಪಳ ತಾಲೂಕಿನ ಕಾತರಕಿ-ಗುಡ್ಲಾನೂರ ಗ್ರಾಮದ ಬಳಿ ಹಿನ್ನೀರ ಪ್ರದೇಶದಲ್ಲಿ ನೀರು ಆವರಿಸಿದ್ದು ಬೆಳೆದ ಬೆಳೆಯನ್ನು ಸಾಗಿಸಲು ರೈತರು ಹರಸಾಹಸ ಪಡುವಂತಾಗಿದೆ. ತುಂಗಾಭದ್ರಾ ಜಲಾಶಯ ಹಿನ್ನೀರಿನ ಅಚ್ಚುಕಟ್ಟು ಪ್ರದೇಶದಲ್ಲಿ ನೀರು ತುಂಬಿದೆ. ರಸ್ತೆ ಸಂಪೂರ್ಣ ಜಲಾವೃತವಾಗಿರುವುದರಿಂದ ನೀರಿನಲ್ಲೆ ಹರಸಾಹಸ ಪಟ್ಟು ಸಾಗಿಸುವಂತ …
Read More »ಪರಿಹಾರದ ನೀರಿಕ್ಷೆಯಲ್ಲಿದ್ದ ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶದ ಜನರಿಗೆ ನಿರಾಸೆ ಮೂಡಿಸಿದ.B.S.Y.
ಬೆಳಗಾವಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರವಾಹ ಪೀಡಿತ ಪ್ರದೇಶದಲ್ಲಿ ಕಾಟಾಚಾರದ ವೈಮಾನಿಕ ಸಮೀಕ್ಷೆ ನಡೆಸಿದ್ದು, ಸಂತ್ರಸ್ತರ ಸಮಸ್ಯೆ ಆಲಿಸಿದೆ ಹಾಗೇ ಬಂದು ಹೀಗೆ ಹೋಗಿದ್ದಾರೆ. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾನಕ್ಕೆ ಬೆಳಿಗ್ಗೆ 10.30ಕ್ಕೆ ಬಂದಿಳಿದ ಸಿಎಂ ಅವರು ಬೆಳಗಾವಿ, ಧಾರವಾಡ ಜನಪ್ರತಿನಿಧಿ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಮಾಡಿದರು. ಆದರೆ ಸುವರ್ಣಸೌಧದ ಮುಂದೆಯೇ ರೈತರು ಪ್ರತಿಭಟನೆ ನಡೆಸಿದರು ಸಹ ಮುಖ್ಯಮಂತ್ರಿಗಳು ಅವರತ್ತ ಸುಳಿಯಲಿಲ್ಲ. …
Read More »ಮಲಪ್ರಭಾ ನದಿಪಾತ್ರದಲ್ಲಿ ಆಗಿರುವ ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು: ರಮೇಶ್ ಜಾರಕಿಹೊಳಿ
ಬೆಳಗಾವಿ: ಮಲಪ್ರಭಾ ನದಿಪಾತ್ರದಲ್ಲಿ ಆಗಿರುವ ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು. ಅದಕ್ಕಾಗಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ, ಸರ್ವೆ ಕಾರ್ಯ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿ ಮತ್ತು ಆಲಮಟ್ಟಿಯಲ್ಲಿ ಸಿಎಂ ಅವರು, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ಮಾಡಿ, ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಬೆಂಗಳೂರಿನಲ್ಲಿ ನೆರೆ ಪರಿಹಾರ ಕುರಿತು …
Read More »ಶೀಘ್ರದಲ್ಲಿ ಬಾರ್, ಕ್ಲಬ್, ಪಬ್ ಓಪನ್ ಸಾಧ್ಯತೆ: ಎಚ್.ನಾಗೇಶ್
ಬೆಂಗಳೂರು: ಶೀಘ್ರದಲ್ಲಿ ಬಾರ್, ಕ್ಲಬ್ ಮತ್ತು ಪಬ್ ಓಪನ್ ಆಗುವ ಸಾಧ್ಯತೆ ಇದೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದರು. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಮಾತನಾಡಿದ ಎಚ್.ನಾಗೇಶ್, ಶೀಘ್ರದಲ್ಲಿ ಬಾರ್, ಕ್ಲಬ್ ಮತ್ತು ಪಬ್ ಓಪನ್ ಆಗುವ ಸಾಧ್ಯತೆ ಇದೆ. ಈ ವಿಚಾರದಲ್ಲಿ ಸಿಎಂ ಜೊತೆಗೆ ನಾನು ಚರ್ಚೆ ನಡೆಸುವೆ. ಬಾರ್ ಮತ್ತು ಪಬ್ ಕಾರ್ಮಿಕರಿಗೆ ತೊಂದರೆಯಾಗಿದೆ. ಕ್ಲಬ್‍ಗಳಲ್ಲಿ ಸ್ಪೋರ್ಟ್ಸ್ ಚಟುವಟಿಕೆಯನ್ನು ಇಂದಿನಿಂದ ಆರಂಭವಾಗಿದೆ. ಅಲ್ಲಿ ಪಾರ್ಸಲ್‍ಗಳಿಗೆ ಮಾತ್ರ ಅನುಮತಿ …
Read More »ಲಿಫ್ಟ್‌ನಲ್ಲೇ ಶವ- ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ
