Breaking News

Yearly Archives: 2020

ಭೂಸುಧಾರಣೆ ಕಾಯ್ದೆ ತಿದ್ದುಪಡಿ: ಪರಿಷತ್‍ನಲ್ಲಿ ಕೋಲಾಹಲ

ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮಂಡಿಸಿದ ಪರಿಷ್ಕøತ ಮಸೂದೆ ವಿಧಾನ ಪರಿಷತ್‍ನಲ್ಲಿ ಮತ್ತೆ ಕೋಲಾಹಲಕ್ಕೆ ಕಾರಣವಾಯಿತು. ಹಿಂದಿನ ಅಧಿವೇಶನದಲ್ಲಿ ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್ ಒಪ್ಪಿಗೆ ದೊರಕಿರಲಿಲ್ಲ. ಸೋಮವಾರ ಆರಂಭವಾದ ಅಧಿವೇಶನದಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಮಸೂದೆಗೆ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು. ಮಸೂದೆಯ ಕುರಿತು ವಿಸ್ತೃತ ಚರ್ಚೆ ಆಗಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಪಟ್ಟು ಹಿಡಿದರು. …

Read More »

ಶಿಕ್ಷಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವೆಗೂ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯುವುದಿಲ್ಲ

ಧಾರವಾಡ : ಖಾಸಗಿ ಶಿಕ್ಷಣ ಸಂಸ್ಥೆಗಳು, ಶಿಕ್ಷಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವೆಗೂ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯುವುದಿಲ್ಲ ಎಂದು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಡಿಕೆ ಈಡೇರಿಕೆ ಕುರಿತು ಚರ್ಚಿಸಲು ಸಭೆ ನಿಗದಿ ಮಾಡಲಾಗುವುದಲ್ಲದೆ, ಸದನದಲ್ಲಿ ಸಹ ಚರ್ಚೆ ನಡೆಸುವುದಾಗಿ ಶಿಕ್ಷಣ ಸಚಿವರು ಹೇಳಿದ್ದಾರೆ. ಆದರೆ ಕೇವಲ ಸಭೆ ಕರೆದರೆ ಸಾಲದು, ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಕೇವಲ ಭರವಸೆ ನೀಡಿದರೆ, ಪ್ರತಿಭಟನೆ …

Read More »

ವಿನಯ ಕುಲಕರ್ಣಿಗೆ ಮತ್ತೆ 14 ದಿನ  ನ್ಯಾಯಾಂಗ  ಬಂಧನ

ಧಾರವಾಡ: ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೆ 14 ದಿನ  ನ್ಯಾಯಾಂಗ  ಬಂಧನ ವಿಧಿಸಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯ  ಆದೇಶ ಹೊರಡಿಸಿದೆ. ಕೋರ್ಟ್ ಆದೇಶದಂತೆ ವಿನಯ ಕುಲಕರ್ಣಿ ಡಿ. 21ರವರೆಗೆ ಜೈಲು ಗತಿಯಾಗಿದೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ  ಸಚಿವ ವಿನಯ ಅವರನ್ನು ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿದೆ. ನ್ಯಾಯಾಂಗ …

Read More »

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ.

ಬೆಂಗಳೂರು : ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ. ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ …

Read More »

ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಅವಕಾಶ ನೀಡಿದೆ.

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಅವಕಾಶ ನೀಡಿದೆ. ಅನಾರೋಗ್ಯ ಹಿನ್ನೆಲೆ ತಮಗೆ ಜಾಮೀನು ನೀಡಬೇಕೆಂದು ನಟಿ ಸಂಜನಾ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅರವರಿದ್ದ ಪೀಠ, ವೈದ್ಯಕೀಯ ತಪಾಸಣೆಗೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ನಗರದ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಸಂಜನಾ ಆರೋಗ್ಯ …

Read More »

ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಂದ ಬಿಟ್ಟು ಬಿಡದೇ ತುಂತುರು ಮಳೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಂದ ಬಿಟ್ಟು ಬಿಡದೇ ತುಂತುರು ಮಳೆ ಸುರಿಯುತ್ತಿದೆ.ನಿವಾರ್ ಮತ್ತೆ ಬುರೇವಿ ಚಂಡ ಮಾರುತದ ಬಳಿಕ ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಮತ್ತೊಂದು ಚಂಡಮಾರುತ ಉಂಟಾಗಿದೆ. ಈ ಚಂಡಮಾರುತ ಭಾರತ ಸೇರಿದಂತೆ 13 ದೇಶಗಳ ಮೇಲೆ ಅಪ್ಪಳಿಸಲಿದೆ. ಅದರಲ್ಲೂ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ. ಬುರೇವಿ ಚಂಡ ಮಾರುತ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತುಂತುರು ಮಳೆ ಮತ್ತು ಮೋಡ ಕವಿದ ವಾತಾವರಣ …

Read More »

ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಕಾರ್ ಬಿಜೆಪಿ ಮುಖಂಡ ವಿಶ್ವನಾಥ್ ಪಾಟೀಲ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ.

