Breaking News

Yearly Archives: 2020

ಪತಂಜಲಿ ಕೊರೊನಾ ಔಷಧಿ ಜಾಹೀರಾತಿಗೆ ಆಯುಷ್ ಸಚಿವಾಲಯದ ಬ್ರೇಕ್…………

ನವದೆಹಲಿ: ಕೋವಿಡ್-19 ಸೋಂಕಿಗೆ ಯೋಗಗುರು ಬಾಬಾ ರಾಮ್‍ದೇವ್ ಅವರ ಪತಂಜಲಿ ಸಂಸ್ಥೆ ಆಯುರ್ವೇದ ಔಷಧಿಯನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಆಯುಷ್ ಸಚಿವಾಲಯ ಬ್ರೇಕ್ ಹಾಕಿದ್ದು, ಈ ಕುರಿತು ಜಾಹೀರಾತು ಪ್ರಸಾರ ನಿಲ್ಲಿಸುವಂತೆ ಹೇಳಿದೆ. ಅಲ್ಲದೇ ಔಷಧಿಯ ಕುರಿತ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಪತಂಜಲಿ ಸಂಸ್ಥೆಯ ಔಷಧಿಯ ವಿವರಗಳು ಅಥವಾ ಹಕ್ಕುಗಳ ಕುರಿತ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದು ಆಯುಷ್ ಸಚಿವಾಲಯ …

Read More »

ಮಲೆನಾಡು ಭಾಗದಲ್ಲಿಇಂತಹ ಮಳೆ ಸುರಿದಿದ್ದು ಇದೇ ಮೊದಲು,ಜನ ಭಯಗೊಂಡಿದ್ದಾರೆ.

ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಕೊರೊನಾ ಪ್ರಕರಣಗಳು ಜನರನ್ನು ಕಂಗೆಡಿಸಿದೆ. ಆದರೆ ಈ ಮಧ್ಯೆ ಬೆಂಗಳೂರು, ಚಿಕ್ಕೋಡಿ, ಯಾದಗಿರಿ, ಮಲೆನಾಡು ಭಾಗ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಯಾದಗಿರಿ ಜಿಲ್ಲೆಯಾದ್ಯಂತ ತಡರಾತ್ರಿ ಅಧಿಕವಾಗಿ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಮುಂಗಾರು ಆರಂಭದಿಂದಲೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತಾಪಿ ವರ್ಗದಲ್ಲಿ ಬಿತ್ತನೆಯ ಕಾರ್ಯ ಜೋರಾಗಿ ನಡೆಯುತ್ತಿದೆ. ಜಿಲ್ಲೆಯ ಶಹಪುರ, ಸುರಪುರ, ಗುರುಮಿಠಕಲ್ ತಾಲೂಕಿನಲ್ಲಿ …

Read More »

ಕೊರೊನಾ ಸೋಂಕು ಭೀತಿಯಲ್ಲಿ ರಾಮನಗರ ಪಟ್ಟಣ ಇಂದಿನಿಂದ ಲಾಕ್‍ಡೌನ್

ರಾಮನಗರ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕೊರೊನಾ ಸೋಂಕು ಭೀತಿಯಲ್ಲಿ ರಾಮನಗರ ಪಟ್ಟಣ ಇಂದಿನಿಂದ ಲಾಕ್‍ಡೌನ್ ಆಗಿದೆ. ಜಿಲ್ಲೆಯಲ್ಲಿ ಸ್ವಯಂ ಪ್ರೇರಿತವಾಗಿ ಲಾಕ್‍ಡೌನ್ ಘೋಷಣೆ ಮಾಡಲಾಗಿದ್ದು, ಈಗಾಗಲೇ ಜಿಲ್ಲೆಯ ಮಾಗಡಿ ಪಟ್ಟಣ ಮತ್ತು ಕನಕಪುರ ಲಾಕ್‍ಡೌನ್ ಮಾಡಲಾಗಿದೆ. ಇಂದಿನಿಂದ ರಾಮನಗರ ಪಟ್ಟಣ ಕೂಡ ಲಾಕ್‍ಡೌನ್ ಆಗಿದೆ. ಕಳೆದ ದಿನವೇ ಅಂಗಡಿ, ಮುಂಗಟ್ಟುಗಳನ್ನು ವರ್ತಕರು ಬಂದ್ ಮಾಡುವ ಮೂಲಕ ಲಾಕ್‍ಡೌನ್‍ಗೆ ಸ್ವಯಂ ಪ್ರೇರಿತರಾಗಿ ಬೆಂಬಲ ಸೂಚಿಸಿದ್ದಾರೆ. ಸ್ವಯಂ …

Read More »

ನೇಪಾಳದ ಕೃಷಿ ಸಚಿವಾಲಯದ ಸರ್ವೇ ಇಲಾಖೆ ಒಟ್ಟು 11 ಸ್ಥಳಗಳನ್ನು ಪಟ್ಟಿ ಮಾಡಿದ್ದು, ಇದರಲ್ಲಿ 10 ಪ್ರದೇಶಗಳನ್ನು ಚೀನಾ ವಶಪಡಿಸಿಕೊಂಡಿದೆ.

