Breaking News

Yearly Archives: 2020

ಕುವೆಂಪು ವಿಶ್ವವಿದ್ಯಾಲಯ ದೇಶದಲ್ಲೇ 73ನೇ ರ‍್ಯಾಂಕಿಂಗ್ ,ರಾಜ್ಯಗಳ ಸಾಂಪ್ರದಾಯಿಕ ವಿವಿಗಳಲ್ಲಿ 3ನೇ ಸ್ಥಾನ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ದೇಶದಲ್ಲೇ 73ನೇ ರ‌್ಯಾಂಕ್ ಪಡೆದಿದ್ದು, ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಮೂರನೇ ಸ್ಥಾನ ಪಡೆದಿದೆ. ನವ ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಇಂದು 2020ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‍ಐಆರ್‍ಎಫ್) ಬಿಡುಗಡೆಗೊಳಿಸಿದ್ದು, 1.85 ಅಂಕ ವೃದ್ಧಿಸಿಕೊಂಡಿರುವ ಕುವೆಂಪು ವಿಶ್ವವಿದ್ಯಾಲಯವು 73ನೇ ರ್ಯಾಂಕ್ ಪಡೆದು, ಸ್ಥಿರತೆ ಕಾಯ್ದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಮೂರನೇ ಸ್ಥಾನ ಪಡೆದಿದೆ. …

Read More »

ಬೆಳಗಾವಿ:ಕೊರೋನಾ ವಾರಿಯರ್ಸ್‍ಗೆ ಸರ್ಕಾರ ಆಘಾತ ನೀಡಿದೆ.

ಬೆಳಗಾವಿ: ದೇಶದಲ್ಲಿ ಕೊರೊನಾ ಮಹಾಮಾರಿ ಕದಂಬಬಾಹು ಚಾಚುತ್ತಾ ರಣಕೇಕೆ ಹಾಕುತ್ತಿದೆ. ಇದೇ ಸಂದರ್ಭದಲ್ಲಿ ಸರ್ಕಾರ, ಶಂಕಿತರ ವರದಿ ಬರುವ ಮುನ್ನವೇ ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಿ ಎಡವಟ್ಟು ಮಾಡುತ್ತಿದ್ದು, ಇದೀಗ ಮತ್ತೊಂದು ಎಡವಟ್ಟು ಮಾಡಿದೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಸೋಂಕಿತರು ಗುಣಮುಖರಾಗಲು ಅದಮ್ಯ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್‍ಗೆ ಸರ್ಕಾರ ಆಘಾತ ನೀಡಿದೆ. ಕೋವಿಡ್ ವಾರ್ಡಿನಲ್ಲಿ ಹಾಗೂ ಕೋವಿಡ್ ಟೆಸ್ಟಿಂಗ್ ಲ್ಯಾಬ್‍ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸರ್ಕಾರ ಲಾಡ್ಜ್‍ಗಳಲ್ಲಿ ಇರಲು …

Read More »

ದ.ಕ. ಜಿಲ್ಲೆಯಲ್ಲಿ ಇಂದು ಯಲ್ಲೋ ಅಲರ್ಟ್…………..

ಮಂಗಳೂರು: ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶನಿವಾರ (13) ಮತ್ತು ಭಾನುವಾರ (14) ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.   ಹವಾಮಾನ ಇಲಾಖೆ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಹೀಗಾಗಿ ಸಾರ್ವಜನಿಕರು …

Read More »

ಪರೀಕ್ಷೆ ನಡೆಸಿದಾಗ ಕಳ್ಳಾಟವಾಡುತ್ತಾ ಕೊರೊನಾ?

ಬೆಂಗಳೂರು: ಸಂಪರ್ಕಿತರನ್ನು ಕೂಡಲೇ ಪರೀಕ್ಷಿಸಿದರೆ ಪಕ್ಕಾ ರಿಸಲ್ಟ್ ಗೊತ್ತೇ ಆಗಲ್ಲವಂತೆ. ಸಂಪರ್ಕಿತರನ್ನು ಪರೀಕ್ಷೆ ನಡೆಸಿದರೆ ನೆಗೆಟಿವ್ ಬರುವ ಸಾಧ್ಯತೆಯೇ ಹೆಚ್ಚು ಎಂದು ಕೊರೊನಾ ಸೋಂಕು ಪರೀಕ್ಷೆ ಸಂಬಂಧ ಹೊಸ ಅಧ್ಯಯನ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶ ಬಯಲಾಗಿದೆ.   ತಕ್ಷಣ ಪರೀಕ್ಷೆ ಮಾಡಿದರೆ ನೆಗೆಟಿವ್ ಬರುವ ಸಾಧ್ಯತೆ ಇದೆ. ಹೀಗಾಗಿ ಇಂತಹ ಸಂದರ್ಭಗಳಲ್ಲಿ ಇನ್ನಷ್ಟು ಅನಾಹುತ ನಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಅನ್ನಲ್ಸ್ ಆಫ್ ಇಂಟರ್ನಲ್ ಮೆಡಿಸನ್ ಜನರಲ್‍ನಲ್ಲಿ ಸಂಶೋಧನಾ ವರದಿಯಲ್ಲಿ …

Read More »

ಇಂದು 204 ಮಂದಿಗೆ ಕೊರೊನಾ- ಡೆಡ್ಲಿ ವೈರಸ್‍ಗೆ ಮೂವರು ಬಲಿ….

