ಬೆಳಗಾವಿ: ಕೊರೊನಾ ಸೋಂಕಿತನೋರ್ವ ಆಸ್ಪತ್ರೆಯ ಕಟ್ಟಡ ಏರಿ ಆತ್ಮಹತ್ಯೆ ಬೆದರಿಕೆ ಹಾಕಿರುವ ಘಟನೆ ಗೋಕಾಕ್ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆದಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಈತನಿಗೆ ಸೋಮವಾರ ಬೆಳಿಗ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಬಳಿಕ ಆಸ್ಪತ್ರೆ ಕಟ್ಟಡ ಏರಿ ಕಳೆದ 6 ತಿಂಗಳಿಂದ ವೇತನ ನೀಡಿಲ್ಲ. ಸುಮಾರು 40 ಜನರು ಕೆಲಸ ನಿರ್ವಹಿಸುತ್ತಿದ್ದೆವೆ. ಎಲ್ಲ ಕುಟುಂಬಗಳು ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿವೆ. ಗುತ್ತಿಗೆ ಕಾರ್ಮಿಕರಿಗೆ …
Read More »Yearly Archives: 2020
ಕನ್ನಡ ಭಾಷೆಗೆ ಅವಮಾನಿಸಿದ ಸಚಿವ ಶ್ರೀಮಂತ ಪಾಟೀಲ ಚಿವ ಸಂಪುಟದಿಂದ ಕೈಬಿಡಬೇಕ: ಕರ್ನಾಟಕ ರಕ್ಷಣಾ ವೇದಿಕೆ
ಚಿಕ್ಕೋಡಿ : ಕನ್ನಡ ಭಾಷೆಗೆ ಅವಮಾನಿಸಿದ ಸಚಿವ ಶ್ರೀಮಂತ ಪಾಟೀಲರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಸೀಲ್ದಾರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ಈಚೆಗೆ ನಡೆದ ಸಕ್ಕರೆ ಕಾರ್ಖಾನೆಯ ಅಡಿಗಲ್ಲು ಸಮಾರಂಭದ ವೇದಿಕೆಯಲ್ಲಿ ಮರಾಠಿ ನಾಮಫಲಕ ಹಾಕುವ ಜತೆಗೆ ಸಚಿವ ಶ್ರೀಮಂತ ಪಾಟೀಲರು ಕನ್ನಡ ಭಾಷೆ ಮರೆತು ಮರಾಠಿಯಲ್ಲಿಯೇ ಮಾತನಾಡಿದ್ದಾರೆ. ಇದು ಕನ್ನಡಿಗರಿಗೆ ನೋವುಂಟು ಮಾಡಿದ್ದಾರೆ. ಮರಾಠಿ …
Read More »ಗೋಕಾಕ:ನಗರಸಭೆ ಸದಸ್ಯ ಗಿರೀಶ ಖೋತ್ (55) ಅಕಾಲಿಕ ಮರಣ ಹೊಂದಿದ್ದಾರೆ.
ಗೋಕಾಕ: ಮೂರು ಬಾರಿ ನಗರಸಭೆ ಸದಸ್ಯರಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ್ (55) ಅಕಾಲಿಕ ಮರಣ ಹೊಂದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 14 ನೇ ವಾರ್ಡಿನ್ ಮೂರು ಬಾರಿ ಸದಸ್ಯರಗಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »ಈ ವರ್ಷ ಸ್ವಾತಂತ್ರ್ಯೋತ್ಸವವನ್ನು ಸರಳ ರೀತಿ ಆಚರಿಸಲಾಗುತ್ತದೆ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಸ್ವಾತಂತ್ರ್ಯೋತ್ಸವವನ್ನು ಸರಳ ರೀತಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸ್ವಾತಂತ್ರ್ಯ ದಿನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಸ್ವಾತಂತ್ರೋತ್ಸವಕ್ಕೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿತ್ತು. ಆದ್ರೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಬಾರಿ ಸರಳ ರೀತಿಯಲ್ಲಿ ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ. …
Read More »ಕೋವಿಡ್ ತಡೆಗೆ ಕ್ರಮ ಕೈಗೊಳ್ಳಿ: ಪ್ರಿಯಾಂಕ್
ಚಿತ್ತಾಪುರ: ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಚಿತ್ತಾಪುರ ತಾಲೂಕಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸೋಂಕು ಹರಡದಂತೆ ತಡೆಯಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಟಾಸ್ಕ್ಫೋಸ್ಕ್ ಸಭೆಯಲ್ಲಿ ಮಾತನಾಡಿದ ಅವರು, ಚಿತ್ತಾಪುರ, ಕಾಳಗಿ ಹಾಗೂ ಶಹಾಬಾದ್ ತಹಶೀಲ್ದಾರ್ ಅವರು ಒಟ್ಟಾಗಿ ಕುಳಿತು ಚರ್ಚೆ ಮಾಡಿ ತಾಲೂಕಿನಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಯಲು ಕ್ರಮಕೈಗೊಳ್ಳಬೇಕು. ಶಾಸಕನಾಗಿ ಎಲ್ಲ ರೀತಿಯ …
Read More »ಮಕ್ಕಳ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ
ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಆ.15ರ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಯ್ದುಕೊಂಡು ಭಾಗವಹಿಸಬೇಕು. ಪ್ರತಿ ವರ್ಷದಂತೆ …
Read More »ಬಿಎಸ್‍ವೈ ಪುತ್ರಿ, ಕಾವೇರಿ ನಿವಾಸದ ಸಿಬ್ಬಂದಿಗೂ ಕೊರೊನಾ ಶಾಕ್.!
