Breaking News

Yearly Archives: 2020

ಬೆಳಗಾವಿ: ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಶಿವಾಜಿ ನಗರದ 5 ನೇಯ ಕ್ರಾಸಿನಲ್ಲಿ ಭಾನುವಾರ ನಡೆದಿದೆ. ಅಭಿಜೀತ ಭರತ ಕೋರೆ(22) ಆತ್ಮಹತ್ಯೆಗೆ ಶರಣಾದ ಯುವಕ.  ಬೆಳಿಗ್ಗೆ ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಆತ್ಮ ಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಈ ಸಂಬಂಧ ಮಾರ್ಕೆಟ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹೆಗಲ ಮೇಲೆ ಆಕ್ಸಿಜನ್ ಸಿಲಿಂಡರ್, ಟ್ರೇಯಲ್ಲಿ ಕಂದಮ್ಮ- ಬದುಕುಳಿಯಲಿಲ್ಲ ಮಗು

ಪಾಟ್ನಾ: ಬಿಹಾರದ ಆರೋಗ್ಯ ವ್ಯವಸ್ಥೆಯನ್ನು ತೋರಿಸುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫೋಟೋದಲ್ಲಿ ತಂದೆ ಹೆಗಲ ಮೇಲೆ ಆಕ್ಸಿಜನ್ ಸಿಲಿಂಡರ್ ಹೊತ್ತುಕೊಂಡಿದ್ರೆ, ತಾಯಿ ಟ್ರೇಯಲ್ಲಿ ನವಜಾತ ಶಿಶುವನ್ನು ಹಿಡಿದುಕೊಂಡಿದ್ದಾರೆ. ಕೇಂದ್ರ ರಾಜ್ಯ ಆರೋಗ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಕ್ಷೇತ್ರದಲ್ಲಿಯೇ ಘಟನೆ ನಡೆದಿದೆ. ಜುಲೈ 23ರಂದು ಈ ಘಟನೆ ನಡೆದಿದೆ. ರಾಜಪುರದ ಸುಖೌನಾ ಗ್ರಾಮದ ನಿವಾಸಿ ಸುಮನ್ ಕುಮಾರ್ ಗರ್ಭಿಣಿ ಪತ್ನಿಯನ್ನು ಬಕ್ಸರ್ ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ …

Read More »

ಸೌಲಭ್ಯವಿಲ್ಲ ಊರಿಗೆ ಕಳುಹಿಸಿ ಎಂದ ಸೋಂಕಿತರ ಮನವೊಲಿಸಿದ ಶಾಸಕ ಬಾಲಕೃಷ್ಣ

ಹಾಸನ: ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆಯಿಲ್ಲ ನಮ್ಮನ್ನು ಊರಿಗೆ ಕಳುಹಿಸಿ ಎಂದು ಕೇಳಿಕೊಂಡ ಸೋಂಕಿತರ ಬಳಿ ತೆರಳಿದ ಶಾಸಕ ಬಾಲಕೃಷ್ಣ, ನೀವು ಊರಿಗೆ ಹೋದ ತಕ್ಷಣ ಅಕ್ಕಪಕ್ಕದ ಮನೆಯವರು ಬೇರೆ ರೀತಿ ನಿಮ್ಮನ್ನು ನೋಡಬಹುದು, ಹೀಗಾಗಿ ದಯವಿಟ್ಟು ಸಹಕರಿಸಿ ಎಂದು ಮನವಿ ಮಾಡಿದ ಘಟನೆ ಹಾಸನ ಜಿಲ್ಲೆಯ, ಚನ್ನರಾಯಪಟ್ಟಣದಲ್ಲಿ ನಡೆದಿದೆ. ಕೊರೊನಾ ರೋಗ ಲಕ್ಷಣಗಳು ಇಲ್ಲದೆ ಪಾಸಿಟಿವ್ ಬಂದಿರುವವರನ್ನು ತಾಲೂಕು ಕೇಂದ್ರದಲ್ಲೇ ಪ್ರತ್ಯೇಕ ವ್ಯವಸ್ಥೆ ಮಾಡಿ ಕ್ವಾರಂಟೈನ್ ಮಾಡಲಾಗಿದೆ. ಚನ್ನರಾಯಪಟ್ಟಣ …

Read More »

ರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ/ಚಿಕ್ಕೋಡಿ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯ ಕುಟುಂಬಸ್ಥರು ಸಮುದಾಯ ಆರೋಗ್ಯ ಕೇಂದ್ರದ ಎದುರು ಗಲಾಟೆ ನಡೆಸಿ, ವೈದ್ಯರಿಗೆ ಆವಾಜ್ ಹಾಕಿ ಆರೋಗ್ಯ ಕೇಂದ್ರದಲ್ಲೇ ಹೆರಿಗೆ ಮಾಡುವಂತೆ ಮಾಡಿದ್ದಾರೆ. ಇನ್ನೂ ಸೋಂಕಿತ ಗರ್ಭಿಣಿಗೆ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಆಗಿದ್ದರಿಂದ ಆಸ್ಪತ್ರೆಯನ್ನು …

