Breaking News

Yearly Archives: 2020

ಮೇ 4ರಿಂದ KSRTC ಬಸ್ ಸಂಚಾರ ಆರಂಭ – ಸಾರಿಗೆ ಸಚಿವ ಲಕ್ಷ್ಮಣ ಸವದಿ

ರಾಜ್ಯದ ವಿವಿಧ ಭಾಗಗಳಲ್ಲಿ ಸಿಕ್ಕಿಕೊಂಡಿರುವ ವಲಸಿಗ ಕಾರ್ಮಿಕರನ್ನು ತಮ್ಮ ಜಿಲ್ಲೆಗಳಿಗೆ ಕಳಿಸಲು ವಿಶೇಷ ಬಸ್​ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಸಾಮಾಜಿಕ ಅಂತರ ಕಡ್ಡಯ ಪಾಲಿಸುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು. ಬೆಂಗಳೂರು(ಮೇ.03): ಮೇ 4ನೇ ತಾರೀಕಿನಿಂದ ರಾಜ್ಯಾದ್ಯಂತ ಕೆಎಸ್​​ಆರ್​​ಟಿಸಿ ಬಸ್​ ಸಂಚಾರ ಶುರುವಾಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.  ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕಂಟೇನ್ಮೆಂಟ್ ಮತ್ತು ರೆಡ್ ಜೋನ್​​​ ತಾಲೂಕುಗಳನ್ನು ಹೊರತುಪಡಿಸಿ …

Read More »

ಕಾಫಿನಾಡಲ್ಲಿ ನಾಳೆಯಿಂದ ರಸ್ತೆಗಿಳಿಯಲಿವೆ KSRTC ಬಸ್…….

ಚಿಕ್ಕಮಗಳೂರು: ಕಳೆದ 40 ದಿನಗಳಿಂದ ಸಂಪೂರ್ಣ ಬಂದ್ ಆಗಿದ್ದ ಸರ್ಕಾರಿ ಬಸ್ ಗಳು ನಾಳೆಯಿಂದ ರಸ್ತೆಗಿಳಿಯಲಿವೆ. ಚಿಕ್ಕಮಗಳೂರಿನಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬಸ್ ಬಂತು ಎಂದು ಪ್ರಯಾಣಿಕರು ದಿಢೀರ್ ಅಂತ ಹತ್ತುವಂತಿಲ್ಲ. ತಮ್ಮ ಸಂಪೂರ್ಣ ವಿವರ ನೀಡಿ ನಂತರ ಪ್ರಯಾಣಿಸುವ ನಿಯಮ ಜಾರಿಗೆ ತರಲಾಗಿದೆ. ಹೀಗಾಗಿ ಬಸ್ ಹೊರಡುವ ಅರ್ಧ ಗಂಟೆ ಮುಂಚೆ ನಿಲ್ದಾಣಕ್ಕೆ ಬರಬೇಕಾಗಿದೆ. ಮಾಹಿತಿ ನೀಡುವ ವೇಳೆ ಪ್ರಯಾಣಿಕರ ಹೆಸರು, ವಿಳಾಸ, …

Read More »

ಸೀರಿಯಲ್ ಶೂಟಿಂಗ್‍ಗಳಿಗೆ ಅನುಮತಿ ನೀಡುವಂತೆ ಸಿಎಂ ಬಳಿ ಮನವಿ…….

