Breaking News

Yearly Archives: 2020

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ 8 ಜನರಿಗೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ಗಳನ್ನು ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ 8 ಜನರಿಗೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ಗಳನ್ನು ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿತರಿಸಿದರು. ಮಂಗಳವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಚೆಕ್ ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಇಡೀ ಕ್ಷೇತ್ರ ನನಗೆ ಕುಟುಂಬ ಇದ್ದಂತೆ. ಕ್ಷೇತ್ರದ ಜನರು ನನ್ನ ಮೇಲಿಟ್ಟ ವಿಶ್ವಾಸ, ಅವರು ನೀಡಿದ ಸಹಾಯ, ಸಹಕಾರವನ್ನು ನಾನೆಂದೂ ತೀರಿಸಲು ಸಾಧ್ಯವಿಲ್ಲ. ನಮ್ಮ …

Read More »

ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ಸಂದರ್ಭದಲ್ಲಿ ಜನರ ಕಷ್ಟಗಳಿಗೆ ಸ್ಪಂಧಿಸುವುದನ್ನು ಕಂಡು ಜಾನಪದ ಹಾಡು

ಮೂಡಲಗಿ: ಅರಬಾಂವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ಸಂದರ್ಭದಲ್ಲಿ ಜನರ ಕಷ್ಟಗಳಿಗೆ ಸ್ಪಂಧಿಸುವುದನ್ನು ಕಂಡು ಜಾನಪದ ಜಾಣ ಶಬ್ಬೀರ್ ಡಾಂಗೆ ಅವರು “ಮಂದಿಯ ಕಷ್ಟ ನೋಡ್ಯಾರ,ಎನ್ ಚಂದ ಸಂತಿ ಮಾಡ್ಯಾರ ” ಜಾನಪದ ಹಾಡು ರಚಿಸಿ ಹಾಡಿದ್ದು, ಸೋಮವಾರ ಹಳ್ಳೂರ ಗ್ರಾಮದಲ್ಲಿ ಆಡಿಯೋ ಸಿ.ಡಿಯನ್ನು ಬಿಡುಗಡೆಗೊಳಿಸಿದರು. ಕಳೆದ 15-16ವರ್ಷಗಳಿಂದ ಕಷ್ಟದಲ್ಲಿದ್ದ ಕ್ಷೇತ್ರದ ಜನತೆಗೆ ಸಹಾಯ ಹಸ್ತ ನೀಡುತ್ತಿದ್ದಾರೆ. ಕೊರೋನಾ ಲಾಕ್‍ಡೌನ ಸಮಯದಲ್ಲಿ ಉದ್ಯೋಗವಿಲ್ಲದೆ ಜನತೆ ಹಸಿವಿನಿಂದ ಇರಬಾರದು …

Read More »

ಉಡುಪಿಯಲ್ಲಿ ನಾಳೆಯಿಂದ ಖಾಸಗಿ, ಸರ್ಕಾರಿ ಬಸ್ ಸಂಚಾರ ಆರಂಭ…..

ಉಡುಪಿ: ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆಯಿಂದ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರ ಆರಂಭವಾಗಲಿದೆ. ಜನತಾ ಕಫ್ರ್ಯೂ ಘೋಷಣೆಯಾದ ನಂತರ ಉಡುಪಿ ಜಿಲ್ಲೆಯಲ್ಲಿ ಯಾವುದೇ ಬಸ್ ಸಂಚಾರ ಇರಲಿಲ್ಲ. ಇದೀಗ ಕೆಲವು ಷರತ್ತುಗಳನ್ನು ವಿಧಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮೇ 13ರ ಬೆಳಗ್ಗೆಯಿಂದ ಜಿಲ್ಲೆಯೊಳಗೆ ಖಾಸಗಿ ಮತ್ತು ಸರ್ಕಾರಿ ಬಸ್‍ಗಳು ಸಂಚಾರ ಆರಂಭಿಸಲಿವೆ. ಒಂದು ಬಸ್‍ನಲ್ಲಿ ಶೇ.50ರಷ್ಟು ಪ್ರಯಾಣಿಕರು ಮಾತ್ರ ಓಡಾಡಬಹುದು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಮಾಸ್ಕ್ ಧರಿಸಿದ …

Read More »

ಕೊರೊನಾ ವಾರಿಯರ್ಸ್‍ಗೆ ಪಾದ ಪೂಜೆ ಮಾಡಿ ದಾದಿಯರ ದಿನಾಚರಣೆ ಆಚರಣೆ

ಹಾವೇರಿ: ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ವಾರಿಯರ್ಸ್ ಕಾಲು ತೊಳೆದು, ಕುಂಕುಮ ಹಚ್ಚಿ, ಪೂಜೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ನಾಲ್ವರು ದಾದಿಯರಿಗೆ ಗ್ರಾಮದ ವಿಶ್ವನಾಥ ಹಿರೇಮಠ ಮತ್ತು ಕೃಷ್ಣ ಈಳಿಗೇರ ಸ್ನೇಹ ಬಳಗದ ವತಿಯಿಂದ ಪಾದ ಪೂಜೆ ನೆರವೇರಿಸಲಾಗಿದೆ. ಈ ಮೂಲಕ ಸ್ನೇಹ ಬಳಗದ ಸದಸ್ಯರು ಕೊರೊನಾ ವಾರಿಯರ್ಸ್ ಕಾರ್ಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ. …

