Breaking News

Yearly Archives: 2020

ಎಟಿಎಂ ಸೆಕ್ಯೂರಿಟಿ ಗಾರ್ಡ್ ನನ್ನು ಬರ್ಬರ ಹತ್ಯೆ

ವಿಜಯಪುರ: ಎಟಿಎಂ ಸೆಕ್ಯೂರಿಟಿ ಗಾರ್ಡ್ ನನ್ನು ಬರ್ಬರವಾಗಿ ಹತ್ಯೆಗೈದು ಹಣ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.ಸಿಂದಗಿ ಪಟ್ಟಣದ ಶಾಪೂರ ಕಾಂಪ್ಲೆಕ್ಸ್‌ನಲ್ಲಿದ್ದ ಐಸಿಐಸಿಐ ಬ್ಯಾಂಕ್‍ನ ಎಟಿಎಂನಲ್ಲಿ ಈ ಘಟನೆ ನಡೆದಿದೆ. ರಾಹುಲ್ ರಾಠೋಡ್ (22) ಕೊಲೆಯಾದ ಯುವಕ. ಈತ ಜಿಲ್ಲೆಯ ಮದಬಾವಿ ತಾಂಡಾ ನಿವಾಸಿಯಾಗಿದ್ದು, ಐಸಿಐಸಿಐ ಬ್ಯಾಂಕ್ ಎಟಿಎಂನ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದ ಮೂವರು ಸೋಮವಾರ ರಾತ್ರಿ ಸುತ್ತಿಗೆಯಿಂದ …

Read More »

ಸಚಿವಾಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ ವರಿಷ್ಠರು, ಸಂಪುಟ ವಿಸ್ತರಣೆಗೆ ರೆಡ್ ಸಿಗ್ನಲ್

ಬೆಂಗಳೂರು,ಆ.25- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ವರಿಷ್ಠರು ರೆಡ್ ಸಿಗ್ನಲ್ ಕೊಟ್ಟಿದ್ದು, ಅವೇಶನ ಆರಂಭದೊಳಗೆ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದೆ. ಖಾಲಿ ಇರುವ 6 ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಅಲ್ಲದೆ ಅವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಮಾಡಿದರೆ ಶಾಸಕರು ಮುನಿಸಿಕೊಳ್ಳಬಹುದೆಂಬ ಕಾರಣಕ್ಕಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದರೆ ಸೆಪ್ಟೆಂಬರ್ 21ರಿಂದ ಆರಂಭವಾಗಲಿರುವ ಮಳೆಗಾಲದ ಅವೇಶನಕ್ಕೂ ಮುನ್ನವೇ …

Read More »

ಕಂಡಕಂಡಲ್ಲಿ ಮೂತ್ರ ಮಾಡುವವರಿಗೆ500 ರೂಪಾಯಿ ದಂಡ

ಬೆಂಗಳೂರು, ಆ.25- ಎಚ್ಚರ ಇನ್ನು ಮುಂದೆ ಶೌಚಾಲಯದಲ್ಲಿ ಮೂತ್ರ ಮಾಡಿ, ತುರ್ತು ಎಂದು ಎಲ್ಲೆಂದರಲ್ಲಿ ನಿಂತು ಮೂತ್ರ ಮಾಡಿದರೆ ದಂಡ ಬೀಳಲಿದೆ. ಈವರೆಗೂ ಬೇಕಾಬಿಟ್ಟಿ ಕಸ ಎಸೆಯುವವರನ್ನು ಹಿಡಿದು ದಂಡ ಹಾಕಲಾಗುತ್ತಿತ್ತು. ಕೊರೊನಾ ಸಾಂಕ್ರಾಮಿಕ ಸೋಂಕಿನ ಸಂದರ್ಭದಲ್ಲಿ ಮಾಸ್ಕ್ ಧರಿಸದವರ, ಎಲ್ಲೆಂದರಲ್ಲಿ ಉಗುಳುವವರ ವಿರುದ್ಧ ಬಿಬಿಎಂಪಿ ಮಾರ್ಷಲ್‍ಗಳು ದಂಡ ವಿಸುತ್ತಿದ್ದರು ಇದೇ ಮೊದಲ ಬಾರಿಗೆ ಬೀದಿ ಬದಿಯಲ್ಲಿ ನಿಂತು ಮೂತ್ರ ಮಾಡುವವರಿಗೂ ದಂಡ ಹಾಕಿದ್ದಾರೆ. ವಾರ್ಡ್ ನಂಬರ್ 176ರ ಶಾಖಾಂಬರಿ …