ಕಠ್ಮಂಡು: ಚೀನಾ ತನ್ನ ನೆರೆಯ ಎಲ್ಲ ದೇಶಗಳ ಗಡಿಯನ್ನು ಅತಿಕ್ರಮಣ ಮಾಡಿಕೊಳ್ಳುತ್ತಿರುವುದು ತಿಳಿದ ವಿಚಾರ. ಇತ್ತೀಚೆಗೆ ಭಾರತದೊಂದಿಗೆ ತಂಟೆ ತೆಗೆದಿದೆ. ಇದೀಗ ಇನ್ನೊಂದು ಭಯಾನಕ ಅಂಶವನ್ನು ನೇಪಾಳ ಸರ್ಕಾರ ಬಹಿರಂಗಪಡಿಸಿದೆ. ನೇಪಾಳದ ಬರೋಬ್ಬರಿ 10 ಪ್ರದೇಶಗಳನ್ನು ಚೀನಾ ಈಗಾಗಲೇ ಆಕ್ರಮಿಸಿಕೊಂಡಿದೆ ಎಂದು ನೇಪಾಳ ಸರ್ಕಾರ ತನ್ನ ವರದಿಯಲ್ಲಿ ತಿಳಿಸಿದೆ. ಲಡಾಖ್‍ನ ಗಲ್ವಾನ್ ವ್ಯಾಲಿಯಲ್ಲಿ ಭಾರತದ-ಚೀನಾದ ಗಡಿ ತಂಟೆ ನಡೆದ ಕೆಲವೇ ದಿನಗಳ ನಂತರ ನೇಪಾಳ ಈ ಕುರಿತು ಸರ್ವೇ ವರದಿಯನ್ನು …

Read More »

ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ

ಹೈದರಾಬಾದ್: ಟಾಲಿವುಡ್ ತಾರಕ್ ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ತೆಲುಗು ಚಿತ್ರರಂಗದಲ್ಲಿ ಸದ್ಯದ ಬ್ಯಸಿಯೆಸ್ಟ್ ನಟರಾಗಿದ್ದಾರೆ. ಇದೀಗ ಮತ್ತೊಂದು ಸಿನಿಮಾದದಲ್ಲಿ ಯಂಗ್ ಟೈಗರ್ ನಟಿಸುವುದು ಖಚಿತವಾಗಿದ್ದು, ಈ ಸಿನಿಮಾದಲ್ಲಿ ಕನ್ನಡದ ನಟಿ ಸಹ ಸ್ಥಾನ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಹಲವು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ಒಂದೆಡೆ ಸ್ಯಾಂಡಲ್‍ವುಡ್ ನಿರ್ದೇಶಕ ಪ್ರಶಾಂತ್ ನೀಲ್ ಜೂನಿಯರ್ ಎನ್‍ಟಿಆರ್ ಸಿನಿಮಾಗೆ …

Read More »

ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಬೆಂಗಳೂರು: ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ ಚಿತ್ರದ ಕಲಾವಿದರು, ತಂತ್ರಜ್ಞರು ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದರಿಂದ ಸಿನಿಮಾ ಕೆಲಸಗಳು ಕುಂಟುತ್ತಾ ಸಾಗುತ್ತಿವೆ. ಚಂದನವನದ ಬಹು ನಿರೀಕ್ಷಿತ ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ. ಯುವರತ್ನ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದು, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೆಲಸಗಳು ನೆಡೆಯುತ್ತಿಲ್ಲ. ಚೆನ್ನೈ …

Read More »

ತಾಯಿಯಾದ ಸಂತಸದಲ್ಲಿ ಬಿಗ್‍ಬಾಸ್ ಸ್ಪರ್ಧಿ ನೇಹಾ ಗೌಡ

ವಾಷಿಂಗ್ಟನ್: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 3’ರ ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂತಸದಲ್ಲಿದ್ದು, ಇತ್ತೀಚೆಗಷ್ಟೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾವು ತಾಯಿಯಾಗಿರುವ ವಿಚಾರವನ್ನ ನೇಹಗೌಡ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಕುವ ಮೂಲಕ ಶೇರ್ ಮಾಡಿಕೊಂಡಿದ್ದಾರೆ. ನೇಹಾ ಗೌಡ ಪತಿಯೊಂದಿಗೆ ಅಮೆರಿಕಾದ ನಾರ್ತ್ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ. ಪತಿ ಸೇರಿದಂತೆ ಕುಟುಂಬದವರು ತಮ್ಮ ಮನೆಗೆ ಹೊಸ ಸದಸ್ಯೆಯನ್ನು ಬರಮಾಡಿಕೊಂಡಿದ್ದಾರೆ. ನೇಹಾ ಗೌಡ ಸೀಮಂತ ಕಾರ್ಯಕ್ರಮ ಸರಳವಾಗಿ ನಡೆದಿದ್ದು, ಆಪ್ತರು, ಸ್ನೇಹಿತರು …

