Breaking News

Yearly Archives: 2020

ರೈತ ವಿರೋಧಿ ಕಾನೂನುಗಳ ವಿರುದ್ಧ ಕಿಚ್ಚು – ಅಧಿಕಾರ ಸೌಧಕ್ಕೆ ಇಂದು ಅನ್ನದಾತರ ಲಗ್ಗೆ

ಬೆಂಗಳೂರು: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ಒಳಗೊಂಡಂತೆ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸ್ತಿರೋ ಹೋರಾಟ ಇನ್ನಷ್ಟು ತೀವ್ರಗೊಳ್ತಿದ್ದು, ಅನ್ನದಾತರ ಹೋರಾಟಕ್ಕೆ ಇಂದು ಮತ್ತೆ ರಾಜಧಾನಿ ಬೆಂಗಳೂರು ಸಾಕ್ಷಿ ಆಗಲಿದೆ.ನಿನ್ನೆ ಇಡೀ ಕರ್ನಾಟಕ ಬಂದ್ ಆಚರಿಸಿದ್ದ ರೈತ ಪರ ಸಂಘಟನೆಗಳು ಇಂದು ಬೆಂಗಳೂರಲ್ಲಿ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ. ರೈತರ ಪರವಾಗಿ ರೈತ ಸಂಘಟನೆಗಳ ಜೊತೆಗೆ ಇತರೆ ಸಂಘಟನೆಗಳು ಬೀದಿಗಿಳಿಯಲಿವೆ. ಮುಖ್ಯವಾಗಿ 10 …

Read More »

ವಿಧಾನಪರಿಷತ್ ನಲ್ಲಿ ಭೂ ಸುಧಾರಣಾ ಕಾಯ್ದೆ ಅಂಗೀಕಾರ

ಬೆಂಗಳೂರು: ಕೂತುಹಲಕಾರಿ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಭೂ ಸುಧಾರಣಾ ಕಾಯ್ದೆ ವಿಧಾನಪರಿಷತ್ ನಲ್ಲೂ ಅಂಗೀಕಾರಗೊಂಡಿದೆ. ಕಳೆದ ಎರಡು ದಿನಗಳಿಂದ ಸುಧೀರ್ಘ ಚರ್ಚೆ ನಡೆದು ಇಂದು ಸಂಜೆ ವಿಧೇಯಕವನ್ನು ಮತಕ್ಕೆ ಹಾಕಿದಾಗ ಬಿಜೆಪಿ ಹಾಗೂ ಜೆಡಿಎಸ್ ನ 37 ಮಂದಿ ಪರವಾಗಿ ಮತ ಚಲಾಯಿಸಿದರು. ಕಾಂಗ್ರೆಸ್ ನ ಸದಸ್ಯರು, ಜೆಡಿಎಸ್ ನ ಮರಿತಿಬ್ಬೇಗೌಡ ಸೇರಿದಂತೆ ಒಟ್ಟು 21 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ಕೊನೆಗೆ ವಿಧೇಯಕ ಅಂಗೀಕಾರಗೊಂಡಿದೆ ಎಂದು ಸಭಾಪತಿ …

Read More »

ಬೆಂಗಳೂರಲ್ಲಿ ಭಾರತ್ ಬಂದ್ ಹೇಗಿತ್ತು..? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಬೆಂಗಳೂರು, ಡಿ.8- ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಬಿಸಿ ಏರಿತ್ತು. ಮೈಸೂರು ಬ್ಯಾಂಕ್ ವೃತ್ತ, ಟೌನ್‍ಹಾಲ್, ಮೌರ್ಯ ವೃತ್ತದಲ್ಲಿ ರೈತ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳವರು ಪ್ರತಿಭಟನೆ ನಡೆಸಿ ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದವು. ರಾಜ್ಯ ರೈತ ಸಂಘ, ಹಸಿರು ಸೇನೆ, ಸಿಪಿಎಂ, ಎಎಪಿ, ಕಾಂಗ್ರೆಸ್ , ಜೆಡಿಎಸ್ ಪಕ್ಷಗಳು, ಕನ್ನಡ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ, …

Read More »

ಸಿಎಂ ಕಾರ್ಯವೈಖರಿ ವಿರುದ್ಧ ಶಾಸಕರ ಅಸಮಾಧಾನ, ವರದಿ ಕೇಳಿದ ಹೈಕಮಾಂಡ್..!

