Breaking News

Yearly Archives: 2020

ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರ ಸೀಲ್‍ಡೌನ್

ಹಾವೇರಿ: ಜಿಲ್ಲೆಯ ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರವನ್ನು ಸೀಲ್‍ಡೌನ್ ಮಾಡಲಾಗಿದೆ. ಮುಂಬೈನಿಂದ ಬಂದಿದ್ದ ಇಬ್ಬರಿಗೆ ಕೊರೊನಾ ತಗುಲಿರೋದು ದೃಢಪಡುತ್ತಿದ್ದಂತೆ ಸೋಂಕಿತರು ವಾಸವಾಗಿದ್ದ ಎಸ್.ಎಂ.ಕೃಷ್ಣ ನಗರವನ್ನು ಜಿಲ್ಲಾಡಳಿತ ಸೀಲ್‍ಡೌನ್ ಮಾಡಿದೆ. ಸೀಲ್‍ಡೌನ್ ಮಾಡಿರೋ ಪ್ರದೇಶದಲ್ಲಿ ಯಾರೂ ಒಳಗೆ ಮತ್ತು ಹೊರಗೆ ಹೋಗದಂತೆ ಜಿಲ್ಲಾಡಳಿತ ಪ್ರವೇಶ ನಿರ್ಬಂಧಿಸಿದೆ. ಪ್ರದೇಶದ ಜನರಿಗಾಗಿ ಜಿಲ್ಲಾಡಳಿತ ಕಂಟ್ರೋಲ್ ರೂಂ ಸ್ಥಾಪಿಸಿದ್ದು, ಅಗತ್ಯ ವಸ್ತುಗಳನ್ನ ಪೂರೈಸೋದಾಗಿ ಹೇಳಿದೆ. ಎಸ್.ಎಂ.ಕೃಷ್ಣ ನಗರದ ಸುತ್ತಲಿನ 5 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಬಫರ್ …

Read More »

ಬೆಳಗಾವಿ:ಸರ್ಕಾರ ಮಾಡಲಾಗದ ಕೆಲಸಕ್ಕೆ ಗ್ರಾಮಸ್ಥರು ಕೈ ಹಾಕಿದ್ದು, ರಸ್ತೆ ಕೆಲಸ ಮುಗಿಸಿ ಇತರರಿಗೂ ಮಾದರಿ ಆಗಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ತಬ್ಲಿಘಿಗಳಿಂದಾಗಿ ಒಮ್ಮಿಂದೊಮ್ಮೆಲೆ ಕೊರೊನಾ ಸೋಂಕಿತರ ಸಂಖ್ಯೆ ಡಬಲ್ ಆಗಿದೆ. ಆದರೆ ಇದರ ನಡುವೆ ಬೆಳಗಾವಿಯಲ್ಲಿ ಸಂತಸದ ಸುದ್ದಿಯೊಂದಿದೆ. ಹೌದು. ಒಂದು ತಿಂಗಳ ಲಾಕ್ ಡೌನ್ ಸಮಯವನ್ನು ಉಪಯೋಗಿಸಿಕೊಂಡ ಬೆಳಗಾವಿಯ ಮಾರಿಹಾಳ ಗ್ರಾಮಸ್ಥರಿಗೆ ರಸ್ತೆ ನಿರ್ಮಿಸೋದು ಅವಶ್ಯಕವಿತ್ತು. ಆದರೆ ಹಳ್ಳಿಯನ್ನೂ ಬಿಡದ ಈ ಮಹಾಮಾರಿ ಕೊರೊನಾದಿಂದ ಯಾವುದೇ ಕೆಲಸ ಆಗ್ತಿರಲಿಲ್ಲ. ಇದೀಗ ಸರ್ಕಾರ ಮಾಡಲಾಗದ ಕೆಲಸಕ್ಕೆ ಗ್ರಾಮಸ್ಥರು ಕೈ ಹಾಕಿದ್ದು, ರಸ್ತೆ ಕೆಲಸ ಮುಗಿಸಿ ಇತರರಿಗೂ ಮಾದರಿ ಆಗಿದ್ದಾರೆ. …

Read More »

ಕೊರೊನಾ ಸೋಂಕಿತೆ ಗರ್ಭಿಣಿ ಪತಿಯಿಂದ ಗ್ರಾಮದ ಮನೆ ಮನೆಗೆ ತೆರಳಿ ಕಜ್ಜಾಯ ಭಿಕ್ಷೆ………..

ಡಾಣಕಶಿರೂರ ಗ್ರಾಮ ಸಂಪೂರ್ಣ ಸೀಲ್‍ಡೌನ್ -ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗಿ -ಡ್ರೋಣ್ ಕ್ಯಾಮೆರಾದಿಂದ ಹದ್ದಿನ ಕಣ್ಣು ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. …

Read More »

ಇಂದು ಬೆಳಿಗ್ಗೆ 11ಕ್ಕೆ ಯಡಿಯೂರಪ್ಪ ಸುದ್ದಿಗೋಷ್ಠಿ; ಮಹತ್ವದ ಮಾಹಿತಿ ನೀಡಲಿದ್ದಾರೆ ಸಿಎಂ?

