ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಇದೇ ಆಗಸ್ಟ್‌ನಲ್ಲಿ15 ಅಂದರೆ ಸ್ವಾತಂತ್ರ್ಯೋತ್ಸವ ಹಾಗೂ ರಾಯಣ್ಣೋತ್ಸವದಂದು ಪ್ರತಿಷ್ಠಾಪಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಾಗೂ ರಾಷ್ಟ್ರಧ್ವಜವನ್ನು ತೆರವುಗೊಳಿಸಿ ಅವಮಾನಿಸಿದ್ದನ್ನು ಖಂಡಿಸಿ ಹಾಗೂ ಮತ್ತೆ ಅದೇ ಜಾಗದಲ್ಲಿ ಗೌರವಯುತವಾಗಿ ಶೀಗ್ರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದವರು ತಾಲೂಕಾ ದಂಡಾಧಿಕಾರಿಗಳಾದ ಪ್ರಶಾಂತ ಪಾಟೀಲ್ ಅವರ ಮೂಲಕ ಮಾನ್ಯ ಮುಖ್ಯ …
Read More »Yearly Archives: 2020
ರಾಜ್ಯದಲ್ಲಿ ಒಂದೇದಿನ ಕೊರೋನಾಕ್ಕೆ 139 ಬಲಿ: 7665 ಕೇಸ್!
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 7,665 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ದಾಖಲೆಯ 139 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 4,201ಕ್ಕೆ ಏರಿಕೆಯಾಗಿದೆ. ಮಂಗಳವಾರ ರಾಜ್ಯದಲ್ಲಿ ಒಂದು ದಿನದ ಗರಿಷ್ಠ ಸಾವು ವರದಿಯಾಗಿದ್ದು, ಕಳೆದ ಭಾನುವಾರ ಒಂದೇ ದಿನ 124 ಮಂದಿ ಸಾವನ್ನಪ್ಪಿದ್ದು ಈವರೆಗಿನ ದಾಖಲೆಯಾಗಿತ್ತು. ಮಂಗಳವಾರ 7,665 ಸೋಂಕು ದೃಢಪಡುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2.41 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರ …
Read More »ಕಾರಿನ ಚಕ್ರದ ಗಾಳಿ ಬಿಟ್ಟ ತಹಶೀಲ್ದಾರ್: ರಸ್ತೆಯಲ್ಲೇ ಕಾನ್‌ಸ್ಟೆಬಲ್ ಧರಣಿ.
ಸಕಲೇಶಪುರ: ತಹಶೀಲ್ದಾರ್ ಅವರು ತನ್ನ ಕಾರಿನ ನಾಲ್ಕೂ ಚಕ್ರಗಳ ಗಾಳಿ ಬಿಟ್ಟು ಅನ್ಯಾಯ ಮಾಡಿದ್ದು, ನ್ಯಾಯಬೇಕು ಎಂದು ಆಗ್ರಹಿಸಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಸಮವಸ್ತ್ರದಲ್ಲಿಯೇ ಗಾಂಧಿ ಫೋಟೊ ಹಿಡಿದು ರಸ್ತೆಯಲ್ಲಿಯೇ ಧರಣಿ ನಡೆಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ‘ಮೆಡಿಕಲ್ ಶಾಪ್ ಒಂದರ ಮುಂದೆ ಕಾರು ನಿಲ್ಲಿಸಿ ಔಷಧಿ ಖರೀದಿ ಮಾಡಿಕೊಂಡು ಬರುವಷ್ಟರಲ್ಲಿ ತಹಶೀಲ್ದಾರ್ ಕಾರಿನ ಚಕ್ರಗಳಿಂದ ಗಾಳಿ ತೆಗೆದಿದ್ದಾರೆ. ಹೇಳಿದ್ದರೆ ತಾನೇ ಕಾರನ್ನು ಅಲ್ಲಿಂದ ತೆಗೆಯುತ್ತಿದ್ದೆ. ಇಲ್ಲವೇ ಕಾನೂನು …
Read More »ಸಂಪಾದಕೀಯ: ವಿಶ್ವದ ಅತ್ಯಂತ ಶಕ್ತ ನ್ಯಾಯಾಂಗ ಇನ್ನಷ್ಟು ಉದಾರವಾದಿ ಆಗಲಿ