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ಲಾಡ್‍ಡೌನ್ ಸಡಿಲ ಆಗುತ್ತಿರುವ ಹಿನ್ನೆಲೆಯಲ್ಲಿ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣಕ್ಕಾಗಿ ಅನುಮತಿ ಕೊಡುವಂತೆ ಸಿಎಂ ಯಡಿಯೂರಪ್ಪ ಬಳಿ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಮೇ 11ರಿಂದ ಧಾರಾವಾಹಿ ಹಾಗೂ ರಿಯಾಲಿಟಿ ಶೋ ಚಿತ್ರೀಕರಣಕ್ಕೆ ಅನುವು ಮಾಡಿಕೊಂಡುವಂತೆ ಸಿಎಂ ಬಳಿ ಮನವಿ ಮಾಡಿದ್ದಾರೆ. ಕೊರೊನಾದಿಂದ ಮಾರ್ಚ್ 19 ರಿಂದ ಕಿರುತೆರೆಯ ಶೂಟಿಂಗ್‍ಗೆ ಬ್ರೇಕ್ ಹಾಕಿತ್ತು. ಹೀಗಾಗಿ ಮತ್ತೆ ರಾಜ್ಯ ಸರ್ಕಾರದ ವತಿಯಿಂದ ಶೂಟಿಂಗ್ …

Read More »

ಲಾಕ್‍ಡೌನ್ ಹೊಸ ಗೈಡ್‍ಲೈನ್ಸ್- ಐಟಿ, ಬಿಟಿಯವರು ಪಾಸ್ ಪಡೆಯುವುದು ಕಡ್ಡಾಯ……..

ಬೆಂಗಳೂರು: ರಾಜ್ಯ ಸರ್ಕಾರ ಲಾಕ್‍ಡೌನ್ ನಿಯಮಗಳನ್ನು ಪರಿಷ್ಕರಿಸಿದ್ದು, ಹತ್ತು ಹಲವು ಮಾರ್ಪಾಡುಗಳನ್ನು ಮಾಡಿದೆ. ಐಟಿ, ಬಿಟಿ ಕಂಪನಿ ಉದ್ಯೋಗಿಗಳಿಗೆ ಪಾಸ್, ಸಾರ್ವಜನಿಕರ ಸಂಚಾರದ ಸಮಯ ಸೇರಿದಂತೆ ವಿವಿಧ ಬದಲಾವಣೆಗಳನ್ನು ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರವನ್ನು ಒಂದೇ ಯೂನಿಟ್ ಎಂದು ಪರಿಗಣಿಸಿದ್ದು, ಈ ಎಲ್ಲ ಜಿಲ್ಲೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಮಾತ್ರ ಸಾರ್ವಜನಿಕರಿಗೆ ಸಂಚಾರಕ್ಕೆ ಕಲ್ಪಿಸಿದೆ. ರಾತ್ರಿ ಆಫೀಸ್‍ಗೆ ಹೋಗುವವರು ಕಚೇರಿಯಿಂದ ಲೆಟರ್ …

Read More »

ಇಂದು ಒಂದೇ ದಿನ 34 ಮಂದಿಗೆ ಕೊರೊನಾ ಸೋಂಕು……..

ರಾಜ್ಯದಲ್ಲಿ 635ಕ್ಕೇರಿದ ಸೋಂಕಿತರ ಸಂಖ್ಯೆ ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 34 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿಯೇ 21 ಪ್ರಕರಣಗಳು ಬೆಳಕಿಗೆ ಬಂದಿವೆ. ಇಂದು ಬೆಳಗ್ಗೆ ಬಿಡುಗಡೆಯಾದ ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ 5 ಮಂದಿಗೆ ಸೋಂಕು ತಗುಲಿರೋದು ವರದಿಯಾಗಿತ್ತು. ಸಂಜೆಯ ಬುಲೆಟಿನ್ ನಲ್ಲ 8 ಮಂದಿಗೆ ಸೋಂಕು ತಗುಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಆದ್ರೆ ದಾವಣಗೆರೆಯ 21 …

Read More »

ವಾರದಲ್ಲಿ 3 ದಿನ ಮಾತ್ರ ಮದ್ಯ ಖರೀದಿ – ಹಾಸನ ಡಿಸಿ ಸ್ಪಷ್ಟನೆ……….

