ನವದೆಹಲಿ: ಮೊದಲ ಹಂತದ ವಂದೇ ಭಾರತ್ ಮಿಷನ್ ಅಂತ್ಯವಾಗುತ್ತಿರುವ ಬೆನ್ನಲೆ ಎರಡನೇ ಹಂತದಲ್ಲಿ ಮತ್ತೊಂದು ಬೃಹತ್ ಕಾರ್ಯಚರಣೆಗೆ ಕೇಂದ್ರ ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಮೇ 16ರಿಂದ ಎರಡನೇ ಹಂತದ ಕಾರ್ಯಚರಣೆಗೆ ಮೋದಿ ಸರ್ಕಾರ ಹಸಿರು ನಿಶಾನೆ ತೋರಲಿದೆ. ಮೇ 16ರಿಂದ 22ರವರೆಗೆ ಎರಡನೇ ಹಂತದಲ್ಲಿ ವಂದೇ ಭಾರತ್ ಮಿಷನ್ ಆರಂಭವಾಗಲಿದ್ದು, ಏಳು ದಿನಗಳಲ್ಲಿ 31 ದೇಶಗಳಿಂದ ಭಾರತದ ಹದಿನೈದು ನಗರಗಳಿಗೆ 149 ವಿಶೇಷ ವಿಮಾನಗಳಲ್ಲಿ ಮತ್ತಷ್ಟು ಅನಿವಾಸಿ ಭಾರತೀಯರು ತಾಯ್ನಾಡಿಗೆ …
Read More »Yearly Archives: 2020
ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು
ಬೆಂಗಳೂರು : ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.ಇದೇ ಮೊದಲ ಬಾರಿಗೆ ಹೆಚ್ಚು ರಾಜ್ಯದಲ್ಲಿ ಒಂದೇ ದಿನದಲ್ಲಿ ಸೋಂಕು ಕಾಣಿಸಿಕೊಂಡಿರುವುದು ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ …
Read More »ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾನುವಾರ ರಾತ್ರಿ 8:45ರ ವೇಳೆಗೆ ಮನಮೋಹನ್ ಸಿಂಗ್ ಅವರಿಗೆ ಎದೆನೋವು ಕಾಣಸಿಕೊಂಡಿದೆ. ಆ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಏಮ್ಸ್ …
Read More »ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ.
HomeNational News ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿ ಪ್ರಧಾನಿ ಮೋದಿ ಮಾತು ಲಾಕ್ ಡೌನ್ ಮುಗಿಯುತ್ತಾ? ಮುಂದುವರೆಯುತ್ತಾ? By Pragativahini On May 12, 2020 Share ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ಇಡೀ ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ. ಈ ಬಗ್ಗೆ ಪ್ರಧಾನಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ಇಂದು ರಾತ್ರಿ 8 ಗಂಟೆಗೆ …
Read More »ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ 42 ಜನರಲ್ಲಿ ಸೋಂಕು.
