Breaking News

Yearly Archives: 2020

ಕ್ವಾರಂಟೈನ್ ಕೇಂದ್ರದ ಬಳಿ ಬ್ರೆಡ್, ಮೊಟ್ಟೆ ಮಾರಾಟ: ಓಡಿ ಬಂದ ಜನ

ರಾಯಚೂರು: ನಗರದ ಹೊರವಲಯದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದ ಜನ ಆಹಾರ ಪದಾರ್ಥಗಳಿಗಾಗಿ ಹೊರಬರುತ್ತಿದ್ದಾರೆ. ಬ್ರೆಡ್, ಮೊಟ್ಟೆ ಹಾಗೂ ತಿನಿಸು ಪದಾರ್ಥಗಳ ಖರೀದಿಸಲು ಕ್ವಾರಂಟೈನ್ ಕೇಂದ್ರದಿಂದ ಜನ ಹೊರಬರುತ್ತಿದ್ದಾರೆ. ಕ್ವಾರಂಟೈನ್ ಕೇಂದ್ರದ ಮುಂದೆಯೇ ವ್ಯಾಪಾರಿಗಳು ಬ್ರೆಡ್ ಸೇರಿ ಇತರೆ ಆಹಾರ ಪದಾರ್ಥಗಳನ್ನ ತಂದು ಮಾರಾಟ ಮಾಡುತ್ತಿದ್ದಾರೆ. ಆಂಧ್ರಪ್ರದೇಶ, ತೆಲಂಗಾಣದಿಂದ ಬಂದವರಿಗಾಗಿ ಮಾಡಿರುವ ಕ್ವಾರಂಟೈನ್ ಕೇಂದ್ರದಲ್ಲಿ ಜನರ ಓಡಾಟಕ್ಕೆ ಯಾವುದೇ ನಿರ್ಭಂದವಿಲ್ಲದಂತಾಗಿದೆ. ಕಾವಲಿಗೆ ಪೊಲೀಸರು ಇದ್ದರೂ ಕ್ವಾರಂಟೈನ್ ಕೇಂದ್ರದ ಗೇಟ್ …

Read More »

ಮೇ 29ರೊಳಗೆ SSLC ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ………

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಬಯಸಿದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವ್ಯಾಸಂಗ ಮಾಡುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕರನ್ನು ದೂರವಾಣಿಯ ಮೂಲಕ ಸಂಪರ್ಕಿಸಿ ತಾವು ಸದ್ಯ ವಾಸ ಮಾಡುತ್ತಿರುವ ಮನೆಯ ಹತ್ತಿರದ ಪರೀಕ್ಷಾ ಕೇಂದ್ರವನ್ನು ಗುರುತಿಸಿ ಮುಖ್ಯ ಶಿಕ್ಷಕರ ಲಾಗಿನ್ ಮೂಲಕ ಬದಲಿಸಿಕೊಳ್ಳಬಹುದು. ಪರೀಕ್ಷಾ ಕೇಂದ್ರ ಬದಲಾವಣೆಗೆ ಮೇ 29ರವರೆಗೆ ಅವಕಾಶ ನೀಡಲಾಗಿದೆ. ಬದಲಾವಣೆ ಮಾಡಿಕೊಳ್ಳದಿದ್ದರೆ ಮೂಲ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು. …

Read More »

ರಸ್ತೆಯುದ್ದಕ್ಕೂ ಕೊರೊನಾ ವಾರಿಯರ್ಸ್‍ಗೆ ಪುಷ್ಪವೃಷ್ಟಿ……….

ನೆಲಮಂಗಲ: ಕೋವಿಡ್-19 ವಿರುದ್ಧ ಪ್ರತಿನಿತ್ಯ ಹೋರಾಟ ನಡೆಸುತ್ತಿರುವ, ಕೊರೊನಾ ವಾರಿಯರ್ಸ್ ಗೆ ಜನರಿಂದ ಪುಷ್ಪವೃಷ್ಟಿ ನಡೆಸಲಾಯಿತು. ಸಿಎಂ ರಾಜಕೀಯ ಕಾರ್ಯದರ್ಶಿ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ಪುಷ್ಪವೃಷ್ಟಿ ನಡೆದಿದೆ. ಈ ವೇಳೆ ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಿದರು. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಸ್ತೆಯುದ್ದಕ್ಕೂ ಹೂವಿನ ಸುರಿಮಳೆಗೈದ ಸಾರ್ವಜನಿಕರು ಕರೋನ ವಾರಿಯರ್ಸ್ ಗೆ ಸಲಾಂ …

Read More »

ರಾಜ್ಯಾದ್ಯಂತ ಭಾನುವಾರ ಕರ್ಫ್ಯೂ – ಏನಿರುತ್ತೆ? ಏನಿರಲ್ಲ?

