ಬೆಂಗಳೂರು: ಲಾಕ್‍ಡೌನ್‍ನಿಂದ ಆಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ. ವಾಹಿನಿಗೆ ಸಂದರ್ಶನ ನೀಡಿದ ಅವರು, ಮುಂದೆ ಭಾರತ ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ ವಾರದ 6 ದಿನ 10 ಗಂಟೆಗಳ ಕಾಲ ಕೆಲಸ ಮಾಡುವ ಪ್ರತಿಜ್ಞೆ ಕೈಗೊಳ್ಳಬೇಕು. ವಾರದಲ್ಲಿ 40 ಗಂಟೆ ಕೆಲಸ ಮಾಡದೇ 60 ಗಂಟೆಗೆ ಕೆಲಸದ ಅವಧಿ ಏರಿಸಿದರೆ ದೇಶ …
Read More »Yearly Archives: 2020
ದಾವಣಗೆರೆಯಲ್ಲಿ ಕೊರೊನಾಗೆ ಮೊದಲ ಬಲಿ………….
ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದ್ದು 69 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ(ರೋಗಿ ಸಂಖ್ಯೆ 556) ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಜಾಲಿನಗರದ ನಿವಾಸಿಯಾಗಿದ್ದ ವ್ಯಕ್ತಿ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಈ ವ್ಯಕ್ತಿಗೆ ಕೊರೊನಾ ಹೇಗೆ ಬಂದಿದೆ ಎನ್ನುವುದು ತಿಳಿದಿಲ್ಲ. ವೃದ್ಧನ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಈ ವ್ಯಕ್ತಿಯಿಂದ …
Read More »ಮದುವೆ ಕಾರ್ಯಕ್ರಮಗಳಿಗೆ ಷರತ್ತುಬದ್ಧ ಅನುಮತಿ …………
ನವದೆಹಲಿ: ದೇಶಾದ್ಯಂತ 2 ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗಿದೆ. ಆದರೆ ಕೇಂದ್ರ ಸರ್ಕಾರ ಗುರುತಿಸಿರುವ ಗ್ರೀನ್ ಝೋನ್ ಹಾಗೂ ಆರೆಂಜ್ ಝೋನ್‍ಗಳಲ್ಲಿ ಲಾಕ್‍ಡೌನ್‍ನಿಂದ ಕೆಲ ವಿನಾಯ್ತಿಗಳನ್ನು ನೀಡಲಾಗಿದೆ. ಎಂಎಚ್‍ಎ ಆದೇಶ ಅನ್ವಯ ಮೇ.3ರ ಬಳಿಕವೂ 2 ವಾರ ಲಾಕ್‍ಡೌನ್ ಮುಂದುವರಿಯಲಿದೆ. ಆದರೆ ಹಸಿರು ವಲಯಗಳಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಕಡ್ಡಾಯ ಹಾಗೂ ಸಮಾರಂಭದಲ್ಲಿ ಭಾಗವಹಿಸಲು ಕೇವಲ 50 ಜನರಿಗಷ್ಟೇ ಅವಕಾಶ ನೀಡಲಾಗಿದೆ. …
Read More »ಲಾಕ್‍ಡೌನ್ 3 – ಯಾವ ವಲಯದಲ್ಲಿ ಏನಿರುತ್ತೆ? ಏನಿರಲ್ಲ? ಷರತ್ತುಗಳು ಏನು?
ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಕೆ – ಮದ್ಯ, ಮದುವೆಗೆ ಷರತ್ತುಬದ್ಧ ಅನುಮತಿ ಒಂದೊಂದು ಝೋನ್‍ಗೂ ಪ್ರತ್ಯೇಕವಾದ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ನವದೆಹಲಿ: ಎಲ್ಲರ ನಿರೀಕ್ಷೆಗಳನ್ನು ಹುಸಿಯಾಗಿಸದಂತೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದ್ರೆ, ಲಾಕ್‍ಡೌನ್ ವ್ಯಾಪ್ತಿ ಮತ್ತು ಸ್ವರೂಪದಲ್ಲಿ ಅಮುಲಾಗ್ರ ಬದಲಾವಣೆಗಳು ಆಗಿವೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲೆಂದು …
Read More »ಚೀನಾದಿಂದ ನಿರ್ಗಮಿಸಿದ ಕಂಪನಿಗಳಿಗೆ ಭಾರತದಲ್ಲಿ ರತ್ನಗಂಬಳಿ, ಮೋದಿ ಚಾಣಾಕ್ಷ ನಡೆ..!
ನವದೆಹಲಿ,ಮೇ2-ದೇಶವನ್ನು ಕಾಡುತ್ತಿರುವ ಕೊರೊನಾ ಸಂಕಷ್ಟದಲ್ಲಿ ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಪ್ರಧಾನಿ ನರೇಂದ್ರ ಮೋದಿ ಅನೇಕ ಮಾರ್ಗೋಪಾಯಗಳನ್ನು ಅನುಷ್ಠಾನಗೊಳಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಕೊಡುಗೆ ನೀಡಿ ಅಪಾರ ಸಾವುನೋವಿಗೆ ಕಾರಣವಾಗಿರುವ ಚೀನಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಮೆರಿಕ, ಜಪಾನ್ ಸೇರಿದಂತೆ ಅನೇಕ ದೇಶಗಳು ಕಮ್ಯುನಿಸ್ಟ್ ರಾಷ್ಟ್ರದಿಂದ ತನ್ನ ಕಂಪನಿಗಳನ್ನು ಹಿಂದಕ್ಕೆ ಕರೆಸಿಕೊಂಡಿವೆ. ಇದರ ಸದಾವಕಾಶ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಚತುರ ನಡೆ ಅನುಸರಿಸಿದ್ದಾರೆ. …
Read More »ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ….:ಲಕ್ಷ್ಮಣ ಸವದಿ..
