ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ಕಡಿಮೆಯಾಗದ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಜತೆಗೆ ಕೇಂದ್ರ ಗೃಹ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿ ಮತ್ತು ಮುಂದೆ ಕೈಗೊಳ್ಳಬೇಕಾದ ಮಹತ್ವ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ಧಾರೆ. ಬೆಂಗಳೂರು(ಏ.20): ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಚ್ 23ರಿಂದ ಏಪ್ರಿಲ್ 14ರತನಕ 21 …
Read More »Yearly Archives: 2020
ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಪಕ್ಷದ ಜೊತೆಗೆ ಹೆಜ್ಜೆ ಹಾಕುವುದು ನಮ್ಮ ಕರ್ತವ್ಯವೂ ಹೌದು; ಸಿದ್ದರಾಮಯ್ಯ
ಬೆಂಗಳೂರು (ಏಪ್ರಿಲ್ 19); ಕೊರೋನಾ ಸೋಂಕು ಇಡೀ ರಾಜ್ಯಕ್ಕೆ ಕಂಟಕವಾಗಿರುವ ಹಿನ್ನೆಲೆಯಲ್ಲಿ ಈ ಸೋಂಕು ಹರಡದಂತೆ ತಡೆಯುವ ಮತ್ತು ಕುಸಿಯುತ್ತಿರುವ ರಾಜ್ಯದ ಆರ್ಥಿಕತೆಯನ್ನು ಸುಧಾರಿಸಲು ಪರಿಹಾರ ಸೂಚಿಸುವುದು ಹಾಗೂ ಇಂತಹ ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಪಕ್ಷದ ಜೊತೆ ಜೊತೆಗೆ ಹೆಜ್ಜೆ ಹಾಕುವುದು, ಸತ್ಯಗಳನ್ನು ಪ್ರಸ್ತುತ ಪಡಿಸುವುದು ವಿರೋಧ ಪಕ್ಷದ ಕರ್ತವ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಮಾಜಿ ಸ್ಪೀಕರ್ ರಮೇಶ್ …
Read More »ಆಸ್ಪತ್ರೆ ಸಿಗದೇ 7 ಕಿ.ಮೀ ನಡಿಗೆ – ಕೊನೆಗೆ ಡೆಂಟಲ್ ಆಸ್ಪತ್ರೆಯಲ್ಲಿ ಹೆರಿಗೆ
ಬೆಂಗಳೂರು: ಕೊರೊನಾ ಲಾಕ್‍ಡೌನ್ ವೇಳೆ ಏಳು ಕಿ.ಮೀ ನಡೆದುಕೊಂಡು ಬಂದು ಕೊನೆಗೆ ಎಲ್ಲೂ ಆಸ್ಪತ್ರೆ ಸಿಗದೆ ಡೆಂಟಲ್ ಆಸ್ಪತ್ರೆಯಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಂಗಳೂರಿನ ದೊಡ್ಡ ಬೊಮ್ಮಸಂದ್ರದಲ್ಲಿ ನಡೆದಿದೆ. ಕೊರೊನಾ ಲಾಕ್‍ಡೌನ್‍ನಿಂದ ದೇಶವೇ ಸ್ತಬ್ಧವಾಗಿದೆ. ಈ ವೇಳೆ ಲೊಟ್ಟೆಗೊಲ್ಲಹಳ್ಳಿಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಆಸ್ಪತ್ರೆಗೆ ಹೋಗಲು ಯಾವುದೇ ವಾಹನ ಕೂಡ ಸಿಕ್ಕಿಲ್ಲ. ಆಕೆ ಆಸ್ಪತ್ರೆ ಸಿಗುತ್ತದೆ ಎಂಬ …
Read More »ಕೀರ್ತಿ ಅವರು ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡುತ್ತಿರುವ ವಿಡಿಯೋ ನೋಡಿದ ಅಭಿಮಾನಿಗಳು ಫಿದಾ
ಚೆನ್ನೈ: ಕೊರೊನಾ ಲಾಕ್‍ಡೌನ್ ಸಮಯವನ್ನು ಕೆಲವು ನಟ-ನಟಿಯರು ತಮ್ಮ ಕುಟುಂಬದ ಜೊತೆಗೆ ಕಳೆಯುತ್ತಿದ್ದಾರೆ. ಕೆಲವರು ಸಾಮಾಜಿಕ ಜಾಲತಾಣದಲ್ಲಿ ಲಾಕ್‍ಡೌನ್‍ನಲ್ಲಿ ಏನು ಮಾಡುತ್ತಿದ್ದೇವೆ ಎಂದು ಶೇರ್ ಮಾಡುತ್ತಾ ಅಭಿಮಾನಿಗಳಿಗೆ ಅಪ್ಡೇಟ್ ಕೊಡುತ್ತಿದ್ದಾರೆ. ಆದರೆ ತಮಿಳು ನಟಿಯೊಬ್ಬರು ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡೋದ್ರಲಿ ಬ್ಯುಸಿಯಾಗಿದ್ದಾರೆ. ತಮಿಳು ನಟಿ ಕೀರ್ತಿ ಪಾಂಡಿಯನ್ ಟ್ರ್ಯಾಕ್ಟರ್ ಓಡಿಸುತ್ತಾ ಹೊಲ ಉಳುಮೆ ಮಾಡುತ್ತಾ ತಮ್ಮ ಲಾಕ್‍ಡೌನ್ ಅವಧಿಯನ್ನು ಎಂಜಾಯ್ ಮಾಡುತ್ತಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಾ ಲಾಕ್‍ಡೌನ್ ಸಮಯ …
Read More »ಕೊಡಗಿನ ಬಡವರ ಕಷ್ಟಕ್ಕೆ ಮಾಧ್ಯಮ ‘ಸ್ಪಂದನ’.