ಹಾಸನ: ಜಿಲ್ಲೆ ಗ್ರೀನ್‍ಝೋನ್‍ಗೆ ಸೇರಿದರೂ ಕೂಡ ವಾರದಲ್ಲಿ ಮೂರು ದಿನ ಮಾತ್ರ ಮದ್ಯ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಎಂದಿನಂತೆ ಲಾಕ್‍ಡೌನ್ ಮೇ 17ರವರೆಗೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾತನಾಡಿರುವ ಜಿಲ್ಲಾಧಿಕಾರಿ ಆರ್.ಗಿರೀಶ್, ಮಂಗಳವಾರ, ಗುರುವಾರ, ಶನಿವಾರ ಮಾತ್ರ ಹಾಸನದಲ್ಲಿ ಮದ್ಯ, ದಿನಸಿ ವಸ್ತು ಸೇರಿದಂತೆ ಇತರೆ ವಸ್ತು ಕೊಳ್ಳಲು ಅಂಗಡಿಗಳನ್ನು ತೆರೆಯಬಹುದು. ಉಳಿದ ದಿನಗಳು ಎಂದಿನಂತೆ ಲಾಕ್‍ಡೌನ್ ಮುಂದುವರಿಯಲಿದೆ. ಮೇ …

Read More »

ನಾಳೆ ಬಾರ್ ಓಪನ್ – ಇಂದೇ ಮದ್ಯದಂಗಡಿಗೆ ಆರತಿ ಎತ್ತಿ, ಕಾಯಿ ಒಡೆದ ಮದ್ಯಪ್ರಿಯಾ……….

ಚಿಕ್ಕಮಗಳೂರು/ಚಿತ್ರದುರ್ಗ/ಕೋಲಾರ: ಮೇ 4ರಿಂದ ರಾಜ್ಯದ ಹಲವು ಭಾಗದಲ್ಲಿ ಲಾಕ್‍ಡೌನ್ ಸಡಿಲಿಕೆಗೊಳಿಸಿ ಮದ್ಯ ಮಾರಾಟಕ್ಕೆ ಷರತ್ತು ವಿಧಿಸಿ ಅವಕಾಶ ನೀಡಲಾಗಿದೆ. ಇಷ್ಟು ದಿನ ಎಣ್ಣೆ ಇಲ್ಲದೇ ನಿರಾಶೆಗೆ ಒಳಗಾಗಿದ್ದ ಮದ್ಯಪ್ರಿಯರು ನಾಳೆ ಮದ್ಯದಂಗಡಿ ಬಾಗಿಲು ತೆರೆಯುವುದನ್ನೇ ಕಾಯುತ್ತಿದ್ದಾರೆ. ಈ ನಡುವೆ ಕೋಲಾರದಲ್ಲಿ ಮದ್ಯಪ್ರಿಯನೋರ್ವ ಅಂಗಡಿಗೆ ಬಾಗಿಲು ತೆರೆಯುವ ಮುನ್ನವೇ ಆರತಿ ಎತ್ತಿ ಪೂಜೆ ಮಾಡಿ, ಕಾಯಿ ಒಡೆದು ಖುಷಿಪಟ್ಟಿದ್ದಾನೆ. ಸೋಮವಾರ ಬಾರ್ ಓಪನ್ ಆಗುವ ಹಿನ್ನೆಲೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ …

Read More »