ಬೆಂಗಳೂರು,ಡಿ.8- ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯವೈಖರಿ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ಯಪಡಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ವರದಿ ನೀಡುವಂತೆ ಬಿಜೆಪಿ ಹೈಕಮಾಂಡ್ ಪಕ್ಷದ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವಂತೆ ಪಕ್ಷದ ಕೆಲ ನಾಯಕರು ಹೈಕಮಾಂಡ್‍ಗೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಈ ಬೆಳವಣಿಗೆಗಳ ನಡುವೆಯೇ ಯಡಿಯೂರಪ್ಪ ವಿರುದ್ದ ಸಿಡಿದೆದ್ದಿರುವ ಅತೃಪ್ತ ಬಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ …

Read More »

ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅವರ ಮಾತನ್ನು ಯಾರು ಕೇಳ್ತಾರೆ..? : ಸಿಎಂ ವ್ಯಂಗ್ಯ

ಬೆಂಗಳೂರು, ಡಿ.8- ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ಕಪ್ಪು ಪಟ್ಟಿಯನ್ನಾದರೂ ಧರಿಸಲಿ, ಬಿಳಿ ಪಟ್ಟಿಯನ್ನಾದರೂ ಧರಿಸಲಿ. ಅದನ್ನು ಯಾರು ಕೇಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಸಂಬಂಧ ವಿಧಾನಸೌಧದ ಬಳಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರ ಪ್ರತಿಭಟನೆಯನ್ನು ಯಾರು ಕೇಳುತ್ತಾರೆ ಎಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿರುವ ಸರ್ಕಾರ. ರೈತರಿಗೆ …

Read More »

ಪುರೋಹಿತರ ಮಂತ್ರವಿಲ್ಲದೆ, ಶಾಸ್ತ್ರ-ಸಂಪ್ರದಾಯವಿಲ್ಲದೆ ನಡೀತು ಮದುವೆ..!

ಮಳವಳಿ, ಡಿ.8- ಮಂಗಳವಾದ್ಯದೊಡನೆ ಶಾಸ್ತ್ರೋಕ್ತವಾಗಿ ಮಾಂಗಲ್ಯ ಧಾರಣೆ ಮಾಡಿಸಿ ಸಿಹಿ ಊಟ ಹಾಕಿಸುವ ಮೂಲಕ ವಿವಾಹ ಮಾಡುವುದು ನಮ್ಮ ಹಿಂದು ಸಂಪ್ರದಾಯದ ವಾಡಿಕೆ. ಆದರೆ ಯಾವುದೇ ಮಂತ್ರ ಪಟಣವಿಲ್ಲದೇ ಹಿತೈಷಿಗಳ ಸಮ್ಮುಖದಲ್ಲಿ ಮಾಂಗಲ್ಯ ಕಟ್ಟುವುದರ ಜತೆಗೆ ಮಧುವೆಗೆ ಬಂದವರಿಗೆ ಬಾಡೂಟ ಉಣಬಡಿಸಿದ ವಿವಾಹ ಸಮಾರಂಭ ಪಟ್ಟಣದ ಪಟ್ಟಲದಮ್ಮ ದೇವಸ್ಥಾನದ ಆವರಣ ಜರುಗಿತು. ತಾಲೂಕಿನ ಹೊಸಹಳ್ಳಿ ಗ್ರಾಮದ ಚಂದ್ರಶೇಖರ ಎಂಬುವರ ಪುತ್ರ ಶಿವಲಿಂಗೇಗೌಡ ಹಾಗೂ ಕೋಡಿಪುರದ ಸಿದ್ದೇಗೌಡರ ಪುತ್ರಿ ಶೃತಿ ದಾಂಪತ್ಯ …

Read More »

