Breaking News

Yearly Archives: 2020

ಬೆಳ್ಳಂಬೆಳಗ್ಗೆ ಸಿಟಿ ರೌಂಡ್ಸ್ ಹಾಕಿದ್ದಾರೆ. ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬೆಂಗಳುರು: ಇಂದಿನಿಂದ ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಆಗಿದೆ. ಇಂದು ಲಾಕ್‍ಡೌನ್ ಮೊದಲ ದಿನದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಬೆಳ್ಳಂಬೆಳಗ್ಗೆ ಸಿಟಿ ರೌಂಡ್ಸ್ ಹಾಕಿದ್ದಾರೆ.  ಭಾಸ್ಕರ್ ರಾವ್, ಇಷ್ಟು ದೊಡ್ಡ ನಗರವನ್ನು ಲಾಕ್‍ಡೌನ್ ಮಾಡುವುದು ಎಂದರೆ ಸಾಧ್ಯವಿಲ್ಲ. ಇದು ಸಾರ್ವಜನಿಕರ ಸಹಕಾರದಿಂದ ಮಾಡಲು ಸಾಧ್ಯ. ಈಗಾಗಲೇ ಜನರಿಗೆ ಈ ಕೊರೊನಾ ಬಗ್ಗೆ ಗೊತ್ತಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ …

Read More »

ಕೊಹ್ಲಿ, ಧೋನಿ, ವಾರ್ನರ್ ಬಿಟ್ಟು ರೋಹಿತ್‍ಗೆ ನಾಯಕನ ಪಟ್ಟ

ಮುಂಬೈ: ಐಪಿಎಲ್‍ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಕೋಚ್ ಆಗಿರುವ ಆಸ್ಟ್ರೇಲಿಯಾದ ಮಾಜಿ ಆಟಗಾರ ಟಾಮ್ ಮೂಡಿ ಅವರು, ತಮ್ಮ ವಿಶ್ವಶ್ರೇಷ್ಠ ಟಿ-20 ತಂಡವನ್ನು ಆಯ್ಕೆ ಮಾಡಿದ್ದು, ಭಾರತದ ಹಿಟ್‍ಮ್ಯಾನ್ ರೋಹಿತ್ ಶರ್ಮಾ ಅವರಿಗೆ ನಾಯಕ ಪಟ್ಟ ದೊರೆತಿದೆ. ಟಾಮ್ ಮೂಡಿ ಅವರು, ಸದ್ಯದಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಇರುವ ಖ್ಯಾತ ಕೋಚ್ ಆಗಿದ್ದಾರೆ. ಇವರ ತರಬೇತಿಯಲ್ಲಿ ಹೈದರಾಬಾದ್ ತಂಡ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಈಗ ಕಮೆಂಟೇಟರ್ ಹರ್ಷ ಭೋಗ್ಲೆ …

Read More »

ದಿಢೀರ್‌ ಉಸಿರಾಟದ ಸಮಸ್ಯೆ – ಕೋವಿಡ್‌ 19ಗೆ ಜಿಲ್ಲಾಧಿಕಾರಿ ಬಲಿ

ಕೋಲ್ಕತ್ತಾ: ಕೋವಿಡ್‌ 19ಗೆ ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಐಎಎಸ್‌ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಹೂಗ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 33 ವರ್ಷದ ದೇಬದತ್ತ ರೇ ಸೋಮವಾರ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಕೊರೊನಾ ಪರೀಕ್ಷೆ ಮಾಡಿಸಿದ್ದರು. ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್‌ ಆಗಿದ್ದರು. ಭಾನುವಾರ ಉಸಿರಾಟದ ಸಮಸ್ಯೆ ದಿಢೀರ್‌ ಉಲ್ಬಣವಾಗಿದ್ದರಿಂದ ಅವರನ್ನು ಸೆರಾಂಪೋರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮೃತಪಟ್ಟಿದ್ದಾರೆ. 2010ರ ಬ್ಯಾಚ್‌ …

Read More »

ಲಾಕ್‍ಡೌನ್‍ನ ಮೊದಲ ದಿನ ನವಯುಗ ಟೋಲ್, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಬಹುತೇಕ ರಸ್ತೆಗಳು ಸಂಪೂರ್ಣವಾಗಿ ಬಂದ್

