Breaking News

Yearly Archives: 2020

ಕೊರೊನಾ ಭಯದ ಮಧ್ಯೆನಾಳೆಯಿಂದ SSLC ಪರೀಕ್ಷೆ……….

ಬೆಂಗಳೂರು: ಕೊರೊನಾ ಭಯದ ಮಧ್ಯೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆತಂಕ ಶುರುವಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ ಅಂತ ಶಿಕ್ಷಣ ಇಲಾಖೆ ಹೇಳಿದೆ. ಜೊತೆಗೆ ಸಿದ್ಧತೆ ಕೂಡ ನಡೆಸಿದೆ. ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ಆರ್ಭಟದ ನಡುವೆಯೂ ನಿಗದಿಯಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಿಯೇ ತೀರಲು ಶಿಕ್ಷಣ ಇಲಾಖೆ ಪಣ ತೊಟ್ಟಿದೆ. ನಾಳೆಯಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಲಿದೆ. ಕೊರೊನಾ ಆತಂಕದ ನಡುವೆಯೇ 8.5 ಲಕ್ಷ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ. …

Read More »

ಕೊರೊನಾ ವಾರಿಯರ್ಸ್‍ಗಳಿಗೂ ಸೋಂಕುತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ…..

ಹಾವೇರಿ: ಕೊರೊನಾ ವಾರಿಯರ್ಸ್‍ಗಳಿಗೂ ಸೋಂಕು ತಗುಲಿದೆ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಷ್ಕಾಳಜಿ ತೋರುತ್ತಿದೆ. ಅದರಲ್ಲೂ ಈ ಜಿಲ್ಲೆಯಲ್ಲಿನ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಆಗಿರೋ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೋಂಕು ತಗುಲಿದೆ. ಅದರಲ್ಲೂ ಹಾವೇರಿ ಜಿಲ್ಲೆಯಲ್ಲಿ ದೃಢಪಟ್ಟಿರೋ ಬಹುತೇಕ ಪ್ರಕರಣಗಳು ಸಾಂಸ್ಥಿಕ ಕ್ವಾರಂಟೈನ್ ಆಗಿದ್ದವರು. ಹೀಗಿದ್ದರೂ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ …

Read More »

ಮದುವೆಯಾದ 5 ದಿನಕ್ಕೆ ವರ ದುರ್ಮರಣ- ವಧು ಗಂಭೀರ……..

ಹೈದರಾಬಾದ್: ಮದುವೆಯಾದ ಐದು ದಿನದಲ್ಲೇ ಅಪಘಾತದಲ್ಲಿ ವರ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಹೊಲಗುಂಡ ಮಂಡಲದ ಸಮ್ಮತಗೇರಿ ಗ್ರಾಮದ ಮರೇಶ್ (23) ಮೃತ ನವವಿವಾಹಿತ. ಮೃತ ಮರೇಶ್ ಜೂನ್ 17 ರಂದು ಹೊಲಗುಂಡದ ವಧು ರೇಣುಕಾ ಜೊತೆ ಸರಳವಾಗಿ ವಿವಾಹವಾಗಿದ್ದನು. ಭಾನುವಾರ ಅಮಾವಾಸ್ಯೆಯ ನಂತರ ಅಂದರೆ ಸೋಮವಾರ ನೂತನ ದಂಪತಿ ಅಮೃತಪುರಂನಲ್ಲಿರುವ ದೇವಸ್ಥಾನಕ್ಕೆ ಹೋಗುತ್ತಿದ್ದರು. ಆದರೆ ಈ ವೇಳೆ ವೇಗವಾಗಿ ಬಂದ ಬೈಕ್ ನವಜೋಡಿ ಇದ್ದ …

Read More »

ನವಜಾತ ಶಿಶುವಿಗೆ ರಕ್ತ ಸಿಗದಿದ್ದಕ್ಕೆ ನಗರದ ಯುವಕರ ಸಂಘವೊಂದು ಮಸೀದಿಯಲ್ಲೇ ರಕ್ತದಾನ ಶಿಬಿರ

ಧಾರವಾಡ: ನವಜಾತ ಶಿಶುವಿಗೆ ರಕ್ತ ಸಿಗದಿದ್ದಕ್ಕೆ ನಗರದ ಯುವಕರ ಸಂಘವೊಂದು ಮಸೀದಿಯಲ್ಲೇ ರಕ್ತದಾನ ಶಿಬಿರ ಆರಂಭಿಸಿ ಮಾನವೀಯತೆ ಮೆರೆದಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಭಯದಿಂದ ರಕ್ತದಾನ ಮಾಡುವುದಕ್ಕೆ ಜನರೇ ಬರುತ್ತಿಲ್ಲ. ಇತ್ತ ರಕ್ತದಾನ ಶಿಬಿರಗಳೇ ನಡೆಯದ ಕಾರಣ ರಕ್ತ ಭಂಡಾರಕ್ಕೆ ತುರ್ತು ರಕ್ತದ ಅವಶ್ಯಕತೆ ಎದುರಾಗಿತ್ತು. ಇದನ್ನು ಮನಗಂಡ ನಗರದ ಜಕಣೀಬಾವಿ ಬಳಿಯ ಮಹಮ್ಮದ್ ಮಸೀದಿಯ ಜಮಾತ್ ಅಹಲೆ ಹದೀಸ್ ಟ್ರಸ್ಟ್ ಕೈ ಜೋಡಿಸಿ ರಕ್ತದಾನ ಶಿಬಿರ ನಡೆಸಿದೆ. …

