Breaking News

Yearly Archives: 2020

ಎಡಬಿಡದೇ ಸುರಿಯುತ್ತಿರುವ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ.

ಮುಂಬೈ: ರಾತ್ರಿಯಿಂದ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಆಗಸ್ಟ್ 4 ಮತ್ತು 5 ದಿನ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಮಹಾನಗರ ಪಾಲಿಕೆ, ಎನ್‍ಡಿಆರ್‍ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಲರ್ಟ್ ಆಗಿರುವಂತೆ ಸರ್ಕಾರ ಸೂಚಿಸಿದೆ. ಮಂಗಳವಾರ ಬೆಳಗಿನ ಜಾವ ಮೂರು ಗಂಟೆಗೆ ಮುಂಬೈ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮಳೆ …

Read More »

ಬೆಳಗಾವಿ ಜಿಲ್ಲೆಯ ಚಾಲಕನ ಪುತ್ರನ ಸಾಧನೆ; UPSC ಪರೀಕ್ಷೆಯಲ್ಲಿ 440ನೇ ಸ್ಥಾನ!

ಬೆಳಗಾವಿ ; ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು. ಸತತ ಪರಿಶ್ರಮ, ಸತತ ಓದು ಗುರುವಿಲ್ಲದೆಯೂ ನಮ್ಮ ಗುರಿಯನ್ನು ತಲುಪಲು ಸಹಕಾರಿ ಎಂಬುದನ್ನು ಚಾಲಕನ‌ ಮಗ ಇಂದು ಸಾಧನೆ ಮಾಡುವುದರ ಮೂಲಕ ಆ ಗ್ರಾಮದ ಹೆಮ್ಮೆಯ ಜೊತೆಗೆ ತಂದೆ ತಾಯಿಯ ಗೌರವವನ್ನು ಹೆಚ್ಚಿಸಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕೀರ್ತಿಯನ್ನು ಗ್ರಾಮದ ಜಗದೀಶ ಅಡಹಳ್ಳಿ ಅವರು ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 440 ನೇ ರ್‍ಯಾಂಕ್ ಪಡೆಯುವುದರ ಮೂಲಕ ರಾಜ್ಯದ …

Read More »

ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ: ಎಂದು  ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ

ಹೊಸದಿಲ್ಲಿ: ಅಯ್ಯೋಧ್ಯೆಯ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ ಜತೆಗೆ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧದ ನಡೆಯಾಗಲಿದೆ ಎಂದು  ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಎಂ) ಸೋಮವಾರ ಹೇಳಿದೆ. ಅಯೋಧ್ಯೆಯಲ್ಲಿ ರಾಮಮಂದಿರ ದೇವಾಲಯದ ನಿರ್ಮಾಣವು ಟ್ರಸ್ಟ್ ನಿಂದ ಆಗಬೇಕೆಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಆದ ಕಾರಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಂತಹ ಸರ್ಕಾರದ ಉನ್ನತ …

Read More »

ಪ್ರಧಾನಿ ನರೇಂದ್ರ ಮೋದಿ ಮೊದಲು ಹನುಮಂತನ ದೇವಾಲಯಕ್ಕೆ ತೆರಳಿ ಆಂಜನೇಯನಿಗೆ ಪೂಜೆ

ಅಯೋಧ್ಯೆ: ಬುಧವಾರ ರಾಮ ದೇವಾಲಯದ ಭೂಮಿ ಪೂಜೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮೊದಲು ಹನುಮಂತನ ದೇವಾಲಯಕ್ಕೆ ತೆರಳಿ ಆಂಜನೇಯನಿಗೆ ಪೂಜೆ ಮಾಡಲಿದ್ದಾರೆ. ಬುಧವಾರ ಬೆಳಗ್ಗೆ 11.15ಕ್ಕೆ ಸಾಕೇತ್ ಕಾಲೇಜ್‍ನ ಹೆಲಿಪ್ಯಾಡ್‍ಗೆ ಮೋದಿ ದೆಹಲಿಯಿಂದ ಆಗಮಿಸಲಿದ್ದಾರೆ. ಬಳಿಕ ಹೆಲಿಪ್ಯಾಡ್‍ನಿಂದ ನೇರವಾಗಿ ಹನುಮಂತ ದೇವಾಲಯಕ್ಕೆ ತೆರಳಲಿದ್ದಾರೆ. ಇಲ್ಲಿ 7 ನಿಮಿಷಗಳ ಕಾಲ ಪೂಜೆಯಲ್ಲಿ ಭಾಗಿಯಾದ ಬಳಿಕ ರಾಮಜನ್ಮಭೂಮಿಗೆ ಗೇಟ್ ನಂ.3ರ ಮೂಲಕ ಆಗಮಿಸಲಿದ್ದಾರೆ.ಕಾರ್ಯಕ್ರಮ ಆಯೋಜನೆಗೊಂಡಿರುವ ಸ್ಥಳಕ್ಕೆ ನೇರವಾಗಿ ಮೋದಿ ತೆರಳಬಹದುಲ್ಲವೇ ಎಂಬ …

