ಬಳ್ಳಾರಿ: ಹೃದಯಾಘಾತದಿಂದ ರಸ್ತೆ ಪಕ್ಕದಲ್ಲಿ ಬಿದ್ದು ಹೊರಳಾಡುತ್ತಿದ್ದ ವ್ಯಕ್ತಿಯನ್ನು ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ಸೇರಿಸುವ ಮೂಲಕ ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಶಾಸಕ ಸಮಯ ಪ್ರಜ್ಞೆ ಮೆರೆದಿದ್ದಾರೆ.ಕೆಲಸದ ನಿಮಿತ್ತವಾಗಿ ಕಂಪ್ಲಿಯಿಂದ ಕರುಗೋಡ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ, ಕುರುಗೋಡಿನ ಅಗ್ನಿಶಾಮಕ ದಳ ಕಛೇರಿ ಬಳಿ ಪಕ್ಕಿರಪ್ಪ ಎಂಬ ವ್ಯಕ್ತಿ, ಹೃದಯಾಘಾತವಾಗಿ ರಸ್ತೆ ಪಕ್ಕದಲ್ಲಿ ಬಿದ್ದಿದ್ದರು. ಅದನ್ನು ಗಮನಿಸಿದ ಶಾಸಕ ಗಣೇಶ್ ಕೂಡಲೇ ಅಂಬುಲೆನ್ಸ್ ಕರೆಸಿ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ …
Read More »Yearly Archives: 2020
ಈಗ ಸಂಚರಿಸುವ ಯಾವುದೇ ರೈಲುಗಳನ್ನು ನಿಲ್ಲಿಸಿಲ್ಲ- ರೈಲ್ವೇಯಿಂದ ಸ್ಪಷ್ಟನೆ
ನವದೆಹಲಿ: ನಿತ್ಯ ಸಂಚರಿಸುವ ಯಾವುದೇ ರೈಲುಗಳನ್ನು ನಿಲ್ಲಿಸಲಾಗಿಲ್ಲ ಎಂದು ರೈಲ್ವೇ ಸಚಿವಾಲಯ ಸ್ಪಷ್ಟಪಡಿಸಿದೆ.ಈ ಕುರಿತು ಟ್ವೀಟ್ ಮಾಡುವ ಮೂಲಕ ತಿಳಿಸಿರುವ ಸಚಿವಾಲಯ, ಕೆಲ ಮಾಧ್ಯಮಗಳಲ್ಲಿ ಸೆಪ್ಟೆಂಬರ್ 30ರ ವರೆಗೆ ನಿತ್ಯ ಸಂಚರಿಸುವ ಎಲ್ಲ ರೈಲುಗಳನ್ನು ಸಚಿವಾಲಯ ರದ್ದು ಮಾಡಿದೆ ಎಂದು ವರದಿಯಾಗಿದೆ. ಈ ವರದಿ ಸರಿಯಲ್ಲ. ಸಚಿವಾಲಯ ಯಾವುದೇ ಹೊಸ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ನೋಟಿಫಿಕೇಶನ್ ಹರಿದಾಡುತ್ತಿದ್ದು, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ …
Read More »ಆಟೋ ಚಾಲಕನ ಮಗ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ……….
ದಾವಣಗೆರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾವಣಗೆರೆಯ ಹರಿಹರ ತಾಲೂಕಿನ ಎಂಕೆಇಟಿ ಶಾಲೆಯ ಅಭಿಷೇಕ್ ಕನ್ನಡ ಮಾಧ್ಯಮದಲ್ಲಿ 625ಕ್ಕೆ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಗುತ್ತೂರು ಗ್ರಾಮದ ಮಂಜುನಾಥ್ ಹಾಗೂ ನೇತ್ರಾವತಿ ಅವರ ಮೊದಲನೇ ಮಗ ಅಭಿಷೇಕ್ ಬಡತನಲ್ಲಿ ಬೆಳೆದು ಛಲದಿಂದ ಓದಿ ಈ ಸಾಧನೆ ಮಾಡಿದ್ದಾನೆ. ತಂದೆ ಅಟೋಚಾಲನೆ ಮಾಡುತ್ತಿದ್ದರೆ ತಾಯಿ ಕೂಲಿ ಕೆಲಸ ಮಾಡಿಕೊಂಡು ಸಂಸಾರವನ್ನು ಸಾಗಿಸುತ್ತಿದ್ದಾರೆ. ಇವರ ಕಷ್ಟ ನೋಡಿದ ಅಭಿಷೇಕ್ ಅತ್ಯಂತ …
Read More »ಪ್ರವಾಹ ನಿರ್ವಹಣೆಯಲ್ಲಿ ತೊಡಗಿದೆ…..ಪ್ರಧಾನಿ ಬಳಿ ಪರಿಹಾರ ಕೇಳೋಕೆ ರಾಜ್ಯ ಸರ್ಕಾರಕ್ಕೆ ಭಯ……….?
ಬೆಂಗಳೂರು: ಆಗಸ್ಟ್ ಆರಂಭದಲ್ಲೇ ನಿರೀಕ್ಷೆಯಂತೆ ರಾಜ್ಯದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಸಾವಿರಾರು ಕೋಟಿ ಹಾನಿ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ರಾಜ್ಯ ಸರ್ಕಾರ ತಡವಾಗಿ ಎಚ್ಚೆತ್ತು ಪ್ರವಾಹ ನಿರ್ವಹಣೆಯಲ್ಲಿ ತೊಡಗಿದೆ. ಆದ್ರೆ ನಿರೀಕ್ಷಿತ ಪ್ರಮಾಣದಲ್ಲಿ ನಿರ್ವಹಣೆ ಆಗ್ತಿಲ್ಲ. ಕಾರಣ ಸರ್ಕಾರದ ಬೊಕ್ಕಸ ಖಾಲಿ ಆಗಿರೋದು. ಇಂತಹ ಸಂಕಷ್ಟದ ವೇಳೆಯಲ್ಲೂ ರಾಜ್ಯ ಸರ್ಕಾರ ಮತ್ತೆ ಹಳೆಯ ತಪ್ಪನ್ನೇ ಮಾಡಿದೆ. ಇವತ್ತು ಪ್ರಧಾನಿ …
Read More »ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು: ಅನಂತಕುಮಾರ್ ಹೆಗಡೆ
ಕಾರವಾರ: ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕುಮಟಾದಲ್ಲಿ ಇಂದು ಸಂಸದರ ಹಾಗೂ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ಎನ್‍ಎಲ್ ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಿಲ್ಲ. ಸಮರ್ಪಕ ಸೇವೆ ನೀಡಲು ಬಿಎಸ್‍ಎನ್‍ಎಲ್ ಸಂಸ್ಥೆಯ ನೌಕರರಿಂದ ಸಾಧ್ಯವಾಗೋದಿಲ್ಲ. ಈಗಾಗಲೇ 85 …
Read More »ಜಿಲ್ಲೆಯಲ್ಲಿ ಇಂದು 54 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಬಲಿ
ಬೆಳಗಾವಿ: ಜಿಲ್ಲೆಯಲ್ಲಿ ಇಂದು 54 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಬಲಿಯಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದು, ಇಂದು ಒಂದೇ ದಿನ 90 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿಯ ಇಬ್ಬರು ಹಾಗೂ ಸವದತ್ತಿ ತಾಲೂಕಿನ ಒಬ್ಬ ಒಟ್ಟು ಮೂವರು ಸಾವನ್ನಪ್ಪಿದ್ದು, ಇದವರೆಗೆ ಜಿಲ್ಲೆಯಲ್ಲಿ ಬೆಳಗಾವಿ ತಾಲೂಕಿನಲ್ಲಿ 20, ಗೋಕಾಕನಲ್ಲಿ 10, …
