ಬೆಂಗಳೂರು: ರಾಜಧಾನಿ ಬೆಂಗಳೂರು ದಿನೇ ದಿನೇ ಭಯಾನಕವಾಗಿ ಮಾರ್ಪಡುತ್ತಿದೆ. ರಾಜ್ಯ ಸರ್ಕಾರದ ಪ್ರಕಾರ ಬೆಂಗಳೂರಲ್ಲಿ ಇರೋದು 23 ಸಾವಿರ ಸೋಂಕಿತರು. ಆದರೆ ರಾಜಧಾನಿಯಲ್ಲಿ ಸೋಂಕಿತರ ಪ್ರಮಾಣ ಬರೋಬ್ಬರಿ 2.23 ಲಕ್ಷ ಮಂದಿ ಇರಬಹುದು ಎಂದು ರಾಜ್ಯ ಕೊರೊನಾ ಕಾರ್ಯಪಡೆಯ ಸದಸ್ಯ ಡಾ.ಗಿರಿಧರ್ ಬಾಬು ಹೇಳುತ್ತಾರೆ. ರಾಜ್ಯ ಸರ್ಕಾರ ಸೋಂಕು ಹರಡುವಿಕೆ ನಿಯಂತ್ರಿಸಲು ವಿಫಲವಾಗಿರುವ ಕಾರಣ ಹೆಮ್ಮಾರಿ ಮಹಾ ಸ್ಫೋಟ ಆಗಿದ್ದು, ಎಷ್ಟೋ ಮಂದಿಗೆ ಕೊರೊನಾ ಲಕ್ಷಣ ಕಾಣಿಸಿಕೊಂಡಿರಬಹುದು. ಹಾಗೆಯೇ ಸೋಂಕು …
Read More »Yearly Archives: 2020
ಕೋರ್ಟ್ ಕಲಾಪವಿಲ್ಲ- ಬದುಕು ನಿರ್ವಹಣೆಗೆ ಪಾನಿಪುರಿ ಮಾರಲು ನಿಂತ ಹೈ ಕೋರ್ಟ್ ವಕೀಲ
ಮಂಡ್ಯ: ಕೊರೊನಾ ಮಹಮಾರಿಗೆ ಇಡೀ ದೇಶವೇ ನಲುಗಿದೆ. ಬಡವ, ಶ್ರೀಮಂತ ಎನ್ನದೆ ಅದೆಷ್ಟೋ ಜನ ಲಾಕ್‍ಡೌನ್‍ನಿಂದಾಗಿ ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗೆ ಕೋರ್ಟ್ ಕಲಾಪ ನಡೆಯದ ಕಾರಣ ಸಂಕಷ್ಟಕ್ಕೆ ಸಿಲುಕಿರುವ ಮಂಡ್ಯದ ವಕೀಲರೊಬ್ಬರು ಪಾನಿಪುರಿ ವ್ಯಾಪಾರ ಶುರುಮಾಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದವರಾಗಿರುವ 30ವರ್ಷದ ಪ್ರತಾಪ್, ವೃತ್ತಿಯಲ್ಲಿ ಹೈಕೋರ್ಟ್ ವಕೀಲರು. ಕಳೆದ 6 ವರ್ಷಗಳಿಂದ ಹೈಕೋರ್ಟ್‍ನ ಹಿರಿಯ ವಕೀಲ ಉಮಾಕಾಂತ್ ಅವರ ಬಳಿ …
Read More »ಸಂಸದ ಭಗವಂತ್ ಖೂಬಾ ಸೇರಿ ಬೀದರ್‌ನಲ್ಲಿ 35 ಜನರಿಗೆ ಕೊರೊನಾ
ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಇಂದು ಸಂಸದರು ಸೇರಿದಂತೆ 35 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಸಂಸದ ಭಗವಂತ್ ಖೂಬಾಗೆ ಇಂದು ಪಾಸಿಟಿವ್ ಧೃಡವಾಗಿದ್ದು, ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀದರ್ ನಲ್ಲಿ 11, ಬಾಲ್ಕಿಯಲ್ಲಿ 11, ಹುಮ್ನಬಾದ್ ನಲ್ಲಿ 10 ಬಸವಕಲ್ಯಾಣದಲ್ಲಿ 3 ಜಿಲ್ಲೆಯಾದ್ಯಂತ ಒಟ್ಟು 35 ಕೊರೊನಾ ಪಾಸಿಟಿವ್ ಪ್ರಕರಣಗಳು ಇಂದು ದೃಢಪಟ್ಟಿವೆ. ಸಂಸದರಿಗೆ ಹೇಗೆ ಕೊರೊನಾ ವಕ್ಕಿಸಿತು ಎಂಬುದೇ ಆಶ್ಚರ್ಯವಾಗಿದ್ದು, ಸಂಪರ್ಕವನ್ನು ಪತ್ತೆಹಚ್ಚಲಾಗುತ್ತಿದೆ. ಉಳಿದಂತೆ …
Read More »ವಾರದ ಹಿಂದೆ ಗಾಂಜಾ ಕೇಸಲ್ಲಿ ಅಂದರ್ ಆಗಿದ್ದ ಖೈದಿಗೂ ಕೊರೊನಾ ಪಾಸಿಟಿವ್