ಬೆಂಗಳೂರು: ಮೂರನೇ ಹಂತದ ಲಾಕ್ ಡೌನ್ ಅವಧಿ ಮುಗಿಯುತ್ತಾ ಬಂದರೂ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ 42 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಬಾಗಲಕೋಟೆ ಜಿಲ್ಲೆಯೊಂದರಲ್ಲೇ ಇಂದು ಬರೋಬ್ಬರಿ 15 ಜನರಲ್ಲಿ ಸೋಂಕು ದೃಢವಾಗಿದೆ. ಧಾರವಾಡದಲ್ಲಿ 9, ಹಾಸನ …
Read More »ಶಿವಮೊಗ್ಗ, ಚಿತ್ರದುರ್ಗದಲ್ಲಿ ಕ್ವಾರಂಟೈನ್‍ಗೆ ತೀವ್ರ ವಿರೋಧ- ಪೊಲೀಸರ ಜೊತೆ ಜನತೆ ವಾಗ್ವಾದ
ಶಿವಮೊಗ್ಗ/ಚಿತ್ರದುರ್ಗ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಲ್ಲಿಯೇ ಲಾಕ್ ಆಗಿದ್ದ ಕಾರ್ಮಿಕರು, ಜನರು ಇದೀಗ ತಮ್ಮ ತಮ್ಮ ಊರುಗಳತ್ತ ಬರುತ್ತಿದ್ದಾರೆ. ಇದೀಗ ಹೊರ ರಾಜ್ಯಗಳಿಂದ ಬರುತ್ತಿರುವ ಕಾರ್ಮಿಕರಿಗೆ ತಮ್ಮ ಗ್ರಾಮಗಳಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಬೇರೆಬೇರೆ ರಾಜ್ಯಗಳಿಂದ ಕಾರ್ಮಿಕರು ಬರುತ್ತಿದ್ದಾರೆ. ಹೊರ ರಾಜ್ಯಗಳಿಂದ ಬರುತ್ತಿರುವ ಕಾರ್ಮಿಕರಿಗೆ ಜಿಲ್ಲಾಡಳಿತ ಸರ್ಕಾರಿ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲು ಸಿದ್ಧತೆ …
Read More »ಸಕ್ಕರೆ ನಾಡಿಗೆ ಮತ್ತೆ ಕೊರೊನಾ ಶಾಕ್ – ಜಿಲ್ಲೆಗೆ ತಲೆನೋವಾದ ಮುಂಬೈ ನಂಟು!
ಮಂಡ್ಯ: ಮಹಾಮಾರಿ ಕೊರೊನಾ ಅಬ್ಬರದಿಂದ ಸಕ್ಕರೆ ನಾಡು ದಿನೇ ದಿನೇ ಸುಧಾರಿಸಿಕೊಳ್ಳುವಷ್ಟರಲ್ಲೇ ಮತ್ತೆ ಕೊರೊನಾ ಶಾಕ್ ಕೊಟ್ಟಿದೆ. ಸೋಮವಾರ ಜಿಲ್ಲೆಯ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾತಂಕ ತಂದೊಡ್ಡಿದ್ದ ತಬ್ಲಿಘಿ ಹಾಗೇ ಜ್ಯುಬಿಲಿಯಂಟ್ ನಂಟಿಂದ ದಿನೇ ದಿನೇ ಮಂಡ್ಯ ಜಿಲ್ಲೆ ಸುಧಾರಿಸಿಕೊಳುತ್ತಿತ್ತು. ಆದರೆ ಈ ಮಧ್ಯೆ ಕೊರೊನಾ ಮತ್ತೆ ಜನರ ನಿದ್ದೆಗೆಡಿಸಿದೆ. ತಬ್ಲಿಘಿ, ಜ್ಯುಬಿಲಿಯಂಟ್ ಬಳಿಕ ಈ ಮುಂಬೈ ನಂಟು ಜಿಲ್ಲೆಯಲ್ಲಿ ಹೊಸದೊಂದು ತಲೆನೋವಾಗಿದೆ. ಸೋಮವಾರ ಪಾಸಿಟಿವ್ ಆಗಿರುವ ಎರಡು …
Read More »ಕಲಬುರಗಿಗೆ ಹೊಸ ಟೆನ್ಶನ್ – ಮುಂಬೈನಿಂದ 1,200ಕ್ಕೂ ಹೆಚ್ಚು ಕಾರ್ಮಿಕರು ರಿಟರ್ನ್
