ಬೆಳಗಾವಿ: ಬೆಳಗಾವಿಯ ಕನ್ನಡಪರ ಹೋರಾಟಗಾರರು, ಹಿರಿಯ ಪತ್ರಕರ್ತರು, ಸಾಮಾಜಿಕ ಚಿಂತಕರಾದ ಅಶೋಕ ಚಂದರಗಿ ಅವರನ್ನು ಸರಕಾರದಿಂದ ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ಮೆಹಬೂಬ್ ಮಕಾನಂದಾರ ಅವರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಬೆಳಗಾವಿಯ ಜಿಪಂ ಸಭಾಂಗಣದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ಮೆಹಬೂಬ್ ಮಕಾನಂದಾರ ಅಶೋಕ ಚಂದರಗಿ ಅವರು, ಹಲವಾರು ದಶಕಗಳಿಂದ ಕನ್ನಡ ಪರ ಹೋರಾಟ ಮಾಡುತ್ತ ಬಂದಿದ್ದಾರೆ. ಹಿರಿಯ …
Read More »Yearly Archives: 2020
ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ಮತ್ತೆ ಕದನ…?…
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ಮತ್ತೆ ಕದನ ಆರಂಭವಾಯಿತೋ ಎನ್ನಲಾಗುತ್ತಿದೆ. ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಸಿದ್ದಾರೆ. ಸಭೆಯಲ್ಲಿ ನೀರು ಶುದ್ಧೀಕರಣ ಘಟಕದ ಬಗ್ಗೆ ಚರ್ಚೆ ನಡೆಯುವಾಗ ಸಚಿವ ಸುರೇಶ ಅಂಗಡಿಮಧ್ಯಪ್ರವೇಶಿಸಿ, ಅದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಚಾರದ ಕಾರ್ಯಕ್ರಮ, ಫೋಟೊ ಹಾಕಿಕೊಂಡ ಕಾರ್ಯಕ್ರಮ ಎಂದರು. ಇದಕ್ಕೆ …
Read More »ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ
ನವದೆಹಲಿ: ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಕೊರೊನಾ ಗಣನೀಯ ಏರಿಕೆಯ ನಡುವೆ ಒಳ್ಳೆ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ಕೊರೊನಾದಿಂದ ಗುಣಮುಖವಾಗುತ್ತಿರುವ ಪ್ರಮಾಣ ಶೇ.51 ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ ಭಾರತದಲ್ಲಿ 3,32,424 ಮಂದಿಯಲ್ಲಿ ಈವರೆಗೂ ಸೋಂಕು ಕಂಡು ಬಂದಿದೆ. ಈ ಪೈಕಿ 1,69,797 ಮಂದಿ ಚೇತರಿಸಿಕೊಂಡು ಗುಣಮುಖವಾಗಿದ್ದಾರೆ. ಸದ್ಯ 1,53,106 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ …
Read More »ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿ…..
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹಳೆಯ ವಿಡಿಯೋವೊಂದು ಮುನ್ನಲೆಗೆ ಬಂದಿದೆ. ಸುಶಾಂತ್ ಅಭಿಮಾನಿಗಳು ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿಕಾರಿದ್ದಾರೆ. ಬಾಲಿವುಡ್‍ನಲ್ಲಿ ಸ್ಟಾರ್ ಕುಡಿಗಳಿಗೆ ಮಾತ್ರ ಸಿನಿ ಅಂಗಳದಲ್ಲಿ ಬೆಳೆಯಲು ಬಿಡುತ್ತಾರೆ. ಹೊಸ ಕಲಾವಿದರನ್ನು ತುಳಿದು ಹಾಕೋ ಪ್ರಯತ್ನ ನಡೆಯುತ್ತಿರುತ್ತೆ ಅನ್ನೋ ಮಾತುಗಳು ಬಾಲಿವುಡ್ ನಲ್ಲಿ ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಈ …
Read More »ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ
ಬೆಂಗಳೂರು: ಲಾಕ್‍ಡೌನ್ ಸಡಿಲಿಕೆಯ ನಂತರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ. ದಿನೇ ದಿನೇ ಕೊರೊನಾದಿಂದ ಜನರು ಸಾವನ್ನಪ್ಪುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಲಾಕ್‍ಡೌನ್ ನಂತರ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಮುಂದೆ ಕೊರೊನಾ ತಡೆಗೆ ಏನೂ ಮಾಡಬೇಕು ಎಂದು ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಭೆಯ ಮುಖ್ಯಾಂಶಗಳು 1. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ …
Read More »ರಮೇಶ್ ಜಾರಕಿಹೊಳಿ ಅವರು ಹಾಗೂ ಸುರೇಶ್ ಅಂಗಡಿ ಅವರಿಂದ ಬಳ್ಳಾರಿ ನಾಲಾ ವೀಕ್ಷಣೆ..
