ಬೆಳಗಾವಿ: ‘ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಮಣಗುತ್ತಿ ಘಟನೆಯ ವಾಸ್ತವ ತಿಳಿಯದೆ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ’ ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಟೀಕಿಸಿದ್ದಾರೆ. ‘ಸಮಗ್ರ ಮಾಹಿತಿ ಪಡೆದು ಟ್ವೀಟ್ ಮಾಡಬೇಕಿತ್ತು. ಆ ಗ್ರಾಮದಲ್ಲಿ ಸರ್ಕಾರ, ಜಿಲ್ಲಾಡಳಿತ ಅಥವಾ ಕನ್ನಡಿಗರಿಂದ ಶಿವಾಜಿ ಪ್ರತಿಮೆಗೆ ಅವಮಾನವಾಗಿಲ್ಲ. ಪ್ರತಿಷ್ಠಾಪಿಸಿದರೆ ತೆರವುಗೊಳಿಸಿದ್ದಾರೆ. ಆದಾಗ್ಯೂ ಕರ್ನಾಟಕ ಸರ್ಕಾರ ಕ್ಷಮೆ ಯಾಚಿಸುವಂತೆ ಆಗ್ರಹಿಸಿ ಮಹಾರಾಷ್ಟ್ರ …
Read More »Yearly Archives: 2020
ಪಿಎಸ್ಎಸ್ಕೆ ಸಕ್ಕರೆ ಕಾರ್ಖಾನೆಗೆ ಕೊನೆಗೂ ಕಾಯಕಲ್ಪ ; ನಿರಾಣಿ ಒಡೆತನದಲ್ಲಿ ವಿದ್ಯುಕ್ತ ಆರಂಭ
ಮಂಡ್ಯ: ಕಳೆದ ನಾಲ್ಕು ವರ್ಷಗಳ ಹಿಂದೆ ನಷ್ಟದಿಂದ ಸ್ಥಗಿತ ಗೊಂಡಿದ್ದ ಆಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರದ ಪಿಎಸ್ಎಸ್ಕೆ ಸಕ್ಕರೆ ಕಾರ್ಖಾನೆಗೆ ಕೊನೆಗೂ ಕಾಯಕಲ್ಪ ದೊರೆತಿದೆ. ಮಾಜಿ ಸಚಿವ ಮುರುಗೇಶ್ ನಿರಾಣಿ ಒಡೆತನದ ನಿರಾಣಿ ಷುಗರ್ಸ್ ಒಡೆತನದಲ್ಲಿ ಇಂದು ಕಾರ್ಖಾನೆ ವಿದ್ಯುಕ್ತವಾಗಿ ಆರಂಭಗೊಂಡಿದೆ. ರಾಜ್ಯದ ಹಲವು ಮಠಾಧೀಶರು ಕಾರ್ಖಾನೆಯ ಉದ್ಘಾ ಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಾಲನೆ ನೀಡಿ ಶುಭಕೋರಿದ್ದಾರೆ. ಪಾಂಡವಪುರ ತಾಲೂಕಿನಲ್ಲಿರುವ ಪಿಎಸ್ಎಸ್ಕೆ ಸಕ್ಕರೆ ಕಾರ್ಖಾ ನೆ. ರಾಜ್ಯದಲ್ಲಿ ಪ್ರಪ್ರಥಮವಾಗಿ ಸ್ಥಾಪಿತವಾಗಿದ್ದ ಸಹಕಾರಿ …
Read More »ಯೂರಿಯಾ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ
ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಮರ್ಪಕವಾಗಿ ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ‘ಸಂಘದಿಂದ ಅವಶ್ಯ ಪ್ರಮಾಣದಲ್ಲಿ ಯೂರಿಯಾ ನೀಡುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಇತರ ಗೊಬ್ಬರಗಳ ಬದಲಿಗೆ ಯೂರಿಯಾವನ್ನೇ ಕೊಡಬೇಕು’ ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಸಂಚಾಲಕ ಲಕ್ಕಪ್ಪ ಬಿಜ್ಜನ್ನವರ, ರಾಜು ಗಾಣಗಿ, ವಿಠ್ಠಲ ದೊಡಗೌಡ್ರ, ಬಸಪ್ಪ ದಳವಾಯಿ, ಮಲ್ಲಪ್ಪ ದಳವಾಯಿ, ವಿಠ್ಠಲ …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಇಲ್ಲ
ನವದೆಹಲಿ: ಸೋಮವಾರ ಕೊರೊನಾ ಸೋಂಕು ಹಿನ್ನೆಲೆ ಆಸ್ಪತ್ರೆ ಸೇರಿದ ಮಾಜಿ ರಾಷ್ಟ್ರಪತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ಸೇನಾ ಆರ್. ಆರ್. ಆಸ್ಪತ್ರೆ ಬುಲೆಟಿನ್ ಹೊರಡಿಸಿದೆ. ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರೆದಿದೆ. ಅವರ ದೇಹದಲ್ಲಿ ರಕ್ತ ಚಲನೆ, ಹೃದಯಬಡಿತ ಸಾಧಾರಣ ಸ್ಥಿತಿಯಲ್ಲಿದ್ದು ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆರ್. ಆರ್. ಆಸ್ಪತ್ರೆಯ ಬುಲೆಟಿನ್ನಲ್ಲಿ ಹೇಳಲಾಗಿದೆ. ಕೊರೊನಾ ಸೋಂಕು ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಪ್ರಣಬ್ …
Read More »ಬೆಳಗಾವಿ | 575 ಮಂದಿಗೆ ಕೋವಿಡ್ ದೃಢ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 575 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಇದರೊಂದಿಗೆ ಇಲ್ಲಿನ ಸೋಂಕಿತರ ಸಂಖ್ಯೆ 6ಸಾವಿರದ ಗಡಿ ದಾಟಿದೆ. ಈ ಸೋಂಕಿನ ಕಾರಣದಿಂದ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. 444 ಮಂದಿ ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Read More »ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ