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಯಾರ್ಯಾರಿಗೆ ಕೊರೊನಾ ಸೋಂಕು ಇದೆ ಎಂಬುದರ ಪತ್ತೆ ನಡೆಸಿದಾಗ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಯಡಿಯೂರಪ್ಪ ಪುತ್ರಿ ಪದ್ಮಾವತಿ ಹಾಗೂ ಕಾವೇರಿ ನಿವಾಸದ ಮನೆಗೆಲಸದವರು, ಅಡುಗೆಯವರು ಹಾಗೂ ವಿಶೇಷ ಕರ್ತವ್ಯಾಧಿಕಾರಿ ಕಾರು ಚಾಲಕ ಸೇರಿದಂತೆ 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಯಡಿಯೂರಪ್ಪ ಅವರು ಅಡ್ಮಿಟ್ ಆಗಿರುವ ವಾರ್ಡ್‍ನಲ್ಲೇ ಪುತ್ರಿ ಪದ್ಮಾವತಿ ಅವರೂ ಕೂಡ ದಾಖಲಾಗಿದ್ದಾರೆ.
Read More »ಸಿಎಂ ನಿವಾಸ ಕಾವೇರಿಯ 9 ಮಂದಿಗೆ ಕೊರೊನಾ: ಕುಟುಂಬಸ್ಥರಿಗೆ ಪರೀಕ್ಷೆ
ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ 8 ಮಂದಿಗೆ ಕೊರೊನಾದ ರೋಗ ಲಕ್ಷಣ ಕಂಡು ಬಂದಿಲ್ಲ. ಆದ್ರೆ ಕೊರೊನಾ ಇರುವುದು ದೃಢಪಟ್ಟಿದ್ದು,ಚಿಕಿತ್ಸೆ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಂಪರ್ಕಕ್ಕೆ ಬಂದಿದ್ದ ಜನರಿಗೆ ಸೆಲ್ಫ್ ಕ್ವಾರಂಟೈನ್ ಆಗುವಂತೆ ಹೇಳಲಾಗಿದೆ.ಸಿಎಂ ಕುಟುಂಬದ ಎಲ್ಲ ಸದಸ್ಯರಿಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕುಟುಂಬ ಸದಸ್ಯರಿಗೆ ಬಿಬಿಎಂಪಿ ಆಂಟಿಜೆನ್ ಟೆಸ್ಟ್ ಮಾಡ್ತಿದೆ. ಸಿಎಂ ನಿವಾಸದ …
Read More »ಸಿಎಂ ತವರು ಶಿವಮೊಗ್ಗದಲ್ಲಿ ಮತ್ತೊಬ್ಬ ಶಾಸಕರಿಗೆ ಕೋವಿಡ್-19 ಪಾಸಿಟಿವ್
ಶಿವಮೊಗ್ಗ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮತ್ತೋರ್ವ ಶಾಸಕರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ರ್ಯಾಪಿಡ್ ಆಯಂಟಿಜೆನ್ ಟೆಸ್ಟ್ ನಲ್ಲಿ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಇಂದು ಆರ್.ಪ್ರಸನ್ನ ಕುಮಾರ್ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡರು. ಈ ವೇಳೆ ಸೋಂಕು ಪತ್ತೆಯಾಗಿದೆ. ಆದರೆ ರೋಗ …
Read More »ಸೋಂಕಿನಿಂದ ಗುಣಮುಖ: ಬೆಳಗಾವಿಯಲ್ಲಿ ಯುವಕನಿಗೆ ಮಾಲೆ ಹಾಕಿ ಪಟಾಕಿ ಸಿಡಿಸಿ ಸ್ವಾಗತ
ಬೆಳಗಾವಿ: ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದ ಯುವಕನಿಗೆ ಮಾಲೆ ಹಾಕಿ, ಪಟಾಕಿ ಸಿಡಿಸಿ ಇಲ್ಲಿಯ ಖಡಕ್ ಗಲ್ಲಿಯಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಆಸ್ಪತ್ರೆಯಿಂದ ಬಿಡುಗಡೆ ಆಗಿ ಬರುತ್ತಿದ್ದಂತೆ ಖಡಕ್ ಗಲ್ಲಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾಗಿ ಬರುತ್ತಿದ್ದಂತೆ ಪಟಾಕಿ ಸಿಡಿಸಿದ ಸ್ಥಳೀಯ ಯುವಕರು ಸಂಭ್ರಮಿಸಿದರು. ಹತ್ತು ದಿನಗಳ ಹಿಂದೆ ಖಡಕ್ ಗಲ್ಲಿಯ 35 ವರ್ಷ ವಯಸ್ಸಿನ ಈ ವ್ಯಕ್ತಿಗೆ ಕೋವಿಡ್-19 ಸೋಂಕು ವಕ್ಕರಿಸಿತ್ತು. ಇಲ್ಲಿನ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ …
Read More »