ಮಡಿಕೇರಿ: ಸಮಾಜದಲ್ಲಿ ಪತ್ರಕರ್ತರಿಂದ ಹೆಚ್ಚು ಪ್ರಚಾರಗಿಟ್ಟಿಸಿಕೊಳ್ಳುವವರೇ ಹೆಚ್ಚು. ಅದರಲ್ಲೂ ಈ ಲಾಕ್‍ಡೌನ್ ಸಮಯದಲ್ಲಿ ಬಡ ಜನರಿಗೆ ಸೇವೆ ಮಾಡುವ ಅನೇಕ ಸಂಘ ಸಂಸ್ಥೆಗಳು ಮಾಧ್ಯಮದವರು ಹಾಗೂ ಪತ್ರಕರ್ತರನ್ನು ಕರೆದುಕೊಂಡು ಹೋಗಿ ಪ್ರಚಾರ ಪಡೆದುಕೊಳ್ಳುತ್ತಾರೆ. ಪ್ರಚಾರ ಕೊಡುವ ಪತ್ರಕರ್ತರೇ ಯಾರಿಗೂ ತಿಳಿಯದಂತೆ ಸಂಕಷ್ಟದಲ್ಲಿ ಇರುವವರಿಗೆ ಮಾಧ್ಯಮ ಸ್ಪಂದನ ತಂಡ ಕಟ್ಟಿಕೊಂಡು ಜಿಲ್ಲೆಯ ವಿವಿಧೆಡೆ ತಮ್ಮ ಕೈಯಿಂದ ಆಗುವ ಸಹಾಯವನ್ನು ಮಾಡುತ್ತಿದ್ದಾರೆ. ಹೌದು, ಕೊಡಗಿನಲ್ಲಿ ಹಲವಾರು ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಊಟದ …
Read More »“ಬಡ ಕುಟುಂಬಗಳಿಗೆ ಮಾದಪ್ಪನ ದಾಸೋಹದಿಂದ ಅಕ್ಕಿ, ಮಾಸ್ಕ್ ವಿತರಣೆ”
ಚಾಮರಾಜನಗರ: ಲಾಕ್‍ಡೌನ್ ನಿಂದ ಸಂಕಷ್ಟದಲ್ಲಿರುವ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಹಾಗೂ ಮಹದೇಶ್ವರಬೆಟ್ಟದ ವ್ಯಾಪ್ತಿಯ ಬಡ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪಡಿತರ ವಿತರಣೆ ಮಾಡಿದರು. ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ದಾಸೋಹ ನಡೆಯದ ಕಾರಣ ಅಲ್ಲಿ ದಾಸ್ತಾನು ಆಗಿರುವ ಸುಮಾರು 89 ಟನ್ ಅಕ್ಕಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಲಹೆಯಂತೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸುಮಾರು 6,500 …
Read More »ಮಹಾರಾಷ್ಟ್ರದಿಂದ ತಮಿಳುನಾಡಿಗೆ ಸಕ್ಕರೆ ತುಂಬಿಕೊಂಡು ಹೋಗುತ್ತಿರುವಾಗಎರಡು ಲಾರಿಗಳು ಡಿಕ್ಕಿ
ಬೆಳಗಾವಿ- ಮಹಾರಾಷ್ಟ್ರದಿಂದ ತಮಿಳುನಾಡಿಗೆ ಸಕ್ಕರೆ ತುಂಬಿಕೊಂಡು ಎರಡು ಲಾರಿಗಳು ಡಿಕ್ಕಿಯಾಗಿ,ನಂತರ ಪಲ್ಟೀಯಾಗಿ ತಮಿಳುನಾಡು ಮೂಲದ 42 ವರ್ಷದ ಕ್ಲೀನರ್ ಮೃತಪಟ್ಟ ಘಟನೆ ಹಿರೇಬಾಗೇವಾಡಿ ಸಮೀಪದ ಬಡೇಕೊಳ್ಳ ಮಠದ ಬಳಿ ನಡೆದಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು ಪಲ್ಟಿಯಾದ ಎರಡೂ ಲಾರಿಗಳು ಹೋಗುತ್ತಿರುವಾಗ ಹಿಂದಿನ ಲಾರಿ ಮುಂದಿನ ಲಾರಿಗೆ ಡಿಕ್ಕಿ ಹೊಡೆದಿದೆ ,ಹಿಂದಿನ ಲಾರಿಯ ಕ್ಲೀನರ್ ಮೃತಪಟ್ಟಿದ್ದು ಎರಡೂ ಲಾರಿಗಳ ಚಾಲಕರು ಗಾಯಗೊಂಡಿದ್ದಾರೆ. ಎರಡೂ ಲಾರಿಗಳು ಒಂದೇ ಟ್ರಾನ್ಸಪೋರ್ಟ್ …
Read More »ಪಾದರಾಯನಪುರದಲ್ಲಿ ಪುಂಡರ ಗಲಾಟೆ- ರಕ್ಷಣೆಗೆ ಬಂದವರ ಮೇಲೆ ಅಟ್ಯಾಕ್