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ಹೆಚ್ಚಾದ ಹಿನ್ನೆಲೆಯಲ್ಲಿ ಜನ ಚಿಂತೆಗೀಡಾಗಿದ್ದಾರೆ. ಹೀಗಿರುವಾಗಲೇ ಮುಂಬೈನಿಂದ ಸಾವಿರಾರು ಕೂಲಿ ಕಾರ್ಮಿಕರು ವಿಶೇಷ ರೈಲು ಮೂಲಕ ಕಲಬುರಗಿಗೆ ತಡರಾತ್ರಿ ಆಗಮಿಸಿದ್ದಾರೆ. ಇದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಹಾಟ್‍ಸ್ಪಾಟ್ ಕಲಬುರಗಿಗೆ ಹೊಸ ಟೆನ್ಶನ್ ಶುರುವಾಗಿದೆ. ಮುಂಬೈನಿಂದ ಸಾವಿರಾರು ವಲಸೆ ಕಾರ್ಮಿಕರು ಶ್ರಮಿಕ್ ಸ್ಪೆಷಲ್ ರೈಲಿನ ಮೂಲಕ ಕಲಬುರಗಿಗೆ ತಡರಾತ್ರಿ 2 ಗಂಟೆಗೆ ಬಂದಿಳಿದಿದ್ದಾರೆ. ಮುಂಬೈನಿಂದ ಬಂದಿಳಿದ ವಲಸಿಗ ಕಾರ್ಮಿಕರನ್ನು ಕಲಬುರಗಿ ಸಂಸದ …
Read More »ತುಂಬು ಗರ್ಬಿಣಿಯಾದರೂ ಹಗಲಿರುಳು ದುಡಿಯುತ್ತಿದ್ದ ಆಶಾ ಕಾರ್ಯಕರ್ತೆಗೆ ಸೀಮಂತ ಮಾಡಿ ಕೃತಜ್ಞತೆ:ಶಾಸಕ ಗೌರಿಶಂಕರ
ತುಮಕೂರು: ದೇಶಾದ್ಯಂತ ಕೊರೊನಾ ವಾರಿಯರ್ಸ್‌ಗೆ ಅನೇಕ ರೀತಿಯಲ್ಲಿ ಸನ್ಮಾನ ಮಾಡಲಾಗುತ್ತಿದೆ. ಇದೀಗ ತುಮಕೂರು ಗ್ರಾಮಾಂತರದ ಕೊರೊನಾ ವಾರಿಯರ್ಸ್‌ಗೆ ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಗಿದೆ. ತುಂಬು ಗರ್ಬಿಣಿಯಾದರೂ ಹಗಲಿರುಳು ದುಡಿಯುತ್ತಿದ್ದ ಆಶಾ ಕಾರ್ಯಕರ್ತೆಗೆ ಸೀಮಂತ ಮಾಡಿ ಕೃತಜ್ಞತೆ ಸಲ್ಲಿಸಲಾಗಿದೆ. ಗ್ರಾಮಾಂತರ ಶಾಸಕ ಗೌರಿಶಂಕರ ನೇತೃತ್ವದಲ್ಲಿ ಈ ಅಭಿನಂದನಾ ಕಾರ್ಯಕ್ರಮ ನೆರವೇರಿದೆ. ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಮನೆ ಮನೆಗೂ ತೆರಳಿ ಕೊರೊನಾ ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಅಂತವರ ಸೇವೆಯನ್ನು …
Read More »ಮೇ 17ರ ಬಳಿಕ ಸಿಗುತ್ತಾ ಬಿಗ್ ರಿಲೀಫ್?
ನವದೆಹಲಿ/ಬೆಂಗಳೂರು: ಲಾಕ್ ಡೌನ್ ವಿಸ್ತರಣೆ, ವಿನಾಯ್ತಿ ಸಂಬಂಧ ಸೋಮವಾರ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ದೀರ್ಘಕಾಲದ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಅಭಿಪ್ರಾಯ ಪಡೆದಿರುವ ಪ್ರಧಾನಿ ಮೋದಿ, ಕೇಂದ್ರ ಆರೋಗ್ಯ ಇಲಾಖೆಯ ಟಾಸ್ಕ್ ಫೋರ್ಸ್, ನೀತಿ ಆಯೋಗ ಸೇರಿ ಹಲವು ಟಾಸ್ಕ್ ಫೋರ್ಸ್ ಗಳ ಅಭಿಪ್ರಾಯ ಸಂಗ್ರಹಿಸಿ ಒಂದೆರಡು ದಿನಗಳಲ್ಲಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ. ಲಾಕ್ ಡೌನ್ ನಿಯಮಗಳನ್ನು ಕಂಟೈನ್ಮೆಂಟ್ ಝೋನ್ ಗಳಿಗೆ ಸೀಮಿತಗೊಳಿಸಿ ಲಾಕ್ ಡೌನ್ ನಿಂದ ವಿನಾಯ್ತಿ ನೀಡುವಂತೆ …
Read More »