Breaking News

Yearly Archives: 2020

ನಿಯತಿ ಫೌಂಡೇಶನ್ ಸಂಸ್ಥಾಪಕಿ ಡಾ. ಸೋನಾಲಿ ಸರ್ನೊಬತ್ ಕಾರ್ಯನಿರತ‌ ಪತ್ರಕರ್ತರಿಗೆ ಮಾಸ್ಕ್ ವಿತರಿಸಿ ಬಳಿಕ ಮಾತನಾಡಿದರು.

ಬೆಳಗಾವಿ: ಮಾಹಾಮಾರಿ ಕೊರೊನಾ ಸೋಂಕಿಗೆ ಇಡೀ ವಿಶ್ವವೇ ಬೆಚ್ಚಿ ಬಿದ್ದಿದೆ‌. ಇಂಥಹ ಪರಿಸ್ಥಿತಿಯಲ್ಲಿಯೂ ಅಗತ್ಯ ಸೇವೆ ಸಲ್ಲಿಸುತ್ತಿರುವ ವೈದ್ಯರು, ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದು‌ ನಿಯತಿ ಫೌಂಡೇಶನ್ ಸಂಸ್ಥಾಪಕಿ ಡಾ. ಸೋನಾಲಿ ಸರ್ನೊಬತ್ ಬಣ್ಣಿಸಿದರು. ಇಲ್ಲಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಭಾ ಭವನದಲ್ಲಿ ನಿಯತಿ ಫೌಂಡೇಶನ್ ಹಾಗೂ ಬೆಳಗಾವಿ ಪತ್ರಕರ್ತರ ಸಂಘದ ವತಿಯಿಂದ ಕಾರ್ಯನಿರತ‌ ಪತ್ರಕರ್ತರಿಗೆ ಮಾಸ್ಕ್ ವಿತರಿಸಿ ಬಳಿಕ ಮಾತನಾಡಿದರು. ಮಾರಕ ಕೊರೊನಾ ಸೋಂಕು ಭೀತಿ …

Read More »

ಚಿಕ್ಕೋಡಿ: ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಮತ್ತೆ ಹಲ್ಲೆ

ಚಿಕ್ಕೋಡಿ: ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಮತ್ತೆ ಹಲ್ಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಪಟ್ಟಣದಲ್ಲಿ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆ ಮನೆ ಆರೋಗ್ಯ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಇದೇ ಕೆಲಸ ನಿಮಿತ್ತವಾಗಿ ಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿ …

Read More »

ಅನಾರೋಗ್ಯದಿಂದ 6ರ ಬಾಲಕಿ ಸಾವು – ಕೊರೊನಾ ಪ್ರೋಟೋಕಾಲ್‍ನಂತೆ ಶವಸಂಸ್ಕಾರ

ಯಾದಗಿರಿ: ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದ ಜಿಲ್ಲೆಯ ಶಹಪುರ ತಾಲೂಕಿನ ಕೊಂಗಂಡಿ ಗ್ರಾಮದ ಆರು ವರ್ಷದ ಬಾಲಕಿಯ ಅಂತ್ಯಕ್ರಿಯೆಯನ್ನು ವಿಶ್ವ ಅರೋಗ್ಯ ಸಂಸ್ಥೆಯ ಪ್ರೋಟೋಕಾಲ್ ನಿಯಮದಂತೆ ಅಧಿಕಾರಿಗಳು ನೆರವೇರಿಸಿದ್ದಾರೆ. ಕಳೆದ ಮೂರು ದಿನಗಳಿಂದ ಬಾಲಕಿ ತೀವ್ರ ಕೆಮ್ಮು, ಜ್ವರ ಹಾಗೂ ಗಂಟಲು ನೋವಿನಿಂದ ಬಳಲುತ್ತಿದ್ದಳು. ಹೀಗಾಗಿ ಬಾಲಕಿ ಕುಟುಂಬಸ್ಥರು ಅವಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಬಾಲಕಿ ಗುಣಮುಖವಾಗದ ಹಿನ್ನಲೆ ಹೆಚ್ಚಿನ ಚಿಕಿತ್ಸೆಗಾಗಿ, ಶಹಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು …

Read More »