Read More »

ಬೆಳಗಾವಿಯಲ್ಲಿ ಚಿತೆ ಮೇಲೆ ಶವವನ್ನು ಎಸೆದು ಅಮಾನವೀಯವಾಗಿ ಅಂತ್ಯಸಂಸ್ಕಾರ

ಬೆಳಗಾವಿ: ಈಗಾಗಲೇ ಕೊರೊನಾದಿಂದ ಮೃತಪಟ್ಟವರನ್ನು ಗುಂಡಿಯಲ್ಲಿ ಎಸೆದು, ಜೆಸಿಬಿಯಿಂದ ತಂದು ಅಂತ್ಯಸಂಸ್ಕಾರ ಮಾಡಲಾಗಿದೆ. ಇದೀಗ ಬೆಳಗಾವಿಯಲ್ಲಿ ಚಿತೆ ಮೇಲೆ ಶವವನ್ನು ಎಸೆದು ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ. ಬೆಳಗಾವಿ ನಗರದಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆಯನ್ನು ಬೇಕಾಬಿಟ್ಟಿ ಮಾಡಲಾಗಿದೆ. ಮಹಾನಗರ ಪಾಲಿಕೆಯ ಸದಾಶಿವ ನಗರ ಸ್ಮಶಾನದಲ್ಲಿ ಸೋಂಕಿತರ ಅಂತ್ಯಸಂಸ್ಕಾರ ಮಾಡಲಾಗಿದೆ. ಒಂದೇ ಅಂಬುಲೆನ್ಸ್‌ನಲ್ಲಿ ಎರಡು ಮೃತದೇಹವನ್ನು ತಂದಿದ್ದಾರೆ. ನಂತರ ಆ ಶವಗಳನ್ನ ಚಿತೆಯ ಮೇಲೆ ಸಿಬ್ಬಂದಿ ಅಮಾನವೀಯವಾಗಿ ಎಸೆದು ಅಂತ್ಯಕ್ರಿಯೆ ಮಾಡಿದ್ದಾರೆ. ಚಿತೆಯ …

Read More »

ಕೊರೊನಾ ಅನ್‌ಲಾಕ್‌ 3 – ಯಾವುದು ಲಾಕ್‌? ಯಾವುದು ಅನ್‌ಲಾಕ್‌?

ನವದೆಹಲಿ: ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ವೇಳೆಯೇ ದೇಶದಲ್ಲಿ ಅನ್‍ಲಾಕ್ 2.0 ಮುಗಿಯುವ ಹಂತಕ್ಕೆ ಬಂದಿದೆ. ಜೂನ್‍ನಲ್ಲಿ ಶುರುವಾದ ಅನ್‍ಲಾಕ್ ಪ್ರಕ್ರಿಯೆಯ 2ನೇ ಹಂತ ಮುಗಿಯಲು ಇನ್ನೈದು ದಿನ ಬಾಕಿ ಇದೆ. ಆಗಸ್ಟ್ ಒಂದರಿಂದ 3ನೇ ಹಂತದ ಅನ್‍ಲಾಕ್ ನಿಯಮ ಜಾರಿಗೆ ಬರಬೇಕಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಇದರಲ್ಲಿ ಕರ್ನಾಟಕದ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಸೋಂಕು ಹೆಚ್ಚಳವಾಗ್ತಿದ್ರೂ ಆಗಸ್ಟ್‌ನಿಂದ ಮತ್ತಷ್ಟು ವಿನಾಯಿತಿ ನೀಡುವ ಸಾಧ್ಯತೆಗಳಿವೆ. …

Read More »

ವಾಯವ್ಯ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದಿಂದ ಎಸಿ ಬಸ್ ಸಂಚಾರ ಆರಂಭ

ಹುಬ್ಬಳ್ಳಿ: ಲಾಕ್‍ಡೌನ್ ಪರಿಣಾಮ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಳಿಸಲಾಗಿದ್ದ ಎಸಿ ಬಸ್‍ಗಳ ಸಂಚಾರವನ್ನು ಸರ್ಕಾರದ ಅನುಮತಿ ಮೇರೆಗೆ ಸೋಮವಾರದಿಂದ ಪುನರಾರಂಭಿಸಲಾಗುತ್ತಿದೆ. ಮೊದಲ ಹಂತದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರು ಮತ್ತು ಮೈಸೂರಿನ ನಡುವೆ ಎಸಿ ಸ್ಲೀಪರ್ ಮತ್ತು ವೋಲ್ವೋ ಬಸ್‍ಗಳ ಸಂಚಾರ ಆರಂಭಿಸಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ. ಬಸ್ ಹೊರಡುವ ಸಮಯದ ವಿವರ: ಹುಬ್ಬಳ್ಳಿಯಿಂದ ಬೆಂಗಳೂರಿಗೆ ವೋಲ್ವೊ ಬಸ್ ಮಧ್ಯಾಹ್ನ 3 ಗಂಟೆಗೆ ಮತ್ತು ರಾತ್ರಿ 10.30ಕ್ಕೆ ಹೊರಡುತ್ತದೆ. ಎಸಿ …