ಬೆಂಗಳೂರು: ಲಾಕ್‍ಡೌನ್‍ನ ಮೊದಲ ದಿನ ನವಯುಗ ಟೋಲ್, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಬಹುತೇಕ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‍ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಎಂಟ್ರಿ ಮತ್ತು ಎಕ್ಸಿಟ್‍ಗಳನ್ನ ಬ್ಯಾರಿಕೇಡ್‍ಗಳನ್ನ ಹಾಕಿ ಮುಚ್ಚಲಾಗಿದೆ. ಯಾವುದೇ ಬಸ್‍ಗಳ ಓಡಾಟವಿಲ್ಲ. ಇಡೀ ಮೆಜೆಸ್ಟಿಕ್ ಸುತ್ತಮುತ್ತ ಪೊಲೀಸರು ರಸ್ತೆಯನ್ನು ಬಂದ್ ಮಾಡಿದ್ದಾರೆ. ಅಲ್ಲದೇ ಮೆಜೆಸ್ಟಿಕ್ ನಿಲ್ದಾಣದ ಅಂಗಡಿ ಮುಂಗಟ್ಟು ಸಹ ಸಂಪೂರ್ಣ ಬಂದ್ ಆಗಿವೆ. ಹೋಟೆಲ್, ಟೀ ಅಂಗಡಿಗಳು ಓಪನ್ ಇಲ್ಲ. …

Read More »

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನೂರಾರು ಜನ

ಬೆಂಗಳೂರು: ಇಂದಿನಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಆಗಿದೆ. ಹೀಗಾಗಿ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿವೆ. ಆದರೆ ರೈಲು ಸಂಚಾರ ಬಂದ್ ಮಾಡಿಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನೂರಾರು ಜನರಿದ್ದಾರೆ. ಈ ಬಾರಿಯ ಲಾಕ್‍ಡೌನ್‍ನಲ್ಲಿ ರೈಲು ಮತ್ತು ಏರ್‌ಪೋರ್ಟ್ ಬಂದ್ ಮಾಡಿಲ್ಲ. ಹೀಗಾಗಿ ಅನೇಕರು ರೈಲು ಮತ್ತು ವಿಮಾನಗಳ ಮೂಲಕ ಪ್ರಯಾಣ ಮಾಡುತ್ತಿದ್ದಾರೆ. ಸಂಗೊಳ್ಳಿ ರೈಲ್ವೆ ನಿಲ್ದಾಣದಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ಇದ್ದಾರೆ. …

Read More »

ಕೊರೊನಾ ಗೆದ್ದ 101 ವರ್ಷದ ಅಜ್ಜ- ಆಸ್ಪತ್ರೆ ಸಿಬ್ಬಂದಿಗೆ ಆಶ್ಚರ್ಯ

ಮುಂಬೈ: ಕೊರೊನಾದಿಂದಾಗಿ ವೃದ್ಧರು ಹೆಚ್ಚು ಸಾವನ್ನಪ್ಪಿದ್ದಾರೆ ಎಂಬ ಆತಂಕದ ನಡುವೆಯೇ 101 ವರ್ಷದ ವೃದ್ಧರೊಬ್ಬರು ಕೊರೊನಾ ಗೆದ್ದು ಬಂದಿರುವ ಅಪರೂಪದ ಪ್ರಕರಣ ನಡೆದಿದೆ. ಮುಂಬೈನ ಹಿಂದೂ ಹೃದಯ ಸಾರ್ಮಾಟ್ ಬಾಳಾಸಾಹೇಬ್ ಠಾಕ್ರೆ ಆಸ್ಪತ್ರೆಯಿಂದ ಅರ್ಜುನ್ ಗೋವಿಂದ್ ನರಿಂಗ್ರೆಕರ್ ಅವರು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇನ್ನೂ ವಿಶೇಷವೆಂದರೆ ನರಿಂಗ್ರೆಕರ್ ಅವರು ಡಿಸ್ಚಾರ್ಜ್ ಆಗುವುದಕ್ಕೂ ಹಿಂದಿನ ದಿನವೇ ತಮ್ಮ 101ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಮೂಲಕ ಡಬಲ್ ಖುಷಿಯಲ್ಲಿ ಮುಳುಗಿದ್ದಾರೆ. ಈ …

Read More »

