Breaking News

Yearly Archives: 2020

ನಾನು ಹುಟ್ಟಿ ಬೆಳೆದಂತಹ ಮನೆ ಸಂಪೂರ್ಣವಾಗಿ ನಾಶವಾಗಿದೆ.3 ಕೋಟಿ ನಷ್ಟ ಆಗಿದೆ: ಶ್ರೀನಿವಾಸ ಮೂರ್ತಿ

ಬೆಂಗಳೂರು: ನಾವು ಯಾರ ಮೇಲೂ ದ್ವೇಷಕ್ಕೆ ಹೋಗಿಲ್ಲ. ಎಲ್ಲರೂ ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಟ್ಟಾಗಿ ಇದ್ದೇವೆ ಎಂದು ಅಖಂಡ ಶ್ರೀನಿವಾಸ ಮೂರ್ತಿ ಹೇಳಿದರು.ಮಾಧ್ಯಮಗಳ ಜೊತೆ ಮಾತನಾಡಿದ ಅಖಂಡ ಶ್ರೀನಿವಾಸ ಮೂರ್ತಿ, ಯಾರು ಈ ಕೃತ್ಯಗಳನ್ನು ಮಾಡಿದ್ದಾರೆ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಿ, ನ್ಯಾಯ ಒದಗಿಸಿಕೊಡಬೇಕು ಎಂದು ದೂರನ್ನು ಕೊಟ್ಟಿದ್ದೇವೆ. ಈ ಗಲಭೆಯಿಂದ ಏನೇನು ನಷ್ಟ ಆಗಿದೆ ಎಂದು ಒಂದು ಪಟ್ಟಿ ಮಾಡಿ ಮಾಡಿಕೊಡುತ್ತೇನೆ. …

Read More »

ಬೆಂಗಳೂರು ಗಲಭೆ ರಾಜಕೀಯ ಲಾಭಕ್ಕಾಗಿ ನಡೆದಿರುವ ಘಟನೆ: ಲಕ್ಷ್ಮಣ ಸವದಿ

ರಾಯಚೂರು: ಬೆಂಗಳೂರಿನ ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿಯ ಘಟನೆ ಪೂರ್ವ ನಿಯೋಜಿತ, ಇದು ರಾಜಕೀಯ ಲಾಭಕ್ಕಾಗಿ ನಡೆದಿರುವ ಘಟನೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಯಚೂರಿನಲ್ಲಿ ಹೇಳಿದ್ದಾರೆ. ನಗರದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಬಳಿಕ ಮಾತನಾಡಿದ ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ಬೆಂಗಳೂರು ಗಲಭೆಗೆ ಕಾರಣವಾದ ನವೀನ್ ಅನ್ನೋ ವ್ಯಕ್ತಿ ಕಟ್ಟಾ ಕಾಂಗ್ರೆಸ್ ಬೆಂಬಲಿಗ. ನವೀನ್‍ಗೂ ಬಿಜೆಪಿಗೂ ಯಾವುದೇ …

Read More »

ಚಾಲೆಜಿಂಗ್ ಸ್ಟಾರ್ ದರ್ಶನ ಇಂದು ಧಾರವಾಡದಲ್ಲಿ

ಧಾರವಾಡ: ಚಾಲೆಜಿಂಗ್ ಸ್ಟಾರ್ ದರ್ಶನ ಇಂದು ಧಾರವಾಡದಲ್ಲಿದ್ದಾರೆ. ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆ ಬೆಂಗಳೂರಿನಲ್ಲಿನ ಸಿನಿಮಾ ಇಂಡಸ್ಟ್ರಿಯಲ್ಲಿ ಯಾವುದೇ ಚಿತ್ರಿಕರಣ ಇಲ್ಲದ ಕಾರಣ ದರ್ಶನ್ ಧಾರವಾಡ ಟೂರ್ ಹಮ್ಮಿಕೊಂಡಿದ್ದಾರೆ.ಮಾಜಿ ಸಚಿವ ವಿನಯ ಕುಲಕರ್ಣಿ ಜೊತೆ ಹಲವು ವರ್ಷಗಳಿಂದ ದರ್ಶನ್ ಸ್ನೇಹ ಇದೆ. ಈ ಹಿನ್ನೆಲೆಯಲ್ಲಿ ಆಗಾಗ ದರ್ಶನ್ ಇಲ್ಲಿಗೆ ಭೇಟಿ ನೀಡುತ್ತಾ ಇರುತ್ತಾರೆ. ಧಾರವಾಡ ನಗರದ ಹೊರ ವಲಯದಲ್ಲಿರುವ ವಿನಯ ಕುಲಕರ್ಣಿ ಹಾಲಿನ ಡೈರಿಯಲ್ಲಿ ಇಳಿದುಕೊಂಡಿರುವ ದರ್ಶನ್, ಅಲ್ಲಿ ಚಕ್ಕಡಿ …

