Breaking News

Yearly Archives: 2020

ಉಡುಪಿಯಲ್ಲಿ ಭಾರೀ ಮಳೆಯ ಮುನ್ಸೂಚನೆ – ಹೈ ಅಲರ್ಟ್

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಐದರವರೆಗೆ ಉಡುಪಿಯಲ್ಲಿ ಧಾರಾಕಾರ ಮಳೆ ಸಾಧ್ಯತೆ ಇದೆ. ಜುಲೈ ನಾಲ್ಕಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 24 ಗಂಟೆಯ ಉಡುಪಿ ಮಳೆ ವರದಿ ಬಿಡುಗಡೆ ಮಾಡಿರುವ ಇಲಾಖೆ, ಉಡುಪಿಯಲ್ಲಿ 34 ಮಿಲಿ ಮೀಟರ್, ಕುಂದಾಪುರದಲ್ಲಿ 17 ಮಿಲಿ ಮೀಟರ್, …

Read More »

ಚೀನಾದ 59 ಅಪ್ಲಿಕೇಶನ್‌ಗಳು ನಿಷೇಧಿಸಿ ಭಾರತ ಸರ್ಕಾರ ಆದೇಶ ಹೊರಡಿಸಿದ ಬಳಿಕ ಮೊದಲ ಬಾರಿಗೆ ಗೂಗಲ್‌ ಪ್ರತಿಕ್ರಿಯೆ ನೀಡಿದೆ.

ವದೆಹಲಿ: ಚೀನಾದ 59 ಅಪ್ಲಿಕೇಶನ್‌ಗಳು ನಿಷೇಧಿಸಿ ಭಾರತ ಸರ್ಕಾರ ಆದೇಶ ಹೊರಡಿಸಿದ ಬಳಿಕ ಮೊದಲ ಬಾರಿಗೆ ಗೂಗಲ್‌ ಪ್ರತಿಕ್ರಿಯೆ ನೀಡಿದೆ. ಭಾರತ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಡೆವಲಪರ್‌ಗಳಿಗೆ ಮಾಹಿತಿ ನೀಡಿದ್ದು, ಈ ಅಪ್ಲಿಕೇಶನ್‌ಗಳನ್ನು ತಾತ್ಕಾಲಿಕವಾಗಿ ಬ್ಲಾಕ್‌ ಮಾಡಿದ್ದೇವೆ ಎಂದು ಗೂಗಲ್‌ ವಕ್ತಾರರು ತಿಳಿಸಿದ್ದಾರೆ. ಗೂಗಲ್‌ ವಕ್ತಾರರು ಎಷ್ಟು ಅಪ್ಲಿಕೇಶನ್‌ ಬ್ಲಾಕ್‌ ಮಾಡಲಾಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ. ಆದರೆ ಡೆವಲಪರ್‌ಗಳೇ ಕೆಲ ಅಪ್ಲಿಕೇಶನ್‌ಗಳನ್ನೆ ಪ್ಲೇ ಸ್ಟೋರ್‌ನಿಂದ ತೆಗೆದಿದ್ದಾರೆ ಎಂದು …

Read More »

ವ್ಯಕ್ತಿ ಪೂಜೆ ಬೇಡ . ಪಕ್ಷ ಪೂಜೆ ಮಾಡೋಣ:ಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌

ಬೆಂಗಳೂರು: ವ್ಯಕ್ತಿ ಪೂಜೆಯೂ ಬೇಡ . ಪಕ್ಷ ಪೂಜೆ ಮಾಡೋಣ. ಈ ಮೂಲಕ ಪಕ್ಷವನ್ನು ಕಟ್ಟೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ ಹಿಂಬಾಲಕರು ಬೇಡ. ನನಗೆ ಯಾವುದೇ ಗುಂಪು ಜಾತಿ, ಧರ್ಮದಲ್ಲಿ ನಂಬಿಕೆ ಇಲ್ಲ. ನಮ್ಮದು ಕಾಂಗ್ರೆಸ್ ಗುಂಪು, ಕಾಂಗ್ರೆಸ್ ಧರ್ಮ, ಕಾಂಗ್ರೆಸ್ ಜಾತಿ ಎಂದು ತಿಳಿಸಿದರು. ಕೇರಳ ಮಾದರಿಯಲ್ಲಿ ಎಲ್ಲಾ ನಾಯಕರು ಮೊದಲು …

