Breaking News

Yearly Archives: 2020

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ………

ಬೆಳಗಾವಿ- ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿವೆ.ಪರೀಕ್ಷೆಗೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ತಮ್ಮ ಬ್ಲಾಕ್,ಮತ್ತು ನಂಬರ್ ಗಳನ್ನು ಖಾತ್ರಿ ಪಡಿಸಿಕೊಂಡರು‌. ಬೆಳಗಾವಿಯ ಸರ್ದಾರ್ ಹೈಸ್ಕೂಲ್ ನಲ್ಲಿರುವ ಪರೀಕ್ಷಾ ಕೇಂದ್ರಕ್ಕೂ ವಿದ್ಯಾರ್ಥಿಗಳು ತಮ್ಮ ಪೋಷಕರು ಬೆಳಿಗ್ಗೆಯೇ ಆಗಮಿಸಿದ್ದರು ಆದ್ರೆ ಶಾಲಾ ಸಿಬ್ಬಂಧಿಗಳು ನಿಗದಿತ ಸಮಯಕ್ಕೆ ಬಾರದೇ ಇರುವದರಿಂದ ಪೋಷಕರು ಕೆಲಕಾಲ ಪರದಾಡುವ ಪರಿಸ್ಥಿತಿ …

Read More »

ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಕಾಲಿಗೆ ಬೇಡಿ ಹಾಕಿ ಕಟ್ಟಿ ಹಾಕಿರುವ ಅಮಾನವೀಯ ಘಟನೆ 

ಬೆಳಗಾವಿ: ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಸ್ವಂತ ಪೋಷಕರೇ ಕಳೆದ 10 ವರ್ಷಗಳಿಂದ ಕಾಲಿಗೆ ಬೇಡಿ ಹಾಕಿ ಕಟ್ಟಿ ಹಾಕಿರುವ ಅಮಾನವೀಯ ಘಟನೆ  ಬೈಲಹೊಂಗಲ ತಾಲ್ಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ವಿಠ್ಠಲ್ ಬಳಗಣ್ಣವರ್​ ಎಂಬ ವ್ಯಕ್ತಿಗೆ ಪೋಷಕರೇ ಬೇಡಿ ತೊಡಿಸಿ, ಪಾಳುಬಿದ್ದ ಮನೆಯಲ್ಲಿ ಕೂಡಿ ಹಾಕಿದ್ದಾರೆ. ವಿಠ್ಠಲ್ 10 ವರ್ಷಗಳ ಹಿಂದೆ ಬೆಳಗಾವಿಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದನು.  ಬಳಿಕ ಊರಿಗೆ ಬಂದ ಮೇಲೆ ಮಾನಸಿಕ ಅಸ್ವಸ್ಥನಾಗಿದ್ದನು. ಆಸ್ಪತ್ರೆಗೆ ತೋರಿಸಿದರೂ ಗುಣಮುಖನಾಗಿರಲಿಲ್ಲ. …

Read More »

ಭೂಮಿಯಲ್ಲಿ ಅಂತರ್ಜಲ ಹೆಚ್ಚಾಗಲುಬಾಂದಾರಗಳನಿರ್ಮಾಣ

ಬೈಲಹೊಂಗಲ: ಬಾಂದಾರಗಳನ್ನು ನಿರ್ಮಾಣ ಮಾಡುವುದರಿಂದ ಭೂಮಿಯಲ್ಲಿ ಅಂತರ್ಜಲ ಹೆಚ್ಚಾಗಲು ಸಹಕಾರಿಯಾಗುತ್ತದೆ ಎಂದು ಕಿತ್ತೂರ ಶಾಸಕ ಮಹಾಂತೇಶ ದೊಡಗೌಡರ ಹೇಳಿದರು. ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ  ಸಣ್ಣ ನೀರಾವರಿ ಇಲಾಖೆಯಲ್ಲಿ ಟಿಎಸ್‍ಪಿ ಅನುದಾನದಡಿ 40 ಲಕ್ಷ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ಬಾಂದಾರ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಹೊಸ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಶುದ್ಧ ನೀರು ಕುಡಿಯುವುದರಿಂದ ಸಾಂಕ್ರಾಮಿಕ ರೋಗಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದುದು. ಗ್ರಾಮಾಂತರ …

Read More »

ಕೋವಿಡ್ ಕುರಿತು ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಕಠಣ ಕ್ರಮ

ಧಾರವಾಡ:  ಕೋವಿಡ್‍-19 ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮೌಖಿಕವಾಗಿ ಕೆಲವರು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ.  ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಅಂತಾ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 202 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಅವರಲ್ಲಿ ಈಗಾಗಲೇ 90 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಿಮ್ಸ್  ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ ಎಲ್ಲರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಸುಳ್ಳು …

