Breaking News

Yearly Archives: 2020

ಇರ್ಫಾನ್ ಪಠಾಣ್‍ನನ್ನು ಉಗ್ರವಾದಿಗೆ ಹೋಲಿಸಿ ಟ್ವೀಟ್- ಬಾಲಿವುಡ್ ನಟಿ ಪ್ರತಿಕ್ರಿಯೆ

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ತಮ್ಮನ್ನು ಉಗ್ರವಾದಿಗೆ ಹೋಲಿಸಿದ್ದ ಕಾಮೆಂಟ್ ಕುರಿತು ಟೀಂ ಇಂಡಿಯಾ ಮಾಜಿ ಆಟಗಾರ ಇರ್ಫಾನ್ ಪಠಾಣ್ ಬೇಸರ ವ್ಯಕ್ತಪಡಿಸಿದ್ದು, ಇಂತಹ ಕಾಮೆಂಟ್ ನೋಡುತ್ತಿದ್ದರೆ ನಾವು ಎಲ್ಲಿಗೆ ತಲುಪಿದ್ದೇವೆ ಎಂಬ ಅನುಮಾನ ಮೂಡುತ್ತದೆ. ಇದು ಬಹಳ ನಾಚಿಕೆಗೇಡು, ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಇರ್ಫಾನ್ ಪ್ರತಿಕ್ರಿಯೆ ಟಾಂಗ್ ನೀಡಿದ್ದಾರೆ. ಪಠಾಣ್ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ಬಾಲಿವುಡ್ ನಟಿ ರಿಚಾ ಚಾಧಾ, ಪಠಾಣ್ ಇದು ಫೇಕ್ ಅಕೌಂಟ್. ನಿಜವಾದ …

Read More »

ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಯಾಗಲಿದೆ…?

ಕೊರೊನಾ ಸೋಂಕು ತಡೆಯುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗುವುದು. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಯಾಗಲಿದೆ. ಅಗತ್ಯ ಸೇವೆ, ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧವಿರುತ್ತದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಈ ಕುರಿತು ಮಾಹಿತಿ ನೀಡಿದ್ದು, ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಿದ್ದಾರೆ.

Read More »

ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ.

ಬೆಳಗಾವಿ: ಅಥಣಿ ತಾಲ್ಲೂಕಿನ ರಡೇರಹಟ್ಟಿ ಗ್ರಾಮದ ಪದವಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ. ಶಿವಮೂರ್ತಿ ಸುರೇಶ ದಳವಾಯಿ (23) ಮೃತ ವಿದ್ಯಾರ್ಥಿ. ಈತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸಾವಿಗೆ ಏನು ಕಾರಣವೆಂದು ತಿಳಿದು ಬಂದಿಲ್ಲ. ಈತನ ಮನೆಯವರು ಕೆಲಸಕ್ಕೆ ತೆರಳಿದ ವೇಳೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ …

Read More »

ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ…

ಕಲಬುರಗಿ: ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ. ರಾಹುಲ್ (15) ಆತ್ಮಹತ್ಯೆಗೆ ಶರಣಾದ ಬಾಲಕ. ಗುರುವಾರ ಸಂಜೆ ಮೊಬೈಲ್​ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಹೆತ್ತವರು ಬೈದಿದ್ದಾರೆ. ಇದರಿಂದ ಮನನೊಂದು ರಾತ್ರಿ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾನೆ. ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿಲು ಶಾಸಕರೇಲ್ಲರೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರಿಗೆ ಮನವಿ ಮಾಡಿಕೊಂಡಿದ್ದೆವೆ.

ಬೀದರ : ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿಲು ಶಾಸಕರೇಲ್ಲರೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರಿಗೆ ಮನವಿ ಮಾಡಿಕೊಂಡಿದ್ದೆವೆ. ಅವರು ಸಹ ಭರವಸೆ ನೀಡಿದ್ದಾರೆ ಎಂದು ಜೆಡಿಎಸ್ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಕಾರಾಂಜ ಜಲಾಶಯದ ಬಳಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರನ್ನು ಭೇಟಿಯಾದ ನಂತರ ಮಾತನಾಡಿದ ಅವರು, ಜಿಲ್ಲೆಯ ಕಾರಾಂಜ ಜಲಾಶಯದಲ್ಲಿ ಪ್ರಸ್ತುತ 0.3 ಟಿಎಂಸಿ ನೀರಿದ್ದು ನೀರಿನ ಸಮಸ್ಯೆ ಎದುರಾಗಿದೆ. ಜಲಾಶಯಕ್ಕೆ ಗೋದಾವರಿ ಇಲ್ಲವೇ …

Read More »

ಪಶುಸಂಗೋಪನೆ, ಹಜ್ ಮತ್ತು ವಕ್ಷ್ ಸಚಿವ ಪ್ರಭು ಚವ್ಹಾಣ್ ಅವರು ಸೋಮವಾರ(ಜು.6) ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ…

ಬೆಳಗಾವಿ: ಪಶುಸಂಗೋಪನೆ, ಹಜ್ ಮತ್ತು ವಕ್ಷ್ ಸಚಿವ ಪ್ರಭು ಚವ್ಹಾಣ್ ಅವರು ಸೋಮವಾರ(ಜು.6) ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಅಥಣಿಯ ಪಶು ವ್ಯದ್ಯಕಿಯ ಕಾಲೇಜಿನ ಪ್ರಗತಿ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ರಸ್ತೆ ಮೂಲಕ ಬೆಳಗಾವಿಗೆ ಆಗಮಿಸಿ 12.30ಕ್ಕೆ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನಗರದ ಪಶುಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಪಶುಸಂಗೋಪನಾ ಇಲಾಖೆ, ಹಜ್ ಮತ್ತು ವಕ್ಷ್ …

Read More »

ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ….?

ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ ಖರ್ಚು ಮಾಡಿ ಸುವರ್ಣ ವಿಧಾನ ಸೌಧ ಕಟ್ಟಡವನ್ನು ನಿರ್ಮಿಸಿದ್ದು,ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು,ರಾಜ್ಯ ಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಕನ್ನಡ ಸಂಘಟನೆಗಳ ಕ್ರೀಯಾ ಸಮೀತಿಯ ಅದ್ಯಕ್ಷ ಅಶೋಕ ಚಂದರಗಿ ಅವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳು,ಬೆಳಗಾವಿಯ ಸುವರ್ಣ ಸೌಧಕ್ಕೆ ಜಿಲ್ಲಾ …

Read More »

ಗ್ರಾಮೀಣ ವಸತಿ ನಿಗಮನಿಂದ ಕೂಡಲೇ ಹಣ ಬಿಡುಗಡೆಗೊಳಿಸಬೇಕೆಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾದವ ಅವರಿಗೆ ಮನವಿ ಸಲ್ಲಿಸಿದರು.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಗ್ರಾಮಸ್ಥರಿಂದ ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮನಿಂದ ಕೂಡಲೇ ಹಣ ಬಿಡುಗಡೆಗೊಳಿಸಬೇಕೆಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾದವ ಅವರಿಗೆ ಮನವಿ ಸಲ್ಲಿಸಿದರು. ರಬಕವಿಯಲ್ಲಿ ಸುಮಾರು 224 ಫಲಾನುಭವಿಗಳಿಗೆ ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮ ದಿಂದ ಬರಬೇಕಾದ ಹಣವು ಮೂರು ವರ್ಷಗಳ ಕಳೆದರೂ ಹಣ ಬಂದಿಲ್ಲ ಬಡ ಫಲಾನುಭವಿಗಳ ಪರಿಸ್ಥಿತಿ ಕಂಗಾಲಾಗಿದೆ. ನಮಗೆ ಬರಬೇಕಾದ ಹಣ ಕೊಡಿ ಸ್ವಾಮಿ ನಮ್ಮ ಪರಿಸ್ಥಿತಿ ಹದಗೆಟ್ಟು …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತರುವ ಕೆಲಸ ನಿರ್ವಹಿಸಿದ ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಬಡಸ ಹಾಗೂ ಬೆಂಡಿಗೇರಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಸನ್ಮಾನಿಸಿ, ಗೌರವಿಸಿದ್ದಾರೆ…

ಬೆಳಗಾವಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತರುವ ಕೆಲಸ ನಿರ್ವಹಿಸಿದ ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಬಡಸ ಹಾಗೂ ಬೆಂಡಿಗೇರಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಸನ್ಮಾನಿಸಿ, ಗೌರವಿಸಿದ್ದಾರೆ. ಕೊರೊನಾ ಆತಂಕದ ನಡುವೆಯೇ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಪರೀಕ್ಷೆ ಕೇಂದ್ರಕ್ಕೆ ತೆರಳಲು ಸಹಕಾರಿಯಾದ ಸಾರಿಗೆ ಇಲಾಖೆಯ ಸಿಬ್ಬಂದಿಗಳ ಕಾರ್ಯವನ್ನು ಗ್ರಾಮಸ್ಥರು, ವಿದ್ಯಾರ್ಥಿಗಳು ಬಣ್ಣಿಸಿ, ಸನ್ಮಾನಿಸಿದ್ದರು. ಈ ವೇಳೆ ಮಾಸ್ಕ್, ಸ್ಯಾನಿಟೈಸರ್ ಬಳಸುವ ಮೂಲಕ ಸರ್ಕಾರದ ನಿಯಮಗಳನ್ನು …

Read More »

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ ತರಬೇತಿ

ಗೋಕಾಕ: ನೀರಿನ ಸ೦ರಕ್ಷಣೆ ನಮ್ಮೆಲ್ಲರ ಹೊಣೆ,  ನೀರು ಅಮೂಲ್ಯವಾದ ಸ೦ಪತ್ತು ಅದನ್ನು ಸ೦ರಕ್ಷಿಸುವದು ನಮ್ಮೆಲ್ಲರ ಹೊಣೆ.ಹಾಗಾಗಿ ನೀರು ನ್ನು ಪೋಲು ಮಾಡದೆ.ನೀರುನ್ನು ಕಲುಷಿತಗೊಳಿಸದ೦ತೆ ಸಹಕರಿಸಬೇಕು. ಎ೦ದು ಗ್ರಾಮೀಣ ಕುಡಿಯುವ ನೀರು ಮತ್ತು ನೈಮ೯ಲೈ ಉಪವಿಭಾಗ ಗೋಕಾಕ ಗ್ರಾಮೀಣ ಕುಡಿಯುವ ನೀರು ಉಪವಿಭಾಗ ಕಿರಿಯ ಅಭಿಯ೦ತರರಾದ . ನಿಲಮ್ಮ ಎಸ್.ಲಮಾಣಿ, ಹೇಳಿದರು. ತಾಲ್ಲೂಕು ಪ೦ಚಾಯತ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣ ಕುಡಿಯುವ ನೀರು ವಿಭಾಗ ಚಿಕ್ಕೋಡಿ, ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ …

Read More »