ದಾವಣಗೆರೆ: ಕೊರೊನಾ ಸೋಂಕಿತನ ಏರಿಯಾವನ್ನು ಕಂಟೈನ್ಮೆಂಟ್ ಝೋನ್ ಆಗಿ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಇದಕ್ಕೆ ಜನರು ವಿರೋಧ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿವನಗರದಲ್ಲಿ ಕಂಟೈನ್ಮೆಂಟ್ ಝೋನ್ ಮಾಡಲು ಜನರು ವಿರೋಧ ಮಾಡುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಯುವಕನ ಏರಿಯಾವನ್ನು ಕಂಟೈನ್‍ಮೆಂಟ್ ವಲಯವನ್ನಾಗಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಈ ವೇಳೆ ಕಂಟೈನ್ಮೆಂಟ್ ಝೋನ್ ಮಾಡಬೇಡಿ ಎಂದು ನೂರಾರು ಜನರು ತಡೆದಿದ್ದಾರೆ. ಅಜ್ಮೀರ್‌ನಿಂದ ದಾವಣಗೆರೆಗೆ ಆಗಮಿಸಿದ್ದ 22 ವರ್ಷದ ಯುವಕನಿಗೆ …
Read More »Yearly Archives: 2020
ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಅಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಆದೇಶ
ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲವಾಗಿ ಸಿಲಿಕಾನ್ ಸಿಟಿಯಲ್ಲಿ ಶೀಘ್ರವೇ ಬಿಎಂಟಿಸಿ ಬಸ್ ಓಡಾಟ ಶುರುವಾಗುತ್ತಾ ಅನ್ನೋ ಸುಳಿವೊಂದು ಸಿಕ್ಕಿದೆ. ಹೌದು. 48 ದಿನಗಳ ಲಾಕ್‍ಡೌನ್ ಬಳಿಕ ಇಂದಿನಿಂದ ಬಿಎಂಟಿಸಿಯ ಎಲ್ಲಾ ನೌಕರರು ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ಸೂಚಿಸಿದೆ. ಸಾರಿಗೆ ಸಂಸ್ಥೆಯು ತುರ್ತು ಸೇವೆಗೆ ಒಳಪಡುವುದರಿಂದ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಅಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ. ಪ್ರಮುಖ ಸೂಚನೆಯೆಂದರೆ ಕೆಲಸಕ್ಕೆ …
Read More »ಮಹಾರಾಷ್ಟ್ರದಲ್ಲಿ ಸಿಲುಕಿದ್ದ ನೂರಾರು ಕನ್ನಡಿಗರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ ಸೋನು ಸೂದ್
ಮುಂಬೈ: ಕೊರೊನಾ ಲಾಕ್‍ಡೌನ್‍ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಸೋನು ಸೂದ್ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಬಂದಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಸಿನಲ್ಲಿ ಒಟ್ಟು ಹತ್ತು ಬಸ್‍ಗಳ ವ್ಯವಸ್ಥೆ …
Read More »ಚಿಕ್ಕೋಡಿ:ಕೊಳವೆ ಬಾವಿಗೆ ಬಿದ್ದು ರೈತ ಸಾವು,……..
ಚಿಕ್ಕೋಡಿ (ಬೆಳಗಾವಿ): ಕೊಳವೆ ಬಾವಿಗೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸುಲ್ತಾನಪೂರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (38) ಕೊಳವೆ ಬಾವಿಯಲ್ಲಿ ಸಿಲುಕಿ ಮೃತಪಟ್ಟ ರೈತ. ಕೊಳವೆ ಬಾವಿಗೆ ಸಿಲುಕಿದ್ದ ಮಾಹಿತಿ ತಿಳಿಯುತ್ತಿದ್ದಂತೆ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ತಕ್ಷಣವೇ 2 ಜೆಸಿಬಿಗಳನ್ನು ಕರೆಯಿಸಿ ಕಾರ್ಯಾಚರಣೆ ಆರಂಭಿಸಿದರು. ಸುಮಾರು 18ರಿಂದ 20 …
Read More »ಕುಂದಾನಗರಿ ಬೆಳಗಾವಿಯಲ್ಲಿ ತಬ್ಲಿಘಿಗಳ ಕಂಟಕ ಮುಗಿಯುವ ಮುನ್ನವೇ ಅಜ್ಮೀರ್ ಯಾತ್ರಿಗಳ ಆತಂಕ ಶುರುವಾಗಿದೆ.