ಬೆಂಗಳೂರು (ಮೇ 6): ಲಾಕ್​ಡೌನ್​ ಆರಂಭವಾದಾಗಿನಿಂದಲೂ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುತ್ತಲೇ ಇದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸದ್ಯ ರಾಜ್ಯದ ಪರಿಸ್ಥಿತಿ ಹೇಗಿದೆ ಎನ್ನುವುದರ ಬಗ್ಗೆ ಬಿಎಸ್​ವೈ ಇಂದು 11 ಗಂಟೆಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ. ಲಾಕ್​ಡೌನ್​ ಶುರುವಾದ ದಿನಾಂಕ ಅಂದರೆ ಮಾ.21 ನೇ ತಾರೀಕಿನಿಂದ ಇಲ್ಲಿಯವರೆಗಿನ  ಪರಿಣಾಮ, ಕೋರೋನಾ ತಡೆಗಟ್ಟಲು ಲಾಕ್‌ಡೌನ್ ಎಷ್ಟರಮಟ್ಟಿಗೆ ಸಹಕಾರಿಯಾಗಿದೆ,  ಕೊರೊನಾ ತಡೆಗಟ್ಟುವಲ್ಲಿ ಸರ್ಕಾರ …

Read More »

ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದ 11 ಜನರಿಗೆ ಕೊರೋನಾ ಸೋಂಕು; ಮಾದಾವರ ಬಳಿ ಹೈ ಅಲರ್ಟ್

ಬೆಂಗಳೂರು (ಮೇ 06); ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (Bangalore International Exhibition Centre) ಕೆಲಸ ಮಾಡುವ ಉತ್ತರಪ್ರದೇಶ ಮೂಲದ 11 ಜನರಲ್ಲಿ ಇದೀಗ ಕೊರೋನಾ ಸೋಂಕು ಪತ್ತೆಯಾಗಿದ್ದು ಮಾದಾವರ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಬೆಂಗಳೂರಿ ಮಾದಾವರ ಬಳಿ ಇರುವ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಅನೇಕ ಉತ್ತರ ಭಾರತೀಯರು ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ  ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಿದ ವೇಳೆ ಹೈ ಟೆಂಪರೇಚರ್ ಕಂಡುಬಂದಿತ್ತು. ಹೀಗಾಗಿ 11 ಜನರನ್ನು ನೆನ್ನೆ ವಿಕ್ಟೊರಿಯಾ ಆಸ್ಪತ್ರೆಗೆ ರವಾನೆ …

Read More »

ಮಲೆನಾಡಲ್ಲಿ ಭಾರೀ ಮಳೆ, ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ…

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಭರಣಿ ಮಳೆ ಅಬ್ಬರಕ್ಕೆ ಮಲೆನಾಡಿಗರು ತತ್ತರಿಸಿದೆ. ಮೂಡಿಗೆರೆಯಲ್ಲಿ ಸಂಜೆಯಿಂದ ಧಾರಾಕಾರ ಮಳೆ ಸುರಿದಿದ್ದು, ಜನ ಆತಂಕಕ್ಕೀಡಾಗಿ, ಕಳೆದ ವರ್ಷದ ಮಳೆಯನ್ನು ನೆನಪಿಸಿಕೊಂಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ತೋರಣಮಾವು ಗ್ರಾಮದಲ್ಲಿ ಮಳೆ ಆರಂಭಕ್ಕೂ ಮುನ್ನ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿದೆ. ನೋಡನೋಡ್ತಿದ್ದಂತೆ ತೆಂಗಿನ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಿಕ್ಕಮಗಳೂರು ತಾಲೂಕಿನ ಬಯಲುಸೀಮೆ ಭಾಗ ಕಳಸಾಪುರ, ಬೆಳವಾಡಿ ಹಾಗೂ …

Read More »

ಹೂವು ಬೆಳೆಗಾರರಿಗೆ ಮಾತ್ರ ಪರಿಹಾರ!- ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ……

ಮಡಿಕೇರಿ: ರೈತರಿಗೆ ಬಡ್ಡಿ ರಹಿತ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಈಗಾಗಲೇ ಬಡ್ಡಿ ರಹಿತ ಸಾಲ ಮರುಪಾವತಿ ಅವಧಿ ಮುಗಿದು ಹೋಗಿದೆ. ಆದರೆ ಲಾಕ್‍ಡೌನ್ ಕಾರಣ ರೈತರಿಗೆ ಅನುಕೂಲ ಆಗಬೇಕೆಂಬ ದೃಷ್ಠಿಯಿಂದ ಅವಧಿ ವಿಸ್ತರಿಸಲಾಗಿದೆ. ಸಾಲ ಮಾಡಿರುವ ರೈತರಿಗೆ ಯಾವುದೇ ಕಾರಣಕ್ಕೂ ಬ್ಯಾಂಕ್‍ಗಳು ಕಿರುಕುಳ ನೀಡಬಾರದು ಎಂದರು. ಲಾಕ್ ಡೌನ್ ಸಂದರ್ಭದಲ್ಲಿ ತರಕಾರಿ ಬೆಳೆಗಾರರು …

Read More »

ಇಂದಿನಿಂದ ಎಣ್ಣೆ ಮತ್ತಷ್ಟು ದುಬಾರಿ?……..

