ಧಾರವಾಡ: ಜಿಲ್ಲೆಯಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯ ಇಬ್ಬರು ಕೊರೊನಾದಿಂದ ಗುಣಮುಖರಾದಂತಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ವ್ಯಕ್ತಿ ಗುಣಮುಖನಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರುವ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ. ದೆಹಲಿ ಪ್ರವಾಸದಿಂದ ಮರಳಿ ಬಂದಿದ್ದ ಹುಬ್ಬಳ್ಳಿ ಮುಲ್ಲಾ ಓಣಿಯ 27 ವರ್ಷದ ವ್ಯಕ್ತಿಗೆ (ರೋಗಿ ನಂ.194) ಕೊರೊನಾ ಸೋಂಕು ತಗುಲಿರುವುದು ಏಪ್ರಿಲ್ 9 ರಂದು …
Read More »Yearly Archives: 2020
ರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್‍ಮಾಲ್ ಮಾಡುತ್ತಿದ್ದಾರೆ: ಸಿ.ಟಿ.ರವಿ
ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಸರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್‍ಮಾಲ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್, ನಿಡುವಾಳೆ, ಕೂವೆ ಗ್ರಾಮಗಳ ಸೊಸೈಟಿಯಲ್ಲಿ ಅಕ್ರಮ ನಡೆಯುತ್ತಿದ್ದು, ನಿಗದಿಗಿಂತ ಕಡಿಮೆ ಪಡಿತರ ನೀಡುತ್ತಿದ್ದಾರೆ. ಜೊತೆಗೆ ಎಲ್ಲರಿಂದಲೂ …
Read More »ರಾಮನಗರ ಬಿಟ್ಟು ಬೇರೆ ಕಡೆ ಶಿಫ್ಟ್ ಮಾಡಿದ್ರೆ ತೊಂದರೆ ಆಗಲ್ವಾ:ಸಿಎಂ ಕುಮಾರಸ್ವಾಮಿಗೆ ತಿರುಗೇಟು ಜಗದೀಶ್ ಶೆಟ್ಟರ್
ಧಾರವಾಡ: ಬೆಂಗಳೂರಿನ ಪಾದರಾಯನಪುರದಲ್ಲಿ ಗಲಾಟೆ ಮಾಡಿದವರಿಗೆ ಎಲ್ಲಾದ್ರು ಒಂದು ಕಡೆ ಇಡಲೇಬೇಕಲ್ಲಾ. ಇಡೀ ರಾಜ್ಯದಲ್ಲಿ ರಾಮನಗರ ಒಂದೇ ಇದೆ ಎಂದು ಸೀಮಿತವಾಗಬೇಡಿ ಎಂದು ಸಚಿವ ಜಗದೀಶ್ ಶೆಟ್ಟರ್ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಬಳಿ ಕೋವಿಡ್-19 ಪರೀಕ್ಷೆಯ ಗಂಟಲು ದ್ರವ ಮಾದರಿ ಸಂಚಾರ ವಾಹನ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಮನಗರ ಜೈಲು ಬಿಟ್ಟು ಬೇರೆ ಕಡೆ ಪಾದರಾಯನಪುರ ಆರೋಪಿಗಳನ್ನು ಇಟ್ಟರೆ, ಅಲ್ಲಿ ಕೂಡಾ …
Read More »ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿಯ ಡಿಸ್ಚಾರ್ಜ್ಹೂವು, ಹಣ್ಣು ಮತ್ತು ಸ್ವೀಟ್ಸ್ ಕೊಟ್ಟುಶುಭ ಹಾರೈಸಿ ಡಿಸ್ಚಾರ್ಜ್ ಮಾಡಿದರು.
