Breaking News

Yearly Archives: 2020

ರೈತನ ಜೀವನಾಧಾರವಾಗಿರುವ ಜಾನುವಾರುಗಳ ನೋವಿಗೆ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ.:ಎಸ್.ಮಲ್ಲಯ್ಯ

ಬೆಂಗಳೂರು: ಕೊರೊನಾ ಲಾಕ್‍ಡೌನ್ ಆಗಿ ಒಂದು ತಿಂಗಳು ಕಳೆಯುತ್ತಿದ್ದು, ಸಾಕಷ್ಟು ಜನರು ಬಡ ಹಾಗೂ ಕೂಲಿ ಕಾರ್ಮಿಕರ ನೆರವಿಗೆ ಸ್ಪಂದಿಸುತ್ತಿರುವುದು ಶ್ಲಾಘನೀಯ. ಆದರೆ ಇಲ್ಲೊಬ್ಬ ವ್ಯಕ್ತಿ ರೈತನ ಜೀವನಾಧಾರವಾಗಿರುವ ಜಾನುವಾರುಗಳ ನೋವಿಗೆ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ. ನೆಲಮಂಗಲದ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಮಲ್ಲಯ್ಯ ಜಾನುವಾರುಗಳಿಗೆ ಮೇವು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ರೈಲ್ವೆ ಗೊಲ್ಲಹಳ್ಳಿ ಗ್ರಾಮದಲ್ಲಿ ಹೈನುಗಾರಿಕೆ ಆಧಾರಿತ ಕುಟುಂಬಗಳ ಕೃಷಿಕರಿಗೆ ಸಹಾಯ ಮಾಡುವ ಉದ್ದೇಶದಿಂದ ಹಸುಗಳಿಗೆ …

Read More »

ಅಕ್ರಮ ಮದ್ಯ ಸಾಗಾಟದಲ್ಲಿ ಅಧಿಕಾರಸ್ಥರ ಕೈವಾಡ; A.A.P.ಆರೋಪ

ಬೆಂಗಳೂರು, ಏಪ್ರಿಲ್ 25: ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಎಗ್ಗಿಲ್ಲದೆ ಮದ್ಯ ಸರಬರಾಜು ಆಗುತ್ತಿದೆ. ಮುಖ ಬೆಲೆಯ ಹತ್ತು ಪಟ್ಟಿಗೂ ಹೆಚ್ಚಿನ ಬೆಲೆಯಲ್ಲಿ ಮದ್ಯ ಸರಬರಾಜು ಮಾಡಿ ನೂರಾರು ಕೋಟಿ ರೂಪಾಯಿಗಳ ಅಕ್ರಮ ಗಳಿಕೆಗೆ ಈ ಲಾಕ್ ಡೌನ್ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಸಮಾಜ ವಿದ್ರೋಹಿ ಶಕ್ತಿಗಳ ಹಿಂದೆ ಅಧಿಕಾರಸ್ಥರ ನೇರ ಕೈವಾಡವಿರುವುದು ಕಂಡುಬರುತ್ತಿದೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷ ಆರೋಪಿಸಿದೆ‌. ಬೆಂಗಳೂರು ನಗರದ ಎಸಿಪಿ ವಾಸು ಎಂಬುವವರು …

Read More »

ಏರ್ ಪೋರ್ಟ್‌ ರಸ್ತೆಯಲ್ಲಿ ಟೋಲ್ ಶುಲ್ಕ ಹೆಚ್ಚಳ …….

ಬೆಂಗಳೂರು, ಏಪ್ರಿಲ್ 26 : ಲಾಕ್ ಡೌನ್ ಮುಗಿದ ಬಳಿಕ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಸಂಚಾರ ನಡೆಸುವ ವಾಹನ ಸವಾರರು ಹೆಚ್ಚಿನ ಟೋಲ್ ಶುಲ್ಕ ಪಾವತಿ ಮಾಡಬೇಕು. ಹೌದು, ಎನ್‌ಎಚ್‌ಎಐ 5 ರಿಂದ 30 ರೂ. ತನಕ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಿದೆ. ಸಾದಹಳ್ಳಿ ಟೋಲ್‌ ಗೇಟ್‌ನಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಶುಲ್ಕ ಹೆಚ್ಚಳ ಮಾಡಿದೆ. ಕಾರು, ವ್ಯಾನ್, ಜೀಪು ಒಂದು ಕಡೆ …

Read More »

ಇಂದು ಬರಲಿದೆ ಪಾದರಾಯನಪುರ ಪುಂಡರ ಬಂಧಿಸಿದ್ದ ಪೊಲೀಸರ ಕೊರೊನಾ ಪರೀಕ್ಷಾ ವರದಿ ……..