Read More »

ನರಗುಂದದಲ್ಲಿ 20 ಅಡಿಯಷ್ಟು ಭೂಮಿ ಕುಸಿತ- ಜನರಲ್ಲಿ ಆತಂಕ

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮನೆಯ ಮುಂದೆ ಭೂ ಕುಸಿತವಾಗಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತವರಲ್ಲೇ ಭೂ ಕುಸಿತ ಸಂಭವಿಸಿದೆ. ಜಿಲ್ಲೆಯ ನರಗುಂದದ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆಯವರ ಮನೆ ಮುಂದೆ ಭೂಮಿ ಕುಸಿದಿದೆ. ಬೆಳಗ್ಗೆ ಈ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲಿ ಬಾರಿ ಅನಾಹುತ ತಪ್ಪಿದೆ. ಸುಮಾರು 20 ಅಡಿಯಷ್ಟು ಭೂಮಿ ಕುಸಿತವಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಅಂತರ್ಜಲ ಹೆಚ್ಚಳ, ನರಗುಂದ …

Read More »

ಆರ್.ಅಶೋಕ್ ಹುಟ್ಟುಹಬ್ಬದ ನೆಪದಲ್ಲಿ ಸಚಿವರ ಡಿನ್ನರ್ ಪಾರ್ಟಿ

ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಹುಟ್ಟುಹಬ್ಬ ಬುಧವಾರವಿದ್ದು, ಈ ಹಿನ್ನೆಲೆಯಲ್ಲಿ ಸಚಿವರೇ ರಾತ್ರಿ ಕರ್ಫ್ಯೂ ಉಲ್ಲಂಘಿಸಿ ಪಾರ್ಟಿ ಆಯೋಜನೆ ಮಾಡಿದ್ದಾರೆ. ಹೌದು. ಚಿಕ್ಕಮಗಳೂರಿನ ಕೈಮರ ಸಮೀಪ ಇರುವ ಖಾಸಗಿ ಹೋಟೆಲಿನಲ್ಲಿ ಬರ್ತ್ ಡೇ ಪಾರ್ಟಿ ಆಯೋಜಿಸಿದ್ದಾರೆ. ನೈಟ್ ಪಾರ್ಟಿಯಿಂದ ಸೋಂಕು ಹೆಚ್ಚುತ್ತೆ ಅಂದವರೇ ಪಾರ್ಟಿ ಮಾಡಿರುವುದು ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಆರ್.ಅಶೋಕ್ ಹುಟ್ಟುಹಬ್ಬದ ನೆಪದಲ್ಲಿ ಸಚಿವರ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಪಾರ್ಟಿಯಲ್ಲಿ ಶೆಟ್ಟರ್, ಸಿ.ಟಿ.ರವಿ, …

Read More »

ತಿಂಗಳೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡಲು ಪ್ರಿಯಾಂಕಾ ಗಾಂಧಿಗೆ ಸೂಚನೆ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭದ್ರತೆಯನ್ನು ಕಡಿಮೆ ಮಾಡಿದ್ದ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ದೆಹಲಿಯ ಲೋಧಿ ರೋಡ್‍ನಲ್ಲಿ  ಪ್ರಿಯಾಂಕಾ ವಾಸ ಮಾಡುತ್ತಿರುವ ನಂ.35 ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಪ್ರಿಯಾಂಕಾ ಗಾಂಧಿ ಅವರಿಗೆ ಜುಲೈ 1ರಂದು ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಿದೆ. ಎಸ್‍ಪಿಜಿ ಭದ್ರತೆ ಇಲ್ಲದ ಕಾರಣ ಮನೆ ಖಾಲಿ ಮಾಡುವಂತೆ …

Read More »

ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಯಾವ ದಿನ, ಏನು ಆಹಾರ?

