ಕೋಲಾರ: ಕೊರೊನಾ ಸೋಂಕು ಹರಡದಂತೆ ಹಗಲಿರುಳು ರಾಜ್ಯದ ಗಡಿಯಲ್ಲಿ ಕಾಯುವ ಕೊರೊನಾ ವಾರಿಯರ್ಸ್‍ಗೆ ಭಯ, ಆತಂಕ ಎದುರಾಗಿದೆ. ಗಡಿ ಜಿಲ್ಲೆ ಕೋಲಾರಕ್ಕೆ ನೆರೆ ಯ ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಕಂಟಕವಾಗಿದ್ದು, ಕೊರೊನಾ ವಾರಿಯರ್ಸ್‍ಗೆ ಯಾವುದೇ ಸುರಕ್ಷತೆ ಇಲ್ಲದಂತಾಗಿದೆ. ಆಂಧ್ರ ಹಾಗೂ ತಮಿಳುನಾಡು ಗಡಿಯಲ್ಲಿ ಹಗಲಿರುಳು ಕೆಲಸ ಮಾಡುವ ಸಿಬ್ಬಂದಿಗೆ ಸುರಕ್ಷತೆ ಇಲ್ಲದಂತಾಗಿದೆ. ಸಿಬ್ಬಂದಿ ಮಾಸ್ಕ್ ಮಾತ್ರ ಧರಿಸಿ ಕೆಲಸ ಮಾಡುತ್ತಿದ್ದು, ಹ್ಯಾಂಡ್ ಗ್ಲೌಸ್, ಪಿಪಿಇ ಕಿಟ್ ಇಲ್ಲದೆ ಭಯದಲ್ಲೇ …
Read More »Yearly Archives: 2020
ಗುಣ ಲಕ್ಷಣಗಳೇ ಇಲ್ಲದಿರೋ ಸೋಂಕಿತರಿಂದ ಕೊರೊನಾಘಾತ……….
ಕೋಲಾರ: ವಿಶ್ವದಾದ್ಯಂತ ಕೊರೊನಾ ಮಹಾಮಾರಿ ಜನರನ್ನು ಕಾಡುತ್ತಾ ಲಕ್ಷಾಂತರ ಜನರನ್ನು ಬಲಿ ಪಡೆದಿದೆ. ಆದರೆ ಜಿಲ್ಲೆಯ ಸೋಂಕಿತರಲ್ಲಿ ಕೊರೊನಾ ಲಕ್ಷಣಗಳೇ ಇಲ್ಲದಿರುವುದು ಆರೋಗ್ಯ ಇಲಾಖೆಗೆ ಹೊಸ ತಲೆ ನೋವಾಗಿ ಪರಿಣಮಿಸಿದೆ. ವಿಶ್ವದೆಲ್ಲೆಡೆ ಕೊರೊನಾ ಸೋಂಕಿತರು ಹಲವು ರೋಗ ಲಕ್ಷಣಗಳಿಂದ ನರಳುತ್ತಿದ್ದರೆ ಜಿಲ್ಲೆಯಲ್ಲಿ ಸದ್ಯ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರು ವಿಭಿನ್ನವಾಗಿ ಕಂಡು ಬಂದಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಒಟ್ಟು 18 ಮಂದಿ ಕೊರೊನಾ ಸೋಂಕಿತರಿದ್ದು, ಯಾರೊಬ್ಬರಲ್ಲೂ ಕೂಡಾ ಸಣ್ಣ ಪ್ರಮಾಣದಲ್ಲೂ ಕೊರೊನಾ ಸೋಂಕಿನ …
Read More »ಅಭಿಷೇಕ್ ಮುಂದಿನ ಸಿನಿಮಾಗೆ ಸೂರಿ ಆ್ಯಕ್ಷನ್ ಕಟ್?