ಗದಗ: ಇಲ್ಲಿನ ಜಿಮ್ಸ್ ಆಸ್ಪತ್ರೆ ಸದಾ ವಿವಾದಗಳಿಗೆ ಕಾರಣವಾಗುತ್ತಿದೆ. ಇದೀಗ ಸಿಬ್ಬಂದಿ ಶವವನ್ನು ಲಿಫ್ಟ್ ನಲ್ಲೇ ಬಿಟ್ಟು ಹೋಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಲಿಪ್ಟ್‍ನಲ್ಲಿಯೇ ಶವ ಬಿಡುವುದು, ಐಸಿಯು ಬೆಡ್‍ಗಾಗಿ ರೋಗಿಗಳು ಪರದಾಡುವುದು ಜಿಮ್ಸ್ ನಲ್ಲಿ ನಿತ್ಯದ ಕತೆಯಾಗಿದೆ. ಅಂಬುಲೆನ್ಸ್ ಅಸ್ತವ್ಯಸ್ತತೆ ಕಾರಣದಿಂದ ಒಂದು ಕೋವಿಡ್ ಶವವನ್ನು ಬೆಳಗ್ಗೆಯಿಂದ ಸಾಯಂಕಾಲದವರೆಗೆ ಲಿಫ್ಟ್‍ನಲ್ಲೇ ಬಿಡಲಾಗಿತ್ತು ಎನ್ನಲಾಗುತ್ತಿದೆ ಕನಿಷ್ಠ ಶವಾಗಾರದಲ್ಲೇ ಇಟ್ಟು ಅಂಬುಲೆನ್ಸ್ ಬಂದ ನಂತರ ಸಾಗಿಸಬೇಕಿತ್ತು. ಆದರೆ ಸಿಬ್ಬಂದಿ ಲಿಫ್ಟ್ …
Read More »ಇತರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್‍ಆರ್‍ಟಿಸಿ ಸಿದ್ಧ
ಬೆಂಗಳೂರು: ದೇಶಾದ್ಯಂತ ಲಾಕ್‍ಡೌನ್ ಸಡಿಲಗೊಳಿಸಿರುವುದರಿಂದ ರಾಜ್ಯದಿಂದ ಇತರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್‍ಆರ್‍ಟಿಸಿ ಸಿದ್ಧವಾಗಿದ್ದು, ನೆರೆಯ ರಾಜ್ಯಗಳು ಒಪ್ಪಿಗೆ ಸೂಚಿಸಿದರೆ ಇತರೆ ರಾಜ್ಯಗಳಿಗೆ ಬಸ್ ಸಂಚಾರ ಆರಂಭವಾಗಲಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಡಿಸಿಎಂ, ನೆರೆಯ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯಗಳು ಒಪ್ಪಿಗೆ ಸೂಚಿಸಿದರೆ …
Read More »ಪೀರನವಾಡಿಯ ಬಳಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕರವೇ ಮನವಿ
ಪೀರನವಾಡಿಯ ಬಳಿ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆಗೆಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕರವೇ ಮನವಿ ಬೆಳಗಾವಿ ಬಳಿಯಿರುವ ಪೀರನವಾಡಿ ಬಳಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಿರುವ ತಾಂತ್ರಿಕ ಅಡಚಣಿಗಳನ್ನು ನಿವಾರಿಸಿ ಪ್ರತಿಮೆ ಸ್ಥಾಪಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಇಂದು ಮಂಗಳವಾರ ಮುಂಜಾನೆ ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ,ರಾಜ್ಯ ಸಂಚಾಲಕ ಮಹಾದೇವ ತಳವಾರ ಅವರ ನೇತೃತ್ವದಲ್ಲಿ ನಿಯೋಗವೊಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ಭೆಟ್ಟಿಯಾಗಿ ಮನವಿ …
Read More »ಮೆಕಾಲೆ ಶಿಕ್ಷಣ ವ್ಯವಸ್ಥೆಗೆ ವಿದಾಯ ಹೇಳುವ ಕ್ಷಣ ಸನ್ನಿಹಿತವಾಗಿದೆ : ಸುರೇಶ್ ಕುಮಾರ್
ಬೆಂಗಳೂರು: ಲಾರ್ಡ್ ಮೆಕಾಲೆ ತಳಹದಿಯ ಶಿಕ್ಷಣ ವ್ಯವಸ್ಥೆಗೆ ಇಂದು ನಾವು ವಿದಾಯ ಹೇಳುವ ಕ್ಷಣ ಸನ್ನಿಹಿತವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಹೊಸ ಶಿಕ್ಷಣ ನೀತಿಯ ಕುರಿತಾದ ಸಂವಾದದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕವಾದ ಬದಲಾವಣೆಗೆ ನಾಂದಿ ಹಾಡಿದ್ದು, ಈ ನೀತಿ ಪ್ರೇರಿತವಾದ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳ ಜ್ಞಾನಾರ್ಜನೆ, ತರ್ಕಬದ್ಧ ಆಲೋಚನೆ …
Read More »