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳಿಗೆ ಯಾವ ದಿನ, ಯಾವ ಆಹಾರ ನೀಡಬೇಕು ಎಂಬುದರ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲ ಜಿಲ್ಲೆಯ ಕೊರೊನಾ ಆಸ್ಪತ್ರೆಗಳಲ್ಲಿ ಮೆನು ಪ್ರಕಾರ ಆಹಾರ ನೀಡುವಂತೆ ಸೂಚಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಹಾಗೂ ಪೌಷ್ಠಿಕಾಂಶಯುಕ್ತ ಆಹಾರ ನೀಡಲಾಗುತ್ತಿಲ್ಲ. ಸೂಕ್ತ ಆಹಾರವಿಲ್ಲದೆ ಕೊರೊನಾ ರೋಗಿಗಳು ನರಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಸರ್ಕಾರ ತಜ್ಞರ ಜೊತೆ ಚರ್ಚಿಸಿ ಪ್ರತಿ …

Read More »

ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ 777 ಚಾರ್ಲಿಯಸಖತ್ ಸದ್ದು

ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ 777 ಚಾರ್ಲಿ ಸಖತ್ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಗೋವಾ ಸೇರಿದಂತೆ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆಯುತ್ತಿರುವ ಕುರಿತು ಚಿತ್ರ ತಂಡ ಅಪ್‍ಡೇಟ್ ನೀಡಿತ್ತು. ಇದೀಗ ಮತ್ತೊಂದು ಸಂತಸದ ವಿಚಾರವನ್ನು ಹಂಚಿಕೊಂಡಿದೆ. ರಕ್ಷಿತ್ ಶೆಟ್ಟಿ ಅಭಿನಯದಲ್ಲಿ ಮೂಡಿಬರುತ್ತಿರುವ 777 ಚಾರ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದು, ಈಗಾಗಲೇ ಸಿನಿಮಾದ ಬಹುಭಾಗ ಚಿತ್ರೀಕರಣ ಪೂರ್ಣಗೊಂಡಿದೆ. ಗೋವಾ, ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. …

Read More »

ಮೂವರು ಆರೋಪಿಗಳಿಗೆ ಸೋಂಕು- ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್

ಬೆಂಗಳೂರು: ಮೂವರು ಕೊಲೆ ಆರೋಪಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಸಿಲಿಕಾನ್ ಸಿಟಿಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲು ರೆಡಿಯಾಗಿದೆ. ಈ ಮೂಲಕ ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ಮತ್ತೊಂದು ಸ್ಟೇಷನ್ ಸೀಲ್‍ಡೌನ್‍ಗೆ ಸಿದ್ಧತೆ ನಡೆದಿದೆ. ಪಶ್ಚಿಮ ವಿಭಾಗದ ಪೊಲೀಸರಿಗೆ ಕೊರೊನಾ ಕಂಟಕವಾಗಿದೆ. ಡಿಸಿಪಿ ಕಚೇರಿ, ಎಸಿಪಿ ಕಚೇರಿ, ಉಪ್ಪಾರಪೇಟೆ, ಮಾರ್ಕೆಟ್, ಕಲಾಸಿಪಾಳ್ಯ, ಚಾಮರಾಜಪೇಟೆ, ಜೆಜೆ ಆರ್ ನಗರ, ಕಾಮಾಕ್ಷಿಪಾಳ್ಯ, ಕೆಪಿ ಅಗ್ರಹಾರ, ಕೆಂಗೇರಿ ಪೊಲೀಸ್ ಠಾಣೆಗಳು ಸೀಲ್ …

Read More »

ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಟ, ನಿಖಿಲ್ ಕುಮಾರಸ್ವಾಮಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅನ್ನದಾತರ ಬಗ್ಗೆ ಬರೆದುಕೊಂಡಿದ್ದಾರೆ. ನಮ್ಮ ದೇಶ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತ ಈ ದೇಶದ ಬೆನ್ನೆಲುಬು ಎಂದು ಗೌರವ ಸಲ್ಲಿಸುತ್ತೇವೆ. ಆದರೆ ರೈತರ ಮಕ್ಕಳು ರೈತರಾಗಿ ಅವರ ಕೃಷಿಭೂಮಿಯಲ್ಲಿ ದುಡಿಯಲು ಹಿಂಜರಿದು ನಗರದ ಕಡೆಗೆ ವಲಸೆ ಬಂದು ಬದುಕು ಕಟ್ಟಿಕೊಳ್ಳಲು ಹವಣಿಸುವವರ ಸಂಖ್ಯೆಯೇ ಹೆಚ್ಚು. ತಾವು ಕಲಿತ …

Read More »