ಬೆಂಗಳೂರು: ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಒಂದೊಳ್ಳೆ ಬ್ರೇಕ್‍ಗಾಗಿ ಎದುರು ನೋಡುತ್ತಿದ್ದು, ಉತ್ತಮ ಕಥೆಗಾಗಿ ತಾಳ್ಮೆಯಿಂದ ಕಾಯುತ್ತಿದ್ದಾರೆ. ಹೀಗಿರುವಾಗಲೇ ಇದೀಗ ಚಂದನವನದ ಖ್ಯಾತ ನಿರ್ದೇಶಕರೊಬ್ಬರು ಅಭಿಷೇಕ್ ಹೊಸ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಮೂಲಕ ಒಂದೊಳ್ಳೆ ಸಿನಿಮಾ ಮಾಡಲು ಅಭಿ ಕಾಯುತ್ತಿದ್ದಾರೆ ಎನ್ನಲಾಗಿದೆ. ಅಭಿಷೇಕ್ ಸ್ಯಾಂಡಲ್‍ವುಡ್‍ನಲ್ಲಿ ಬೆಳೆಯಬೇಕು ಎಂಬುದು ಅಂಬರೀಶ್ ಅವರ ಮಹದಾಸೆಯಾಗಿತ್ತು. ಹೀಗಾಗಿಯೇ ಅಮರ್ ಸಿನಿಮಾಕ್ಕೆ ಸ್ವತಃ ಅವರೇ ಮಹೂರ್ತ ಮಾಡಿದ್ದರು. …
Read More »ಉದ್ಯಾನ ನಗರಿಯಲ್ಲಿ ಸುರಿದ ಮಳೆಗೆ ಮಹಿಳೆ ಸಾವನ್ನಪ್ಪಿದ್ದಾರೆ……..
ಬೆಂಗಳೂರು: ಸಂಜೆ ಉದ್ಯಾನ ನಗರಿಯಲ್ಲಿ ಸುರಿದ ಮಳೆಗೆ ಮಹಿಳೆ ಸಾವನ್ನಪ್ಪಿದ್ದಾರೆ. 22 ವರ್ಷದ ಶಿಲ್ಪಾ ಸಾವನ್ನಪ್ಪಿದ ಮಹಿಳೆ. ಮಳೆಯ ಅಬ್ಬರಕ್ಕೆ ನಿರ್ಮಾಣ ಹಂತದ ಕಟ್ಟಡದ ಇಟ್ಟಿಗೆ, ಕಲ್ಲುಗಳು ಪಕ್ಕದ ಮನೆಯ ಮೇಲೆ ಬಿದ್ದಿವೆ. ಪರಿಣಾಮ ಮನೆಯಲ್ಲಿದ್ದ ಶಿಲ್ಪಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಧನುಷ್ ಎಂಬ ಹುಡುಗ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಮೆಜೆಸ್ಟಿಕ್, ಮಲ್ಲೇಶ್ವರಂ, ಯಶವಂತಪುರ, ನಾಗರಭಾವಿ, ಪೀಣ್ಯ, ಯಲಹಂಕ, ಹೆಬ್ಬಾಳ, ನಾಗವಾರ, ಕೆ.ಆರ್.ಪುರಂ, ಜಯನಗರ, ಜೆಪಿನಗರ, …
Read More »ಕೊರೊನಾ ವೈರಸ್’ ಸಿನಿಮಾ ಟ್ರೇಲರ್‌ನೊಂದಿಗೆ ಭಯ ಹುಟ್ಟಿಸುತ್ತಿರೋ ಆರ್‌ಜಿವಿ
ಹೈದರಾಬಾದ್: ಸದಾ ಒಂದಿಲ್ಲೊಂದು ವಿವಾದದ ಮೂಲಕ ಸುದ್ದಿಯಲ್ಲಿರುವ ನಿರ್ದೇಶಕ ರಾಮ್‍ಗೋಪಾಲ್ ವರ್ಮಾ (ಆರ್‌ಜಿವಿ) ಸಮಾಜದಲ್ಲಿ ಟ್ರೆಂಡಿಂಗ್‍ನಲ್ಲಿರುವ ವಿಚಾರಗಳೊಂದಿಗೆ ಸಿನಿಮಾ ಮಾಡಿ ಹಲವು ಬಾರಿ ಗೆಲುವು ಪಡೆದಿದ್ದಾರೆ. ಸದ್ಯ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ವೈರಸ್ ಕುರಿತು ರಾಮ್‍ಗೋಪಾಲ್ ವರ್ಮಾ ಫೀಚರ್ ಫಿಲ್ಮ್ ಮಾಡಿರುವುದಾಗಿ ತಿಳಿಸಿದ್ದಾರೆ. ಇಂದು ಆರ್‌ಜಿವಿ ತಮ್ಮ ಹೊಸ ಸಿನಿಮಾ ‘ಕೊರೊನಾ ವೈರಸ್’ ಟ್ರೇಲರನ್ನು ಯೂಟ್ಯೂಬ್‍ನಲ್ಲಿ ಬಿಟುಗಡೆ ಮಾಡಿದ್ದು, 4 ನಿಮಿಷ ಅವಧಿಯ ಟ್ರೇಲರ್ ನೋಡುತ್ತಿದ್ದಂತೆ ಪ್ರೇಕ್ಷಕರಲ್ಲಿ ಭಯ ಹುಟ್ಟಿಸುವಂತಿದೆ. …