ಹಾವೇರಿ: ರಾಣೆಬೆನ್ನೂರು ನಗರದ ಪಿ.ಬಿ ರಸ್ತೆಯಲ್ಲಿ ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಸ್ಕೂಟಿ ಮೇಲೆ ಕಾರ್ ಹರಿದ ಪರಿಣಾಮ ದ್ವಿಚಕ್ರ ಅಪ್ಪಚ್ಚಿಯಾಗಿದೆ.52 ವರ್ಷದ ಶಂಕರಗೌಡ ಪಾಟೀಲ್ ಮೃತ ದ್ವಿಚಕ್ರ ಸವಾರ. ಕಾರ್ ಬಿಜೆಪಿ ಮುಖಂಡ ವಿಶ್ವನಾಥ್ ಪಾಟೀಲ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ. ಪೊಲೀಸರು ಕಾರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಕೂಟಿಗೆ ಡಿಕ್ಕಿಯಾದ ಕಾರ್ ಡಿವೈಡರ್ ಮೇಲೆ ಬಂದು ನಿಂತಿದೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ …

Read More »

ಸೋದರಿಯರು. ಆತ್ಮಹತ್ಯೆ

ಕಲಬರುಗಿ: ಸೋದರಿಯರಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ. ಐಶ್ವರ್ಯ(19) ಮತ್ತು ಸಾರಿಕಾ (17) ಆತ್ಮಹತ್ಯೆಗೆ ಶರಣಾದ ಸೋದರಿಯರು. ಐನಾಪುರ ಗ್ರಾಮದ ವಿಶ್ವನಾಥ್ ಎಂಬವರು ಮಕ್ಕಳು. ಮನೆಯಲ್ಲಿ ಯಾರು ಇಲ್ಲದಿದ್ದಾಗ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿರುವ ಡೆತ್ ನೋಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆತ್ಮಹತ್ಯೆಗೆ …

Read More »

ಪತ್ನಿಯ ಜೊತೆ ಮೊಬೈಲ್ ನಲ್ಲಿ ಮಾತುನಾಡುತ್ತಲೇ ಕಾರ್ಮಿಕನೊಬ್ಬ ನೇಣಿಗೆ

ಹುಬ್ಬಳ್ಳಿ: ಪತ್ನಿಯ ಜೊತೆ ಮೊಬೈಲ್ ನಲ್ಲಿ ಮಾತುನಾಡುತ್ತಲೇ ಕಾರ್ಮಿಕನೊಬ್ಬ ನೇಣಿಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೋಹನ್ ಸಿಂಗ್ ಆತ್ಮಹತ್ಯೆಗೆ ಶರಣಾದ ಕಾರ್ಮಿಕನಾಗಿದ್ದು, ಪಶ್ಚಿಮಬಂಗಾಳ ಮೂಲದ ನಿವಾಸಿ. ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮೋಹನ್ ಸಿಂಗ್ ತಂದೆಯ ಸಾವಿನಿಂದ ಮನನೊಂದಿದ್ದರು.ಕಳೆದ ಎರಡು ತಿಂಗಳ ಹಿಂದೆ ಪಶ್ಚಿಮ ಬಂಗಾಳದಿಂದ ಕೆಲಸಕ್ಕೆಂದು ಬಂದು ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಫೇವರ್ಸ್ ಕಂಪನಿಯಲ್ಲಿ ಮೋಹನಸಿಂಗ್ ಕೆಲಸಕ್ಕೆ ಸೇರಿಕೊಂಡಿದ್ದರು. ತಂದೆಯ ಸಾವಿನ …

Read More »

ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭಾನುವಾರ ಮನೆಯಲ್ಲಿ ಬಿದ್ದ ಪರಿಣಾಮ ತಿಮ್ಮಕ್ಕ ಅವರ ಸೊಂಟದ ಮೂಳೆ ಮುರಿದಿದೆ. ಈ ಹಿನ್ನೆಲೆ ವೃಕ್ಷ ಮಾತೆಯನ್ನ ಇಂದು ಅವರ ಮಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳವಾರ ಸಾಲುಮರದ ತಿಮ್ಮಕ್ಕ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸದ್ಯ ತಿಮ್ಮಕ್ಕ ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಲು ಮರದ ತಿಮ್ಮಕ್ಕನವರು ನೆಟ್ಟ …

Read More »