ರೈಲುಗಳ ಬುಕಿಂಗ್ ಅನ್ನು ಏಪ್ರಿಲ್ 30 ರವರೆಗೆ ಸ್ಥಗಿತ

ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದಾಗಿ ಸ್ತಬ್ಧಗೊಂಡಿದ್ದ ರೈಲು ಸೇವೆ ಸದ್ಯಕ್ಕೆ ಆರಂಭಗೊಳ್ಳುವುದಿಲ್ಲ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಐಆರ್‌ಸಿಟಿಸಿ, ರೈಲುಗಳ ಬುಕಿಂಗ್ ಅನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ಮಧ್ಯೆ ಐಆರ್‌ಸಿಟಿಸಿ ಸದ್ಯ ಮೂರು ರೈಲುಗಳನ್ನು ಓಡಿಸಲಿದೆ. 2 ತೇಜಸ್ ರೈಲುಗಳು ಮತ್ತು 1 ಕಾಶಿ ಮಹಕಲ್ ಎಕ್ಸ್‌ಪ್ರೆಸ್‌ ರೈಲು ಸಂಚರಿಸಲಿದೆ. ತೇಜಸ್ ಎಕ್ಸ್‌ಪ್ರೆಸ್‌ ರೈಲು ಅಹಮದಾಬಾದ್ – ಮುಂಬೈ ಮಧ್ಯ ಸಂಚರಿಸಿದರೆ, …

Read More »

ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ರಿಯಾಲಿಟಿ ಚೆಕ್ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ವಿವಿಧ ಬಡಾವಣೆಯ ಇಂದಿರಾ ಕ್ಯಾಂಟೀನ್ ಗಳಿಗೆ ಇಂದು ಭೇಟಿ ನೀಡಿದ್ದರು. ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ನೀಡುತ್ತಿದ್ದ ಊಟ ಮತ್ತು ತಿಂಡಿಗೆ ಸರ್ಕಾರ ಇತ್ತೀಚೆಗೆ ದರ ನಿಗದಿ ಮಾಡಿದೆ. ಉಚಿತವಾಗಿ ನೀಡಿದರೆ ದುರುಪಯೋಗವಾಗುತ್ತದೆ ಎಂಬ ಕಾರಣಕ್ಕೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಸಂಬಂಧ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಪತ್ರವನ್ನೂ ಬರೆದಿದ್ದರು. ಮುಖ್ಯಮಂತ್ರಿಯವರೂ ದೂರವಾಣಿ ಮೂಲಕ …

Read More »

ಭಾರತ ಹೈಡ್ರಾಕ್ಸಿಕ್ಲೋರೊಕ್ವಿನ್ ರಫ್ತು ಮಾಡದಿದ್ದರೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ : ಟ್ರಂಪ್ ವಾರ್ನಿಂಗ್

ವಾಷಿಂಗ್ಟನ್, ಏ.7- ಡೆಡ್ಲಿ ಕೊರೊನಾ ವೈರಾಣು ದಾಳಿಯಿಂದ ಅಪಾರ ಸಾವು ಮತ್ತು ಸೋಂಕಿನಿಂದ ಕಂಗೆಟ್ಟಿರುವ ಅಮೆರಿಕಾ ಕೋವಿಡ್-19 ವೈರಾಣು ಸೋಂಕು ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸುವ ಮಲೇರಿಯಾ ನಿರೋಧಕ ಔಷಧಿ ಹೈಡ್ರಾಕ್ಸಿಕ್ಲೋರೊಕ್ವಿನ್ ರಫ್ತು ಮಾಡದಿದ್ದರೆ ಭಾರತದ ವಿರುದ್ಧ ಪ್ರತೀಕಾರ ಕ್ರಮ ಕೈಗೊಳ್ಳುವುದಾಗಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ವಾಷಿಂಗ್ಟನ್‍ನಲ್ಲಿ ನಡೆದ ಕೊರೊನಾ ಟಾಸ್ಕ್‍ಫೋರ್ಸ್ ಸಭೆಯಲ್ಲಿ ಮಾತನಾಡಿ, ಟ್ರಂಪ್ ಭಾರತ ಅಮೆರಿಕಕ್ಕೆ ಔಷಧಿ ರಫ್ತು ಮಾಡುತ್ತದೆ ಎಂಬ …

Read More »

ಕೊರೊನಾ ಸೋಂಕು ಯಾವುದೇ ಜಾತಿ, ಧರ್ಮ ನೋಡಿ ಬರಲ್ಲ. ಒಂದು ಸಮುದಾಯದತ್ತ ಬೆರಳು ಮಾಡಿ ತೋರಿಸಬೇಡಿ : ಸಿ.ಎಂ.ಇಬ್ರಾಹಿಂ