Read More »

ನನ್ನ ಸಾವಿಗೆ ನಟ ರಾಜಕಾರಣಿ ನಟ, ರಾಜಕಾರಣಿ ಸೀಮನ್ ಅವರೇ ಕಾರಣ.: ನಾಗಮಂಡಲ ಸಿನಿಮಾ ಖ್ಯಾತಿಯ ನಟಿ ವಿಜಯಲಕ್ಷ್ಮಿ

ಚೆನ್ನೈ: ನಟಿ ವಿಜಯಲಕ್ಷ್ಮಿ ಆಘಾತಕಾರಿ ಪೋಸ್ಟ್ ಮಾಡಿದ್ದು, ನನ್ನ ಸಾವಿಗೆ ನಟ ರಾಜಕಾರಣಿ ನಟ, ರಾಜಕಾರಣಿ ಸೀಮನ್ ಅವರೇ ಕಾರಣ. ನಾನು ಈಗಾಗಲೇ ಬಿಪಿ ಮಾತ್ರೆಗಳನ್ನು ತೆಗೆದುಕೊಂಡಿದ್ದೇನೆ ಎಂದು ಫೇಸ್ಬುಕ್‍ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ನಾಗಮಂಡಲ ಸಿನಿಮಾ ಖ್ಯಾತಿಯ ನಟಿ ವಿಜಯಲಕ್ಷ್ಮಿ ಫೇಸ್ಬುಕ್ ವಿಡಿಯೋ ಅಪ್‍ಲೋಡ್ ಮಾಡಿ, ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿಸಿದ್ದಾರೆ. ನನ್ನ ಸಾವಿಗೆ ನಟ, ನಿರ್ದೇಶಕ, ರಾಜಕಾರಣಿ ಸೀಮನ್ ಅವರೇ ಕಾರಣ ಎಂದು ವಿಜಯಲಕ್ಷ್ಮಿ ನೇರ ಆರೋಪ ಮಾಡಿದ್ದು, …

Read More »

ಸತತ ನಾಲ್ಕನೇಯ ದಿನ 5 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು

ಬೆಂಗಳೂರು: ಸತತ ನಾಲ್ಕನೇಯ ದಿನ 5 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ಬಂದಿದ್ದು, ಇದೇ ರೀತಿಯ ಸಂಖ್ಯೆ ಬಂದರೆ ಸೋಮವಾರ ರಾಜ್ಯ ಸೋಂಕಿತರ ಸಂಖ್ಯೆಯಲ್ಲಿ 1 ಲಕ್ಷದ ಗಡಿಯನ್ನು ದಾಟಲಿದೆ. ಇಂದು ಒಟ್ಟು 5,199 ಮಂದಿಗೆ ಸೋಂಕು ಬಂದಿದ್ದು, 82 ಮಂದಿ ಮೃತಪಟ್ಟಿದ್ದಾರೆ. 2,088 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಕರ್ನಾಟಕದಲ್ಲಿ ಒಟ್ಟು 96,141 ಮಂದಿಗೆ ಸೋಂಕು ಬಂದಿದ್ದು, ಇಲ್ಲಿಯವರೆಗೆ 1,878 ಮಂದಿ ಮೃತಪಟ್ಟಿದ್ದಾರೆ. 96 ಸಾವಿರ ಸೋಂಕಿತರ ಪೈಕಿ …

Read More »

ಪಿ.ಪಿ.ಇ. ಕಿಟ್‍ಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗಿದ್ದರಿಂದ ಆಕ್ರೋಶ…….

ಧಾರವಾಡ: ಕೊರೊನಾದಿಂದ ಮೃತಪಟ್ಟವರ ಅಂತ್ಯಯಸಂಸ್ಕಾರವನ್ನು ಜನವಸತಿ ಪ್ರದೇಶದ ಬದಿಯ ಸ್ಮಶಾನದಲ್ಲಿ ಮಾಡುವುದರ ಜೊತೆಗೆ, ಅಂತ್ಯಸಂಸ್ಕಾರದ ಬಳಿಕ ಪಿಪಿಇ ಕಿಟ್‍ಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗಿದ್ದರಿಂದ ಆಕ್ರೋಶಗೊಂಡ ಸ್ಥಳೀಯರು, ದಿಢೀರ್ ಪ್ರತಿಭಟನೆಗೆ ಇಳಿದ ಘಟನೆ ನಡೆದಿದೆ. ನಗರದ ದಾನೇಶ್ವರಿ ನಗರ 3ನೇ ಅಡ್ಡರಸ್ತೆಯಲ್ಲಿರುವ ಸ್ಮಶಾನದಲ್ಲಿ ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಬೇರೆ ಕಡೆಯ ಸ್ಮಶಾನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. …

Read More »