ಲಾಕ್‍ಡೌನ್ ಎಫೆಕ್ಟ್- ಮಳೆಯನ್ನೂ ಲೆಕ್ಕಿಸದೆ ಮದ್ಯದಂಗಡಿ ಮುಂದೆ ಕುಡುಕರ ಕ್ಯೂ

ರಾಯಚೂರು: ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆ ನಾಳೆಯಿಂದ ಜಿಲ್ಲೆಯ ರಾಯಚೂರು ಹಾಗೂ ಸಿಂಧನೂರು ನಗರಗಳಲ್ಲಿ ಒಂದು ವಾರ ಸಂಪೂರ್ಣ ಲಾಕ್‍ಡೌನ್ ಮಾಡಲಾಗುತ್ತಿದೆ. ಹೀಗಾಗಿ ಕುಡುಕರು ಮಳೆಯನ್ನೂ ಲೆಕ್ಕಿಸದೆ ಒಂದು ವಾರಕ್ಕಾಗುವಷ್ಟು ಮದ್ಯ ಖರೀದಿಸಲು ಸರತಿಯಲ್ಲಿ ನಿಂತಿದ್ದಾರೆ. ಒಂದು ವಾರ ಮದ್ಯದಂಗಡಿಗಳು ಸಹ ಬಂದ್ ಆಗುವ ಹಿನ್ನೆಲೆ ಮದ್ಯ ಪ್ರೀಯರಿಗೆ ಕಷ್ಟವಾಗಿದ್ದು, ಮಳೆಯನ್ನೂ ಲೆಕ್ಕಿಸದೆ ಮದ್ಯದ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ. ನಗರದ ಗಂಜ್ ರಸ್ತೆಯ ಎಂಎಸ್‍ಐಎಲ್ …

Read More »

ಲಾಕ್‍ಡೌನ್ ಎಫೆಕ್ಟ್ – 2 ದಿನದಲ್ಲಿ 410 ಕೋಟಿ ಮೌಲ್ಯದ ಎಣ್ಣೆ ಸೇಲ್………….

ಬೆಂಗಳೂರು: ನಾಳೆಯಿಂದ ಬೆಂಗಳೂರು ಸೇರಿದಂತೆ ಏಳು ಜಿಲ್ಲೆಗಳು ಲಾಕ್‍ಡೌನ್ ಆಗಲಿವೆ. ಲಾಕ್‍ಡೌನ್ ಅವಧಿ ಡ್ರೈ ಡೇ ಅಗೋದ ಬೇಡ ಅಂತ ಮದ್ಯಪ್ರಿಯರು ಎಣ್ಣೆ ಖರೀದಿಗೆ ಮುಗಿಬಿದ್ದಿದ್ದರು. ಎರಡು ದಿನಗಳಲ್ಲಿ ಅಬಕಾರಿ ಇಲಾಖೆ 410 ಕೋಟಿ ರೂ. ಮೌಲ್ಯದ ಮದ್ಯವನ್ನು ಮಾರಾಟ ಮಾಡಿ ಬೊಕ್ಕಸ ತುಂಬಿಕೊಂಡಿದೆ. ಸೋಮವಾರ ಒಂದೇ ದಿನ ಬರೋಬ್ಬರಿ 230 ಕೋಟಿ ಮೌಲ್ಯದ ಮದ್ಯವನ್ನು ಕೆಎಸ್‍ಬಿಎಲ್ (ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ) ಮಾರಿದೆ. ಸೋಮವಾರ 215 ಕೋಟಿ …

Read More »

ನಾಳೆಯಿಂದ ರಾಯಚೂರು ಜಿಲ್ಲೆಯ ಎರಡು ನಗರ ಲಾಕ್‍ಡೌನ್

ರಾಯಚೂರು: ನಾಳೆಯಿಂದ ಜುಲೈ 22 ರವರೆಗೆ ರಾಯಚೂರು ನಗರ ಮತ್ತು ಸಿಂಧನೂರು ನಗರಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ತುರ್ತು ಹಾಗೂ ಅಗತ್ಯ ಸೇವೆಗಳಾದ ಕಿರಾಣಿ , ಔಷಧಿ ಅಂಗಡಿ, ಆಸ್ಪತ್ರೆ, ಪೆಟ್ರೋಲ್ ಬಂಕ್ ಹೊರತು ಪಡಿಸಿ ಉಳಿದೆಲ್ಲಾ ಕಾರ್ಯಚಟುವಟಿಕೆ ಸಂಪೂರ್ಣ ಬಂದ್ ಇರುತ್ತದೆ. ಜಿಲ್ಲೆಯ ಉಳಿದ ತಾಲೂಕುಗಳಾದ ದೇವದುರ್ಗ, ಲಿಂಗಸುಗೂರು, ಸಿರವಾರ, ಮಸ್ಕಿ ಹಾಗೂ ಮಾನ್ವಿಯಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಎಲ್ಲದಕ್ಕೂ ಅವಕಾಶ ಇದ್ದು …

Read More »

ದೇಶದಲ್ಲಿ ಕೊರೊನಾ ಬಾಧಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ.

ನವದೆಹಲಿ,ಜು.14-ದೇಶದಲ್ಲಿ ಕೊರೊನಾ ಬಾಧಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 28,498 ಜನರಿಗೆ ಸೋಂಕು ತಗುಲಿದ್ದು, 533 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ವಿವಿಧ ರಾಜ್ಯಗಳಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಲಾಕ್‍ಡೌನ್ ಸೇರಿದಂತೆ ವಿವಿಧ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದು ಅನಿವಾರ್ಯವಾಗಿದೆ. ಇದಕ್ಕೆ ಜನರು ಸ್ಪಂದಿಸಬೇಕು ಎಂದು ಕೋರಲಾಗಿದೆ. …

Read More »