ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಹೆಸರು ಸ್ಮರಿಸದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ದಲಿತ ಮುಖಂಡ ಅಡಿವೆಪ್ಪ ಸಾಲಗಲ್ ತರಾಟೆಗೆ ತೆಗೆದುಕೊಂಡ ಘಟನೆ ನಗರದಲ್ಲಿ ಶನಿವಾರ ನಡೆಯಿತು. ಅಕ್ಕನ ವಿವಿಯಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಚಿವೆ ನೀಡಿದ ಸಂದೇಶದಲ್ಲಿ ಡಾ. ಅಂಬೇಡ್ಕರ್ ಅವರನ್ನು ಸ್ಮರಿಸಲಿಲ್ಲ. ಇದರಿಂದಾಗಿ ಕುಪಿತಗೊಂಡ ಅಡಿವೆಪ್ಪ ಸಾಲಗಲ್ ಸಚಿವೆ ಭಾಷಣ ಮುಗಿಸಿ ಸ್ಥಳಕ್ಕೆ ಬಂದು ಕುಳಿತುಕೊಳ್ಳುತ್ತಿದ್ದಂತೆಯೇ ತೀವ್ರ ತರಾಟೆಗೆ ತೆಗೆದುಕೊಂಡರು. …
Read More »Yearly Archives: 2020
ನಮ್ಮ ಮುಂದೆ ಯಾವ ಡೈನಾಮಿಕ ಬಂಡೆಯದ್ದು, ನಡೆಯುವುದಿಲ್ಲ:ಸಚಿವ ಮಾಧುಸ್ವಾಮಿ,
ತುಮಕೂರು: ನಮ್ಮದು ರಾಜಾಹುಲಿ ಸರ್ಕಾರ. ನಮ್ಮ ಮುಂದೆ ಯಾವ ಡೈನಾಮಿಕ ಬಂಡೆಯದ್ದು, ನಡೆಯುವುದಿಲ್ಲ ಅಂತಾ ಸಚಿವ ಮಾಧುಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. 74 ನೇ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ ಅಹಮದ್ ನನಗೆ ಒಳ್ಳೆಯ ಸ್ನೇಹಿತ. ಆದರೆ ಗಲಭೆಯಲ್ಲಿ ಮೃತಪಟ್ಟ ಯುವಕರಿಗೆ 5 ಲಕ್ಷ ರೂ. ಕೊಡುವುದಾಗಿ ಹೇಳಿದ್ದಾರೆ. ಏಕೆ ಇಂತಹ ನಿರ್ಧಾರ ತಗೆದುಕೊಂಡಿದ್ದಾರೆ ನನಗೆ ಗೊತ್ತಿಲ್ಲ. …
Read More »ರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ.:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಘಟಪ್ರಭಾ: ಇಂದಿನಿಂದ ಭಾರತ ದೇಶಕ್ಕಾಗಿ ಹಿರಿಯರು ಕಂಡಂತಹ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಸೇವಾದಳ ಕಚೇರಿಯಲ್ಲಿ ಧ್ವಜಾರೋಹನ ಬಳಿಕ ಮಾತನಾಡಿದ ಅವರು, ಹಿರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತ ದೇಶ ಹೇಗಿರಬೇಕು ಎಂದು ಹಿರಿಯರು ಕಂಡಂತಹ ಕನಸನ್ನು ನನಸು ಮಾಡುವುದಾಗಿ ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ. ದೇಶದ …
Read More »ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಒಬ್ಬ ಒಳ್ಳೆಯ ಶಾಸಕ. ಆತನಿಗೆ ಅನ್ಯಾಯ ಆಗಬಾರದಾಗಿತ್ತು: ರಮೇಶ ಜಾರಕಿಹೊಳಿ
ಬೆಳಗಾವಿ: ಬೆಂಗಳೂರು ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ನಡೆದದ್ದು, ಕಾಂಗ್ರೆಸ್ ಗಲಾಟೆ ಅದಕ್ಕೂ ನಮಗೂ ಸಂಬಂಧವಿಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 74 ನೇ ಸ್ವಾತಂತ್ರೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಸತ್ಯಶೋಧನಾ ಸಮಿತಿ ರಚಿಸಿದ್ದಾರೆ. ಅದರಿಂದಲೇ ಸಂತ್ಯಾಂಶ ಹೊರ ಬರಲಿದೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಒಬ್ಬ ಒಳ್ಳೆಯ ಶಾಸಕ. ಆತನಿಗೆ ಅನ್ಯಾಯ …
Read More »ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ:ರಮೇಶ ಜಾರಕಿಹೊಳಿ
ಬೆಳಗಾವಿ: ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 74 ನೇ ಸ್ವಾತಂತ್ರೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹರಾಜರ ಮೂರ್ತಿ ವಿಚಾರವಾಗಿ ಶಾಸಕಿ ನಿಂಬಾಳ್ಕರ್ ಹೇಳಿಕೆ ನೀಡಿದ್ದು, ತಪ್ಪು. ಅವರಿಗೆ ಭಾಷಾ ಸಮಸ್ಯೆಯಿದೆ. ಹೀಗಾಗಿ ಅವರಿಂದ ತಪ್ಪಾಗಿದೆ. ಅವರಿಗೆ ಬುದ್ದಿ ಹೇಳುತ್ತೇವೆ ಎಂದರು.