ಬೆಂಗಳೂರು: ಇಂದು 204 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದ್ದು, ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. ಕೊರೊನಾ ಮೂವರನ್ನು ಬಲಿ ಪಡೆದುಕೊಂಡಿದ್ದು, ಸಾವನ್ನಪ್ಪಿದವರ ಸಂಖ್ಯೆ 72ಕ್ಕೆ ಏರಿಕೆ ಆಗಿದೆ. 204ರಲ್ಲಿ ಅಂತರಾಜ್ಯ ಪ್ರಯಾಣ ಹಿನ್ನೆಲೆ ಹೊಂದಿದ 157 ಪ್ರಕರಣಗಳಿವೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಯಾದಗಿರಿ 66, ಉಡುಪಿ 22, ಬೆಂಗಳೂರು 17, ಕಲಬುರಗಿ 16, ರಾಯಚೂರು 15, ಬೀದರ್ 14, ಶಿವಮೊಗ್ಗ 10, ದಾವಣಗೆರೆ 9, ಕೋಲಾರ 6, …

Read More »

ಕಾಡು ಮೊಲ, ನವಿಲು ಹಿಡಿದು ಟಿಕ್ ಟಾಕ್- ಆರೋಪಿ ಅಂದರ್

ಬಾಗಲಕೋಟೆ: ಕಾಡು ಮೊಲ ಹಾಗೂ ನವಿಲು ಹಿಡಿದು ಟಿಕ್ ಟಾಕ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆ ನಡೆದಿದೆ. ಹುನಗುಂದ ತಾಲೂಕಿನ ಅಮೀನಗಡ ಬಳಿಯ ಮದಾಪುರ ಗ್ರಾಮದ ವಿಠ್ಠಲ್ ವಾಲಿಕಾರ ಬಂಧಿತ ಆರೋಪಿ. ವಿಠ್ಠಲ್ ರಾಷ್ಟ್ರಪಕ್ಷಿಯಾದ ನವಿಲು ಹಾಗೂ ಕಾಡು ಮೊಲವನ್ನು ಬೇಟೆಯಾಡುತ್ತಿದ್ದ. ಅಷ್ಟೇ ಅಲ್ಲದೆ ಅದನ್ನು ಹಿಡಿದು ವಿಡಿಯೋ ಮಾಡಿ ಟಿಕ್ ಟಾಕ್‍ನಲ್ಲಿ ಅಪ್ಲೋಡ್ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಚಾರ …

Read More »

ಜಿಂದಾಲ್‍ನಲ್ಲಿ ಕೊರೊನಾ ರಣಕೇಕೆ- 86 ಮಂದಿ ನೌಕರರಿಗೆ ಸೋಂಕು………..

ಬಳ್ಳಾರಿ: ಮಹಾಮಾರಿ ಕೊರೊನಾ ರಣಕೇಕೆ ಬಳ್ಳಾರಿ ಜಿಲ್ಲೆಯಲ್ಲಿ ಮುಂದುವರೆದಿದ್ದು ಜಿಲ್ಲೆಗೆ ಜಿಂದಾಲ್ ಉಕ್ಕು ಕಂಪನಿ ಕಂಟಕವಾಗಿ ಪರಿಣಮಿಸಿದೆ. ಇಂದು ಒಂದೇ ದಿನ ಜಿಂದಾಲ್ ನಲ್ಲಿ 46 ಪ್ರಕರಣಗಳು ದಾಖಲಾಗುವ ಮೂಲಕ ಜಿಂದಾಲ್ ನೌಕರರಲ್ಲಿ ಈವರೆಗೂ ಕಾಣಿಸಿಕೊಂಡ ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆ ಆಗಿದೆ. ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿ ಇರುವ ಜಿಂದಾಲ್ ಸಮೂಹ ಸಂಸ್ಥೆಯಲ್ಲಿ 33 ಸಾವಿರಕ್ಕೂ ಅಧಿಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಲಾಕ್‍ಡೌನ್ ಆರಂಭ ಆಗಿನಿಂದಲೂ ಜಿಂದಾಲ್ …

Read More »

ರಾಜಾಜಿನಗರದ ಪ್ರಿಂಟಿಂಗ್ ಪ್ರೆಸ್‍ನ ಮಹಿಳಾ ಉದ್ಯೋಗಿಗೆ ಕೊರೊನಾ…..