ವಿಷಯ: ರೈತರಿಗೆ ಸ್ಪಂದಿಸುತ್ತಿರುವ ತೊಟಗಾರಿಕೆ ಅಧಿಕಾರಿ

  ಕೊಣ್ಣೂರ :ಮಾಹಾಮಾರಿ ಕೊರಾನಾ ಇಡಿ ವೀಶ್ವವನ್ನೆ ಆತಂಕದಲ್ಲಿ ಕೆಡವಿ ಲೆಕ್ಕಕ್ಕೆ ಬಾರದಷ್ಟು ಸಾವುನ್ನು ಪಡೆದುಕೊಳ್ಳತ್ತಾ ಇದೆ ಅದರಲ್ಲೂ ದೇಶದ ಬೆನ್ನೆಲುಬು ಅನಿಸಿಕೊಂಡಿರುವ ರೈತನ ಪಾಡಂತು ಹೇಳೊಕೆ ಆಗೊಲ್ಲಾ ಹೌದು ಕೊರಾನಾ ಇವತ್ತು ಯಾರನ್ನು ಬಿಟ್ಟಿಲ್ಲ, ಅಂತದರಲ್ಲಿ ಮಳೆ,ಬಿಸಿಲು ಅನ್ನದೆ ಬೇರೆಯವರ ಹತ್ತಿರ ಸಾಲ ಮಾಡಿ ಹೊಲದಲ್ಲಿ ಬೆಳೆದ ಬೆಳೆಗೆ ಸರಿಯಾಗಿ ನಿಗದಿತ ಬೆಲೆ ಸಿಗದ ಪರಿಸ್ಥಿತಿ ಒಂದು ಕಡೆಯಾದರೆ ಕೊರಾನಾ ಲಾಕಡೌನ್ ನಿಂದ ಸಾರಿಗೆ, ಹೋಟೆಲ್ ,ದಾಭಾ,ಮದುವೆಗಳು ಬಂದು …

Read More »

ಕಾರ್ಮಿಕರ ಉಚಿತ ಪ್ರಯಾಣಕ್ಕೆ ಕೆಪಿಸಿಸಿ ವತಿಯಿಂದ 1 ಕೋಟಿ ನೆರವು

ಬೆಂಗಳೂರು,ಮೇ 3- ವಲಸೆ ಕಾರ್ಮಿಕರಿಗೆ ಉಚಿತವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಒಂದು ಕೋಟಿ ರೂ. ಚೆಕ್ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಸದೆ ಇರುವುದರಿಂದ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲಾಗದೆ ಪರದಾಡುತ್ತಿದ್ದಾರೆ. ಮಕ್ಕಳು, ಮಹಿಳೆಯರು, ವೃದ್ಧರು ಸೇರಿ ಅನೇಕ ಮಂದಿ ಊಟ, ತಿಂಡಿ ವ್ಯವಸ್ಥೆ ಬಸ್ ಇಲ್ಲದೆ ಬಸ್ ನಿಲ್ದಾಣದಲ್ಲಿ ಅನಾಥರಾಗಿ …

Read More »

ಕಲಬುರಗಿಯಲ್ಲಿ ಒಬ್ಬಂಟಿಯಾದ ಡಿಸಿಎಂ ಗೋವಿಂದ ಕಾರಜೋಳ

ಕಲಬುರಗಿ: ಜಿಲ್ಲೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಒಬ್ಬಂಟಿಯಾದ್ರಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಜಿಲ್ಲಾ ಉಸ್ತುವಾರಿಯಾದ್ರೂ ಕಲಬುರಗಿಗೆ ಕಾರಜೋಳ ಅವರು ಬಂದಿಲ್ಲ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡ ಮಜರ್ ಖಾನ್ ತರಾಟೆಗೆ ತೆಗೆದುಕೊಂಡರು ಬಿಜೆಪಿಯ ಯಾವ ನಾಯಕರು ಕಾರಜೋಳ ಅವರ ಪರ ಮಾತನಾಡದೇ ಮೌನವಾಗಿದ್ದರು. ಕೊನೆಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ನಗರದಲ್ಲಿನ ಕಂಟೈನ್‍ಮೆಂಟ್ ಝೋನ್‍ಗಳ ಪರಿಸ್ಥಿತಿ ಹಾಗೂ ಅಲ್ಲಿನ ಸ್ಥಳೀಯರಿಗೆ ಇನ್ನು ಒದಗಿಸಬೇಕಾದ ಸೌಕರ್ಯಗಳ ಮಾಹಿತಿ …

Read More »