ಬೆಂಗಳೂರು: ಪಾದರಾಯನಪುರದಲ್ಲಿ ಪುಂಡರ ಹಾವಳಿ ಮುಂದುವರಿದಿದ್ದು, ಚೆಕ್‍ಪೋಸ್ಟ್ ಒಡೆದು ಹಾಕಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪಾದರಾಯನಪುರದ 58 ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲು ಹೋದ ಸಿಬ್ಬಂದಿ ಹೋಗಿದ್ದರು. ಇಂದು ರಾತ್ರಿಯಾಗುತ್ತಿದ್ದಂತೆ ಪಾದರಾಯನಪುರದ ಕೆಲ ಪುಂಡರು ರೌಡಿಗಳ ರೀತಿಯಲ್ಲಿ ವರ್ತಿಸಿದ್ದಾರೆ. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು ಟೆಂಟ್ ಗಳನ್ನು ಧ್ವಂಸಗೊಳಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಕಡಿಮೆ ಸಂಖ್ಯೆಯಲ್ಲಿರೋದನ್ನ ಗಮನಿಸಿದ ಪುಡಿ ರೌಡಿಗಳು ದಾಂಧಲೆಯನ್ನು ನಡೆಸಿದ್ದಾರೆ. ಏಕಾಏಕಿ ವಾಹನಗಳ ಸಮೇತ ಗುಂಪು …
Read More »ಮದ್ಯ ಸಿಗದ್ದಕ್ಕೆ ಸ್ಯಾನಿಟೈಸರ್ ಸೇವನೆ- ಬೆಳಗ್ಗೆ ತಮ್ಮ, ಈಗ ಅಕ್ಕ ಸಾವು
ಹುಬ್ಬಳ್ಳಿ: ಮದ್ಯ ಸಿಗದ್ದಕ್ಕೆ ಸ್ಯಾನಿಟೈಸರ್ ಕುಡಿದು ಒಂದೇ ದಿನ ಅಕ್ಕ- ತಮ್ಮ ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ಗಂಬ್ಯಾಪುರ ಗ್ರಾಮದಲ್ಲಿ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್ ಆಸ್ಪತ್ರೆಯಲ್ಲಿ ಬೆಳಗ್ಗೆ ಗಂಬ್ಯಾಪುರ ಗ್ರಾಮದ ನಿವಾಸಿ ಬಸವರಾಜ್ ಕುರುವಿನಕೊಪ್ಪ(45) ಸಾವನ್ನಪ್ಪಿದ್ದರೆ, ಇದೀಗ ಮೃತನ ಸಹೋದರಿ ಜಂಬಕ್ಕ ಕಟ್ಟಿಮನಿ(47) ಸಹ ಮೃತಪಟ್ಟಿದ್ದಾಳೆ. ಲಾಕ್‍ಡೌನ್ ಇದ್ದ ಕಾರಣ ಇವರಿಗೆ ಮದ್ಯ ಸಿಕ್ಕಿರಲಿಲ್ಲ. ಮದ್ಯ ವ್ಯಸನಿಗಳಾಗಿದ್ದ ಇವರು ಕಳೆದ ಒಂದು ತಿಂಗಳಿಂದ ಮದ್ಯ ಸೇವಿಸಿರಲಿಲ್ಲ. ಅಲ್ಲದೆ …
Read More »(ಬೆಳಗಾವಿ):ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರುನ್ನುಪೊಲೀಸರು ಬಂಧಿಸಿದ್ದಾರೆ.
ಚಿಕ್ಕೋಡಿ (ಬೆಳಗಾವಿ): ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳಗಾವಿ ಜಿಲ್ಲೆ ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ ರಿಯಾನ್ ಆಯಾಜ್ ಮಡ್ಡೆ (19) ಬಂಧಿತರು. ಈ ಯುವಕರು ಕಲ್ಲಂಗಡಿ ಹಣ್ಣುಗಳನ್ನ ಚರಂಡಿಯಲ್ಲಿ ತೊಳೆದು ಮಾರಾಟ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋವನ್ನು ನೋಡಿದ್ದ ನಿಪ್ಪಾಣಿಯ ಕೆಲವರು ಆರೋಪಿಗಳನ್ನು …
Read More »