ಬೆಂಗಳೂರು: ಸರ್ಕಾರ ಮೇ 31 ರವರೆಗೆ ಪ್ರತೀ ಭಾನುವಾರ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್‍ಡೌನ್‍ಗೆ ಆದೇಶ ನೀಡಿದೆ. 4.0 ವಿನಾಯಿತಿ ಲಾಕ್‍ಡೌನ್‍ನ ನಡುವೆ ಮೊದಲ ಭಾನುವಾರ ಬಂದಿದ್ದು, ಇಂದು ಸಂಜೆಯಿಂದಲೇ ಕರ್ಫ್ಯೂ ಜಾರಿಯಲ್ಲಿರುತ್ತದೆ. ಜನರು ಮನೆಯಿಂದ ಹೊರಗೆ ಬಾರದಂತೆ ತಡೆಯಲು ಪೊಲೀಸ್ ಇಲಾಖೆ ನಿಯಮಗಳನ್ನು ರೂಪಿಸಿಕೊಂಡಿದೆ. ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಸಂಪೂರ್ಣ ಲಾಕ್‍ಡೌನ್ ಇರಲಿದೆ. ಹಾಗಾದರೆ ಭಾನುವಾರ ರಾಜ್ಯದಲ್ಲಿ …

Read More »

ಚಿಕನ್ ಊಟ ಕೊಟ್ಟಿಲ್ಲವೆಂದು ಆಶಾಕಾರ್ಯಕರ್ತೆಯ ಕೈ ಮುರಿದ ಭೂಪ!

ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿಯೊಬ್ಬ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದಲ್ಲಿ ನಡೆದಿದೆ. ರೇಣುಕಾ ಕುಡಕಿ ಗಾಯಗೊಂಡ ಆಶಾ ಕಾರ್ಯಕರ್ತೆಯಾಗಿದ್ದು ಇವರ ಮೇಲೆ ಸೋಮನಾಥ್ ಕಾಂಬಳೆ ಹಲ್ಲೆ ಮಾಡಿದ್ದಾನೆ. ಚಿಕನ್ ಊಟ ಕೊಡದಿದ್ದಕ್ಕೆ ಸಿಟ್ಟಿಗೆದ್ದ ಸೋಮನಾಥ್, ಆಶಾ ಕಾರ್ಯಕರ್ತೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪರಿಣಾಮ ರೇಣುಕಾ ಅವರ ಕೈ ಮುರಿದು ಆಳಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. …

Read More »

ಕ್ವಾರಂಟೈನ್‍ಗೆ ಹೆದರಿ ವಿಷ ಸೇವಿಸಿದ್ದ ವ್ಯಕ್ತಿ ಸಾವು

ಬಾಗಲಕೋಟೆ: ಕ್ವಾರಂಟೈನ್‍ಗೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತನನ್ನು ತುಕಾರಾಮ ಪವಾರ್ (40) ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಯಾದಗಿರಿ ಜಿಲ್ಲೆ ಜುಮಲಾಪುರ ತಾಂಡಾದವರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿಕ್ಕೂರು ಗ್ರಾಮದಲ್ಲಿ ಮೆ 16 ರಂದು ತುಕರಾಮ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೇ15 ರಂದು ಮಹಾರಾಷ್ಟ್ರದ ರತ್ನಗಿರಿಯಿಂದ ತುಕರಾಮ ಊರಿಗೆ ಬಂದಿದ್ದರು. ಮೇ 16ರ ಬೆಳಗ್ಗೆ ವಿಷಯ ತಿಳಿದು ಆಶಾ ಕಾರ್ಯಕರ್ತೆಯರು, ಪಂಚಾಯ್ತಿಯವರು …

Read More »

ಧಾರವಾಡದಲ್ಲಿ ಇಂದು ಭಾರೀ ಗಾಳಿ ಹಾಗೂ ಮಳೆಯಾಗಿದ್ದು, ಹಲವು ಅವಾಂತರ ಸೃಷ್ಟಿಸಿದೆ.

