Breaking News

Yearly Archives: 2020

ಮಹಾರಾಷ್ಟ್ರದಿಂದ ವಲಸೆ ಕಾರ್ಮಿಕರು ಬಂದರೂ ಕ್ವಾರಂಟೈನ್ ಮಾಡದ ಜಿಲ್ಲಾಡಳಿತ

ಕೊಪ್ಪಳ: ದೇಶದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಿಂದ ನಾಲ್ವರು ಕಾರ್ಮಿಕರು ರಾಜ್ಯಕ್ಕೆ ವಲಸೆ ಬಂದರೂ ಅವರನ್ನು ಕ್ವಾರಂಟೈನ್ ಮಾಡದೆ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಸೋಮವಾರ ಸಂಜೆ 6ಕ್ಕೆ ಮಹಾರಾಷ್ಟ್ರದಿಂದ ಕೊಪ್ಪಳಕ್ಕೆ ಆಗಮಿಸಿದ್ದು, ಇದುವರೆಗೂ ಕಾರ್ಮಿಕರನ್ನು ಕ್ವಾರಂಟೈನ್ ಮಾಡಿಲ್ಲ. ಕೊಪ್ಪಳ ಜಿಲ್ಲೆಯ ನಾಲ್ವರು ಕಾರ್ಮಿಕರು ಸಹ ಬೇಕರಿಯಲ್ಲಿ ಕೆಲಸ ಮಾಡುವವರಾಗಿದ್ದು, ಮಾಹಾರಾಷ್ಟ್ರದ ಖೇಡ್ ನಿಂದ ಆಗಮಿಸಿದ್ದಾರೆ. ಸೋಮವಾರ ಸಂಜೆಯಿಂದ ಕೊಪ್ಪಳ …

Read More »

ಸೋಂಕಿತರ ಸಂಪರ್ಕದಲ್ಲಿದ್ದವರ ಪತ್ತೆಗಾಗಿ ರಾಯಚೂರು ಸಂಪೂರ್ಣ ಲಾಕ್‍ಡೌನ್……….

ರಾಯಚೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹೊಸ ಲಾಕ್‍ಡೌನ್ ನಿಂದ ಸಂಪೂರ್ಣ ಸಡಿಲಿಕೆ ಸಿಕ್ಕಿದ್ರೆ ರಾಯಚೂರಿನಲ್ಲಿ ಇಂದು ಸಂಪೂರ್ಣ ಲಾಕ್ ಡೌನ್ ಇದೆ. ಗ್ರೀನ್ ಝೋನ್‍ನಲ್ಲಿದ್ದ ಜಿಲ್ಲೆಯಲ್ಲಿ ಆರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದರಿಂದ ಒಂದು ದಿನದ ಮಟ್ಟಿಗೆ ಇಡೀ ನಗರವನ್ನ ಬಂದ್ ಮಾಡಲಾಗುತ್ತಿದೆ. ಅಗತ್ಯ ಸೇವೆ ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಲಾಗಿದೆ. ಸರ್ಕಾರಿ ಕಚೇರಿ, ವೈದ್ಯಕೀಯ ಸೇವೆ, ಪೆಟ್ರೋಲ್, ಬ್ಯಾಂಕ್, ಔಷಧಿ ಮಳಿಗೆ ಹೊರತು ಪಡಿಸಿ ಎಲ್ಲವೂ ಒಂದು ದಿನದ ಮಟ್ಟಿಗೆ …

Read More »

ಬೆಳಗಾವಿ: ಕೊರೊನಾ ಲಾಕ್‍ಡೌನ್‍ನಿಂದ ಖತರ್ನಾಕ್ ಗ್ಯಾಂಗ್ ಅರೆಸ್ಟ್…….