Read More »

ಕಳ್ಳತನದ ಮೂಲಕ ಆತಂಕ ಸೃಷ್ಟಿಸಿದ್ದ ಫೈರೋಜ್ ಜಫ್ರಿ ಬಂಧನ

  ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳ್ಳತನದ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಿದ್ದ ಖತರ್ನಾಕ್ ಕಳ್ಳ ಫೈರೋಜ್ ಜಫ್ರಿ ಕಳ್ಳನನ್ನು ಬಂಧಿಸುವಲ್ಲಿ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಫೈರೋಜ್ ಜಫ್ರಿ ರಾಜೇಸಾಬ(38) ಬಂಧಿತ ಆರೋಪಿ. ರಾತ್ರಿ ವೇಳೆ ಮಾರುಕಟ್ಟೆಯಲ್ಲಿ ಶಟರ್ ಮುರಿದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸಿರುವ ಪೊಲೀಸರು, ಆತನಿಂದ 30,300 ರೂ ನಗದು, ಕಬ್ಬಿಣದ ರಾಡ್ ವಶಪಡಿಸಿಕೊಂಡಿದ್ದಾರೆ. ಲಬ್ ರಸ್ತೆ ವಿನಾಯಕ ಮೆಡಿಕಲ್ …

Read More »

ಸ್ಮಾರ್ಟ್ ಸಿಟಿ ಮಾದರಿಯಂತೆಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಗರಗಳಿಗೆ ಸೆಡ್ಡು

ಯಮಕನಮರಡಿ: ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಗರಗಳಿಗೆ ಸೆಡ್ಡು ಹೊಡೆಯುವಂತೆ  ಸ್ಮಾರ್ಟ್ ಸಿಟಿ ಮಾದರಿಯಂತೆ ಹೈ ಮಾಸ್ಕ್ ಬೀದಿ ದೀಪಗಳನ್ನು  ಶಾಸಕ ಸತೀಶ ಜಾರಕಿಹೊಳಿ  ಅವರು ಅಳವಡಿಸಿದ್ದಾರೆ. ಮುಚ್ಚಂಡಿ,  ಧರನಟ್ಟಿ, ಭರಮ್ಯಾನಟ್ಟಿ ಮತ್ತು ಕರುವಿನಕುಂಪ್ಪಿ ಗ್ರಾಮಗಳೂ ಈಗಾಗಲೇ ಪಟ್ಟಣಗಳು ನಾಚುವಂತೆ ಹೈ ಮಾಸ್ಕ್ ದೀಪಗಳಿಂದ ಕಂಗೊಳಿಸುತ್ತಿದ್ದೇವೆ. ಇನ್ನೂ ಕ್ಷೇತ್ರದಾದ್ಯಂತ ಈ ದೀಪಗಳನ್ನು ಅಳವಡಿಸುವ ಯೋಜನೆಯನ್ನು ಶಾಸಕರು ಹಾಕಿಕೊಂಡಿದ್ದಾರೆ.ನಿನ್ನೆ ಮುಚ್ಚಂಡಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಖುದ್ದಾಗಿ ಹೈಮಾಸ್ಕ್ ದೀಪಗಳನ್ನು ಪರಿಶೀಲಿಸಿದರು. …

Read More »

ಡಿಜೆ, ಕೆಜಿ ಹಳ್ಳಿಯಲ್ಲಿ ಇಂದು ನಮಾಜ್‍ಗೆ ನಿಷೇಧ – ಡಿಸಿಪಿ ಶರಣಪ್ಪ ಖಡಕ್ ಸೂಚನೆ

ಬೆಂಗಳೂರು: ನಿಷೇದಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಇಂದು ನಮಾಜ್‍ಗೆ ನಿಷೇಧ ಮಾಡಲಾಗಿದೆ.ಇಂದು ಶುಕ್ರವಾರ ಆಗಿರುವುದರಿಂದ ಸಾಮೂಹಿಕವಾಗಿ ನಮಾಜ್ ಮಾಡುತ್ತಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಹೀಗಾಗಿ ಸಾಮೂಹಿಕ ಪ್ರಾರ್ಥನೆಗಾಗಿ ಅವಕಾಶ ನಿಷೇಧಿಸಲಾಗಿದೆ. ಕೇವಲ ಮೌಲ್ವಿ ಒಬ್ಬರು ಮಾತ್ರ ಹೋಗಿ ನಮಾಜ್ ಮಾಡಲು ಅವಕಾಶ ನೀಡಲಾಗಿದೆ. ಇಂದು ನಿಷೇದಾಜ್ಞೆ ಪ್ರದೇಶದಲ್ಲಿ ನಮಾಜ್ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಕೆಎಸ್‌ಆರ್‌ಪಿ, ಸಿಎಆರ್ ತುಕಡಿ …