Read More »

ಹುಬ್ಬಳ್ಳಿ:ಮಹಿಳೆಯರ ಬಟ್ಟೆ ಕಳ್ಳತನ ಮಾಡುತ್ತಿದ್ದ ಕಳ್ಳ…………

ಹುಬ್ಬಳ್ಳಿ: ಮಹಿಳೆಯರ ಬಟ್ಟೆ ಕದಿಯುತ್ತಿದ್ದ ವಿಕೃತ ಮನಸ್ಸಿನ ಯುವಕನೊಬ್ಬನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ. ಯುವಕನು ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯ ಈಶ್ವರ ನಗರ, ನೇಕಾರನಗರದ ವಿವಿಧ ಬಡಾವಣೆಗಳಲ್ಲಿ ಮಹಿಳೆಯರ ಬಟ್ಟೆ ಕಳ್ಳತನ ಮಾಡುತ್ತಿದ್ದ. ಇದರಿಂದಾಗಿ ಕಳ್ಳನನ್ನು ಹಿಡಿಯಲು ಸಾರ್ವಜನಿಕರು ಕಾಯುತ್ತಿದ್ದರು. ಯುವಕ ಇಂದು ಕೂಡ ಬಟ್ಟೆ ಕದಿಯಲು ನೇಕಾರನಗರದ ಬಡಾವಣೆಗೆ ಬಂದಿದ್ದ. ಬಟ್ಟೆ ಕದ್ದು ಇನ್ನೇನು ಪರಾರಿಯಾಗುತ್ತಿದ್ದಂತೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಳಿಕ ಆತನನ್ನು ಕಂಬಕ್ಕೆ ಕಟ್ಟಿದ …

Read More »

ಬೋರ್‌ವೆಲ್ ಲಾರಿ ಪಲ್ಟಿ- ಮೂವರು ದಾರುಣ ಸಾವು,,,,,,,,,,

ಚಿಕ್ಕಬಳ್ಳಾಪುರ: ಬೋರ್‌ವೆಲ್ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ. ಮಧ್ಯಪ್ರದೇಶ ಮೂಲದ ಮೂವರು ಕಾರ್ಮಿಕರಾದ ಅನದೇಶ್(25), ಜಗದೇವ್(21) ಹಾಗೂ ರಾಜಾರಾಮ್(26) ಮೃತ ದುರ್ದೈವಿಗಳು. ಲಾರಿ ತಮಿಳುನಾಡಿಗೆ ಸೇರಿದ್ದು, ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Read More »

ಉತ್ಪನ್ನದ ಮೂಲ ತೋರಿಸಿʼ – ಚೀನಾಗೆ ಮತ್ತೊಂದು ಹೊಡೆತ

ನವದೆಹಲಿ: ಚೀನಿ ವಸ್ತುಗಳನ್ನು ಬಹಿಷ್ಕರಿಸಿ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.  gem.gov.in ವೆಬ್‌ಸೈಟಿನಲ್ಲಿ ಕಡ್ಡಾಯವಾಗಿ ಉತ್ಪನ್ನ ತಯಾರದ ಮೂಲ ದೇಶದ ಹೆಸರನ್ನು ಪ್ರದರ್ಶಿಸಬೇಕೆಂದು ಸೂಚಿಸಿದೆ. ಈ ನಿರ್ಧಾರ ಪ್ರಕಟವಾಗುವ ಮೊದಲೇ ಅಪ್ಲೋಡ್‌ ಮಾಡಿರುವ ಉತ್ಪನ್ನಗಳಿಗೆ ಶೀಘ್ರವೇ ದೇಶದ ಹೆಸರನ್ನು ಸೇರಿಸಬೇಕು ಎಂದು ಸರ್ಕಾರ ಹೇಳಿದೆ. ಅಷ್ಟೇ ಅಲ್ಲದೇ ಜನರಿಗೆ ಸುಲಭವಾಗಿ ತಿಳಿಯಲು ʻಮೇಕ್‌ ಇನ್‌ ಇಂಡಿಯಾʼ ವಿಭಾಗವನ್ನು ಸೇರಿಸಬೇಕು …

Read More »

ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಕೂಡ ಈ ವಾರಿಯರ್ಸ್ ಗಳು ಜನ ಮೆಚ್ಚುವಂತಹ ಕೆಲಸ ಮಾಡಿ ತೋರಿಸಿದ್ದಾರೆ.