Read More »

20 ಲಕ್ಷ ಕೋಟಿ ರೂ. ಮೊತ್ತದ ಪ್ಯಾಕೇಜ್ ನ್ನು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಘೋಷಿಸಲಾಗಿದೆ.: ಪ್ರಧಾನಿ ನರೇಂದ್ರ ಮೋದಿ

ಲಘು ಉದ್ಯೋಗ ಸೇರಿದಂತೆ ಎಲ್ಲ ವಲಯಗಳಿಗೂ ಅನ್ವಯವಾಗುವ ಮೆಘಾ ಆರ್ಥಿಕ ಪ್ಯಾಕೇಜ್ ಒಂದನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಒಟ್ಟಾರೆ 20 ಲಕ್ಷ ಕೋಟಿ ರೂ. ಮೊತ್ತದ ಪ್ಯಾಕೇಜ್ ನ್ನು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಘೋಷಿಸಲಾಗಿದೆ. ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಡೀ ವಿಶ್ವವೇ ಭಾರತದೆಡೆಗೆ ನೋಡುತ್ತಿರುವ ಈ ಸಂದರ್ಭದಲ್ಲಿ, ಭಾರತದ ಭವಿಷ್ಯ ಬದಲಾದರೆ ವಿಶ್ವದ ಭವಿಷ್ಯ ಬದಲಾಗಲಿದೆ ಎನ್ನುವ ಸತ್ಯದ ಹಿನ್ನೆಲೆಯಲ್ಲಿ ಇಂತಹ ಪ್ಯಾಕೇಜ್ ಘೋಷಿಸಲಾಗುತ್ತಿದೆ ಎಂದಿದ್ದಾರೆ. ಬಡವರು, …

Read More »

ಹೆಚ್ಚು ಎಣ್ಣೆ ಕುಡಿದಿದ್ದಕ್ಕೆ ಗೆಳೆಯನ್ನ ಕೊಂದವರು ಅಂದರ್…………

ಬೆಂಗಳೂರು: ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದ ಗೆಳೆಯನನ್ನು ಕೊಂದ ಇಬ್ಬರನ್ನು ಬಂಧಿಸುವಲ್ಲಿ ಬೆಂಗಳೂರಿನ ಆರ್.ಟಿ.ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 4ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೇ 6ರಂದು ಮದ್ಯ ಖರೀದಿಸಿ ರಾಜೇಶ್, ಸುಜಿತ್ ಮತ್ತು ಕಿಶೋರ್ ಸೇರಿಕೊಂಡು ಪಾರ್ಟಿ ಮಾಡಿದ್ದರು. ಪಾರ್ಟಿ ಮಧ್ಯೆ ಹೆಚ್ಚು ಮದ್ಯ ತಮಗೆ ಬೇಕೆಂದು ಮೂವರು ಕಿತ್ತಾಡಿಕೊಂಡಿದ್ದಾರೆ. ಮದ್ಯ ಖರೀದಿಗೆ ಕಿಶೋರ್ ಹೆಚ್ಚು ನೀಡಿಲ್ಲ ಎಂದು ರಾಜೇಶ್ ಮತ್ತು ಸುಜಿತ್ ಕಿಡಿಕಾರಿದ್ದಾರೆ. …

Read More »

15 ವಿಶೇಷ ರೈಲುಗಳ ಸಂಚಾರ ಆರಂಭ, 45,533 ರೈಲ್ವೆ ಟಿಕೆಟ್ ಬುಕ್ ……….

ನವದೆಹಲಿ, ಮೇ 12- ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರ ಅನುಕೂಲಕ್ಕಾಗಿ ಇಂದಿನಿಂದ ದೇಶದ ವಿವಿಧ ಭಾಗಗಳಿಗೆ 15 ವಿಶೇಷ ರೈಲುಗಳ ಸಂಚಾರ ಆರಂಭವಾಗಿದೆ. ನಿನ್ನೆ ಸಂಜೆ 6 ಗಂಟೆಯಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಿದ್ದು, ಇಂದು ಬೆಳಗ್ಗೆವರೆಗೆ 80 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಂಡಿದ್ದಾರೆ. 16.15 ಕೋಟಿ ರೂ. ಮೌಲ್ಯದ 45,533 ರೈಲ್ವೆ ಟಿಕೆಟ್‍ಗಳು ಬುಕ್ಕಿಂಗ್ ಆಗಿವೆ ಎಂದು ಭಾರತೀಯ ರೈಲ್ವೆ ಪ್ರಕಟಣೆ ತಿಳಿಸಿದೆ. ಐದು ವಿಶೇಷ ರೈಲುಗಳಲ್ಲಿ …

Read More »

ಕರ್ನಾಟಕಕ್ಕೆ ಕಾದಿದೆ ದೊಡ್ಡ ಗಂಡಾತರ..? ಬೆಂಗಳೂರಿನ ಮೇಲೆ ಕೊರೋನಾ ಕಾರ್ಮೋಡ…!