ಉಡುಪಿ: ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿಯ ಡಿಸ್ಚಾರ್ಜ್ ಆಗಿದೆ. ಮಹಿಳೆಯ ಆರೋಗ್ಯದಲ್ಲಿ ಸಂಪೂರ್ಣ ಸುಧಾರಣೆಯಾಗಿದ್ದು, ಮಲ್ಲಿಗೆ ಹೂವು, ಹಣ್ಣು ಮತ್ತು ಸ್ವೀಟ್ಸ್ ಕೊಟ್ಟು ಡಿಸ್ಚಾರ್ಜ್ ಮಾಡಲಾಗಿದೆ. ಗರ್ಭಿಣಿಯ ಎರಡು ಕೋವಿಡ್ ತಪಾಸಣೆಯಲ್ಲೂ ನೆಗೆಟಿವ್ ಎಂದು ವರದಿ ಬಂದಿದೆ. ಹೀಗಾಗಿ ಟಿಎಂಎ ಪೈ ಕೋವಿಡ್ ಆಸ್ಪತ್ರೆಯ ವೈದ್ಯರು ಮತ್ತು ಜಿಲ್ಲಾಡಳಿತ ಮಹಿಳೆಯನ್ನು ವಿಶೇಷವಾಗಿ ಬೀಳ್ಕೊಟ್ಟರು. ಉಡುಪಿಯ ಶಂಕರಪುರ ಮಲ್ಲಿಗೆ, ಹಣ್ಣುಗಳು, ಸಿಹಿತಿಂಡಿಗಳನ್ನು ಕೊಟ್ಟು ಶುಭ ಹಾರೈಸಿ ಡಿಸ್ಚಾರ್ಜ್ …
Read More »ನಮ್ಗೆ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ, ನಮ್ಮನ್ನ ಕ್ವಾರಟೆಂನ್‍ನಲ್ಲಿ ಇಡಬೇಡಿ – ಎಚ್‍ಡಿಕೆ ಬಳಿ ಜೈಲು ಸಿಬ್ಬಂದಿ ಅಳಲು
ರಾಮನಗರ: ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿದ್ದ 120 ಮಂದಿ ಪಾದರಾಯನಪುರ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮೂವರನ್ನು ಶಂಕಿತರು ಎಂದು ಗುರುತಿಸಲಾಗಿದೆ. ಹೀಗಾಗಿ ಜೈಲಿನ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲು ಚಿಂತಿಸಲಾಗುತ್ತಿದೆ. ಈ ಬಗ್ಗೆ ತಿಳಿದ ಸಿಬ್ಬಂದಿ ಮಾತ್ರ ನಮ್ಮನ್ನು ಕ್ವಾರಂಟೈನ್ ಮಾಡಬೇಡಿ. ನಮ್ಮನ್ನು ಕ್ವಾರಂಟೈನ್ ಮಾಡುವುದಾದರೆ ನಮ್ಮ ಕ್ವಾಟ್ರಸ್‍ನಲ್ಲೇ ಕ್ವಾರಂಟೈನ್ ಮಾಡಲು ಹೇಳಿ. ನಮಗೆ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ ಎಂದು ಮಾಜಿ ಸಿಎಂ ಹೆಚ್‍ಡಿಕೆ ಬಳಿ ಅಳಲನ್ನು …
Read More »ಮಂಗಳೂರು:ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡಲ್ಲ ಶಾಸಕ ಡಾ.ವೈ.ಭರತ್ ಶೆಟ್ಟಿ ಪೊಲೀಸರಿಗೆ ಆವಾಜ್
ಮಂಗಳೂರು: ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡಲ್ಲ ಎಂದು ಮಂಗಳೂರಿನ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಪೊಲೀಸರಿಗೆ ಆವಾಜ್ ಹಾಕಿದ ಘಟನೆ ನಡೆದಿದ್ದು, ಸಾರ್ವಜನಿಕರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕೊರೊನಾದಿಂದ ಸಾವಿಗೀಡಾದ ವೃದ್ಧೆಯ ಶವ ಸುಡಲು ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿನ್ನೆ ತಡರಾತ್ರಿ ಪೇಚಾಟಕ್ಕೆ ಸಿಲುಕಿತ್ತು. ಆರಂಭದಲ್ಲಿ ಮಂಗಳೂರು ನಗರದ ಬೋಳೂರಿನ ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರಕ್ಕೆ ನಿಶ್ಚಯಿಸಲಾಗಿತ್ತು. ಆದರೆ ಸ್ಥಳೀಯ ಶಾಸಕ ವೇದವ್ಯಾಸ್ …
Read More »ಜನ ಅನವಶ್ಯಕವಾಗಿ ಸುತ್ತಾಡುವದನ್ನು ನಿಯಂತ್ರಿಸಲು ಶಾಸಕ ಅಭಯ ಪಾಟೀಲ ಹೊಸ ಐಡಿಯಾ