ಶಿವಮೊಗ್ಗ : ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಕೂಡ ಈ ವಾರಿಯರ್ಸ್ ಗಳು ಜನ ಮೆಚ್ಚುವಂತಹ ಕೆಲಸ ಮಾಡಿ ತೋರಿಸಿದ್ದಾರೆ. ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು ಸುಂದರವಾದ ಕೆರೆ ಪುನರ್ ನಿರ್ಮಾಣಕ್ಕೆ ಕೈ ಜೋಡಿಸಿ, ಎಲ್ಲರ ಮನೆ ಮಾತಾಗಿದ್ದಾರೆ. ಸ್ವಗ್ರಾಮ ಸಮಿತಿಯ ಸದಸ್ಯರೊಂದಿಗೆ ಕೈ ಜೋಡಿಸಿ ಒತ್ತುವಾರಿಯಾಗಿದ್ದ ಇಡೀ ಕೆರೆಯನ್ನು ಬಿಡಿಸಿಕೊಂಡು, ಕೆರೆಯಲ್ಲಿ ತುಂಬಿದ್ದ ಹೂಳು ತೆಗೆದು ಇದೀಗ ಜೀವ ಕಳೆ ನೀಡಿದ್ದಾರೆ. ಕೇವಲ 80 ಲಕ್ಷ ಲೀ. ನೀರು ತುಂಬುತ್ತಿದ್ದ …

Read More »

ಕಾಲುವೆ ಕಾಮಗಾರಿ ಬಗ್ಗೆ ರೈತರಲ್ಲಿ ಆತಂಕ,ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ರೈತರು ಹೋರಾಟ……

ರಾಯಚೂರು: ಜಿಲ್ಲೆಯ ಸಾವಿರಾರು ರೈತರ ಜೀವನಾಡಿ ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಭರದಿಂದ ಸಾಗಿದೆ. ಆದರೆ ಕಾಲುವೆ ಕಾಮಗಾರಿ ಬಗ್ಗೆ ರೈತರಲ್ಲಿ ಆತಂಕ ಎದುರಾಗಿದೆ. ನೂರಾರು ಕೋಟಿ ರೂಪಾಯಿ ಖರ್ಚುಮಾಡಿ ಅಧುನೀಕರಣ ಮಾಡಲಾಗುತ್ತಿದೆ. ಆದರೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ರೈತರು ಹೋರಾಟಕ್ಕೆ ಮುಂದಾಗಿದ್ದಾರೆ. ರಾಯಚೂರಿನ ದೇವದುರ್ಗ, ಲಿಂಗಸುಗೂರು ತಾಲೂಕುಗಳ ರೈತರ ಬದುಕಿನ ಚಿತ್ರಣವನ್ನೇ ಬದಲಿಸಿದ ನೀರಾವರಿಯ ಜೀವನಾಡಿಯಾದ ಕಾಲುವೆ ಇದಾಗಿದ್ದು, ಆಧುನೀಕರಣ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಲೂಟಿಯಾಗುತ್ತಿದೆ. …

Read More »

ಇಡೀ ಬೆಂಗ್ಳೂರು ಮತ್ತೆ ಸೀಲ್‍ಡೌನ್ ಆಗುತ್ತಾ……………?-

ಬೆಂಗಳೂರು: ಸಿಲಿಕಾನ್ ಸಿಟಿ ಸೀಲ್‍ಡೌನ್ ಆಗುವುದು ಬಹುತೇಕ ಪಕ್ಕಾ ಆಗಿದೆ. ನಗರದಲ್ಲಿ ನಿತ್ಯ 150ಕ್ಕೂ ಪಾಸಿಟಿವ್ ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ಪೊಲೀಸ್, ಸಾರಿಗೆ ನೌಕರರು ಹಾಗೂ ವೈದ್ಯರಿಗೂ ಎಲ್ಲ ವಿಭಾಗದ ಜನರಿಗೂ ಕೊರೊನಾ ಬಂದಿದೆ. ಹೀಗಾಗಿ ಕೊರೊನಾ ಪ್ರತಿದಿನ ಹೆಚ್ಚುತ್ತಿದ್ದು, ಸರ್ಕಾರಕ್ಕೆ ಹೊಸ ಸವಾಲು ಎದುರಾಗಿದೆ. ಬೆಂಗಳೂರನ್ನ ಮತ್ತೆ 15 ದಿನ ಲಾಕ್‍ಡೌನ್ ಮಾಡಿಬಿಡಿ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಕೆಲ ಸಚಿವರು ಲಾಕ್‍ಡೌನ್ ಮಾಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. …

Read More »