ಬೆಳಗಾವಿ ನಗರದಲ್ಲಿರುವ “ಬಳ್ಳಾರಿ ನಾಲೆ”ಯು ಮಳೆಗಾಲದಲ್ಲಿ ತುಂಬಿ ಹರಿಯುವುದರಿಂದ ಅಕ್ಕ ಪಕ್ಕದ ಸಾರ್ವಜನಿಕರ ಮನೆಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ನಾಲೆಗೆ ವ್ಯವಸ್ಥಿತವಾದ ಒಡ್ಡು ನಿರ್ಮಾಣ ಮಾಡಿ ನಗರದ ಹೊರವಲಯಕ್ಕೆ ಹರಿಯುವಂತೆ ಮಾಡಬೇಕಾಗಿರುವುದರಿಂದ, ಇಂದು ನಗರಾಭಿವೃದ್ಧಿ ಅಧಿಕಾರಿಗಳೊಂದಿಗೆ ಕೊನ್ವಾಳ್ ಗಲ್ಲಿ, ಓಲ್ಡ್ ಪಿಬಿ ರೋಡ್, ಅಲರವಾಡ್ ಬ್ರಿಡ್ಜ್ ಹಾಗೂ ನಗರದ ಮುಂತಾದ ಕಡೆಗಳಲ್ಲಿ ನಾಲೆ ಹರಿಯುವ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಲಾಯಿತು. ಮಳೆಗಾಲಕ್ಕೆ ಮುಂಚಿತವಾಗಿ ಒಡ್ಡು ನಿರ್ಮಾಣ ಕಾರ್ಯ …
Read More »ಪಿರನ್ವಾಡಿ, ಮಚ್ಚೆ ಪ್ರದೇಶ್ ಗಳನ್ನೂ ಮೇಲ್ದರ್ಜೆಗೆ ಏರಿಸಿ..