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ಸಮರ್ಪಕವಾಗಿ ತಡೆಗಟ್ಟಲು,ಬೆಳಗಾವಿ ನಗರದ ಜನ ಅನವಶ್ಯಕವಾಗಿ ಸುತ್ತಾಡುವದನ್ನು ನಿಯಂತ್ರಿಸಲು ಶಾಸಕ ಅಭಯ ಪಾಟೀಲ ಹೊಸ ಐಡಿಯಾ ಹುಡಕಿದ್ದಾರೆ . ಅತ್ಯಂತ ವಿಶಾಲವಾಗಿರುವ ಬೆಳಗಾವಿ ನಗರದಲ್ಲಿ ಹೊರಗಡೆ ಸುತ್ತಾಡುವ ಜನರನ್ನು ತಡೆಯಲು ಪೋಲೀಸರು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.ಅನವಶ್ಯಕವಾಗಿ ಸುತ್ತಾಡುವ ಜನರನ್ನು ಸರಳವಾಗಿ ಗುರುತಿಸಿ ಅವರನ್ನು ದಂಡಿಸಲು ಶಾಸಕ ಅಭಯ ಪಾಟೀಲ ಬೆಳಗಾವಿ ನಗರದಲ್ಲಿ ಹದಿನಾಲ್ಕು ದ್ರೋಣ ಕ್ಯಾಮರಾಗಳನ್ನು ಬೆಳಗಾವಿಯ ಬಾನಂಗಳದಲ್ಲಿ ಹಾರಿ …
Read More »ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ
ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು. ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು. ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಚರ್ಚಿಸಿದರು
Read More »ರಾಯಬಾಗ ,ಚಿಕ್ಕೋಡಿ ವಲಯಗಳ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಮಾರಾಟ ಸ್ಥಳಗಳ ಮೇಲೆಅಬಕಾರಿ ಇಲಾಖೆ ದಾಳಿ….
ಚಿಕ್ಕೋಡಿ : ರಾಯಬಾಗ ಹಾಗೂ ಚಿಕ್ಕೋಡಿ ವಲಯಗಳ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಮಾರಾಟ ಸ್ಥಳಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದ್ವಿಚಕ್ರದ ವಾಹನ, ಟಾಟಾ ಇಂಡಿಗೋ ಕಾರ್,ಕಳ್ಳಭಟ್ಟಿ ಸರಾಯಿ ಸೇರಿ ಸುಮಾರು 4 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ಗುರುವಾರ ವಶ ಪಡಿಸಿಕೊಂಡಿದ್ದಾರೆ. ಚಿಕ್ಕೋಡಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ವಿಜಯಕುಮಾರ್ ಹಿರೇಮಠರವರ ನೇತೃತ್ವದಲ್ಲಿ ಅಬಕಾರಿ ಉಪ ಆಯುಕ್ತ ಬಸವರಾಜ್ ಸಂದಿಗವಾಡ್, ಅಬಕಾರಿ ಇನ್ಸ್ಪೆಕ್ಟರ್ ಬಸವರಾಜ್ ಕರಾಮಣ್ಣವರ್ ಇವರು …
Read More »ಮದ್ಯ ಸಾಗಾಟ ಮಾಡುತ್ತಿದ್ದಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಮುಗಳಖೋಡ: ಲಾಕಡೌನ ಹಿನ್ನೆಲೆಯಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕ ಸೇರಿ ಐವರನ್ನು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಪ್ರತ್ಯೇಕ ದಾಳಿಯಲ್ಲಿ ಬಂಧಿಸಿದ್ದಾರೆ. ಶಾಸಕ ಕಾರ್ ಚಾಲಕ ಪಾಲಬಾಂವಿ ಗ್ರಾಮದ ಬಾಳೇಶ ಭರಮಪ್ಪ ತಳವಾರ (30) ಸೇರಿದಂತೆ ಇತರೆ ಐವರು ಆರೋಪಿಗಳಿಂದ ಒಟ್ಟು ರೂ 15.635 ಮೌಲ್ಯದ ಮಧ್ಯ ಹಾಗೂ ಎರಡು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಕಿಣೆಯ ಗ್ರಾಮದ ಬಳಿ ಬೋಲೆರೋ …
Read More »