Read More »

ಇಲ್ಲಿದೆ ‘ರಾಷ್ಟ್ರ ಧ್ವಜ’ದ ಇತಿಹಾಸ ಮತ್ತದರ ಮಹತ್ವ

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲ ತಯಾರಿ ನಡೆಯುತ್ತಿದೆ. ಈ ಬಾರಿ 74 ನೇ ಸ್ವಾತಂತ್ರ್ಯ ದಿನವನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುವುದು. 1947, ಆಗಸ್ಟ್ 15 ರಂದು 200 ವರ್ಷಗಳ ಬ್ರಿಟಿಷ್ ಗುಲಾಮಗಿರಿಯಿಂದ ಭಾರತೀಯರಿಗೆ ಸ್ವಾತಂತ್ರ್ಯ ಸಿಕ್ಕಿತ್ತು. ಬ್ರಿಟಿಷರ ವಿರುದ್ಧ ಹೋರಾಡಲು, ದೇಶದ ಜನರನ್ನು ಒಂದು ಮಾಡಲು ಧ್ವಜದ ಅಗತ್ಯವುಂಟಾಗಿತ್ತು. ಈ ಧ್ವಜ ಈಗ ರಾಷ್ಟ್ರೀಯತೆಯ ಸಂಕೇತವಾಗಿದೆ. ದೇಶದ ಏಕತೆ, ಸಮಗ್ರತೆ ಮತ್ತು ರಾಷ್ಟ್ರದ ಗುರುತು ಧ್ವಜವಾಗಿದೆ. ಇಡೀ …

Read More »

ಪ್ರವಾದಿ ನಿಂದನೆಯ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ತಾನೇ ಅಪಲೋಡ್ ಮಾಡಿರುವುದಾಗಿ ಗಿ ಡಿ.ಜೆ.ಹಳ್ಳಿ ಗಲಭೆಗೆ ಕಾರಣನಾದ ಆರೋಪಿ ನವೀನ್ ತಪ್ಪೊಪ್ಪಿಕೊಂಡಿದ್ದಾನೆ.

ಬೆಂಗಳೂರು:  ಪ್ರವಾದಿ ನಿಂದನೆಯ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ  ತಾನೇ ಅಪಲೋಡ್ ಮಾಡಿರುವುದಾಗಿ  ಗಿ ಡಿ.ಜೆ.ಹಳ್ಳಿ ಗಲಭೆಗೆ ಕಾರಣನಾದ ಆರೋಪಿ ನವೀನ್ ತಪ್ಪೊಪ್ಪಿಕೊಂಡಿದ್ದಾನೆ. ಡಿಜೆ ಹಳ್ಳಿ‌ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿ ನವೀನ್ ಅನ್ನು ಪೂರ್ವ ವಿಭಾಗದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ, ತಾನು ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಕಮೆಂಟ್ ಜತೆಗೆ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. 7 ಗಂಟೆ ಸುಮಾರಿಗೆ …

Read More »

ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!

ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್‌ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …

Read More »

ವಿದ್ಯುತ್ ತಗುಲಿ ತಂದೆ ಮಗ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ನಡೆದಿದೆ. 

ರಾಯಚೂರು:  ವಿದ್ಯುತ್ ತಗುಲಿ ತಂದೆ ಮಗ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ರಾಯಚೂರಿನ ದಿನ್ನಿ ಗ್ರಾಮದಲ್ಲಿ ನಡೆದಿದೆ.  ಮಹೇಶ (47), ನವೀನ್ (16) ಮೃತರು. ಮನೆ ಪಕ್ಕದಲ್ಲಿದ್ದ ಮರಕ್ಕೆ ವಿದ್ಯುತ್ ವೈರ್ ತಾಕಿದೆ. ಇದೇ ಮರಕ್ಕೆ ಬಟ್ಟೆ ನೇತಾಕಲು ವೈರ್ ಕಟ್ಟಲಾಗಿತ್ತು. ಜಿಟಿ ಜಿಟಿ ಮಳೆ ಸುರಿಯುತ್ತಿರುವ ಪರಿಣಾಮ ಮರಕ್ಕೆ ವಿದ್ಯುತ್ ಪ್ರವಹಿಸಿ ತಂತಿಗೂ ಅರ್ಥಿಂಗ್ ಆಗಿದೆ. ಬಟ್ಟೆ ತೆಗೆಯಲು ಹೋದ ತಂದೆ ಶಾಕ್ ನಿಂದ ಮೃತಪಟ್ಟಿದ್ದಾನೆ. ತಂದೆ …

Read More »