ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 30 ವರೆಗೂ ಲಾಕ್‍ಡೌನ್ ವಿಸ್ತರಣೆ ಮಾಡಿದ್ದು, ಹಲವು ವಿನಾಯಿತಿಗಳನ್ನು ನೀಡಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ ಅನ್ವಯ ಜೂನ್ 8 ರಿಂದ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಜೂನ್ 1ಕ್ಕೆ ದೇವಾಲಯ ತೆರೆಯಲು ದೇವಾಲಯಗಳ ಸಿಬ್ಬಂದಿ ಸಿದ್ಧವಾಗಿದ್ದರು. ದೇವಸ್ಥಾನಗಳನ್ನ ಸ್ವಚ್ಛ ಮಾಡಿ ಅರ್ಚಕರು ಕೂಡ ಸಿದ್ಧರಾಗಿದ್ದರು. ಆದರೆ ಜೂನ್ 1 …
Read More »Yearly Archives: 2020
ಲಾಕ್‍ಡೌನ್ 5.0 ನ ಮಾರ್ಗಸೂಚಿ……………
ನವದೆಹಲಿ: ಲಾಕ್‍ಡೌನ್ 4.0 ಪೂರ್ಣಗೊಳ್ಳುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಲಾಕ್‍ಡೌನ್ 5.0 ನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜೂನ್ 30ರವರೆಗೆ ಲಾಕ್‍ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರಮುಖವಾಗಿ ಜೂನ್ 2ರಿಂದ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಮತಿ ನೀಡಲಾಗುತ್ತಿದೆ. ಅಲ್ಲದೆ ರಾತ್ರಿ 9 ರಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕರ್ಫ್ಯೂ ವಿಧಿಸಿದೆ. ಚಿತ್ರಪ್ರದರ್ಶನ ನಿಷೇಧವನ್ನು ಮುಂದುವರಿಸಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಠಿಣ …
Read More »ಸಂಬಳ ನೀಡದೆ ಕೊರೊನಾ ವಾರಿಯರ್ಸ್‍ಗೆ ಸರ್ಕಾರ ಅವಮಾನಿಸಿದೆ: ಯು.ಟಿ.ಖಾದರ್
ಮಂಗಳೂರು: ವೈದ್ಯರು ಹಾಗೂ ನರ್ಸ್ ಗಳಿಗೆ ಎರಡು ತಿಂಗಳಿನಿಂದ ಸಂಬಳ ಆಗಿಲ್ಲ. ಕೊರೊನಾ ಸಂದರ್ಭದಲ್ಲೇ ವೇತನ ನೀಡದೆ ಸತಾಯಿಸಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವಾರಿಯರ್ಸ್‍ಗೆ ಸಂಬಳ ನೀಡದೆ ಸರ್ಕಾರ ನಿರ್ಲಕ್ಷಿಸಿದೆ. ವಾರಿಯರ್‍ಗಳಿಗೇ ಸಂಬಳ ನೀಡಿಲ್ಲ ಎಂದಮೇಲೆ ರಾಜ್ಯದಲ್ಲಿ ಕೊರೋನಾ ರೋಗಿಗಳ ಸ್ಥಿತಿ ಹೇಗಿರಬೇಡ ಎಂದು ಪ್ರಶ್ನಿಸಿದ ಅವರು, ತಕ್ಷಣ ಸಂಬಳ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ನ್ಯಾಷನಲ್ ಹೆಲ್ತ್ …
Read More »ನವದೆಹಲಿ: ಜೂನ್ 30ರವರೆಗೆ ಲಾಕ್‍ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಅದೇಶ ಹೊರಡಿಸಿದೆ.
ನವದೆಹಲಿ :ಲಾಕ್‍ಡೌನ್ 4.0 ಪೂರ್ಣಗೊಳ್ಳುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಲಾಕ್‍ಡೌನ್ 5.0ನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ ಜೂನ್ 2ರಿಂದ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಮತಿ ನೀಡಲಾಗುತ್ತಿದೆ. ಅಲ್ಲದೆ ರಾತ್ರಿ 9ರಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕಫ್ರ್ಯೂ ವಿಧಿಸಿದೆ. ಚಿತ್ರಪ್ರದರ್ಶನ ನಿಷೇಧವನ್ನು ಮುಂದುವರಿಸಿದೆ. ಆಯಾ ನಗರಗಳ ಪರಿಸ್ಥಿತಿ ಆಧರಿಸಿ ಮೆಟ್ರೋ ರೈಲುಗಳ ಸಂಚಾರ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡಿದೆ. ಏನಿರುತ್ತೆ? > …
Read More »ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್.ಸಂತೋಷ್ ನೇಮಕ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್.ಸಂತೋಷ್ ಅವರನ್ನು ನೇಮಕ ಮಾಡಲಿದೆ. ಈ ಸಂಬಂಧ ರಾಜ್ಯ ಸರ್ಕಾರದದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದ ಎನ್.ಆರ್.ಸಂತೋಷ್ ಸಿಎಂ ಯಡಿಯೂರಪ್ಪ ಅವರ ಆಪ್ತರಾಗಿದ್ದಾರೆ. ಅದರಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬಿಳಿಸುವಲ್ಲಿ ಸಂತೋಷ್ ಪ್ರಮುಖ ಪಾತ್ರವಹಿಸಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿನ ಅತೃಪ್ತ ಶಾಸಕರನ್ನು ಸಂಪರ್ಕಿಸಿದ್ದ ಬಿಜೆಪಿಯ ನಾಯಕರು, 16 ಅತೃಪ್ತ ಶಾಸಕರನ್ನು ಸೆಳೆದು ಶಾಸಕ …
Read More »ಜಾರಕಿಹೊಳಿಗೆ ಗಾಳಿಯಲ್ಲಿ ಮಾತಾಡುವ ಚಾಳಿ ಇದೆ: ಈಶ್ವರ್ ಖಂಡ್ರೆ……..