ಬೆಂಗಳೂರು, ಮೇ 12- ರಾಜಧಾನಿ ಬೆಂಗಳೂರಿಗೆ ಹೊಸ ಕಂಟಕ ಎದುರಾಗಿದೆ. ಅಧಿಕಾರಿಗಳಿಗೆ ಹೊಸ ತಲೆನೋವು ಶುರುವಾಗಿದೆ. ಮಹಾಮಾರಿ ಕೊರೊನಾ ದಶದಿಕ್ಕುಗಳಿಂದಲೂ ಆವರಿಸುವ ಆತಂಕ ಪ್ರಾರಂಭವಾಗಿದೆ. ಹೊರರಾಜ್ಯಗಳಿಂದ ನಗರಕ್ಕೆ ಸುಮಾರು 30 ಸಾವಿರಕ್ಕೂ ಹೆಚ್ಚು ಕನ್ನಡಿಗರು ಬರುತ್ತಿದ್ದು, ಅವರನ್ನು ಕ್ವಾರಂಟೈನ್ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಂಗಳೂರಿಗೆ ವಿವಿಧೆಡೆಯಿಂದ ಬರುತ್ತಿರುವ 30 ಸಾವಿರ ಜನರನ್ನು ನಿಭಾಯಿಸುವುದು ಹೇಗೆ, ಕ್ವಾರಂಟೈನ್ ಮಾಡುವುದು ಹೇಗೆ ಎಂಬ ಟೆನ್ಷನ್ ಅಧಿಕಾರಿಗಳಿಗೆ ಪ್ರಾರಂಭವಾಗಿದೆ. ಇವರಲ್ಲಿ ಸೋಂಕು ತಗುಲಿದವರು …

Read More »

“ಕೊರೋನಾ ಹೆಚ್ಚಾಗಲು ತಬ್ಲಿಘೀಗಳು ಕಾರಣರಲ್ಲ, ಚಪ್ಪಾಳೆ ತಟ್ಟಿ, ದೀಪ ಹಚ್ಚಿದರೆ ಜನರ ಕಷ್ಟ ತೀರಲ್ಲ” : ಸಿದ್ದರಾಮಯ್ಯ

ಬೆಂಗಳೂರು, ಮೇ 12- ಕೊರೊನಾ ಸೋಂಕು ಹೆಚ್ಚಾಗಲು ತಬ್ಲಿಘೀಗಳು ಕಾರಣ ಎಂಬ ಆರೋಪದಲ್ಲಿ ಸತ್ಯವಿಲ್ಲ. ಕೋಮುವಾದಿಗಳು ಮತ್ತು ಆರ್‍ಎಸ್‍ಎಸ್‍ನವರು ರಾಜಕೀಯ ಕಾರಣಕ್ಕಾಗಿ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜನಜೀವನವನ್ನು ಸುಧಾರಿಸಲು, ಸೋಂಕನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು. ಈವರೆಗೆ ನಾವು ಸರ್ಕಾರಕ್ಕೆ …

Read More »

ದುಬೈನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ 177 ಕರಾವಳಿಗರು

ಮಂಗಳೂರು: ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿದ್ದ 177 ಕರಾವಳಿಗರು ಇಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಏರ್ ಇಂಡಿಯಾ IX 0384 ವಿಮಾನದ ಮೂಲಕ ದುಬೈನಿಂದ ಭಾರತೀಯ ಕಾಲಮಾನ ಸಂಜೆ 4:10ಕ್ಕೆ ವಿಮಾನ ಹೊರಡಲಿದ್ದು, ರಾತ್ರಿ ಸುಮಾರು 9:10 ಗಂಟಗೆ ಮಂಗಳೂರು ವಿಮಾನ ನಿಲ್ದಾಣ ತಲುಪುವ ಸಾಧ್ಯತೆ ಇದೆ. ದುಬೈಯಿಂದ ಬರುವ 177 ಪ್ರಯಾಣಿಕರಲ್ಲಿ ಎಷ್ಟು ಮಹಿಳೆಯರು, ಪುರುಷರು ಹಾಗೂ ಗರ್ಭಿಣಿಯರು, ಆರೋಗ್ಯ ಸಮಸ್ಯೆ ಎಂಬುವುದು ದುಬೈ ವಿಮಾನ …

Read More »