ಬೆಂಗಳೂರು, ಜು.14- ಸರ್ಕಾರದ ನೋಟಿಸ್‍ನಂತೆ ಆಗಸ್ಟ್ 1ರಂದು ನಾನು 35, ಲೋದಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡಲಿದ್ದೇನೆ. ಮನೆ ಖಾಲಿ ಮಾಡಿಸದಂತೆ ನಾನು ಯಾರ ಬಳಿಯೂ ಮನವಿ ಮಾಡಿಲ್ಲ ಎಂದು ಎಐಸಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾರ್ದಾ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ವರದಿಯನ್ನು ಟ್ಯಾಗ್ ಮಾಡಿರುವ ಅವರು, ಇದು ಫೆಕ್ ನ್ಯೂಸ್ ಎಂದು ಟ್ವಿಟರ್‍ನಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮನೆ ಖಾಲಿ ಮಾಡುವಂತೆ ನನಗೆ ಜುಲೈ 1ರಂದು ಸರ್ಕಾರ …
Read More »Yearly Archives: 2020
ಬ್ರೇಕಿಂಗ್ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..! ಇಲ್ಲಿದೆ ಡೀಟೇಲ್ಸ್
ಬೆಂಗಳೂರು,ಜು.14- ಹಲವು ಸಂಕಷ್ಟಗಳ ನಡುವೆ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ. 61.81ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪಿಯು ಪರೀಕ್ಷಾ ಮಂಡಳಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು, ಫಲಿತಾಂಶದ ವಿವರಗಳನ್ನು ಪ್ರಕಟಿಸಿದರು.ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆ ಮಾರ್ಚ್ 23ರಿಂದ ನಡೆದಿತ್ತು. ರಾಜ್ಯದಲ್ಲಿ 6,75,277 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ ಹೊಸಬರು 5,56,267 ಹಾಜರಾಗಿದ್ದು, 3,84,947 ಮಂದಿ ತೇರ್ಗಡೆ …
Read More »ಕೊರೊನಾ ಎಫೆಕ್ಟ್- ಸೆಕ್ಯೂರಿಟಿ ಗಾರ್ಡ್ ಆದ ಸ್ಯಾಂಡಲ್‍ವುಡ್ ನಟ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕೊರೊನಾ ಪರಿಣಾಮ ಕನ್ನಡದಲ್ಲಿ ಅನೇಕ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿರುವ ಹಿರಿಯ ನಟರೊಬ್ಬರು ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಹಿರಿಯ ನಟ ಶ್ರೀನಾಥ್ ವಸಿಷ್ಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಶ್ರೀನಾಥ್ ವಸಿಷ್ಠ ಅಪಾರ್ಟ್‍ಮೆಂಟ್‍ನಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇತರ ಸಿಬ್ಬಂದಿ ಕೂಡ ಕ್ವಾರಂಟೈನ್ ಆಗಿದ್ದಾರೆ. …
Read More »ಕೇವಲ ಶಿಕ್ಷಕಿ ಮಾತ್ರವಲ್ಲ, SSLC ಮಕ್ಕಳ ತಾಯಿ – ಸುರೇಶ್ ಕುಮಾರ್ ಅಭಿನಂದನೆ
ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ಎಸ್‍ಎಸ್‍ಎಲ್‍ಸಿ ಪರಿಕ್ಷಾ ಮೌಲ್ಯ ಮಾಪನಕ್ಕೆ ಹಾಜರಾಗಿ ವೃತ್ತಿ ಬದ್ಧತೆಗೆ ಮೆರೆದಿದ್ದ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ. ಸುರೇಸ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿ ಶಿಕ್ಷಕಿ ಕವಿತಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವನ್ನು ನುಂಗಿಕೊಂಡು SSLC ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ …
Read More »ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು.
ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿರುವ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು. ಕೋವಿಡ್ 19 ನಿಂದಾಗಿ ಈಗ ಇತರ ರೋಗಿಗಳಿಗೂ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಬಿಬಿಎಂಪಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿರುವ ಖಾಲಿ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿಸಲು ಮುಂದಾಗಿದೆ. ಈ ಸಂಬಂಧ ಬಿಬಿಎಂಎಂಪಿಯ ಕೋವಿಡ್ 19 ವೆಬ್‌ಸೈಟ್‌ನಲ್ಲೇ …
Read More »400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳಿಗೆ ಸೋನು ಸೂದ್ ಆರ್ಥಿಕ ನೆರವು
ಮುಂಬೈ: ಬಾಲಿವುಡ್ ನಟ ಸೋನು ಸೂದ್ ಈಗಾಗಲೇ ಲಾಕ್‍ಡೌನ್ ವೇಳೆ ಸಂಕಷ್ಟದಲ್ಲಿದ್ದ ನೂರಾರು ಜನರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದೀಗ ನಟ ಸೋನು ಸೂದ್ ಮತ್ತೊಮ್ಮೆ ಕೊರೊನಾ ಸಂಕಷ್ಟದಲ್ಲಿರುವ ಕುಟುಂಬದವರಿಗೆ ಸಹಾಯದ ಹಸ್ತ ಚಾಚಿದ್ದಾರೆ. ಕೊರೊನಾ ಪ್ರೇರಿತ ರಾಷ್ಟ್ರವ್ಯಾಪಿ ಲಾಕ್‍ಡೌನ್‍ನಿಂದಾಗಿ ಮೃತ ಮತ್ತು ಗಾಯಗೊಂಡಿರುವ ವಲಸೆ ಕಾರ್ಮಿಕರ 400ಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ನಟ ಸೋನು ಸೂದ್ ಘೋಷಣೆ ಮಾಡಿದ್ದಾರೆ. ನಟ ಸೋನು ಸೂದ್ …
Read More »ಬೆಂಗಳೂರಿನಿಂದ ಮುಂದುವರಿದ ವಲಸೆ- ಬೆಳ್ಳಂಬೆಳಗ್ಗೆ ವಾಹನ ದಟ್ಟಣೆ ಶುರು
ಬೆಂಗಳೂರು: ಇಂದು ರಾತ್ರಿ 8 ಗಂಟೆಯ ಬಳಿಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ಕೂಡ ಜನ ಬೆಂಗಳೂರು ತೊರೆಯುತ್ತಿದ್ದಾರೆ. ಕುಟುಂಬ ಸಮೇತ ಗಂಟು ಮೂಟೆ ಕಟ್ಟಿಕೊಂಡು ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಇವತ್ತು ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಮೆಜೆಸ್ಟಿಕ್‍ನಿಂದ ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಒಂದು ವಾರ ಲಾಕ್‍ಡೌನ್ ಇದೆ. ಹೀಗಾಗಿ ಊರಲ್ಲಿ ಇದ್ದು ಬರೋಣ …
Read More »ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ರಾಜ್ಯದ ಹಲವೆಡೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇನ್ನೊಂದೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ …
Read More »ಉ. ಕರ್ನಾಟಕ, ಮಲೆನಾಡು, ಕರಾವಳಿ ಭಾಗದ ಹಲವೆಡೆ ಮಳೆ………….
ಬೆಂಗಳೂರು: ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗದ ಹಲವೆಡೆ ಮಳೆ ಮುಂದುವರೆದಿದ್ದು, ಹಳ್ಳಕೊಳ್ಳಗಳು ತುಂಬುತ್ತಿವೆ. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಕಂಡುಬರಲು ಶುರುವಾಗಿದೆ. ಈ ಬೆನ್ನಲ್ಲೇ ಸರ್ಕಾರ ಎಚ್ಚೆತ್ತಿದೆ. ಇಂದು ನಡೆದ ಡಿಸಿಗಳ ಸಭೆಯಲ್ಲಿ ಮಳೆ ಮತ್ತು ಪ್ರವಾಹ ಸಂಬಂಧ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, ಹೆಚ್ಚು ಮಳೆ ಆಗುತ್ತಿರುವ ಪ್ರದೇಶದಲ್ಲಿ ಜನರ ಸ್ಥಳಾಂತರಕ್ಕೆ ಮೊದಲೇ ಸ್ಥಳ ಗುರುತಿಸುವಂತೆ ಸೂಚಿಸಿದರು. ಮಹಾರಾಷ್ಟ್ರದ ಕೋಲ್ಹಾಪುರ ಡಿಸಿ ಜೊತೆ ಸತತ ಸಂಪರ್ಕದಲ್ಲಿದ್ದು, ಕೃಷ್ಣಾ …
Read More »ಲಾಕ್‍ಡೌನ್ ಉಲ್ಲಂಘಿಸಿದ್ದಕ್ಕೆ ಬೈಕ್ ಸೀಜ್- ಮನನೊಂದು ಬೆಂಕಿ ಹಚ್ಚಿಕೊಂಡ ಯುವಕ
ಚೆನ್ನೈ: ಲಾಕ್ ಡೌನ್ ಉಲ್ಲಂಘನೆ ಮಾಡಿದ್ದಕ್ಕೆ ಪೊಲೀಸರು ಬೈಕ್ ಸೀಜ್ ಮಾಡಿದ್ದಾರೆ. ಆದರೆ ಇದರಿಂದ ಮನನೊಂದ ಯುವಕ ಚಿಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಿರುಪತ್ತೂರು ಜಿಲ್ಲೆಯ ಅಂಬುರ್ ಪಟ್ಟಣದಲ್ಲಿ ನಡೆದಿದೆ. ಯುವಕನನ್ನು ಮುಗಿಲನ್ ಎಂದು ಗುರುತಿಸಲಾಗಿದೆ. ಅಂಬುರ್ ಪಟ್ಟಣದಲ್ಲಿರುವ ಅಣ್ಣ ನಗರ್ ನಿವಾಸಿಯಾಗಿರುವ ಈತ ಲಾಕ್ ಡೌನ್ ಘೋಷನೆ ಮಾಡಿದರೂ, ನಿಯಮವನ್ನು ಉಲ್ಲಂಘಿಸಿ ಭಾನುವಾರ ತನ್ನ ಬೈಕಿನಲ್ಲಿ ಸುತ್ತಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈತನ ಬೈಕ್ ಸೀಜ್ ಮಾಡಿದ್ದಾರೆ. …
Read More »