ವಿಧಾನಸಭೆಯಲ್ಲಿ ಕರ್ನಾಟಕ ಸ್ಟಾಂಪ್ ವಿಧೇಯಕ ಮಂಡನೆ

ಬೆಂಗಳೂರು,ಡಿ.8- ರಾಜ್ಯ ಸರ್ಕಾರವು ಕರ್ನಾಟಕ ಕೈಗಾರಿಕಾ ನೀತಿ 2020-25ರಲ್ಲಿ ಪ್ರಸ್ತಾಪಿಸಿರುವ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದ ಕರ್ನಾಟಕ ಸ್ಟಾಂಪ್(2ನೇ ತಿದ್ದುಪಡಿ) ವಿಧೇಯಕ 2020ನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಶಾಸನ ರಚನಾ ಕಲಾಪದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು. 2020-21ರ ಆಯವ್ಯಯ ಗಾತ್ರದಲ್ಲಿ ಪ್ರಸ್ತಾಪಿಸಿರುವ 35ಲಕ್ಷ ರು.ವರೆಗಿನ ಫ್ಲಾಟ್ ಅಥವಾ ಅಪಾರ್ಟ್‍ಮೆಂಟ್‍ನ ಮೊದಲ ಮಾರಾಟಕ್ಕೆ ಸ್ಟಾಂಪ್ ತೆರಿಗೆಯನ್ನು ಕಡಿಮೆ ಮಾಡುವ …

Read More »

ಕಾಯ್ದೆಯಿಂದ ರೈತರ ಆದಾಯ ಹೆಚ್ಚಳ – ಪ್ರತಿಪಕ್ಷಗಳ ವಿರುದ್ಧ ಬಿಎಸ್‍ವೈ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್ ಕರೆ ನೀಡಲಾಗಿದ್ದು, ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಈ ಸಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ, ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. …

Read More »

ಭಾರತ್ ಬಂದ್‌ಗೆ ಸೈನಿಕನ ಬೆಂಬಲ

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್‌ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಂದ್ ಬಹುತೇಕ ಯಶ್ವಸಿಯಾಗಿದೆ. ಚೆನ್ನಮ್ಮ ಸರ್ಕಲ್ ಬಳಿ ಮುಂಜಾನೆ ಹೋರಾಟಗಾರರು ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರೆ, ಇನ್ನೊಂದೆಡೆ ರೈತ ಮುಖಂಡರು ಹೊಸೂರು ಡಿಪೋ ಮುಂದೆ ಸಾರಿಗೆ ಬಸ್ ಗಳು ಹೊರಹೋಗದಂತೆ ತಡೆದು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಲವಂತವಾಗಿ ಬಂದ್ …

Read More »

ಛಲದಂಕ ಮಲ್ಲ” ರಮೇಶ ಜಾರಕಿಹೊಳಿ:ಅಶೋಕ ಚಂದರಗಿ

ಛಲದಂಕ ಮಲ್ಲ” ರಮೇಶ ಜಾರಕಿಹೊಳಿಯವರ ಕಿರೀಟಕ್ಕೆ ಮತ್ತೊಂದು ಗರಿ: ಭದ್ರಾ ಮೇಲ್ದಂಡೆ ಯೋಜನೆಗೆ ” ರಾಷ್ಟ್ರೀಯ ಯೋಜನೆ” ಪಟ್ಟ:ಕೃಷ್ಣಾ ಮೇಲ್ದಂಡೆ ಯೋಜನೆಗೂ ” ದಿಲ್ಲಿಯ ದಾರಿ” ಸುಗಮವಾಗುವದೆ? ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ಶ್ರೀ ರಮೇಶ ಜಾರಕಿಹೊಳಿಯವರ ಕಾಲ್ಗುಣವೊ, ಕೈಗುಣವೊ, ಮುಖದ ಲಕ್ಷಣವೊ ಗೊತ್ತಿಲ್ಲ.ಆದರೆ ಅವರು ಈ ಖಾತೆಯನ್ನು ವಹಿಸಿಕೊಂಡ ನಂತರ ನೀರಾವರಿ ಯೋಜನೆಗಳಲ್ಲಿ ಲಾಟರಿ ಮೇಲೆ ಲಾಟರಿಯನ್ನು ಕರ್ನಾಟಕವು ಹೊಡೆದೇ ಹೊಡೆಯುತ್ತಿದೆ! ದೀರ್ಘ ಕಾಲದಿಂದ ಮುಂದೆ ಸಾಗದೇ ಬಸವಳಿಯುತ್ತಿದ್ದ …

Read More »