Read More »ಕೊರೊನಾ ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಗುಣಮುಖವಾಗಿದ್ದು, ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್
ಬಳ್ಳಾರಿ: ಕೊರೊನಾ ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಗುಣಮುಖವಾಗಿದ್ದು, ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಮತ್ತೋರ್ವ ಗುಣಮುಖನಾದ ಹಿನ್ನೆಲೆ ಕೋವಿಡ್-19 ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಈ ಮೂಲಕ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 16ಕ್ಕೇರಿದೆ. ಪ್ರಸ್ತುತ 20 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಪ್ಲಿಯ ಮಾರುತಿನಗರ ನಿವಾಸಿ 34 ವರ್ಷದ ರೋಗಿ ನಂ.863 ಡಿಸ್ಚಾರ್ಜ್ ಆಗಿದ್ದಾರೆ. ಇವರು ಬೆಂಗಳೂರಿನಿಂದ ಆಗಮಿಸಿದ್ದರು. ಇವರು ಕೇವಲ 16 ದಿನಗಳಲ್ಲಿ ಗುಣಮುಖರಾಗಿ ಬಿಡುಗಡೆಯಾಗುತ್ತಿರುವುದು ಸಂತೋಷ ತಂದಿದೆ ಎಂದು …
Read More »ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ……….
ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿದ್ದ ಅಪ್ರಾಪ್ತೆ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತೆ ಅವಿವಾಹಿತಳಾಗಿದ್ದು, ಉದ್ಯೋಗ ಅರಸಿ ಕುಟುಂಬಸ್ಥರ ಜೊತೆ ಮಹಾರಾಷ್ಟ್ರದ ಮುಂಬೈಗೆ ಹೋಗಿದ್ದಳು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೇ 17ರಂದು ಮಹಾರಾಷ್ಟ್ರದಿಂದ ವಾಪಸ್ ಬಂದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇಂದು ಬೆಳಗ್ಗೆ ಅಪ್ರಾಪ್ತೆ ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಆರೋಗ್ಯಾಧಿಕಾರಿಗಳು ಅಪ್ರಾಪ್ತೆ ಮತ್ತು ಮಗುವನ್ನು ತಾಲೂಕು …
Read More »ರಮೇಶ ಜಾರಕಿಹೊಳಿಯವರ ಪ್ರವಾಸದ ವಿವರ…….ಮೇ.27ರಿಂದ ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ
ಬೆಳಗಾವಿ: ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮೇ.27ರಿಂದ ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮೇ.27ರಂದು ಬೆಳಿಗ್ಗೆ9.30ಕ್ಕೆ ಗೋಕಾಕ್ ನಿರ್ಗಮನ, 10.30ಕ್ಕೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಆಹ್ವಾಲ ಸ್ವೀಕಾರ, ಮಧ್ಯಾಹ್ನ 2 ಗಂಟೆಗೆ ಬೆಳಗಾವಿಯಿಂದ ಮೈಸೂರಿಗೆ ತೆರಳಿ ವಾಸವ್ಯ. ಮೇ .28ರಂದು ಬೆಳಿಗ್ಗೆ 8ಗಂಟೆಗೆ ಸುತ್ತೂರು ಮಹಾಸಂಸ್ಥಾನದ ಸ್ವಾಮಿಜೀಯೊಂದಿಗೆ ಮಾತುಕತೆ, 9 ಗಂಟಗೆ ಗಣಪತಿ ಸಚ್ಛಿದಾನಂದ ಆಶ್ರಮಕ್ಕೆ ಭೇಟಿ, 11.30ಕ್ಕೆ ಮೈಸೂರಿಂದ …
Read More »ಷರತ್ತು ವಿಧಿಸಿ ಜೂನ್ 1 ರಿಂದ ಮಾಲ್, ಹೋಟೆಲ್‍ಗಳಿಗೆ ಅನುಮತಿ ಸಾಧ್ಯತೆ
ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ಮುಚ್ಚಲ್ಪಟ್ಟಿದ್ದ ಮಾಲ್, ಹೋಟೆಲ್‍ಗಳು ಜೂನ್ ಒಂದರಿಂದ ತೆರೆಯುವ ಸಾಧ್ಯತೆ ಹೆಚ್ಚಾಗಿದೆ. ಇಂದು ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಮುಜರಾಯಿ ಇಲಾಖೆಯ ದೇವಾಲಯಗಳಿಗೆ ಅನುಮತಿ ನೀಡಿದ ಬೆನ್ನಲ್ಲೇ ಮಾಲ್ ಮತ್ತು ಹೋಟೆಲ್ ಗಳು ಎಂದಿನಂತೆ ವ್ಯಾಪಾರ ನಡೆಸಲು ಷರತ್ತು ವಿಧಿಸಿ ಅನುಮತಿ ನೀಡುವ ಸಾಧ್ಯತೆ ಹೆಚ್ಚಿದೆ. ಮಾಲ್ `ಫ್ರೀ’ ಆಗಲು ಷರತ್ತು ಅನ್ವಯ: ಜೂನ್ ಒಂದರಿಂದ ಶಾಪಿಂಗ್ ಮಾಲ್ ತೆರೆಯಲು ಅನುಮತಿ ಸಿಕ್ಕಿದರೂ ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ …
Read More »ಲಾಕ್‍ಡೌನ್ ಸಂದರ್ಭದಲ್ಲಿ ಪ್ರಯಾಣಿಕರ ಲಭ್ಯತೆ ಮೇಲೆ ರಾತ್ರಿ ಬಸ್ ಓಡಿಸಲು ನಿರ್ಧಾರ:ಲಕ್ಷ್ಮಣ ಸವದಿ
ಹುಬ್ಬಳ್ಳಿ: ಲಾಕ್‍ಡೌನ್ ಸಂದರ್ಭದಲ್ಲಿ ಪ್ರಯಾಣಿಕರ ಲಭ್ಯತೆ ಮೇಲೆ ರಾತ್ರಿ ಬಸ್ ಓಡಿಸಲು ನಿರ್ಧಾರ ಕೈಗೊಳ್ಳಲಾಗಿದೆ. ದೂರದ ಜಿಲ್ಲೆಗಳಿಗೆ ರಾತ್ರಿ ಬಸ್ ಸಂಚಾರ ಆರಂಭವಾಗಿದ್ದು, ಸದ್ಯಕ್ಕೆ ಬಸ್ ದರ ಹೆಚ್ಚಳ ಮಾಡುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಸಿದರು. ನಗರದಲ್ಲಿ ಇಂದು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‍ಡೌನ್‍ನಿಂದಾಗಿ ಇಲ್ಲಿಯವರೆಗೆ 1,800 ಕೋಟಿ ರೂ. ಹಾನಿಯಾಗಿದೆ. ನಾಲ್ಕು …
Read More »