Read More »

ನಿವೃತ್ತರಾದ 24 ದಿನದಲ್ಲೇ ಎಎಸ್‍ಐ ಆತ್ಮಹತ್ಯೆ………

ಮಡಿಕೇರಿ: ನಿವೃತ್ತಿ ಹೊಂದಿದ 24 ದಿನದಲ್ಲೇ ಎಎಸ್‍ಐ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಮಾದೇಗೋಡು ಗ್ರಾಮದಲ್ಲಿ ನಡೆದಿದೆ. ಎಂ.ಎಸ್.ಈರಪ್ಪ ಮೃತ ಸಹಾಯಕ ಸಬ್ ಇನ್ಸ್‌ಪೆಕ್ಟರ್. ಈರಪ್ಪ ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೋಲಿಸ್ ಠಾಣೆಯಲ್ಲಿ ಎಎಸ್‍ಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಮೇ 30 ರಂದು ನಿವೃತ್ತಿ ಹೊಂದಿದ್ದರು. ಇಂದು ಬೆಳಗ್ಗೆ ಈರಪ್ಪ ತಮ್ಮ ಮನೆಯಲ್ಲೇ ಒಂಟಿ ನಳಿಕೆಯ ಬಂದೂಕು ಬಳಸಿ ಗುಂಡು ಹಾರಿಸಿಕೊಂಡು …

Read More »

KSRTCಗೂ ಕಾಲಿಟ್ಟ ಕೊರೊನಾ- ಯಲ್ಲಾಪುರದಿಂದ ಬೆಂಗ್ಳೂರಿಗೆ ಬಂದ ಕಂಡಕ್ಟರ್‌ಗೆ ಪಾಸಿಟಿವ್

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಷ್ಟು ದಿನ ಹೊರ ದೇಶ ಹಾಗೂ ರಾಜ್ಯದಿಂದ ಬಂದವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗುತ್ತಿತ್ತು. ಆದರೆ ಇದೀಗ ಅಂತರ್ ಜಿಲ್ಲಾ ಪ್ರಯಾಣ ಮಾಡಿದ ಬಸ್ ಕಂಡಕ್ಟರ್‌ಗೆ ಪಾಸಿಟಿವ್ ದೃಢವಾಗಿದ್ದು ಜಿಲ್ಲೆಯ ಜನತೆಯನ್ನು ಆತಂಕಕ್ಕೀಡು ಮಾಡಿದೆ. ಬೆಂಗಳೂರಿನ ಬಿಎಂಟಿಸಿ ಬಸ್ಸಿನಲ್ಲಿ ಸವಾರಿ ಮಾಡುತ್ತಿರುವ ಚೀನಾ ಮಾರಿ ಈಗ ಕೆಎಸ್‌ಆರ್‌ಟಿಸಿ ಬಸ್ಸಿಗೂ ಕಾಲಿಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದ ನಿರ್ವಾಹಕನಿಗೆ ಕೊರೊನಾ ಸೋಂಕು ದೃಢವಾಗಿದೆ. …

Read More »

ತೆಲುಗು ಚಿತ್ರದ ಚಿತ್ರೀಕರಣಕ್ಕೆ ಮರಳಿದ ಬುಲ್ ಬುಲ್ ರಚಿತಾ ರಾಮ್……

ಹೈದರಾಬಾದ್: ಕೊರೊನಾ ಭೀತಿ ನಡುವೆಯೂ ಕನ್ನಡದ ನಟಿ ರಚಿತಾ ರಾಮ್ ತೆಲುಗು ಸಿನಿಮಾವೊಂದರ ಚಿತ್ರೀಕರಣಕ್ಕೆಂದು ಹೈದಾರಾಬಾದ್‍ಗೆ ತೆರಳಿದ್ದಾರೆ. ಕೇಂದ್ರ ಸರ್ಕಾರ ಕೊರೊನಾ ಲಾಕ್‍ಡೌನ್ ಅನ್ನು ದಿನದಿಂದ ದಿನಕ್ಕೆ ಸಡಿಲಿಕೆ ಮಾಡುತ್ತಾ ಬರುತ್ತಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚುತ್ತಲೆ ಇದೆ. ಇತ್ತೀಚೆಗಷ್ಟೇ ಸಿನಿಮಾ ಚಿತ್ರೀಕರಣಕ್ಕೂ ಸರ್ಕಾರ ಅನುಮತಿ ನೀಡಿದ್ದು, ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಕಲಾವಿದರು ಶೂಟಿಂಗ್‍ಗೆ ಹೋಗುತ್ತಿದ್ದಾರೆ. ಸುಮಾರು ಮೂರು ತಿಂಗಳು ಚಿತ್ರದ ಶೂಟಿಂಗ್ ಇಲ್ಲದೇ ಮನೆಯಲ್ಲೇ …