ಚಿಕ್ಕಮಗಳೂರು: ವಾರದ ಹಿಂದೆ ಗಾಂಜಾ ಕೇಸಲ್ಲಿ ಅಂದರ್ ಆಗಿದ್ದ ಖೈದಿಗೂ ಕೊರೊನಾ ಪಾಸಿಟಿವ್ ಬಂದು ಜೈಲಿನಿಂದ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಮಾರುತಿ 800 ಕಾರಿನಲ್ಲಿ 50 ಕೆ.ಜಿ. ಗಾಂಜಾವನ್ನ ಸಾಗಿಸುತ್ತಿದ್ದ ನಾಲ್ವರನ್ನ ಪೊಲೀಸರು ಬಂಧಿಸಿದ್ದರು. ಬಂಧಿತ ನಾಲ್ವರನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಆ ನಾಲ್ವರಲ್ಲಿ ಓರ್ವನಿಗೆ ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿತ ಖೈದಿಯನ್ನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More »ಕೊವಿಡ್ -೧೯ ಅನ್ನು ಜಯಿಸಿ ಸಂಪೂರ್ಣ ಗುಣಮುಖರಾಗಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಿಂದ ಇಬ್ಬರು ಬಿಡುಗಡೆ
ಬೆಳಗಾವಿ – ಕೊರೊನಾ ವೈರಸ್ ಕೊವಿಡ್ -೧೯ ಅನ್ನು ಜಯಿಸಿ ಸಂಪೂರ್ಣ ಗುಣಮುಖರಾಗಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಿಂದ ಇಬ್ಬರು ಬಿಡುಗಡೆಗೊಂಡರು. ಅಥಣಿ ಮೂಲದ ತಂದೆ ೭೦ ವರ್ಷ ಹಾಗೂ ಮಗ ೩೦ ವರ್ಷ ವಯಸ್ಸಾದವರಾಗಿದ್ದು ಕಳೆದ ೭ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ವೈರಸ್ ನಿಂದ ಸಂಪೂರ್ಣ ಗುಣಮುಖವಾಗಿದ್ದು, ಅವರನ್ನು ಕೆಎಲ್‌ಇ ಸಂಸ್ಥೆಯ ಕಾರ‍್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ …
Read More »ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಚಾಲನೆ ನೀಡಿದಸತೀಶ ಜಾರಕಿಹೊಳಿ
ಬೆಳಗಾವಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಹೆಬ್ಬಾಳಕ ಜಿಲ್ಲಾ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿ ಬರುವ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಹೆಬ್ಬಾಳ ವ್ಯಾಪ್ತಿಯ ಉಳ್ಳಾಗಡ್ಡಿ ಖಾನಾಪುರ, ಕೊಚ್ಚರಿ, ಜಿಂಡ್ರಾಳಿ, ಮಸರಗುಪ್ಪಿ ಗ್ರಾಮಗಳಲ್ಲಿ ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಶಾಸರು ಚಾಲನೆ ನೀಡಿದರು. ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣ, ಮೂಲ ಸೌಕರ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. …
Read More »ಜನತೆಯ ಆರೋಗ್ಯದ ಕುರಿತು ಮುನ್ನಚ್ಚರಿಕೆ ವಹಿಸುವುದು ನನ್ನ ಆದ್ಯ ಕರ್ತವ್ಯ ಎಂದ ಸಚಿವೆ
ನಿಪ್ಪಾಣಿ – ಪಟ್ಟಣದ ಹೊರವಲಯದಲ್ಲಿ ಗವಾನ ಗ್ರಾಮಕ್ಕೆ ಕೊವಿಡ್-೧೯ ಮುನ್ನಚ್ಚರಿಕೆ ಕ್ರಮವಾಗಿ ನಿರ್ಮಿಸಲಾದ ೫೦ ಹಾಸಿಗೆಗಳ ಕೊವಿಡ್ ಸೆಂಟರ್ ಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆಯ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ ಪರಿಶೀಲಿಸಿದರು. ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಜನತೆಯ ಆರೋಗ್ಯದ ಕುರಿತು ಮುನ್ನಚ್ಚರಿಕೆ ವಹಿಸುವುದು ನನ್ನ ಆದ್ಯ ಕರ್ತವ್ಯ. ಭಯಂಕರ ರೋಗವೊಂದು ಇಡೀ ಸಮಾಜವನ್ನು ಅಲ್ಲೋಲ ಕಲ್ಲೋಲವಾಗಿಸುತ್ತಿರುವ …