Read More »ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಯಡಿಯೂರಪ್ಪ,
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಯೋಜನೆ 2ನೇ ಹಂತಕ್ಕೆ 30,695 ಕೋಟಿ ರೂ. ಮೀಸಲಿಡಲಾಗಿದೆ. 2024ರ ಜೂನ್ ವೇಳೆಗೆ 2ನೇ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದೆ. 10 ಲಕ್ಷ ರೈತರಿಗೆ 6,500 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ. ಕೊಡಗು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಸೇರಿದಂತೆ 11 ಜಿಲ್ಲೆಗಳನ್ನು ಪ್ರವಾಹಪೀಡಿತ ಜಿಲ್ಲೆಗಳೆಂದು ಘೋಷಿಸಲಾಗಿದೆ. ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಮುಖ್ಯಮಂತ್ರಿ ಬಿ.ಎಸ್. …
Read More »ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ: ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ
ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣ ದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಬಳಿಕ ಮಾದ್ಯಮಗೋಷ್ಠಿ ನಡೆಸಿದ ಅವರು,ಮುಂದಿನ ವರ್ಷ ಬೆಳಗಾವಿ ಜಿಲ್ಲಾ ಕ್ರೀಡಾಂಗಣದ ಲೀಜ್ ಅವಧಿ ಮುಗಿಯುತ್ತದೆ ಮುಂದಿನ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಎಲ್ಲಿ ನಡೆಯುತ್ತದೆ ಎಂದು ಮಾದ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ …
Read More »ನವೀನ್ ತಲೆಗೆ 51 ಲಕ್ಷ ಘೋಷಿಸಿದ್ದ ಮುಸ್ಲಿಂ ನಾಯಕ ಅರೆಸ್ಟ್
ಲಕ್ನೋ: ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ನವೀನ್ ತಲೆಗೆ 51 ಲಕ್ಷ ಘೋಷಣೆ ಮಾಡಿದ್ದ ಮುಸ್ಲಿಂ ನಾಯಕನನ್ನು ಮೀರತ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಶಹಜೀಬ್ ರಿಜ್ವಿ ಸಮಾಜವಾದಿ ಪಕ್ಷದ ಮಾಜಿ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತನಾಗಿದ್ದು, ಈತನನ್ನು ಮೀರತ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮೀರತ್ ನ ಫಲ್ವಾಡಾ ಪಟ್ಟಣದ ರಸೂಲ್‍ಪುರ ಗ್ರಾಮದ ನಿವಾಸಿಯಾಗಿರುವ ರಿಜ್ವಿ, ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದನು. …
Read More »“ನಮಗಿಲ್ಲದ ಸೌಲಭ್ಯ ಹಾಲಿವುಡ್‍ಗೆ ನೀಡುವುದು ಸರಿಯಲ್ಲ”
ಬೆಂಗಳೂರು,- ಕನ್ನಡದ ನೆಲ- ಜಲ, ಸವಲತ್ತುಗಳನ್ನು ಬಳಸಿಕೊಂಡು ಬೃಹತ್ತಾಗಿ ಬೆಳೆದಿರುವ ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಮೀನಾ ನಾಗಾರಾಜ್ ಅವರಿಗೆ ತಾಕೀತು ಮಾಡಿದ್ದಾರೆ. ಐಟಿಬಿಟಿ ಸಂಸ್ಥೆಗಳು ಕನ್ನಡಿಗರನ್ನು ಕಡೆಗಣಿಸುತ್ತಿವೆ, ಅಲ್ಲದೆ ಕನ್ನಡಿರಿಗೆ ಸಿಗಬೇಕಾದ ಉದ್ಯೋಗಗಳು ಅನ್ಯಭಾಷಿಕರ ಪಾಲಾಗುತ್ತಿವೆ ಎಂಬ ದೂರುಗಳು ಪ್ರಾಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕನ್ನಡ …
Read More »ಆರ್‌ಸಿಬಿಗೆ ಕಿಚ್ಚ ಸುದೀಪ್- ರಚಿತಾ ರಾಮ್ ರಾಯಭಾರಿ..?
ಬೆಂಗಳೂರು, – ರನ್ನ, ಮುಕುಂದ ಮುರಾರಿ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದ ಕಿಚ್ಚ ಸುದೀಪ್ ಹಾಗೂ ಡಿಂಪಲ್‍ಕ್ವೀನ್ ರಚಿತಾರಾಮ್ ಮುಂಬರುವ ಐಪಿಎಲ್‍ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಆರ್‍ಸಿಬಿ ತಂಡದ ರಾಯಭಾರಿಯಾಗುತ್ತಾರೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಸೆಪ್ಟೆಂಬರ್ 19 ರಿಂದ ನವೆಂಬರ್ 10ರವರೆಗೆ ಯುಎಇಯಲ್ಲಿ ನಡೆಯಲಿರುವ ಐಪಿಎಲ್ 13ರಲ್ಲಿ ಆರ್‍ಸಿಬಿ ತಂಡಕ್ಕೆ ಕಿಚ್ಚ ಸುದೀಪ್ ಹಾಗೂ ರಚಿತಾರಾಮ್ ತಂಡದ ರಾಯಭಾರಿಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದರೂ ಕೂಡ ಇದರ ಬಗ್ಗೆ ಆರ್‍ಸಿಬಿ ತಂಡದ …
Read More »