ಕೊಪ್ಪಳ: ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಗಾಳಿಯಲ್ಲಿ ಮಾತಾಡುವ ಚಾಳಿ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದಾರೆ. ಇಂದು ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರ್ ಖಂಡ್ರೆ, ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ್ರು. ಬಿಜೆಪಿಗೆ ಹೋಗಿ ರಮೇಶ್ ಜಾರಕಿಹೊಳಿ ಸುಖವಾಗಿದ್ದಾರೆ ಅಂತ ಆತ್ಮಸಾಕ್ಷಿಯಾಗಿ ಹೇಳಲಿ ಎಂದು ಸವಾಲ್ ಹಾಕಿದರು. ಬಿಜೆಪಿಯ ಹಿರಿಯ ನಾಯಕ, ಶಾಸಕ ಉಮೇಶ್ …
Read More »ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಕ್ರಿಯರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು
ಬೆಳಗಾವಿ: ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಕ್ರಿಯರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ನೂತನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾಗಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆಗಾಗಿ ನೂತನ ಕಚೇರಿಯಲ್ಲಿ ಸದಾ ಸಮಾರಂಭಗಳನ್ನು ನಡೆಸುವಂತೆ ಈ ಹಿಂದೆಯೇ ಹೇಳಿರುವೆ, ಬೆಳಗಾವಿಯಲ್ಲಿ 20 ಘಟಕಗಳಿದ್ದು, ಹೊಸ ಹೊಸ ವಿಚಾರಗಳನ್ನು ಹಂಚಿಕೊಳ್ಳಬೇಕು. ಪಕ್ಷ …
Read More »ಶನಿವಾರದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆ
ಬೆಳಗಾವಿ- ಬೆಳಗಾವಿಯಲ್ಲಿ ಮುಂಬಯಿ ನಂಜು ಏರುತ್ತಲೇ ಇದೆ.ಬೆಳಗಾವಿ ಜಿಲ್ಲೆಯಲ್ಲಿ ಶನಿವಾರದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಬೆಳಗಾವಿ ತಾಲ್ಲೂಕಿನ ತುರಮರಿ ಗ್ರಾಮದ 30 ವರ್ಷದ ಮಹಿಳೆಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ. ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 147 ಕ್ಕೆ ಏರಿದರೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 149 ಕ್ಕೆ ಏರಿದಂತಾಗಿದೆ. ಬೆಳಗಾವಿ …
Read More »ಬಿಜೆಪಿ ಸರ್ಕಾರ ಬರಿ ಜನರನ್ನ ಮರಳು ಮಾಡೋ ಕೆಲಸ ಮಾಡುತ್ತೆ ಅವರು ಬರಿ ಘೋಷಣೆ ಮಾತ್ರ ಮಾಡ್ತಾರೆ
ಬಿಜೆಪಿ ಸರ್ಕಾರ ಬರಿ ಜನರನ್ನ ಮರಳು ಮಾಡೋ ಕೆಲಸ ಮಾಡುತ್ತೆ ಅವರು ಬರಿ ಘೋಷಣೆ ಮಾತ್ರ ಮಾಡ್ತಾರೆ , ಕೇಂದ್ರ ಸರ್ಕಾರ ಆಗಿರಬಹುದು ಅಥವಾ ರಾಜ್ಯ ಸರ್ಕಾರ ಆಗಿರಬಹುದು ಬರಿ ಘೋಷಣೆ ಗಳನ್ನೆ ಮಾಡಿಕೊಂಡು ಇದೆ , ಹಾಗೆ ಬಿಜೆಪಿ ಸರ್ಕಾರ ಜನರ ಪರವಾಗಿ ಇರೋ ಅಂಥ ಸರ್ಕಾರ ಅಲ್ಲ ಅವರು ಬರ್ರಿ ತಮ್ಮ ಪಕ್ಷ ಸಂಘಟನೆ ಗಳನ್ನ ಮಾಡಿಕೊಂಡು ಇರೋರು ಜನರ ಸಮಸ್ಯೆ ಗಳ ಬಗ್ಗೆ ಅವರಿಗೆ ಕಾಳಜಿ …
Read More »ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತ:ಗೃಹಸಚಿವ ಬಸವರಾಜ ಬೊಮ್ಮಾಯಿ
ಬೆಳಗಾವಿ, ಮೇ 30(ಕರ್ನಾಟಕ ವಾರ್ತೆ): ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಜನರಲ್ಲಿ ಅತೀ ಹೆಚ್ಚು ಸೋಂಕು ಕಂಡುಬಂದಿದೆ. ಇದು ಇನ್ನೂ ಹೆಚ್ಚಳವಾಗುತ್ತಿದೆ. ಆದ್ದರಿಂದ ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇ-ಪಾಸ್ ಇಲ್ಲದೇ ಬರುತ್ತಿರುವವರನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರ್ಕಾರದ ಮಾರ್ಗಸೂಚಿ ಪ್ರಕರ ಎಲ್ಲರನ್ನೂ ತಪಾಸಣೆ ನಡೆಸಿ ಅಗತ್ಯವಿದ್ದರೆ ಕ್ವಾರಂಟೈನ್ ಮಾಡಬೇಕು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಕುಗನೊಳ್ಳಿ …
Read More »