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಎಣ್ಣೆ ಇಲ್ಲದೆ 42 ದಿನಗಳನ್ನು ಮುಗಿಸಿದ ಮದ್ಯಪ್ರಿಯರಿಗೆ ಇಂದು ಬಿಗ್ ಶಾಕ್ ಸುದ್ದಿಯೊಂದು ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಶೇ.6 ರಷ್ಟು ಅಬಕಾರಿ ಸುಂಕ ಹೆಚ್ಚಳದ ಬಿಸಿ ಅನುಭವಿಸಿದ್ದ ಮದ್ಯಪ್ರಿಯರಿಗೆ ಈಗ ಕೊರೊನಾ ಶಾಕ್ ಫಿಕ್ಸ್ ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ಹೌದು. ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆಯೆಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಅಬಕಾರಿ ಸುಂಕದ ಜೊತೆಗೆ ಮದ್ಯದ …

Read More »

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ…………..

ಧಾರವಾಡ: ಚಲಿಸುತ್ತಿದ್ದ ಲಾರಿಯಲ್ಲಿದ್ದ ಮಶಿನ್‍ಗೆ ಏಕಾಏಕಿ ಬೆಂಕಿ ತಗುಲಿದ ಘಟನೆ ಧಾರವಾಡ ಜಿಲ್ಲೆಯ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪುಣೆಯಿಂದ ಬೆಂಗಳೂರಿನ ಕೈಗಾರಿಕಾ ಪ್ರದೇಶಕ್ಕೆ ಈ ಮಶಿನ್‍ನ್ನು ಲಾರಿ ಹೊತ್ತೊಯ್ಯುತ್ತಿತ್ತು. ತೇಗೂರು ಬಳಿ ಮಿನಿ ಲಾರಿ ಬರುತ್ತಿದ್ದಂತೆ ಲಾರಿಯಲ್ಲಿದ್ದ ಮಶಿನ್‍ಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ಆತಂಕಗೊಂಡ ಲಾರಿ ಚಾಲಕ, ಪಕ್ಕದಲ್ಲೇ ನೀರು ಇರುವುದನ್ನು ಕಂಡು ರಸ್ತೆ ಬದಿ ಲಾರಿ ನಿಲ್ಲಿಸಿ ಕೆಳಗಿಳಿದಿದ್ದಾನೆ. ಪಕ್ಕದಲ್ಲೇ …

Read More »

ರಾಯಚೂರಿನಲ್ಲಿ ವೈದ್ಯಕೀಯ ಸಿಬ್ಬಂದಿಗೆ 3 ತಿಂಗಳಿಂದ ಸಂಬಳವನ್ನೇ ನೀಡಿಲ್ಲ!

ರಾಯಚೂರು: ಕೊರೊನಾ ವಿರುದ್ಧ ಆರೋಗ್ಯ ಇಲಾಖೆ, ವೈದ್ಯಕೀಯ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುತ್ತಿದ್ದಾರೆ. ಆದರೆ ರಾಯಚೂರಿನಲ್ಲಿ ಇವರ ಸೇವೆಗೆ ಬೆಲೆಕಟ್ಟುವುದಿರಲಿ ಸರಿಯಾಗಿ ಸಂಬಳವನ್ನೇ ನೀಡುತ್ತಿಲ್ಲ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ. ಹೌದು. ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಕೋವಿಡ್ ಆಸ್ಪತ್ರೆಗಳಾದ ರಾಯಚೂರಿನ ಓಪೆಕ್ ಹಾಗೂ ರಿಮ್ಸ್ ಸಿಬ್ಬಂದಿಗೆ ಮೂರು ತಿಂಗಳಿನಿಂದ ಸಂಬಳವನ್ನೇ ನೀಡಿಲ್ಲ. ವೇತನವಿಲ್ಲದೆ ಸಾವಿರಕ್ಕೂ ಅಧಿಕ ಸಿಬ್ಬಂದಿ ನಿತ್ಯ ದುಡಿಯುತ್ತಿದ್ದಾರೆ. ರಿಮ್ಸ್‍ನಲ್ಲಿ ಬಹುತೇಕ ಸಿ ಹಾಗೂ …

Read More »