Read More »ಸಚಿವ ಸುರೇಶ್ ಕುಮಾರ್ ಹೆಸರಿನ ನಕಲಿ ಟ್ವಿಟರ್ ಖಾತೆ, ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ತಪ್ಪು ಸಂದೇಶವನ್ನು ಹರಿಬಿಟ್ಟಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಲಾಗಿದೆ. ಮಂಗಳವಾರ ಮಾನ್ಯ ಸಚಿವರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಫಲಿತಾಂಶ ಘೋಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಸಚಿವರ ಹೆಸರಿನ ನಕಲಿ ಟ್ವಿಟರ್ ಖಾತೆಯಲ್ಲಿ “ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳಿಗೆ 26 ಗ್ರೇಸ್ ಅಂಕಗಳನ್ನು ನೀಡುವ ಕುರಿತು ಮೌಲ್ಯಮಾಪಕರಿಗೆ …
Read More »ತವರು ಮನೆ ನೆನಪು ಮಾಡಿಕೊಂಡ ದೀಪಿಕಾ ಪಡುಕೋಣೆ…………..
ಮುಂಬೈ: ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ತವರು ಮನೆ ನೆನಪು ಮಾಡಿಕೊಂಡಿದ್ದಾರೆ. ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೂ ಶೂಟಿಂಗ್ ಆರಂಭಗೊಂಡಿಲ್ಲ. ಕಳೆದ ಮೂರು ತಿಂಗಳಿನಿಂದ ಸೆಲೆಬ್ರಿಟಿಗಳು ಮನೆಯಲ್ಲಿಯೇ ಲಾಕ್ ಆಗಿದ್ದಾರೆ. ಕನ್ನಡತಿ ದೀಪಿಕಾ ಪಡುಕೋಣೆ ಸಹ ಮುಂಬೈನಲ್ಲಿದ್ದು, ಪತಿ ರಣ್‍ವೀರ್ ಜೊತೆ ಲಾಕ್‍ಡೌನ್ ಸಮಯವನ್ನು ಕಳೆಯುತ್ತಿದ್ದಾರೆ. ಇಬ್ಬರು ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್ ಆಗಿರುವ ಮೂಲಕ ಅಭಿಮಾನಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುತ್ತಾರೆ. ಇನ್‍ಸ್ಟಾಗ್ರಾಂನಲ್ಲಿ ಅಭಿಮಾನಿ, ನೀವು ಲಾಕ್‍ಡೌನ್ …
Read More »ಬೆಳಗ್ಗೆ ಸುರಿದ ಮಳೆಗೆ ತತ್ತರಿಸಿದ ಮುಂಬೈ………………
ಮುಂಬೈ: ಇಂದು ಬೆಳಗ್ಗೆ ಸುರಿದ ವರ್ಷಧಾರೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿದ್ದು, ಎಲ್ಲಿ ನೋಡಿದಲ್ಲಿ ನೀರು ಕಾಣಿಸುತ್ತಿದೆ. ರಸ್ತೆಯಲ್ಲಿ ನೀರು ಹರಿಯುತ್ತಿರೋದರಿಂದ ವಾಹನ ಸವಾರರು ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡುವಂತಾಯ್ತು. ಹವಾಮಾನ ಇಲಾಖೆ ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಸಮುದ್ರದಲ್ಲಿ ಮೂರು ಮೀಟರ್ ಗಿಂತ ಎತ್ತರ ಅಲೆಗಳು ಸೃಷ್ಟಿಯಾಗಲಿವೆ. ಹಾಗಾಗಿ ಸಮುದ್ರ ತೀರಗಳಿಗೆ ಸಾರ್ವಜನಿಕರಿಗೆ ಪ್ರವೇಶ …
Read More »