Read More »

ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಮನವಿ

ಬೆಂಗಳೂರು: ಶಾಸಕರ ಅನುದಾನವನ್ನು ಕಡಿತ ಮಾಡಬೇಡಿ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿಯವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.ಕೊರೊನಾ ಕಾಲದಿಂದ ಕ್ಷೇತ್ರಗಳ ಅಭಿವೃದ್ಧಿ ಕುಂಠಿತವಾಗಿದೆ. ಹೀಗಾಗಿ ಶಾಸಕರಿಗೆ ನೀಡುವ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಕುಮಾರಸ್ವಾಮಿಯವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ .ಹಿಂದಿನ ಸರ್ಕಾರದಲ್ಲಿ ಪಕ್ಷಾತೀತವಾಗಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಘೋಷಿಸಲಾಗಿದ್ದ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ …

Read More »

ಎಪಿಎಂಸಿ ಕಾಯ್ದೆ ತಿದ್ದುಪಡಿ  ವಿರೋಧಿಸಿ  ರೈತರು, ಸಚಿವ ಜಗದೀಶ ಶೆಟ್ಟರ್ ಅವರ ಕಾರಿಗೆ ಮುತ್ತಿಗೆ

ಬೆಳಗಾವಿ:  ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ  ವಿರೋಧಿಸಿ  ರೈತರು, ಸಚಿವ ಜಗದೀಶ ಶೆಟ್ಟರ್ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಯತ್ನಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಠಿಯಿಂದ ಹಾನಿಯಾದ ಪ್ರದೇಶದಲ್ಲಿ ಮಂಗಳವಾರ ಸಿಎಂ ಯಡಿಯೂರಪ್ಪ ವೈಮಾನಿಕ  ಸಮೀಕ್ಷೆಗೆ ಆಗಮಿಸಿದ್ದು, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಧಾರವಾಡ ಮತ್ತು ಬೆಳಗಾವಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಸಿಎಂ ಅವರನ್ನು ಭೇಟಿ ಮಾಡಲು  ರೈತ ಮುಖಂಡರು ಮುಂದಾಗಿದ್ದರು. ಆದ್ರೆ  …

Read More »

ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ನಿವೃತ್ತ  ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.  ರಾಜಕೀಯ ಕಣಕ್ಕೆ ಇಳಿಯುವ ಮೂಲಕ ಅವರು, ತಮ್ಮ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್  ಹಾಗೂ ಗಣ್ಯರ ಸಮ್ಮುಖದಲ್ಲಿ  ಅಣ್ಣಾಮಲೈ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದರು. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ರಾಜ್ಯದಲ್ಲಿ ಡಿಸಿಪಿ ಮತ್ತು ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಸ್ವಯಂನಿವೃತ್ತಿ …

Read More »

ಬಡ ಜನರಿಗೆ ಉನ್ನತ ಮಟ್ಟ ಶಿಕ್ಷಣ  ದೊರೆಯಲಿ ಎಂಬ ಮಹಾತ್ವಾಂಕಾಕ್ಷೆಯಿಂದ  ಯೋಜನೆಯೊಂದನ್ನು ರೂಪಿಸಿದ್ದೇವೆ:ಸತೀಶ ಜಾರಕಿಹೊಳಿ