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇತ್ತ ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಹರಡಿ ಆತಂಕವನ್ನು ಹೆಚ್ಚಿಸಿದೆ. ರಾಜಾಜಿನಗರದ ಪ್ರಿಂಟಿಂಗ್ ಪ್ರೆಸ್‍ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಗೆ ಇಂದು ಕೊರೊನಾ ತಗುಲಿರುವುದು ದೃಢಪಟ್ಟಿದೆ. ಅದರಲ್ಲೂ ಮಹಿಳೆ ಪ್ರಯಾಣದ ಹಿನ್ನೆಲೆ ಬೆಂಗಳೂರಿನ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ಸೋಂಕಿತ ಮಹಿಳೆಯು ಶಿವಾಜಿನಗರದ ನಿವಾಸಿಯಾಗಿದ್ದು ಕೊರೊನಾ ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆ ತಪಾಸಣೆ ಮಾಡಿಸಿಕೊಂಡಿದ್ದರು. ಸದ್ಯ ರಿಪೋರ್ಟ್ ಬಂದಿದ್ದು, ಸೋಂಕು ತಗುಲಿರುವುದು …

Read More »

ಮಾಧುಸ್ವಾಮಿ ಮತ್ತೆ ಎಡವಟ್ಟು – 6, 7 ತರಗತಿಗೆ ಆನ್‌ಲೈನ್‌ ಶಿಕ್ಷಣ ಇದೆ

ಬೆಂಗಳೂರು: ಸುದ್ದಿಗೋಷ್ಠಿ ವೇಳೆ ಮಾಧುಸ್ವಾಮಿ ಮತ್ತೆ ಎಡವಟ್ಟು ಮಾಡಿಕೊಂಡಿದ್ದು, ಈಗ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ ನೀಡಿ 6 ಮತ್ತು 7ನೇ ತರಗತಿಗೆ ಆನ್‌ಲೈನ್‌ ಶಿಕ್ಷಣ ರದ್ದು ಸಂಬಧ ಸರ್ಕಾರ ನಿರ್ಧಾರ ಪ್ರಕಟಿಸಿಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಸುರೇಶ್‌ ಕುಮಾರ್‌, ಕರ್ನಾಟಕ ಸರ್ಕಾರ ಎಲ್‌ಕೆಜಿ, ಯುಕೆಜಿ, 1 ರಿಂದ 5ನೇ ತರಗತಿಯವರೆಗಿನ ಆನ್‌ಲೈನ್‌ ಶಿಕ್ಷಣವನ್ನು ರದ್ಧು ಮಾಡಿದೆ. 6 ಮತ್ತು 7ನೇ ತರಗತಿಯವರೆಗಿನ ಆನ್‌ಲೈನ್‌ …

Read More »

1 ರಿಂದ 7ನೇ ತರಗತಿಯವರೆಗೂ ಆನ್​​ಲೈನ್​​ ಶಿಕ್ಷಣ ಇರುವುದಿಲ್ಲ:ಜೆ.ಸಿ ಮಾಧುಸ್ವಾಮಿ……..

ಬೆಂಗಳೂರು: ರಾಜ್ಯದಲ್ಲಿ 1 ರಿಂದ 7ನೇ ತರಗತಿಯವರೆಗೂ ಆನ್​​ಲೈನ್​​ ಶಿಕ್ಷಣ ಇರುವುದಿಲ್ಲ. 8 ಹಾಗೂ 9ನೇ ತರಗತಿಗಳಿ ಆನ್ ಲೈನ್ ಶಿಕ್ಷಣದ ಬಗ್ಗೆ ಇನ್ನೂ ನಿರ್ಧರಿಸಬೇಕಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಮಾಧುಸ್ವಾಮಿ ಮಕ್ಕಳಿಗೆ ಆನ್​​ಲೈನ್​​ ಶಿಕ್ಷಣ ನೀಡುವ ಸಂಬಂಧ ಪ್ರತಿಕ್ರಿಯಿಸಿದರು. 1-7ನೇ ತರಗತಿಯವರೆಗೂ ಮಕ್ಕಳಿಗೆ ಆನ್​ಲೈನ್​​ ಎಜುಕೇಷನ್​ ನೀಡದಿರಲು ಸಂಪಟುದಲ್ಲಿ ತೀರ್ಮಾನ ಮಾಡಲಾಗಿದೆ. ಹೀಗಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಆನ್​ಲೈನ್​ ಶಿಕ್ಷಣ …

Read More »