Breaking News

Yearly Archives: 2020

ಕೊರೊನಾ ಮಹಾಮಾರಿಗೆ ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಮೂವರು ಬಲಿ

ಬಾಗಲಕೋಟೆ: ಕೊರೊನಾ ಮಹಾಮಾರಿಗೆ ಜಿಲ್ಲೆಯಲ್ಲಿ ಇಂದು ಒಟ್ಟು ಮೂವರು ಬಲಿಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ 44 ವರ್ಷದ ವ್ಯಕ್ತಿ ಮೃತರಾಗಿದ್ದು, ರೋಗಿ ನಂ.8300 ಸಂಪರ್ಕದಿಂದಾಗಿ ಇವರಿಗೆ ಸೋಂಕು ತಗುಲಿತ್ತು. ಬಾಗಲಕೋಟೆ ನವನಗರದ 28 ಸೆಕ್ಟರ್ ನಿವಾಸಿ, 77 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಈ ಇಬ್ಬರು ಸೋಂಕಿತರು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು. ಬಿಪಿ, ಡಯಾಬಿಟಿಸ್‍ಗೆ ತುತ್ತಾಗಿದ್ದರು. ಜೂನ್ 10ರಂದು ತೀವ್ರ ಉಸಿರಾಟ ತೊಂದರೆ …

Read More »

ಸಂಡೆ ಲಾಕ್‌ಡೌನ್ : ಬೆಂಗಳೂರು ಸೇರಿ ಕರ್ನಾಟಕ ಸ್ಥಬ್ದ, ಎಲ್ಲೆಲ್ಲಿ ಏನೇನಾಯ್ತು..?

ಬೆಂಗಳೂರು : ಅಂಕೆ ಮೀರಿ ಶರವೇಗದಲ್ಲಿ ಹಬ್ಬುತ್ತಿರುವ ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ಜಾರಿ ಮಾಡಿರುವ ಎರಡನೇ ಭಾನುವಾರದ ಲಾಕ್ ಡೌನ್ ಗೂ ಈ ವಾರವೂ ಬಹುತೇಕ ಯಶಸ್ವಿಯಾಗಿದೆ. ಕೆಲವು ಕಡೆ ಸಣ್ಣ ಪುಟ್ಟ ಗೊಂದಲ, ಹೊರತುಪಡಿಸಿದರೆ, ಈ ಭಾರಿ ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ತಮ್ಮ ಪ್ರಯಾಣಕ್ಕೆ ನಿರ್ಬಂಧ ಹಾಕಿಕೊಂಡಿದ್ದು ವಿಶೇಷವಾಗಿತ್ತು. ಲಾಕ್ ಡೌನ್ ಶನಿವಾರ ರಾತ್ರಿ 8 ಗಂಟೆಯಿಂದಲೇ ಜಾರಿಯಾಗಿದ್ದು, ಭಾನುವಾರ ರಾಜ್ಯದಾದ್ಯಂತ ಬಹುತೇಕ ಎಲ್ಲಾ ವಹಿವಾಟುಗಳು ಸಂಪೂರ್ಣ ಸ್ಥಗಿತಗೊಂಡಿವೆ. …

Read More »

ಬಿಗ್ ಬಿ ಪತ್ನಿ ಜಯಾ ಬಚ್ಚನ್ ವರದಿ ನೆಗೆಟಿವ್, ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು

ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯಗೂ ಕೊರೊನಾ ಸೋಂಕು ತಗುಲಿದೆ. ಶನಿವಾರ ರಾತ್ರಿ ಬಿಗ್ ಬಿ ಅಮಿತಾಬ್ ಬಚ್ಚನ್ ತಮಗೆ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು. ತಂದೆ ಅಮಿತಾಬ್ ಬಚ್ಚನ್ ಬಳಿಕ ಟ್ವೀಟ್ ಮಾಡಿದ್ದ ಅಭಿಷೇಕ್ ತಮ್ಮ ವರದಿಯೂ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದರು. ಇದೀಗ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ತಗುಲಿರುವುದು ಖಚಿತವಾಗಿದೆ.ಅಭಿಷೇಕ್ ಮತ್ತು ಅಮಿತಾಬ್ ಬಚ್ಚನ್ ಮುಂಬೈನ …

Read More »

ವಿಕಾಸ್ ದುಬೆ ಎನ್‌‌ಕೌಂಟರ್‌ನಲ್ಲಿ ಭಾಗಿಯಾಗಿದ್ದ ಪೊಲೀಸ್‍ಗೆ ಕೊರೊನಾ……….