ಧಾರವಾಡ: ಧಾರವಾಡದಲ್ಲಿ ಇಂದು ಭಾರೀ ಗಾಳಿ ಹಾಗೂ ಮಳೆಯಾಗಿದ್ದು, ಹಲವು ಅವಾಂತರ ಸೃಷ್ಟಿಸಿದೆ. ವರುಣನ ಅಬ್ಬರಕ್ಕೆ ನಗರದ ವಿವಿಧೆಡೆ ಮರಗಳು ಧರೆಗುರುಳಿದ್ದು, ಮರಗಳಡಿ ವಾಹನಗಳು ಸಿಲುಕಿ ಜಖಂ ಆಗಿವೆ. ನಗರದ ಸೈದಾಪುರ ಗೌಡರ ಓಣಿಯಲ್ಲಿ ಮನೆ ಮೇಲೆ ಮರ ಬಿದ್ದಿದ್ದು, ಸಿಬಿಟಿ ಬಳಿಯ ಅಂಜುಮನ್ ಕಾಂಪ್ಲೆಕ್ಸ್ ಎದುರು ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ರಸ್ತೆ ಸಂಚಾರಕ್ಕೆ ಅಡೆತಡೆಯಾಯಿತು. ನಗರದ ಟೊಲ್ ನಾಕಾ ರಸ್ತೆ ಮಳೆಯಿಂದ ಹಳ್ಳದಂತಾಗಿತ್ತು. ತುಂಬಿ ಹರಿಯುತ್ತಿರುವ ನೀರಿನಲ್ಲಿ …

Read More »

ದಕ್ಷಿಣ ಕನ್ನಡ, ಉಡುಪಿಯಲ್ಲಿ ರವಿವಾರ ರಂಜಾನ್ ಹಬ್ಬ……….

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ರಂಜಾನ್ ಆಚರಿಸುವಂತೆ ಖಾಝಿಗಳು ಕರೆ ನೀಡಿದ್ದಾರೆ. ಮಂಗಳೂರಿನ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿಯ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ತಮ್ಮ ಜಿಲ್ಲೆಯ ಜನತೆಗೆ ಭಾನುವಾರ ಆಚರಿಸುವಂತೆ ಹೇಳಿದ್ದಾರೆ. ಇಂದು ರಾತ್ರಿ ಪ್ರಥಮ ಚಂದ್ರ ದರ್ಶನ ಎಲ್ಲೂ ಆಗಿಲ್ಲ. ಸಾಂದರ್ಭಿಕ ಚಿತ್ರ ಭಾನುವಾರವೇ ಈದುಲ್ ಫಿತ್ರ ಆಚರಿಸುವ ಸಾಧ್ಯತೆಗಳು ಹೆಚ್ಚಿದ್ದು, ಆದ್ರೆ ಸರ್ಕಾರ ಪ್ರತಿ ರವಿವಾರ ಸಂಪೂರ್ಣ ಲಾಕ್‍ಡೌನ್ …

Read More »

ಕೋಲಾರದ ಚಿನ್ನದ ಕಳ್ಳನಿಗೂ ಕೊರೊನಾ- ಬಂಧಿಸಿದ ಪೊಲೀಸರಿಗೂ ಸೋಂಕಿನ ಭೀತಿ…..

ಕೋಲಾರ: ಚಿನ್ನದ ಕಳ್ಳರು ನೂರಾರು ಅಡಿ ಆಳದ ಗಣಿ ಪ್ರದೇಶದಲ್ಲಿ ಸಿಲುಕಿ ಭಾರೀ ಸುದ್ದಿಯಾಗಿದ್ದರು. ಗಣಿಗೆ ಇಳಿದಿದ್ದ ಐವರಲ್ಲಿ ಇಬ್ಬರು ಮಣ್ಣಾದರೆ, ಮತ್ತೋರ್ವನ ಶವ ಪಾತಾಳ ಸೇರಿದೆ. ಇದೀಗ ಗಣಿಯಿಂದ ಪಾರಾಗಿ ಬಂದ ಕಳ್ಳನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೆಜಿಎಫ್ ಚಿನ್ನದ ಗಣಿಯಲ್ಲಿ ಕಳ್ಳತನಕ್ಕೆ ಇಳಿದ 5 ಜನರಲ್ಲಿ 3 ಜನ ಮೃತಪಟ್ಟರೆ, ಮತ್ತೊಬ್ಬನಿಗೆ ಕೊರೊನಾ ವಕ್ಕರಿಸಿದೆ. ಕೋಲಾರದ ಕೆಜಿಎಫ್ ನಲ್ಲಿ ಮೇ-13 ರಂದು ರಾತ್ರಿ ಕೆಜಿಎಫ್ ನಗರದ …

Read More »

ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ

ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 152 ಮಂದಿ ಅನಿವಾಸಿ ಭಾರತೀಯರು ಶುಕ್ರವಾರ ಸಂಜೆ 6.50ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಟ್ಟು 152 ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ …

Read More »