ಬೆಂಗಳೂರು : ಇಂಧನ ಕ್ಷಮತೆಗೆ ವಿಶೇಷ ಒತ್ತು ನೀಡಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯೂ ನಿಗಮಗಳಲ್ಲಿ ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ ಮಾಡಿದೆ.ನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ, ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಂದ ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು. ಈ ವೇಳೆ ಬಿಎಂಟಿಸಿ ಅಧ್ಯಕ್ಷ ಎನ್.ಎಸ್. ನಂದೀಶ್ ರೆಡ್ಡಿ, ನಿರ್ದೇಶಕಿ ಶಿಖಾ ಹಾಗೂ ಕೆಎಸ್ಆರ್ಟಿಸಿಯ …
Read More »ಇರೋಕೆ ಊಟ ಇಲ್ಲ, ಹೋಗೋಕೆ ಕಾಸಿಲ್ಲ : ಅಡಕತ್ತರಿಯಲ್ಲಿ ಅಂತರ ರಾಜ್ಯ ಕಾರ್ಮಿಕರ ಭವಿಷ್ಯ..!
ಬೆಂಗಳೂರು : ಅಂತರ ರಾಜ್ಯ ವಲಸಿಗರ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅಸ್ತು ಎಂದಿದೆ. ರಾಜ್ಯದಲ್ಲೂ ಅನ್ಯ ರಾಜ್ಯದ ಸಾವಿರಾರು ವಲಸಿಗರು ಸಿಲುಕಿಕೊಂಡಿದ್ದು, ತಮ್ಮ ಊರುಗಳಿಗೆ ಹೋಗಲು ಹಾತೊರೆಯುತ್ತಿದ್ದಾರೆ. ಆದರೆ, ಹಲವು ವಲಸಿಗರಿಗೆ ತಮ್ಮ ತವರು ರಾಜ್ಯಕ್ಕೆ ಹೋಗುವ ರಹದಾರಿ ಕಠಿಣವಾಗಿದೆ. ಕೊರೊನಾ ಲಾಕ್‍ಡೌನ್‍ನಿಂದ ವಲಸಿಗರು ಅತಂತ್ರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಒಂದು ಕಡೆ ಕೆಲಸ ಇಲ್ಲ, ಇನ್ನೊಂದೆಡೆ ವಸತಿ, ಆಹಾರ ಇಲ್ಲದೇ ಸಾಕಷ್ಟು ಸಂಕಷ್ಟಕ್ಕೊಳಗಾಗಿದ್ದಾರೆ. ಆಯಾ ರಾಜ್ಯ ಸರ್ಕಾರ ವಲಸಿಗರಿಗೆ …
Read More »ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು ಸಿಎಂ ಬಿಎಸ್ವೈ ಮಾಸ್ಟರ್ ಪ್ಲಾನ್..!
ಬೆಂಗಳೂರು : ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಹೀಗಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಭರ್ಜರಿ ಪ್ಲಾನ್ ರೂಪಿಸಿದೆ. ಮೇ 3ರ ನಂತರ ಆರ್ಥಿಕ ಮಿತವ್ಯಯಕ್ಕಾಗಿ ಇಲಾಖೆಗಳಿಗೆ ಮೇಜರ್ ಸರ್ಜರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಇಲಾಖೆಗಳ ವಿಲೀನ, ಮತ್ತೆ ಕೆಲವು ಬರ್ಖಾಸ್ತು ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಚಿವ ಸಂಪುಟ ಉಪಸಮಿತಿಯ …
Read More »ವಿದ್ಯಾರ್ಥಿಗಳಿಗೆ ಬಿಗ್ ಶಾಕ್..! ದಂತ-ವೈದ್ಯಕೀಯ ಕೋರ್ಸ್‍ಗಳ ಶುಲ್ಕ ಹೆಚ್ಚಳ ……
ಬೆಂಗಳೂರು : ರಾಜ್ಯ ಸರ್ಕಾರವು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸ್ನಾತಕೋತ್ತರ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿದೆ. ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಿದೆ.ಪ್ರತಿ ವರ್ಷ 10-15% ಶುಲ್ಕ ಹೆಚ್ಚಳ ಆಗುತ್ತಿತ್ತು. ಆದರೆ ಈ ಬಾರಿ ಸರ್ಕಾರ ಮತ್ತಷ್ಟು ಶುಲ್ಕ ಹೆಚ್ಚಳ ಮಾಡಿದೆ. ಇನ್ನೆರಡು ದಿನಗಳಲ್ಲಿ ಸಿಟಿಇ ಕೌನ್ಸಿಲಿಂಗ್ …
Read More »ಕಾರ್ಮಿಕರನ್ನು ಕರೆತರಲು-ಕಳಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ………….
ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ವಿವಿಧ ರಾಜ್ಯಗಳ ಕಾರ್ಮಿಕರು ಸಿಲುಕಿದ್ದಾರೆ. ಬೇರೆ-ಬೇರೆ ರಾಜ್ಯಗಳಲ್ಲಿ ಕರ್ನಾಟಕದ ಕಾರ್ಮಿಕರು ಇದ್ದಾರೆ. ಅವರನ್ನು ವಾಪಸ್ ಕರೆತರುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಕಾರ್ಮಿಕರನ್ನು ಕರೆತರಲು ಮತ್ತು ಕಳುಹಿಸಲು ವಿವಿಧ ರಾಜ್ಯಗಳ ಜೊತೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಪ್ರಕ್ರಿಯೆಯನ್ನು ಇಬ್ಬರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ನೋಡಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳ ಪ್ರಯಾಣಕ್ಕೆ …
Read More »