ಹಾಸನ: ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಹಾಸನ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆಗ್ರಹಿಸಿದಲಿತ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಮಹಾವೀರ ವೃತ್ತ, ಕಸ್ತೂರಬಾ ರಸ್ತೆ ಮೂಲಕ ಸಾಗಿ ಎನ್.ಆರ್. ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ಹಾಸನ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಪ್ರತಿಭಟನಾಕಾರರು ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ …
Read More »ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲು ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಶಿಕಲಾ ಜೊಲ್ಲೆ ಹೇಳಿದರು. ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಆವರು, ರ್ಯಾಪಿಡ್ ಟೆಸ್ಟ್ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ತಕ್ಷಣ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ …
Read More »ಬೆಂಗಳೂರು ಹಿಂಸಾಚಾರ: ಕೋಲಾರ ಸೇರಿ 6 ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ- ಐಜಿಪಿ ಸೀಮಂತ್ ಕುಮಾರ್ ಸಿಂಗ್
ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಬಳಿಕ ಕೋಲಾರ ಸೇರಿದಂತೆ ಒಟ್ಟು 6 ಪ್ರದೇಶಗಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. ಕೋಲಾರ, ರಾಮನಗರ, ತುಮಕೂರು, ಕೆಜಿಎಪ್, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ದಲ್ಲಿ ಹೈಅಲರ್ಟ್ ಆಗಿರುವಂತೆ ಹಾಗೂ ರಾತ್ರಿ ವೇಳೆ ಗಸ್ತು ತಿರುಗುವಂತೆ ಸೂಚಿಸಲಾಗಿದೆ. ಇನ್ನೂ ಎರಡೂ ದಿನಗಳ ಕಾಲ ಇದೇ ರೀತಿ ಭದ್ರತೆಯೊದಗಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. …
Read More »ಪತ್ರಕರ್ತರ ಮೇಲೆ ಹಲ್ಲೆ ಜಿಲ್ಲಾಧಿಕಾರಿಗಳಿಗೆ ಮನವಿ
ಚಿತ್ರದುರ್ಗ,ಆ12(ಹಿಸ): ಬೆಂಗಳೂರಿನ ಡಿ.ಜಿ ಹಳ್ಳಿ ಮತ್ತು ಕೆ.ಆರ್.ಹಳ್ಳಿಗಳಲ್ಲಿ ನಡೆದಿರುವ ಗಲಭೆಯ ಸಂದರ್ಭದಲ್ಲಿ ಸುದ್ದಿ ಮಾಧ್ಯಮದ ಪ್ರತಿನಿಧಿಗಳ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಹಲ್ಲೆಗೊಳಗಾದ ಪತ್ರಕರ್ತರಿಗೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಬೇಕು ಮತ್ತು ಪತ್ರಕರ್ತರಿಗೆ ರಕ್ಷಣೆ ನೀಡಬೇಕು ಹಾಗೆಯೇ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ಕೊಡ ಪತ್ರಕರ್ತರಿಗೆ ರಕ್ಷಣೆ ನೀಡುವಂತಹ ಸುರಕ್ಷಣಾ ಕಾನೂನು ಜಾರಿ ಮಾಡಬೇಕು ಎಂದು …
Read More »ಶಿವಸೇನೆ ಷಡ್ಯಂತ್ರಕ್ಕೆ ಗ್ರಾಮಸ್ಥರ ಮಂಗಳಾರತಿ; ಮಣಗುತ್ತಿ ಶಿವಾಜಿ ಮೂರ್ತಿ ವಿವಾದ ಇತ್ಯರ್ಥ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ನಡೆದ ಶಿವಾಜಿ ಮೂರ್ತಿ ಪ್ರತಿ ಸ್ಥಾಪನೆ ಪ್ರಕರಣ ಕೊನೆಗೆ ಅಂತ್ಯ ಕಂಡಿದೆ. ಶಿವಾಜಿ ಮೂರ್ತಿ ವಿಚಾರವನ್ನೆ ಮುಂದಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದ ಎಂ.ಇ.ಎಸ್. ಹಾಗೂ ಶಿವಸೇನೆಗೆ ತೀವ್ರ ಮುಖ ಭಂಗವಾಗಿದೆ. ಹೌದು, ಕಳೆದ ಒಂದು ವಾರದಿಂದಲೂ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿ ಸ್ಥಾಪನೆ ಮಾಡುವ ವಿಚಾರವಾಗಿ ಹಲವಾರು ಗಲಾಟೆಗಳು ನಡೆದಿದ್ದವು. ಶಿವಸೇನೆಯ ಕುಮ್ಮಕ್ಕಿನಿಂದ ಸುಳ್ಳು ಪ್ರಚಾರ ಪಡೆದಿದ್ದ …
Read More »