ಬೆಳಗಾವಿ: ಯಮಕನಮರಡಿ ಕ್ಷೇತ್ರದಲ್ಲಿ  ಬಡ ಜನರಿಗೆ ಉನ್ನತ ಮಟ್ಟ ಶಿಕ್ಷಣ  ದೊರೆಯಲಿ ಎಂಬ ಮಹಾತ್ವಾಂಕಾಕ್ಷೆಯಿಂದ  ಯೋಜನೆಯೊಂದನ್ನು ರೂಪಿಸಿದ್ದೇವೆ. ಮುಂದಿನ ಎರಡು ವರ್ಷದಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಹೇಳಿದ್ದಾರೆ. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಪದವಿ ಪೂರ್ವ ಕಾಲೇಜು, ಮಹರ್ಷಿ ವಾಲ್ಮೀಕಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಭವನಕ್ಕೆ ಮಂಗಳವಾರ  ಸತೀಶ ಜಾರಕಿಹೊಳಿ ಪೌಂಡೇಶನ್ ವತಿಯಿಂದ  200 ಕ್ಕೂ ಹೆಚ್ಚು ಖುರ್ಚಿ, …

Read More »

ಬಡ ರೋಗಿಗಳಿಗಾಗಿ ನೂತನ ಕೋವಿಡ್ ಆಸ್ಪತ್ರೆ ನಿರ್ಮಿಸಿದ ಸಚಿವೆ ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಗಡಿ ಜಿಲ್ಲೆಯ ಬೆಳಗಾವಿಯ ನಿಪ್ಪಾಣಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾ ಸಾಹೇಬ ಅವರ ಪರಿಶ್ರಮ ನೂತನ ಕೋವಿಡ್ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಆಯುಷ್ಮಾನ್ ಭಾರತ್, ಸುವರ್ಣ ಕರ್ನಾಟಕ, ಜೊಲ್ಲೆ ಉದ್ಯೋಹ ಸಮೂಹ ಸಹಯೋಗದಲ್ಲಿ ನೂತನ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಸಚಿವೆ ಶಶಿಕಲಾ ಜೊಲ್ಲೆ ಅವರ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ ಮಾಡಲಾಗಿದೆ. …

Read More »

ಜಿಲ್ಲಾಡಳಿತ ಅಪಮಾನ ಮಾಡಿದೆ. ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರು ಸ್ಥಾಪನೆ ಮಾಡಬೇಕು.

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಪೀರಣವಾಡಿ ಗ್ರಾಮದಲ್ಲಿನ ಸಂಗೋಳಿ ರಾಯಣ್ಣ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಸಂಗೋಳಿ ರಾಯಣ್ಣ ವೃತ್ತದಲ್ಲಿ ಕನ್ನಡಪರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಮರು ಸ್ಥಾಪನೆಗೆ ಆಗ್ರಹಿಸಲಾಯಿತು. ಸಂಕೇಶ್ವರ ಪಟ್ಟಣದ ಬೀರದೇವರ ದೇವಸ್ಥಾನದಿಂದ ಸಂಗೋಳಿ ರಾಯಣ್ಣ ವೃತ್ತದವರೆಗೆ ರಾಯಣ್ಣ ಅಭಿಮಾನಿಗಳು ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು. ಸ್ವಾತಂತ್ರ್ಯ ದಿನಾಚರಣೆ ದಿನದಂದು ಪೀರಣವಾಡಿಯಲ್ಲಿ ರಾಯಣ್ಣ …

Read More »

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ

ಬಾಗಲಕೋಟೆ: ರಾಜ್ಯದ ಅತೀ ದೊಡ್ಡ ಜಲಾಶಯ ಎಂದೇ ಖ್ಯಾತಿ ಪಡೆದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯಗಳಲ್ಲಿ ಪ್ರವಾಹದಿಂದ ಆದ ಹಾನಿಯ ಕುರಿತು ವೈಜ್ಞಾನಿಕ ಸಮೀಕ್ಷೆಯ ಬಳಿಕ ಮಧ್ಯಾಹ್ನ ಆಲಮಟ್ಟಿಗೆ ಬಂದಿಳಿದರು. ನಂತರ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. …

Read More »