Read More »ಜಲಪಾತದಲ್ಲಿ ಮಂಜಿನೊಂದಿಗೆ ಶರಾವತಿ ಕಣ್ಣ ಮುಚ್ಚಾಲೆ
ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಜೋಗ ಜಲಪಾತಕ್ಕೆ ಸಾಕಷ್ಟು ಪ್ರಮಾಣದಲ್ಲಿ ಮಳೆ ನೀರು ಹರಿದು ಬರುತ್ತಿದ್ದು, ಪ್ರಕೃತಿಯ ಸುಂದರ ಮಡಿಲಲ್ಲಿ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದ್ದಾಳೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದ್ದಾಳೆ. ಮಲೆನಾಡಿನ ಬೆಟ್ಟ, ಗುಡ್ಡ ಹಸಿರು ಕಾನನದ ನಡುವೆ ಬಳುಕುತ್ತಾ ಹರಿಯುವ ಶರಾವತಿ ನದಿ ಜೋಗದಲ್ಲಿ ಸುಮಾರು 950 …
Read More »ಮತ್ತೆ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಮಾದರಿಯಾದ ಕಿಚ್ಚ ಸುದೀಪ್
ಬೆಂಗಳೂರು,ಆ.10- ಇತ್ತೀಚೆಗಷ್ಟೆ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದ ನಟ ಕಿಚ್ಚ ಸುದೀಪ್ ಅವರು ಇದೀಗ ಮತ್ತೆ ನಾಲ್ಕು ಶಾಲೆಗಳನ್ನು ದತ್ತು ಪಡೆಯುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಶಾಲೆಗಾಗಿ ನಾವು-ನೀವು ಯೋಜನೆಯಡಿ ಈ ಬಾರಿ ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆಗಳನ್ನು ದತ್ತು ಪಡೆದುಕೊಂಡಿದೆ. ಸಾಗರ ತಾಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್.ಹಳ್ಳಿ ಹಾಗೂ ಎಸ್.ಎನ್.ನಗರದ ನಾಲ್ಕು ಸರ್ಕಾರಿ ಶಾಲೆಗಳನ್ನು …
Read More »ಉಡುಪಿಯಲ್ಲಿ ನಾಳೆ ಕೃಷ್ಣಜನ್ಮಾಷ್ಟಮಿ ಆಚರಣೆ ಇಲ್ಲ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಾಳೆ ಅಷ್ಟಮಿ ಆಚರಣೆ ನಡೆಯುತ್ತಿಲ್ಲ. ಸೆಪ್ಟೆಂಬರ್ 11ಕ್ಕೆ ಶ್ರೀಕೃಷ್ಣಜನ್ಮಾಷ್ಟಮಿ ಆಚರಿಸಲು ಉಡುಪಿ ಕೃಷ್ಣಮಠ ತೀರ್ಮಾನಿಸಿದೆ. ಚಾಂದ್ರಮಾನ ಪದ್ಧತಿಯ ಪ್ರಕಾರ ನಾಳೆ ಅಷ್ಟಮಿ ನಾಡಿನಾದ್ಯಂತ ನಡೆಯುತ್ತಿದೆ. ಉಡುಪಿ ಶ್ರೀಕೃಷ್ಣಮಠ ಸೌರಮಾನ ಪದ್ಧತಿಯನ್ನು ಅನುಸರಿಸುವ ಧಾರ್ಮಿಕ ಕೇಂದ್ರ. ಅಗಸ್ಟ್ 11ಕ್ಕೆ ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯುತ್ತಿದ್ದು, ಕೃಷ್ಣನ ನಾಡು ಉಡುಪಿಯಲ್ಲಿ ಒಂದು ತಿಂಗಳು ನಂತರ ಆಚರಣೆ ನಡೆಯಲಿದೆ. ಶ್ರೀಕೃಷ್ಣ ಹುಟ್ಟಿದ್ದು, ಸಿಂಹಮಾಸ ಕೃಷ್ಣ ಪಕ್ಷ ರೋಹಿಣಿ ನಕ್ಷತ್ರ …
Read More »ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ.
ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ. ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ.[೧] ಮಥುರಾ ಕೃಷ್ಣನ ಜನ್ಮಸ್ಥಳ. …
Read More »