Read More »

ಮಸಾಲ ಎಂದು ಕೀಟನಾಶಕ ಮಿಕ್ಸ್ ಮಾಡಿದ ಅಜ್ಜಿ- ಚಿಕನ್ ಕರ್ರಿ ಸೇವಿಸಿ ಮೊಮ್ಮಕ್ಕಳು ಸಾವು

ಹೈದರಾಬಾದ್: ಚಿಕನ್ ಮಸಾಲ ಎಂದು ಚಿಕನ್ ಕರ್ರಿಗೆ ಕೀಟನಾಶಕ ಮಿಕ್ಸ್ ಮಾಡಿದ್ದು, ಅದೇ ಆಹಾರವನ್ನು ಸೇವಿಸಿ ಮಕ್ಕಳಿಬ್ಬರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ರೋಹಿತ್ (11) ಮತ್ತು ಜೀವನ್ (8) ಎಂದು ಗುರುತಿಸಲಾಗಿದೆ. ಗುಡಿಪಾಲ ಮಂಡಲದ ಎ.ಎಲ್.ಪುರಂನಲ್ಲಿ ಈ ಘಟನೆ ನಡೆದಿದೆ. ಚಿತ್ತೂರು ಗ್ರಾಮೀಣ ಮಂಡಳಿಯ ಚೆರ್ಲೋಪಳ್ಳಿ ಗ್ರಾಮದ ರೋಹಿತ್ ಮತ್ತು ಜೀವನ ಇಬ್ಬರು ತಮ್ಮ ರಜಾದಿನಗಳನ್ನು ಎಎಲ್ ಪುರಂನಲ್ಲಿರುವ ತಮ್ಮ ಅಜ್ಜಿಯ ಮನೆಯಲ್ಲಿ …

Read More »

14 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಾಗಾಟ ಮಾಡುತ್ತಿದ್ದ ಮೂವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಅಕ್ರಮವಾಗಿ ಸುಮಾರು 14 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಾಗಾಟ ಮಾಡುತ್ತಿದ್ದ ಮೂವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಕೆರಲೆ ಗ್ರಾಮದ ಸುಹಾಸ್ ಗಾಯಕವಾಡ್, ಮಗ ಸಂದೀಪ್ ಸುಹಾಸ್ ಗಾಯಕವಾಡ ಹಾಗೂ ಹಿಂಡಲಗಾ ಗೋಕುಲ ನಗರದ ಮಾರುತಿ ಮುರುಗೇಶ್ ಬಂಧಿತ ಆರೋಪಿಗಳು. ಮೂವರು ಆರೋಪಿಗಳು ಕ್ರೂಸರ್ ವಾಹನದಲ್ಲಿ ಮಹರಾಷ್ಟ್ರದಿಂದ ಬೆಳಗಾವಿಗೆ ಬೆಳ್ಳಿ ಸಾಗಿಸುತ್ತಿದ್ದರು, ಹತ್ತರಗಿ ಟೋಲ್ ಬಳಿ  ಪೊಲೀಸರು ವಾಹನ ತಪಾಸಣೆ ವೇಳೆ ಅಕ್ರಮವಾಗಿ ಬೆಳ್ಳಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ …

Read More »

ಸರ್ಕಾರ ವಿದೇಶೀಯರ ಆಗಮನಕ್ಕೆ ಬ್ರೇಕ್ ಹಾಕಿದೆ. ಆದ್ದರಿಂದಲೇ ವರ್ಕಿಂಗ್​​ ವೀಸಾಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ.

ವಾಷಿಂಗ್ಟನ್: ತೀವ್ರ ಕೋವಿಡ್​​-19 ಸೋಂಕಿನಿಂದ ತತ್ತರಿಸಿರುವ ಅಮೆರಿಕದಲ್ಲಿ ಈಗ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಹೀಗಾಗಿ ಅಮೆರಿಕ ಸರ್ಕಾರ ವಿದೇಶೀಯರ ಆಗಮನಕ್ಕೆ ಬ್ರೇಕ್ ಹಾಕಿದೆ. ಆದ್ದರಿಂದಲೇ ವರ್ಕಿಂಗ್​​ ವೀಸಾಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ. ಈ ವರ್ಷದ ಕೊನೆವರೆಗೂ ವರ್ಕಿಂಗ್​​ ವೀಸಾಗಳ ಮೇಲೆ ನಿರ್ಬಂಧ ಹೇರಿದ್ದಾರೆ. ತಮ್ಮ ದೇಶಕ್ಕೆ ಬರದಂತೆ ವಿದೇಶೀಯರಿಗೆ ಎಚ್- 1ಬಿ ವೀಸಾ ಸೇರಿದಂತೆ ತಾತ್ಕಾಲಿಕ ಉದ್ಯೋಗ ವೀಸಾಗಳ ಮೇಲೆ ಈ ವರ್ಷಾಂತ್ಯದವರೆಗೂ ನಿರ್ಬಂಧ ಹೇರಿ …

Read More »