ಬೆಳಗಾವಿ: ಕೋಟ್ಯಂತರ ಮೌಲ್ಯದ ಜಮೀನು, ವಿವಿಧ ಬ್ಯಾಂಕ್‍ಗಳಲ್ಲಿದ್ದ ಲಕ್ಷಾಂತರ ರೂ. ಠೇವಣಿ ಹಣದ ಒಡೆಯನನ್ನೇ ಅಪಹರಿಸಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಾಕ್‍ಡೌನ್ ಮುನ್ನ ಕಿಡ್ನಾಪ್ ಮಾಡಿದ್ದ ಖದೀಮರು ಲಾಕ್‍ಡೌನ್ ಸಡಿಲಿಕೆಯಾಗುತ್ತಿದ್ದಂತೆ ಬಾಲ ಬಿಚ್ಚಲು ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ. ಬೆಳಗಾವಿ ನಗರದ ಬಾಂದೂರ್ ಗಲ್ಲಿಯ ನಿವಾಸಿ ಶ್ರೀಕಾಂತ್ ಚೌಗಲೆ ಅವರನ್ನು ಫೆಬ್ರವರಿ ಮೊದಲ ವಾರದಲ್ಲಿ ಕಿಡ್ನಾಪ್ ಮಾಡಲಾಗಿತ್ತು. ನಗರದ ದೇಶಪಾಂಡೆ ಪೆಟ್ರೋಲ್ ಬಂಕ್ ಸಮೀಪದ ಹೋಟೆಲಿಗೆ ಉಪಹಾರ ತರಲು …

Read More »

ಯಾದಗಿರಿಯಲ್ಲಿ ರಸ್ತೆಗಿಳಿಯುತ್ತಿಲ್ಲ ಸರ್ಕಾರಿ ಬಸ್…………

ಯಾದಗಿರಿ: ನಗರದಲ್ಲಿ ಲಾಕ್‍ಡೌನ್ ಮುಂದುವರಿದಿದ್ದು, 144 ಸೆಕ್ಷನ್ ಇನ್ನೂ ಜಾರಿಯಲ್ಲಿರುವ ಕಾರಣ ಇಂದು ಯಾದಗಿರಿಯಲ್ಲಿ ಸರ್ಕಾರಿ ಬಸ್ ಸೇವೆ ಆರಂಭಿಸದಿರಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಹೀಗಾಗಿ ಯಾದಗಿರಿಯಲ್ಲಿ ಸರ್ಕಾರಿ ಬಸ್ ಸೇವೆ ಆರಂಭವಾಗಿಲ್ಲ.   ಬಸ್ ಆರಂಭಿಸಲು ಕೆಎಸ್‍ಆರ್‍ಟಿಸಿ ಯಾವುದೇ ರೀತಿಯ ಸಿದ್ಧತೆ ಮಾಡಿಕೊಂಡಿಲ್ಲ, ಜೊತೆಗೆ ಲಾಕ್‍ಡೌನ್ ಸಮಯದಲ್ಲಿ ವಿಧಿಸಲಾಗಿದ್ದ 144 ಸೆಕ್ಷನ್ ಇನ್ನೂ ಜಾರಿಯಲ್ಲಿರುವ ಕಾರಣ, ಒಂದು ದಿನ ತಡವಾಗಿ ಮೇ 20ರಂದು ಬೆಳಗ್ಗೆ 7.30ರಿಂದ ಜಿಲ್ಲೆಯಿಂದ ವಿವಿಧ …

Read More »

ಅಂತರ್‌ಜಿಲ್ಲಾ ಓಡಾಟಕ್ಕೆ ಪಾಸ್ ಕಡ್ಡಾಯ – ಬಸ್ಸಿನಲ್ಲಿ ತೆರಳುವವರಿಗೆ ಇಲ್ಲ……

ಬೆಂಗಳೂರು: ಅಂತರ್ ಜಿಲ್ಲೆಗಳ ಮಧ್ಯೆ ಬಸ್ಸಿನಲ್ಲಿ ಸಂಚರಿಸುವ ವ್ಯಕ್ತಿಗಳಿಗೆ ಪಾಸ್ ಅಗತ್ಯವಿಲ್ಲ. ಆದರೆ ಅಂತರ್ ಜಿಲ್ಲೆಗಳ ನಡುವೆ ಖಾಸಗಿ ವಾಹನದಲ್ಲಿ ಸಂಚರಿಸುವ ವ್ಯಕ್ತಿಗಳಿಗೆ ಸರ್ಕಾರ ಪಾಸ್ ಕಡ್ಡಾಯ ಮಾಡಿದೆ. ಹೌದು. ಲಾಕ್‍ಡೌನ್ 3 ಜಾರಿಯಾದಾಗ ಯಾವೆಲ್ಲ ಷರತ್ತುಗಳು ಇತ್ತೋ ಆ ಎಲ್ಲ ಷರತ್ತುಗಳು ಅನ್ವಯವಾಗುತ್ತದೆ. ಅಂದರೆ ಖಾಸಗಿ ವ್ಯಕ್ತಿಗಳು ಸೇವಾ ಸಿಂಧು ವೆಬ್‍ಸೈಟ್ ಮೂಲಕ ದಾಖಲೆಗಳನ್ನು ಸಲ್ಲಿಸಿ ಪಾಸ್ ಪಡೆದು ತೆರಳಬೇಕಾಗುತ್ತದೆ.   ಸರ್ಕಾರಿ ನೌಕರರು, ಸಿಬ್ಬಂದಿಗೆ, ಕಂಪನಿಗಳ ಉದ್ಯೋಗಿಗಳಿಗೆ …