Read More »

ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ

ಹಾವೇರಿ: ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ ನಡೆಸಿದ ಘಟನೆ ಜಿಲ್ಲಾಸ್ಪತ್ರೆ ಬಳಿ ಇರೋ ಕೋವಿಡ್ 19 ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಶಿವಬಸವ ನಗರದ ನಿವಾಸಿ 38 ವರ್ಷದ ವ್ಯಕ್ತಿ ಜ್ವರ, ಕೆಮ್ಮು ಮತ್ತು ನೆಗಡಿಯಿಂದ ಬಳಲ್ತಿದ್ದ ವ್ಯಕ್ತಿಗೆ ಚಿಕಿತ್ಸೆ ಪರದಾಡಿದ್ದಾನೆ. ಸೋಮವಾರ ಖಾಸಗಿ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಜಿಲ್ಲಾಸ್ಪತ್ರೆಗೆ ಹೆಸ್ಕಾಂ ಸಮುದಾಯ ಭವನದಲ್ಲಿನ ಕೋವಿಡ್ 19 ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಕಳಿಸಿದ್ದರು. ರಾತ್ರಿ ಹತ್ತು …

Read More »

ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ:ಸತೀಶ್ ಜಾರಕಿಹೊಳಿ

ಬೆಂಗಳೂರು: ಮಾಜಿ  ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹಾರೈಸಿದ್ದಾರೆ. ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಲಕ್ಷಣಗಳು ಕಂಡು ಬರದೆ ಇದ್ದರು. ಸೋಂಕು ದೃಢಪಟ್ಟಿದೆ. ಆದ ಕಾರಣ ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ನಾಯಕ ಕೊರೊನಾ ಸೋಂಕಿನಿಂದ ಶೀಘ್ರದಲ್ಲೇ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ …

Read More »

ಸಿದ್ದರಾಮಯ್ಯ ಅವರಿಗೆ ಕೋವಿಡ್19 ಸೋಂಕು ತಗುಲಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ: ರಮೇಶ ಜಾರಕಿಹೊಳಿ

ಬೆಂಗಳೂರು: ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೋವಿಡ್19 ಸೋಂಕು ತಗುಲಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಜಲಸಂನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಎಂದು ಅವರು ಹಾರೈಸಿದ್ದಾರೆ

Read More »

ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು:  ರಾಜ್ಯ  ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ  ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಡರ್ ಬೇಸ್ ಪಕ್ಷವನ್ನಾಗಿ ಪರಿವರ್ತಿಸಲು ಇದು ಪ್ರಥಮ ಮಹತ್ವದ ಹೆಜ್ಜೆಯಾಗಿದ್ದು ಡಿ.ಕೆ.ಶಿವುಕುಮಾರ ಅವರ ಜೊತೆ ಈ ಸಮಿತಿ ಮೇಲೆ ಮಹತ್ವದ ಜವಾಬ್ದಾರಿ ವಹಿಸಿಲಾಗಿದೆ.ರಾಜಕೀಯ ನಾಯಕತ್ವ ಮತ್ತು ಪಕ್ಷದ ಇತಿಹಾಸ, ನೀತಿ ಮತ್ತು ಕಾರ್ಯಕ್ರಮಗಳನ್ನು  ಕೇಡರ್ ಮಟ್ಟದಿಂದಲೇ ಕಾರ್ಯಕರ್ತರನ್ನು  ಸಜ್ಜುಗೊಳಿಸಲು …

Read More »

ತನ್ನ ಮಗುವಿನೊಂದಿಗೆ ಕರ್ತವ್ಯಕ್ಕೆ ಹಾಜರಾದ ನರ್ಸ

ಧಾರವಾಡ(ಆ.03): ರಾಜ್ಯದಲ್ಲಿ ಕೊರೋನಾ ವೈರಸ್​ನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದಕ್ಕೆ ಧಾರವಾಡ ಜಿಲ್ಲೆ ಸಹ ಹೊರತಾಗಿಲ್ಲ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ. ಇದರಿಂದ ಜಿಲ್ಲೆಯ ನಗರ ಪ್ರದೇಶದಲ್ಲಿ  ಆ್ಯಂಟಿಜನ್ ಟೆಸ್ಟ್  ವಾಹನದ ಮೂಲಕ ಕೊರೋನಾ ಟೆಸ್ಟ್​​ ಮಾಡಲಾಗುತ್ತಿದೆ. ಆದರೆ ಈ ಆ್ಯಂಟಿಜನ್ ಟೆಸ್ಟ್ ಮಾಡಲು ನರ್ಸ್ ತನ್ನ ಪುಟ್ಟ ಮಗಳೊಂದಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾಳೆ. ಧಾರವಾಡ ನಗರದ ವಿವಿಧ …

Read More »

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ.

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್‌ ಮಾಡಿಸಿದ್ದು ಪಾಸಿಟಿವ್‌ ಬಂದಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್‌ ಟೆಸ್ಟ್‌ ಮಾಡಲಾಗಿದ್ದು ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು …

Read More »