ಲಕ್ನೋ: ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‍ಕೌಂಟರ್ ನಲ್ಲಿ ಭಾಗಿಯಾಗಿದ್ದ ಓರ್ವ ಪೊಲೀಸ್ ಸಿಬ್ಬಂದಿಗೆ ಕೊರೊನಾ ತಗುಲಿದೆ. ಕೊರೊನಾ ಸೋಂಕಿತ ಪೊಲೀಸ್ ಜೊತೆ ಇತರೆ ಸಿಬ್ಬಂದಿ ಪ್ರಯಾಣಿಸಿದ್ದರು. ಪೊಲೀಸ್ ಪೇದೆಯನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಪೊಲೀಸರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಶಂಕಿತ ಸೋಂಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಎನ್‍ಕೌಂಟರ್ ನಲ್ಲಿ ಭಾಗಿಯಾಗಿದ್ದ ಎಲ್ಲ ಪೊಲೀಸ್ ಸಿಬ್ಬಂದಿ ಸಹ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದಾರೆ. …

Read More »

ಆನ್‍ಲೈನ್ ಬೆಟ್ಟಿಂಗ್ ಗೇಮ್‍ವೊಂದರಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ

ಹೈದರಾಬಾದ್: ಆನ್‍ಲೈನ್ ಬೆಟ್ಟಿಂಗ್ ಗೇಮ್‍ವೊಂದರಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಥೋಟಾ ಮಧುಕರ್ (24) ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿ. ಮಧುಕರ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಾಲ್ಕು ದಿನಗಳ ಹಿಂದೆ ನಿಷೇಧಿತ ಆಟದಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಮಧುಕರ್ ವಿಷ ಕುಡಿದಿದ್ದಾನೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧುಕರ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ …

Read More »

ಮೂವರು ಯುವಕರಿಗೆ ವಿಡಿಯೋ ಸಂದೇಶ ಕಳುಹಿಸಿ ಮಾತನಾಡುವಂತೆ ಕೇಳಿಕೊಂಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಯುವತಿಯೊಬ್ಬಳು ನೇಣಿಗೆ

ಹೈದರಾಬಾದ್: ಮೂವರು ಯುವಕರಿಗೆ ವಿಡಿಯೋ ಸಂದೇಶ ಕಳುಹಿಸಿ ಮಾತನಾಡುವಂತೆ ಕೇಳಿಕೊಂಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನ ಭಕ್ತವತ್ಸಲ ನಗರದಲ್ಲಿ ನಡೆದಿದೆ. ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ 21 ವರ್ಷದ ಯುವತಿ, ಈ ವಿಡಿಯೋದಲ್ಲಿ ಕುತ್ತಿಗೆಗೆ ದುಪ್ಪಟ್ಟವನ್ನು ಸುತ್ತಿಕೊಂಡು ‘ಶಿವ ನನ್ನ ಜೊತೆ ಮಾತನಾಡು’ ಎಂದು ಮನವಿ ಮಾಡಿಕೊಂಡಿದ್ದಾಳೆ. ನಂತರ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿಯ ಮನವಿಯ ವಿಡಿಯೋ ಸಾಮಾಜಿಕ …

Read More »

ಗೋಕಾಕ್ ತಾಲೂಕಿನಲ್ಲಿ ಲಾಕ್‍ಡೌನ್………

ಬೆಳಗಾವಿ: ಕೊರೊನಾ ಚೈನ್ ಕಟ್ ಮಾಡುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಒಂದು ವಾರ ಲಾಕ್‍ಡೌನ್ ಮಾಡಲಾಗಿದೆ. ಇದೀಗ ಬೆಂಗಳೂರು ಮಾದರಿಯಲ್ಲಿ ಗೋಕಾಕ್ ತಾಲೂಕಿನಲ್ಲಿ 7 ರಿಂದ 10 ದಿನ ಲಾಕ್‍ಡೌನ್ ಮಾಡಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಘೋಷಣೆ ಮಾಡಿದ್ದಾರೆ. ಸಂಡೇ ಲಾಕ್‍ಡೌನ್ ಮಧ್ಯೆ ಸಚಿವರಿಂದ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಮಾಡಲಾಗಿದೆ. ಗೋಕಾಕ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ …

Read More »

ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ’- ಕ್ವಾರಂಟೈನ್‍ನಲ್ಲಿ ಪುಸ್ತಕದ ಮೊರೆಹೋದ ಸಿಎಂ