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ತಬ್ಲಿಘಿಗಳ ಕಂಟಕ ಮುಗಿಯುವ ಮುನ್ನವೇ ಅಜ್ಮೀರ್ ಯಾತ್ರಿಗಳ ಆತಂಕ ಶುರುವಾಗಿದೆ. ಅಜ್ಮೀರ್‌ನಿಂದ ಬಂದ 22 ಯಾತ್ರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಯಾತ್ರಿಗಳ ಎಡವಟ್ಟಿನಿಂದ ಇಡೀ ಜಿಲ್ಲೆಯೇ ಸಂಕಷ್ಟಕ್ಕೆ ಸಿಲುಕುತ್ತಿತ್ತು. ಕಳ್ಳ ದಾರಿಯಲ್ಲಿ ನುಸುಳಲು ಹೊರಟವರನ್ನು ಹಿಡಿದು ಗಂಡಾಂತರ ತಪ್ಪಿಸಿದ ಪೊಲೀಸರ ಕಾರ್ಯದಿಂದ ಜಿಲ್ಲೆಯ ಜನ ನಿಟ್ಟುಸಿರು ಬಿಟ್ಟಿದ್ದಾರೆ. ರಾಜಸ್ಥಾನದ ಅಜ್ಮೀರ್‌ನಿಂದ ಬಂದ ಯಾತ್ರಿಗಳ ಕಹಾನಿಯೇ ಭಯಾನಕವಾಗಿದೆ. ಅಧಿಕಾರಿಗಳು ಮತ್ತು ಪೊಲೀಸರು ಸ್ವಲ್ಪ ಯಾಮಾರಿದರೂ 22 ಮಂದಿ …
Read More »ಉತ್ತಮ ಆಹಾರ, ಊಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ಕೊರೊನಾ ವಾರಿಯರ್ಸ್ ಆಕ್ರೋಶ
ಶಿವಮೊಗ್ಗ: ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಹಗಲು ರಾತ್ರಿ ಎನ್ನದೇ, ಮನೆಗೂ ಹೋಗದೆ ನರ್ಸ್ ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಊಟ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸದೆ ಗೋಳಾಡುವಂತೆ ಮಾಡಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಭೋಧನಾ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಇಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಮನೆಗೆ ಹೋಗುವಂತಿಲ್ಲ. ಕೊರೊನಾ ವಾರಿಯರ್ ಗಳು ಉಳಿದುಕೊಳ್ಳಲು ಜಿಲ್ಲಾಡಳಿತ ನಗರದ ವಿವಿಧ ಹೋಟೆಲ್ ಗಳಲ್ಲಿ ವ್ಯವಸ್ಥೆ ಮಾಡಿದೆ. ಆದರೆ ಹೋಟೆಲ್ ನಲ್ಲಿ ಕೊಠಡಿಗಳು …
Read More »ಕೊರೊನಾ ನೆಪದಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳಿಗೆ ಸಂಬಳ ಕೊಡದ ಕಾಲೇಜು!
ಬೆಂಗಳೂರು: ಕೊರೊನಾ ಸೃಷ್ಟಿಸಿದ ಅವಾಂತರಗಳಿಂದ ಒಂದೆಡೆ ಜನಸಾಮಾನ್ಯರು ಕೆಲಸವಿಲ್ಲದೇ ಪರದಾಡುತ್ತಿದ್ದರೆ, ಮತ್ತೊಂದೆಡೆ ದುಡಿದ ಕೆಲಸಕ್ಕೂ ಸಂಬಳ ಸಿಗದೇ ಕೆಲ ಜನ ಒದ್ದಾಡುತ್ತಿದ್ದಾರೆ. ಇದಕ್ಕೆ ನೈಜ ಉದಾಹರಣೆಯೆಂದರೆ ಸೆಕ್ಯೂರಿಟಿ ಗಾರ್ಡ್. ಖಾಸಗಿ ಕಾಲೇಜೊಂದು ಸೆಕ್ಯೂರಿಟಿ ಗಾರ್ಡ್ ಗಳಿಗೆ ಸಂಬಳವನ್ನು ನೀಡದೇ ಸತಾಯಿಸುತ್ತಿದೆ. ಹೌದು. ಕೊರೊನಾದಿಂದಾಗಿ ಬಡವರ ಬದುಕು ಬೀದಿಗೆ ಬಿದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಲಾಕ್ ಡೌನ್ ಆದ್ರೂ ಕೆಲವೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಬೆಂಗಳೂರಿನ ಎಂಎಸ್ ಪಾಳ್ಯದ …
Read More »ಇದ್ದಕ್ಕಿದ್ದಂತೆ ಯಾದಗಿರಿಯಲ್ಲಿ ಲಾಕ್‍ಡೌನ್ ಬಿಗಿ………..