Read More »

ಲೈಟ್ ಆಫ್ ಮಾಡಿ ಕೊರೊನಾ ಸೋಂಕಿತೆಯ ಕೈ ಹಿಡಿದು ಎಳೆದಾಡಿದ ಕಾಮುಕ

ಕೋಲಾರ: ಕೋವಿಡ್-19 ಆಸ್ಪತ್ರೆಗೆ ನುಗ್ಗಿದ ವ್ಯಕ್ತಿ ಕೊರೊನಾ ಸೋಂಕಿತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಭಾನುವಾರ ಘಟನೆ ನಡೆದಿದ್ದು, ಈ ಸಂಬಂಧ ಆಸ್ಪತ್ರೆಯ ರಕ್ಷಣಾಧಿಕಾರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಶ್ವನಾಥಾಚಾರಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ. ಈತ ನಗರದ ಬೆಸ್ತರ ಬೀದಿಯ ಗೆಲ್ಪೇಟ್ ನಿವಾಸಿ ಎಂದು ತಿಳಿದು ಬಂದಿದೆ. ಶ್ರೀನಿವಾಸಪುರ ತಾಲೂಕಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಅರೋಗ್ಯ ಸಹಾಯಕನಾಗಿದ್ದಾನೆ ಎಂದು ತಿಳಿದು ಬಂದಿದೆ.   …

Read More »

ಐಎಎಸ್ ಅಧಿಕಾರಿವಿಜಯ್ ಶಂಕರ್ಆತ್ಮಹತ್ಯೆಗೆ ಶರಣಾಗಿದ್ದಾರೆ.

ias sucide

ಬೆಂಗಳೂರು: ಬಹುಕೋಟಿ ಐಎಂಎ ಹಗರಣದಲ್ಲಿ ಜೈಲು ವಾಸ ಅನುಭವಿಸಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಇಂದು ಬೆಂಗಳೂರಿನ ಜಯನಗರದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಮಾನತುಗೊಂಡಿದ್ದ ವಿಜಯ್ ಶಂಕರ್ 20 ದಿನಗಳ ಹಿಂದೆ ಕೆಲಸಕ್ಕೆ ಮರಳಿದ್ದರು. ಇಂದು ಬೆಳಗ್ಗೆ ಕಚೇರಿಯಲ್ಲಿ ಸಾಲು ಸಾಲು ಸಭೆ ನಡೆಸಿದ್ದು, ಲವಲವಿಕೆಯಿಂದಲೇ ಕೆಲಸ ಮಾಡಿದ್ದರು ಎಂದು ತಿಳಿದು ಬಂದಿದೆ. 1.5 ಕೋಟಿ ಲಂಚದ ಆರೋಪ: ಐಎಂಎ ಪ್ರಕರಣದಲ್ಲಿ 1.5 ಕೋಟಿ ರೂ. ಲಂಚ …

Read More »

ನೆಮ್ಮದಿಯಿಂದ ಇದ್ದ ಜನರು ಈಗ ಭಯದ ವಾತಾವರಣದಲ್ಲೇ ಜೀವನಸ್ವಯಂಪ್ರೇರಿತವಾಗಿ ಚನ್ನಗಿರಿ ಲಾಕ್‍ಡೌನ್

ದಾವಣಗೆರೆ: ಬೆಣ್ಣೆ ನಗರಿಯ ಕೊರೊನಾ ಸೋಂಕಿನ ಜಾಡು ಇದುವರೆಗೂ ಕಂಡು ಹಿಡಿಯಲು ಆಗುತ್ತಿಲ್ಲ. ಇಷ್ಟು ದಿನ ಕೇವಲ ಸಿಟಿಗೆ ಮಾತ್ರ ಸೀಮಿತವಾಗಿದ್ದ ಕೊರೊನಾ ಅಟ್ಟಹಾಸ ಈಗ ತಾಲೂಕು ಮಟ್ಟಕ್ಕೆ ತಲುಪಿದೆ. ನೆಮ್ಮದಿಯಿಂದ ಇದ್ದ ಜನರು ಈಗ ಭಯದ ವಾತಾವರಣದಲ್ಲೇ ಜೀವನ ನಡೆಸುವಂತಾಗಿದೆ. ಇದಕ್ಕೆ ಅಲ್ಲಿನ ಜನತೆಯೇ ಮದ್ದನ್ನು ಕಂಡುಕೊಂಡಿದ್ದಾರೆ. ದಾವಣಗೆರೆಯಲ್ಲಿ ಕೊರೊನಾರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗ್ತಾನೆ ಇದೆ. ದಾವಣಗೆರೆ ನಗರಕ್ಕೆ ಮಾತ್ರ ಸೀಮಿತವಾಗಿದ್ದ ಕೊರೊನಾ ಮಹಾಮಾರಿ ಈ ಹಳ್ಳಿಗಳಿಂದ ತಾಲೂಕು …

Read More »