ನ್ಯಾಯಾಂಗ ನಿಂದನೆಯ ಪ್ರಕರಣಗಳು ಸಾರ್ವಜನಿಕ ಜೀವನದಲ್ಲಿ ಪ್ರಮುಖವಾಗಿ ಚರ್ಚೆಯಾದಾಗಲೆಲ್ಲ, ನ್ಯಾಯಶಾಸ್ತ್ರಜ್ಞ, ನ್ಯಾಯಮೂರ್ತಿ ಲಾರ್ಡ್ ಡೆನಿಂಗ್ ಅವರ ಮಾತೊಂದು ಉಲ್ಲೇಖವಾಗುವುದಿದೆ. ನ್ಯಾಯಾಂಗ ನಿಂದನೆಯ ಕಾನೂನು ನ್ಯಾಯಾಲಯದ ಘನತೆಯನ್ನು ಎತ್ತಿಹಿಡಿಯಲು ಬಳಕೆಯಾಗಬೇಕಿಲ್ಲ. ಈ ಕಾನೂನನ್ನು ಅಪರೂಪಕ್ಕೆ ಬಳಸಿಕೊಳ್ಳಬೇಕು. ವಾಕ್ ಸ್ವಾತಂತ್ರ್ಯವನ್ನು ರಕ್ಷಿಸಬೇಕಿರುವುದು ಬಹುಮುಖ್ಯವಾದುದು ಎನ್ನುವುದು ಲಾರ್ಡ್ ಡೆನಿಂಗ್ ಅವರು ಆಡಿದ್ದ ಮಾತುಗಳು. ನ್ಯಾಯದಾನ ಮಾಡುವ ಸ್ಥಾನದಲ್ಲಿ ಕುಳಿತಿರುವ ವ್ಯಕ್ತಿಗಳ ಬಗ್ಗೆ ಟೀಕೆ ಮಾಡುವಾಗ, ‘ನ್ಯಾಯಸಮ್ಮತವಾದ ಟೀಕೆಗಳು ಬರಲಿ; ಏಕೆಂದರೆ, ನ್ಯಾಯಮೂರ್ತಿಗಳಿಗೆ ಅವರು ಹೊಂದಿರುವ …
Read More »ಕ್ಲೇಮ್ ಕಮಿಷನರ್: ಸರ್ಕಾರದ ಪರ ಎಸಿಎಸ್ ಅರ್ಜಿ
ಬೆಂಗಳೂರು: ಗಲಭೆ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲು ‘ಕ್ಲೇಮ್ ಕಮಿಷನರ್’ ನೇಮಿಸುವಂತೆ ರಾಜ್ಯ ಸರ್ಕಾರದ ಪರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಜವಾಬ್ದಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್) ನೀಡಲಾಗಿದೆ. ಈ ಸಂಬಂಧ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ನೇಮಿಸುವ ‘ಕ್ಲೇಮ್ ಕಮಿಷನರ್’ ಗಲಭೆ ವೇಳೆ ನಷ್ಟವಾದ ಆಸ್ತಿಯ ಮೌಲ್ಯ ಲೆಕ್ಕ ಹಾಕಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ನಿರ್ಧರಿಸಲಿದ್ದಾರೆ. …
Read More »ಸಾಂಬ್ರಾ ವಿಮಾನ ನಿಲ್ದಾಣದಲ್ಲಿಲಕ್ಷ್ಮಣ ಸವದಿ ಹೇಳಿದ್ದೇನು
ಬೆಳಗಾವಿ: ಸಚಿವ ರಮೇಶ ಜಾರಕಿಹೊಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ವಿಚಾರವಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಅಭಿವೃದ್ದಿ ಹಾಗೂ ನೀರಾವರಿ ವಿಷಯವಾಗಿ ಚರ್ಚೆ ನಡೆಸಲು ಹೋಗಿರಬಹುದು ಎಂದು ಹೇಳಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಪಕ್ಷದ ಅಧ್ಯಕ್ಷರನ್ನು ಭೇಟಿಯಾಗುವುದರಲ್ಲಿ ಯಾವ ತಪ್ಪಿಲ್ಲ. ನಮ್ಮ ಪಕ್ಷದ ಯಾರು ಬೇಕಾದವರು ಅಧ್ಯಕ್ಷರನ್ನು ಭೇಟಿ ಮಾಡಬಹುದು. ಸಚಿವ ರಮೇಶ ಜಾರಕಿಹೊಳಿ ಅವರು ನಡ್ಡಾ …
Read More »ಶಾಸಕ ಜಮೀರ ಅಹ್ಮದ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢ
ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ ಅಹ್ಮದ ಖಾನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ ಮೂಲಕ ಸ್ವತಃ ಮಾಹಿತಿ ನೀಡಿರುವ ಶಾಸಕರು “ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದು …
Read More »ಸಿಇಟಿ ಪರೀಕ್ಷೆಯ ಫಲಿತಾಂಶ ಆ. 20ರಂದು ಪ್ರಕಟಆನ್ಲೈನ್ನಲ್ಲಿಯೇ ಕೌನ್ಸೆಲಿಂಗ್
ಬೆಂಗಳೂರು: ಕರ್ನಾಟಕದ ಸಿಇಟಿ ಪರೀಕ್ಷೆಯ ಫಲಿತಾಂಶ ಆ. 20ರಂದು ಪ್ರಕಟವಾಗಲಿದೆ. ಈ ಬಗ್ಗೆ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದು, ಕಳೆದ ವರ್ಷ ಎಷ್ಟು ಶುಲ್ಕವನ್ನು ವಿಧಿಸಲಾಗುತ್ತಿತ್ತೋ ಈ ಬಾರಿಯೂ ಅಷ್ಟೇ ಶುಲ್ಕವಿರಲಿದೆ. ಹಾಗೇ, ಕಳೆದ ವರ್ಷದ ಅನುಪಾತದಲ್ಲೇ ಈ ವರ್ಷವೂ ಸೀಟು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 30ರಿಂದ ಆಗಸ್ಟ್ 1ರವರೆಗೆ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಪರೀಕ್ಷೆ ನಡೆದ …
Read More »ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು
ಅಥಣಿ: ಧಾರವಾಡ ಜಿಲ್ಲೆಯ ಬೋಗುರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪಟ್ಟಣದಲ್ಲಿ ಜಂಗಮ ಸಮಾಜದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಅಥಣಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಿದರು. ಪುಟ್ಟ ಹಿರೇಮಠ ಮಾತನಾಡಿ, ಅಮ್ಮನಿಗೆ ಆರೋಗ್ಯ ಸರಿ ಇಲ್ಲದ ಕಾರಣ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ ಮೇಲೆ ಪಕ್ಕದ ಗ್ರಾಮದ ಯುವಕ ಅತ್ಯಾಚಾರ …
Read More »ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಚಾಮರಾಜನಗರ: ಆನ್ ಲೈನ್ ಪಾಠ ಕೇಳಲು ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಸಾಗಡೆ ಗ್ರಾಮದ ರಾಜೇಶ್, ಪದ್ಮಾ ದಂಪತಿ ಮಗಳು ಹರ್ಷಿತಾ(15) ಮೃತ ದುರ್ದೈವಿ. ಸಾಗಡೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ 9 ನೇ ತರಗತಿ ತೇರ್ಗಡೆಯಾಗಿ 10 ನೇ ತರಗತಿಗೆ ದಾಖಲಾಗಿದ್ದಳು. ಸ್ನೇಹಿತರ ಬಳಿ ಮೊಬೈಲ್ ಇದೆ. ನನಗೂ ಮೊಬೈಲ್ ಕೊಡಿಸುವಂತೆ ಹರ್ಷಿತಾ ಪೋಷಕರಿಗೆ …
Read More »