ಯಾದಗಿರಿ: ಗ್ರೀನ್ ಝೋನ್ ನಲ್ಲಿರುವ ಯಾದಗಿರಿಯಲ್ಲಿ ಸಡಿಲಿಕೆಯಾಗಿದ್ದ ಲಾಕ್ ಡೌನ್ ಅನ್ನು ದಿಢೀರ್ ಆಗಿ ಮತ್ತಷ್ಟು ಬಿಗಿ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೊಂಕು ಹರಡುವ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೊದಲನೆಯ ಹಂತದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿವರೆಗೂ ಮತ್ತೆ ಬೀಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಕೇವಲ ತರಕಾರಿ ಮತ್ತು ಆಸ್ಪತ್ರೆ, ಮೆಡಿಕಲ್ ಶಾಪ್ ತೆರೆಯಲು ಮಾತ್ರ ಅವಕಾಶ ನೀಡಲಾಗಿದೆ. ಇದರ ಜೊತೆಗೆ ವೈನ್ ಶಾಪ್ ಸಹ ಬಂದ್ …
Read More »ಸಿಎಂಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಅಂತ್ಯ:ಪ್ರಧಾನಿ ಮೋದಿ
ನವದೆಹಲಿ: ಸಿಎಂಗಳ ಜೊತೆಗಿನ ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್ ಅಂತ್ಯವಾಗಿದ್ದು, ಕೊರೊನಾ ವಿರುದ್ಧದ ಯುದ್ಧದಲ್ಲಿ ಲಾಕ್‍ಡೌನ್ ಒಂದು ವೆಪನ್ ಅಷ್ಟೇ, ಅದನ್ನ ಜಾಸ್ತಿ ದಿನ ಬಳಸಲು ಆಗಲ್ಲ ಎಂಬ ಮಾತನ್ನು ಪ್ರಧಾನಿಗಳು ಹೇಳಿದ್ದಾರೆ.ಈಗಾಗಲೇ ಸಾಮಾಜಿಕ ಅಂತರವನ್ನು ಹೇಳಿಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಹೊಸ ತಂತ್ರಜ್ಞಾನದ ಮೊರೆ ಹೋಗಬೇಕಾಗುತ್ತದೆ. ಮೊದಲ ಮಹಾಯುದ್ಧ, ಎರಡನೇ ಮಹಾಯುದ್ಧದ ಬಳಿಕ ಸಾಕಷ್ಟು ತಂತ್ರಜ್ಞಾನ ಬಂತು. ಕೊರೊನಾದಿಂದ ತಂತ್ರಜ್ಞಾನ ಬೇರೆ ರೀತಿ ಅಭಿವೃದ್ಧಿ ಆಗುತ್ತೆ. ಹಾಗಾಗಿ ಹೊಸ ಹೊಸ ಟೆಕ್ನಿಕ್ …
Read More »ಬೆಳಗಾವಿ: ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದ ವೃದ್ಧನಿಗೆ ಮತ್ತೆ ಕೊರೊನಾ ಸೋಂಕು
ಬೆಳಗಾವಿ: ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಮನೆ ಸೇರಿದ್ದ 60 ವರ್ಷದ ವೃದ್ಧನಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಎರಡಲೇ ಅಲೆ ಆರಂಭಗೊಳ್ತಾ ಅನ್ನೋ ಆತಂಕ ಶುರುವಾಗಿದೆ ಕುಡುಚಿ ಪಟ್ಟಣದ 60 ವರ್ಷದ ವೃದ್ಧ (ರೋಗಿ 298) 10 ದಿನಗಳ ಹಿಂದೆ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದರು. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ವೃದ್ಧನಿಗೆ ಸೋಂಕು ಕಾಣಿಸಿಕೊಂಡಿರೋದು ದೃಢವಾಗಿದೆ. ಇದೀಗ ಮತ್ತೆ ವೃದ್ಧನನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ …
Read More »