Read More »

ಬಿಎಂಟಿಸಿ ಬಸ್ ನಲ್ಲಿ ಹೋಗ್ತೀರಾ? – ಹಾಗಾದ್ರೆ ಈ ಷರತ್ತುಗಳನ್ನು ಪಾಲಿಸಿ………..

ಬೆಂಗಳೂರು: 55 ದಿನಗಳ ಬಳಿಕ ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ಸುಗಳು ರಸ್ತೆಗೆ ಇಳಿಯಲಿದ್ದರೂ ಎಲ್ಲ ಜನರಿಗೆ ಪ್ರಯಾಣಿಸಲು ಅವಕಾಶವಿಲ್ಲ. ಹೌದು, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಬಿಎಂಟಿಸಿ ಕೆಲ ಷರತ್ತುಗಳನ್ನು ವಿಧಿಸಿದೆ. ಹಿರಿಯ ನಾಗರಿಕರು ಮತ್ತು 10 ವರ್ಷದ ಒಳಗಿನ ಮಕ್ಕಳು ಬಸ್ಸಿನಲ್ಲಿ ಪ್ರಯಾಣಿಸುವಂತಿಲ್ಲ. ಅಷ್ಟೇ ಅಲ್ಲದೇ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಕೋವಿಡ್ 19 ಪ್ರಕರಣಗಳು ಹೆಚ್ಚು ದಾಖಲಾಗಿರಿವ ಕಂಟೈನ್‍ಮೆಂಟ್ ವಲಯದಲ್ಲಿ ಬಸ್ಸುಗಳು ಸಂಚರಿಸುವುದಿಲ್ಲ. ಏನೇನು ಎಚ್ಚರಿಕಾ ಕ್ರಮ …

Read More »

ತುಮಕೂರು: ಮಹಾರಾಷ್ಟ್ರದಿಂದ ಜಿಲ್ಲೆಗೆ ಮೂವರು ಅಕ್ರಮವಾಗಿ ನುಸುಳಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ತುಮಕೂರು: ಮಹಾರಾಷ್ಟ್ರದಿಂದ ಜಿಲ್ಲೆಗೆ ಮೂವರು ಅಕ್ರಮವಾಗಿ ನುಸುಳಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಸರ್ಕಾರದ ಆದೇಶ ಮೀರಿ ಮೂರು ಜನ ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದಾರೆ. ಅಶೋಕ ಹೆಚ್.ಬಿ, ಮಲ್ಲಿಕಾರ್ಜುನ ಮತ್ತು ಚಂದ್ರಮೌಳಿ ಜಿಲ್ಲಾಡಳಿಕ್ಕೆ ಮಾಹಿತಿ ನೀಡದೆ ಪ್ರವೇಶ ಮಾಡಿದ್ದಾರೆ. ಮೇ 14ರಂದು ಮಹಾರಾಷ್ಟ್ರದ ಸಿಂಧೂದುರ್ಗ ಜಿಲ್ಲೆಯ ಕನಕವಳ್ಳಿಯಿಂದ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿಗೆ ಪ್ರವೇಶ ಮಾಡಿದ್ದಾರೆ. ಮಹಾರಾಷ್ಟ್ರದಿಂದ ಬೆಳಗಾವಿಯ ನಿಪ್ಪಾಣಿಗೆ ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿ ಬಂದಿಳಿದ ಇಬ್ಬರು ವ್ಯಕ್ಯಿಗಳು, ಅಲ್ಲಿಂದ …

Read More »