ಬೆಳಗಾವಿಯ ಪೀರನವಾಡಿ ಮತ್ತು ಮಚ್ಛೆ ಗ್ರಾಮ ಪಂಚಾಯತಿಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ವಿಧಾನಪರಿಷತ್‍ನ ಸರ್ಕಾರದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಒತ್ತಾಯಿಸಿದರು. ಸೋಮವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ತಾಲೂಕಿನ ಸರ್ಕಾರದ ವಿವಿಧ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಪೀರನವಾಡಿ ಮತ್ತು ಮಚ್ಛೆ …
Read More »ಸರ್ಕಾರ, ಅಧಿಕಾರಿಗಳ ಎಡವಟ್ಟು- 10 ಹಳ್ಳಿಗಳಿಗೆ ಜೀವನಾಡಿಯಾಗಿದ್ದ ದಡ್ಡಿ ಗ್ರಾಮ ಸೀಲ್‍ಡೌನ್
ಬೆಳಗಾವಿ: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ದಡ್ಡಿ ಹತ್ತು ಹಳ್ಳಿ ಜನರ ಜೀವನಾಡಿಯಾಗಿತ್ತು. ಪ್ರತಿಯೊಂದು ವಸ್ತು ಖರೀದಿಗೂ ಜನರು ಈ ಗ್ರಾಮಕ್ಕೆ ಬರಬೇಕಿತ್ತು. ಆದರೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಇದೀಗ ಊರಿಗೆ ಊರೇ ಸ್ತಬ್ಧವಾಗಿದೆ. ಬಿತ್ತನೆ ಕಾರ್ಯ ಮಾಡಬೇಕಿದ್ದ ರೈತರು ಮನೆ ಸೇರುವಂತಾಗಿದೆ. ದಡ್ಡಿ ಗ್ರಾಮದಿಂದ ಕೇವಲ ಮೂರು ಕಿ.ಮೀ ಅಂತರದಲ್ಲಿ ಮಹಾರಾಷ್ಟ್ರ ಗಡಿಯಿದೆ. ಕೊರೊನಾ ಆರಂಭದಲ್ಲಿ ಮಹಾರಾಷ್ಟ್ರದ ಪಕ್ಕದಲ್ಲಿದ್ದರೂ ಈ ಗ್ರಾಮದಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗಿರಲಿಲ್ಲ. …
Read More »ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ………..
ಕಾರವಾರ(): ಸರ್ಕಾರದ ಆದೇಶದಂತೆ ನಾಳೆಯಿಂದ ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕಾ ಬೋಟ್ ಬಂದರಿನಲ್ಲಿ ಲಂಗರು ಹಾಕಿವೆ. ಕರಾವಳಿಯಲ್ಲಿ ನಾಳೆಯಿಂದ ಮೀನುಗಾರಿಕೆ ನಿಷೇಧ ಅವಧಿ ಪ್ರಾರಂಭವಾಗಲಿದ್ದು ಯಾವುದೇ ಮೀನುಗಾರಿಕಾ ಬೋಟುಗಳೂ ಸಮುದ್ರಕ್ಕೆ ಇಳಿಯುವುದಿಲ್ಲ. ಮುಂಗಾರು ಪ್ರಾರಂಭವಾದ ಹಿನ್ನಲೆಯಲ್ಲಿ ಜೂನ್ 1 ರಿಂದ ಬಂದ್ ಆಗಬೇಕಾಗಿದ್ದ ಆಳಸಮುದ್ರ ಮೀನುಗಾರಿಕೆಯನ್ನ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿತ್ತು. ಆದರೆ, ಈ ಬಾರಿ ಕೊರೊನಾ ಅಟ್ಟಹಾಸ …
Read More »ಜೂಜಿನ ಪಾರಿವಾಳಕ್ಕೆ ಕಿರಿಕ್- ಚರಂಡಿಯಲ್ಲಿ ಕೆಡವಿ ಯುವಕನ ಮೇಲೆ ಹಲ್ಲೆ……..
ದಾವಣಗೆರೆ: ಜೂಜಿನ ಪಾರಿವಾಳ ವಿಚಾರಕ್ಕೆ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಗರದಲ್ಲಿ ಇಂದು ನಡೆದಿದೆ. ಶ್ರೀನಿವಾಸ್ ನಗರದ ನಿವಾಸಿ ನಟರಾಜ್ (30) ಹಲ್ಲೆಗೊಳಗಾದ ಯುವಕ. ಭಾರತ್ ಕಾಲೋನಿಯ ಸಂತೋಷ್ ಹಾಗೂ ಅವನ ಗೆಳೆಯರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ನಟರಾಜ್‍ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಟರಾಜ್ ಪಾರಿವಾಳಗಳನ್ನು ಸಾಕಿ ಅವುಗಳಿಗೆ ತರಬೇತಿ ನೀಡಿ ಜೂಜಿಗೆ ಬಿಡುತ್ತಿದ್ದ. ಹೀಗಾಗಿ ಸಂತೋಷ್ ಹಾಗೂ ಆತನ …
Read More »