ಬೆಂಗಳೂರು, ಏ. 27: ಪಾದರಾಯನಪುರ ಗಲಭೆ ಪ್ರಕರಣ ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯ ಕೋವಿಡ್ ಸೋಂಕಿನ ಪರೀಕ್ಷಾ ವರದಿ ಇವತ್ತು ಬರಲಿದೆ. ಪರೀಕ್ಷೆಗೆ ಒಳಪಟ್ಟಿರುವ ಸಿಬ್ಬಂದಿ ಕುರಿತು ಗೃಹ ಇಲಾಖೆ ಕೂಡ ಆತಂಕದಲ್ಲಿದೆ. ಕಳೆದ ಏಪ್ರಿಲ್ 19 ರಂದು ಕೊರೊನಾ ವೈರಸ್ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಪಾದರಾಯನಪುರ ಪುಂಡರನನ್ನು ಕ್ವಾರಂಟೈನ್‌ಗೆ ಕರೆದೊಯ್ಯಲು ಬಂದಿದ್ದಾಗ ಹಲ್ಲೆ ನಡೆದಿತ್ತು. ಬಳಿಕ ಹೆಚ್ಚಿನ ಪೊಲೀಸ್ ಸಿಬ್ಬಂದಿ ಮೂಲಕ ಶಂಕಿತರನ್ನು ವಶಕ್ಕೆ ಪಡೆದು …

Read More »

ರಾಜ್ಯದಲ್ಲಿ ಕೊರೋನ ಪರೀಕ್ಷಾ ಪ್ರಯೋಗಾಲಯಗಳ ಸಂಖ್ಯೆಯಲ್ಲಿ ಏರಿಕೆ …..

ಬೆಂಗಳೂರು : ರಾಜ್ಯದಲ್ಲಿ ಕೊರೋನ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಈಗ ಮತ್ತಷ್ಟು ಬಲ ಬಂದಂತಾಗಿದೆ. ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸ್ವಾಬ್ ಕಲೆಕ್ಟಿಂಗ್ ಬೂತ್ ಗಳಿಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ತೇಜಸ್ವಿ ಸೂರ್ಯ, ಕಿದ್ವಾಯಿ ಸಂಸ್ಥೆಯ ನಿರ್ದೇಶಕ ಡಾ.ರಾಮಚಂದ್ರ ಅವರು ಉಪಸ್ಥಿತರಿದ್ದರು. …

Read More »

ಲಾಕ್‍ಡೌನ್‍ನಲ್ಲೂ ಹೆಚ್ಚಾದ ಬೈಕ್ ಕಳ್ಳತನ: ಇಬ್ಬರ ಬಂಧನ, 8 ಬೈಕ್ ವಶ……

ರಾಯಚೂರು: ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ಇಡೀ ದೇಶವೇ ಲಾಕ್‍ಡೌನ್‍ನಲ್ಲಿದ್ದರೆ ಜಿಲ್ಲೆಯಲ್ಲಿ ಬೈಕ್ ಕಳ್ಳರ ಹಾವಳಿ ಜೋರಾಗಿದೆ. ಇತ್ತೀಚೆಗೆ ಬೈಕ್ ಕಳ್ಳತನಗಳು ಹೆಚ್ಚಾದ ಹಿನ್ನೆಲೆ ಮಾನ್ವಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ ವಿವಿಧ ಠಾಣೆ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ಕಳ್ಳರನ್ನ ಬಂಧಿಸಿದ್ದಾರೆ. ಮಸ್ಕಿ ತಾಲೂಕಿನ ಸೋಮನಾಥಪುರದಲ್ಲಿ ಮೇಷನ್ ಕೆಲಸ ಮಾಡುತ್ತಿದ್ದ ಉಮೇಶ್, ಮಾನವಿ ಕೋನಾಪುರಪೇಟೆಯ ಆಟೋ ಚಾಲಕ ಅಕ್ತರ್ ಬಂಧಿತ ಆರೋಪಿಗಳು. ಬಂಧಿತರಿಂದ 3.55 ಲಕ್ಷ ರೂ. ಮೌಲ್ಯದ …

Read More »

ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖ

ನವದೆಹಲಿ: ಕೊರೊನಾ ವೈರಸ್ ಭೀತಿ ನಡುವೆ ಒಂದು ಶುಭ ಸುದ್ದಿಯೊಂದು ಲಭ್ಯವಾಗಿದ್ದು, ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಭಾರತದಲ್ಲಿಯೇ ಮೊದಲ ಪ್ರಕರಣವಾಗಿದೆ. ದೆಹಲಿಯ 49 ವರ್ಷದ ವ್ಯಕ್ತಿಗೆ ಕೋವಿಡ್-19 ಪಾಸಿಟಿವ್ ಇದೆ ಎಂದು ಏಪ್ರಿಲ್ 4ರಂದು ದೃಢಪಟ್ಟಿತ್ತು. ರೋಗಿ ತೀವ್ರ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಅವರಿಗೆ ಉಸಿರಾಡಲು ಸಹಾಯವಾಗಲಿ ಎಂದು ವೆಂಟಿಲೇಟರ್ ಅಳವಡಿಸಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ …

Read More »

ಪೊಲೀಸರು ಬೀದಿ ನಾಟಕ ಪ್ರದರ್ಶಿಸುವ ಮೂಲಕ ಮಹಾಮಾರಿ ಕೊರೊನಾ ಕುರಿತು ಜಾಗೃತಿ

ಚಿಕ್ಕಮಗಳೂರು: ಕೊರೊನಾ ಆತಂಕದಿಂದಾಗಿ ಮನೆಯಲ್ಲೇ ಇರಿ ಎಂದು ಪೊಲೀಸರು ಲಾಠಿ ಹಿಡಿದಾಯ್ತು, ಒದೆ ಕೊಟ್ಟಾಯ್ತು, ಕೇಸು ಹಾಕಾಯ್ತು, ಕೈ ಮುಗಿದಾಯ್ತು. ಜನ ಯಾವುದಕ್ಕೂ ಜಪ್ಪಯ್ಯ ಅನ್ನಲಿಲ್ಲ. ಹಾಗಾಗಿ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ವಿಭಿನ್ನವಾಗಿ ಜನಸಾಮಾನ್ಯರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಜಾಗತಿಕ ಶಾಪವಾಗಿ ಕಾಡುತ್ತಿರುವ ಕೊರೊನಾ ಮಹಾಮಾರಿ ವಿರುದ್ಧ ಜನರಿಗೆ ಎಲ್ಲಾ ರೀತಿಯ ಮನವಿ ಮಾಡಿಕೊಂಡಿದ್ದ ಪೊಲೀಸರು ಇದೀಗ ವಿಭಿನ್ನ ಪ್ರಯತ್ನಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಬಾಳೆಹೊನ್ನೂರು ಪೊಲೀಸರು …

Read More »

ಹಾಟ್‍ಸ್ಪಾಟ್‍ಗಳ ಮಧ್ಯೆಯಿದ್ರೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿಲ್ಲ……….

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಕೇಸ್‍ಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹಾಟ್‍ಸ್ಪಾಟ್‍ಗಳ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಆದರೆ ಹಾಟ್‍ಸ್ಪಾಟ್‍ಗಳ ಮಧ್ಯೆಯಿದ್ರೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ನಂಜನಗೂಡು, ದೆಹಲಿ ನಿಜಾಮುದ್ದೀನ್ ಪ್ರಕರಣದ ಬಳಿಕ ಚಾಮರಾಜನಗರದಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಅಲ್ಲಿಂದ ಬಂದವರ ರಿಪೋರ್ಟ್ ಸಹ ನೆಗೆಟಿವ್ ಬಂದಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ನೆರೆ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಜೊತೆಗೆ ನೆರೆ …

Read More »

ಮೇ 3ರ ನಂತರ ಲಾಕ್‍ಡೌನ್ ವಿಸ್ತರಣೆ ಆಗುತ್ತಾ? – ಇಂದು ರಾಜ್ಯಗಳ ಜೊತೆ ಮೋದಿ ಸಭೆ

ನವದೆಹಲಿ/ಬೆಂಗಳೂರು: ಮೇ 3ಕ್ಕೆ ಲಾಕ್‍ಡೌನ್ ಮುಗಿಯುತ್ತದೋ? ಇಲ್ಲವೋ ಈ ಪ್ರಶ್ನೆಗೆ ಇಂದು ಉತ್ತರ ಸಿಗುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 10 ಗಂಟೆಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಕೋವಿಡ್ ನಿಯಂತ್ರಣ ಕ್ರಮ, ಲಾಕ್‍ಡೌನ್ ವಿಸ್ತರಣೆ  ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕೊರೊನಾ ಸಂಬಂಧ ಮೋದಿಯವರು ಮೂರನೇ ಬಾರಿ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡುತ್ತಿದ್ದು, ಇಂದು ಸಂಜೆಯ ವೇಳೆ ಮೇ 3ರ ನಂತರ ಲಾಕ್‍ಡೌನ್ …

Read More »