ಮಹಾರಾಷ್ಟ್ರದಿಂದ ಕಳ್ಳ ಮಾರ್ಗದ ಮೂಲಕ ಬಂದ ಮೂವರ ವಿರುದ್ಧ ಎಫ್‍ಐಆರ್

ಚಿಕ್ಕೋಡಿ: ಕಳ್ಳ ಮಾರ್ಗದಿಂದ ರಾಜ್ಯ ಪ್ರವೇಶಿಸಿದ ಮೂವರ ವಿರುದ್ಧ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದಿಂದ ಪಾಸ್ ಇಲ್ಲದೇ ಕಳ್ಳ ಮಾರ್ಗದಿಂದ ಬಂದ ಮೂವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮಹಾರಾಷ್ಟ್ರದ ಮೀರಜ ನಗರದಿಂದ ಯಾವುದೇ ಪಾಸ್ ಇಲ್ಲದೇ ಬಂದಿದ್ದ ಆರೋಪಿಗಳನ್ನು ಹುಕ್ಕೇರಿ ಪಿಎಸ್‍ಐ ಶಿವಾನಂದ ಗುಡಗನಟ್ಟಿ ಅವರ ತಂಡ ಪತ್ತೆ ಹಚ್ಚಿದೆ. ಪತ್ನಿ ಹಾಗೂ ಮಗನನ್ನು ಕಳ್ಳ ಮಾರ್ಗದಿಂದ ಹುಕ್ಕೇರಿ ಪಟ್ಟಣದ ಕಲಾಲ್ ಗಲ್ಲಿಯ ಮನೆಗೆ …

Read More »

ಹಾಸನದಲ್ಲಿ ಕೊರೊನಾ ಭೀತಿ- ಸಾಮಾಜಿಕ ಅಂತರ ಮರೆತು ಗ್ರಾಮ ಪಂಚಾಯಿತಿಯಲ್ಲಿ ಗಲಾಟೆ

ಹಾಸನ: ಹಾಸನದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಚೇರಿಯೊಳಗೆ ಜನಪ್ರತಿಗಳು, ಅಧಿಕಾರಿಗಳ ಜೊತೆ ಸಾರ್ವಜನಿಕರು ವಾಕ್ಸಮರ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ, ಕೆಂಬಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಕೆಂಬಾಳು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳಿಂದ ಶುಲ್ಕ ವಿಧಿಸುವ ಸಲುವಾಗಿ ತೀರ್ಮಾನ ತೆಗೆದುಕೊಳ್ಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಇದಕ್ಕೆ ಅಪಸ್ವರ ವ್ಯಕ್ತಪಡಿಸಿದ ಅಂಗಡಿ ಮಾಲೀಕರು, ಸ್ಥಳೀಯರು ಪಂಚಾಯಿತಿಯಲ್ಲಿ …

Read More »

ಚೆನ್ನೈನಿಂದ ಬಂದಿದ್ದ 17 ಜನರಲ್ಲಿ ಓರ್ವನಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಇದೀಗ ಶಿರಹಟ್ಟಿ ಪಟ್ಟಣದ ಜನ ಆತಂಕಕ್ಕೆ

ಗದಗ: ಕೊರೊನಾ ಸೋಂಕಿತ (ರೋಗಿ 1178) ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಓಡಾಟ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚೆನ್ನೈನಿಂದ ಬಂದಿದ್ದ 17 ಜನರಲ್ಲಿ ಓರ್ವನಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಇದೀಗ ಶಿರಹಟ್ಟಿ ಪಟ್ಟಣದ ಜನ ಆತಂಕಕ್ಕೆ ಒಳಗಾಗಿದ್ದಾರೆ. 17 ಜನರ ಕುಟುಂಬ ಚೆನ್ನೈನಿಂದ ಗದಗ ಜಿಲ್ಲೆಯ ಶಿರಹಟ್ಟಿಗೆ ಸ್ವಂತ ವಾಹನದಲ್ಲಿ ಬಂದಿದ್ದರು. ಈ ವೇಳೆ ಇವರನ್ನು ತಡೆದ ಅಧಿಕಾರಿಗಳು ಎಲ್ಲರನ್ನು ಶಿರಹಟ್ಟಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಲ್ಲಿ 17 ಜನರ …

Read More »