ಬೆಂಗಳೂರು: ಕೊರೊನಾ ಭೀತಿಯಿಂದ ಸ್ವಯಂ ಕ್ವಾರಂಟೈನ್ ಅಗಿರುವ ಸಿಎಂ ಯಡಿಯೂರಪ್ಪನವರು ಪುಸ್ತಕಗಳನ್ನು ಓದುವ ಮೂಲಕ ಕಾಲಕಳೆಯುತ್ತಿದ್ದಾರೆ. ಸಿಎಂ ಅವರ ಗೃಹ ಕಚೇರಿ ಕೃಷ್ಣಾ, ಅಧಿಕೃತ ನಿವಾಸ ಕಾವೇರಿ ಮತ್ತು ಅವರ ಧವಳಗಿರಿಯ ನಿವಾಸದಲ್ಲಿ ಕೆಲಸ ಮಾಡುವ ಕೆಲ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಕಾರಣದಿಂದ ಯಡಿಯೂರಪ್ಪನವರು ಶುಕ್ರವಾದಿಂದ ಐದು ದಿನಗಳ ಕಾಲ ತಮ್ಮ ಕಾವೇರಿ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಈ ವೇಳೆ ಪುಸ್ತಕಗಳನ್ನು ಓದುತ್ತಾ ಸಮಯ ದೂಡುತ್ತಿರುವ ಬಿಎಸ್‍ವೈ, ಬಿಡುವಿನ …

Read More »

ಚೀನಾ ವಿರುದ್ಧ ಹಾರ್ಡ್‌ವೇರ್‌ ಸ್ಟ್ರೈಕ್‌

ಕ್ಯಾಲಿಫೋರ್ನಿಯಾ: ಗಲ್ವಾನ್‌ ಘರ್ಷಣೆಯ ಬಳಿಕ ಭಾರತ ಸರ್ಕಾರ ಚೀನಾದ 59 ಅಪ್ಲಿಕೇಶನ್‌‌ಗಳನ್ನು ನಿಷೇಧಿಸಿ ‘ಡಿಜಿಟಲ್‌ ಸ್ಟ್ರೈಕ್‌’ ಮಾಡುವ ಮೂಲಕ ಶಾಕ್‌ ನೀಡಿತ್ತು. ಈಗ ಕೊರೊನಾ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಹಿತಿಗಳನ್ನು ಸರಿಯಾಗಿ ಹಂಚಿಕೊಳ್ಳದ್ದಕ್ಕೆ ವಿಶ್ವದ ಕೆಂಗಣ್ಣಿಗೆ ಗುರಿಯಾದ ಹಿನ್ನೆಲೆಯಲ್ಲಿ ಅಮೆರಿಕದ ಕಂಪನಿಗಳು ಚೀನಾ ಮೇಲೆ ‘ಹಾರ್ಡ್‌ವೇರ್‍ ಸ್ಟ್ರೈಕ್‌’ ಮಾಡಲು ಆರಂಭಿಸಿವೆ. ಅಮೆರಿಕದ ಟ್ರಂಪ್‌ ಸರ್ಕಾರ ಮೊದಲಿನಿಂದಲೂ ವ್ಯಾಪಾರ ವಿಚಾರದಲ್ಲಿ ಚೀನಾ ವಿರುದ್ಧ ಕಿಡಿ ಕಾರುತ್ತಲೇ ಬಂದಿದೆ. ಈಗ ಕೊರೊನಾ ವೈರಸ್‌‌ ಸೃಷ್ಟಿಯಾದ ಬಳಿಕ …

Read More »

ಜಿಲ್ಲಾಧಿಕಾರಿಗಳು ಜೊತೆ ಸಭೆ ಮಾಡಿದ ನಂತರ ಉಳಿದ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡುವ ಬಗ್ಗೆ ತೀರ್ಮಾನ

ಬೆಂಗಳೂರು: ಕೊರೊನಾ ಸ್ಪೀಡ್ ಕಟ್ ಮಾಡುವ ಹಿನ್ನೆಲೆಯಲ್ಲಿ ಏಳು ದಿನ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಲಾಕ್‍ಡೌನ್ ಮಾಡಲಾಗಿದೆ. ಸೋಮವಾರ ಜಿಲ್ಲಾಧಿಕಾರಿಗಳು ಜೊತೆ ಸಭೆ ಮಾಡಿದ ನಂತರ ಉಳಿದ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಅಶೋಕ್, ಬೆಂಗಳೂರು ಲಾಕ್‍ಡೌನ್ ಅವಧಿಯಲ್ಲಿ ವೈದ್ಯಕೀಯ ಸಂಬಂಧಿತ ಫ್ಯಾಕ್ಟರಿಗಳನ್ನು ತೆರೆಯಲು ಅವಕಾಶ ನೀಡಲು ಸಿಎಂ ಒಪ್ಪಿದ್ದಾರೆ. …

Read More »