ಬೆಂಗಳೂರು: ಕೊರೊನಾ ಸೋಂಕು ಯಾವುದೇ ಜಾತಿ, ಧರ್ಮ ನೋಡಿ ಬರಲ್ಲ. ಒಂದು ಸಮುದಾಯದತ್ತ ಬೆರಳು ಮಾಡಿ ತೋರಿಸಬೇಡಿ ಎಂದು ವಿಧಾ‌ನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಡೀ ಜಗತ್ತಿಗೆ ಮಾಹಾಮಾರಿ ಕೊರೊನಾ ಕಂಟಕವಾಗಿದೆ. ಲಾಕ್​ಡೌನ್ ಆದೇಶವನ್ನು ನಾವೆಲ್ಲರೂ ಅನುಸರಿಸುತ್ತಿದ್ದೇವೆ. ನಾವ್ಯಾರು ಮಸೀದಿ ಕಡೆ ತಲೆ ಹಾಕುತ್ತಿಲ್ಲ. ಮನೆಗಳಲ್ಲೇ ನಮಾಜ್ ಮಾಡ್ತಿದ್ದೇವೆ. ಮುಂಬರುವ ರಂಜಾನ್ ಹಬ್ಬವನ್ನೂ ನಾವು ಮನೆಯಲ್ಲೇ ಮಾಡಿಕೊಳ್ತೇವೆ. ಇದನ್ನ …

Read More »

ಬುಲೇಟ್ ಪ್ರಕಾಶ ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯುವಾಗ ಶವ ಪೆಟ್ಟಿಗೆ ಮೇಲೆ ಕುಳಿತ ಟೈಸನ್ ಕೆಳಗಿಳಿಯಲಿಲ್

ಬೆಂಗಳೂರು- ನಿನ್ನೆ ನಿಧನರಾದ ಹಾಸ್ಯ ನಟ ಬುಲೇಟ್ ಪ್ರಕಾಶ ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯುವಾಗ ಕಣ್ಣೀರು ಕಪಾಳಕ್ಕೆ ಸುರಿಸುವ, ಘಟನೆಯೊಂದು ನಡೆಯಿತು. ಬುಲೇಟ್ ಪ್ರಕಾಶ್ ಅವರು ಅತ್ಯಂತ ಮುದ್ದಿನಿಂದ ಸಾಕಿದ ನಾಯಿ ಶವ ಪೆಟ್ಟಿಗೆಯ ಮೇಲೆ ಕುಳಿತಾಗ ಅಲ್ಲಿ ನೆರೆದಿದ್ದ ನೂರಾರು ಜನ ಕಣ್ಣೀರು ಸುರಿಸಿದರು ಶವ ಪೆಟ್ಟಿಗೆ ಮೇಲೆ ಕುಳಿತ ಟೈಸನ್ ಕೆಳಗಿಳಿಯಲಿಲ್ಲ,ಬುಲೇಟ್ ಪ್ರಕಾಶ್ ಅವರ ಪ್ರೀತಿಯ ಸಂಕೋಲೆಯಿಂದ ಟೈಸನ್ ನನ್ನು ಬಿಡಿಸಲು ಪರದಾಡಬೇಕಾಯಿತು. ಒದ್ದಾಡುತ್ತಲೇ ಟೈಸನ್ ತನ್ನ …

Read More »

ಮೈಸೂರಿನಲ್ಲಿ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ 1533 ಮಂದಿ..!

ಮೈಸೂರು, ಏ.7- ಕೊರೊನಾ ಅಟ್ಟಹಾಸದಿಂದ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕ್ವಾರಂಟೈನ್‍ಗೆ ಒಳಪಡುವವರ ಸಂಖ್ಯೆ ಕಡಿಮೆಯಾಗಿದ್ದರೂ ಈಗಾಗಲೇ ಕ್ವಾರಂಟೈನ್‍ಗೆ ಒಳಪಟ್ಟಿರುವವರು ಹಾಗೂ ವಿದೇಶದಿಂದ ಬಂದವರಲ್ಲಿ 1533 ಮಂದಿ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ. ದೆಹಲಿ ಹಾಗೂ ಜ್ಯುಬಿಲಿಯಂಟ್ ಕಾರ್ಖಾನೆ ಸಿಬ್ಬಂದಿಯೇ ಹೆಚ್ಚಾಗಿ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ. ಒಟ್ಟಾರೆ 1334 ಮಂದಿಯನ್ನು ಹೋಂ ಕ್ವಾರಂಟೈನ್‍ನಲ್ಲಿರಿಸಲಾಗಿದೆ. ಇವರ ಪೈಕಿ 287 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ 35 ಮಂದಿಗೆ ಪಾಸಿಟೀವ್ ಬಂದರೆ …

Read More »

ಎಲ್ಲಿ ಮಲಗಿದ್ದಾರೋ’ ಎಂದ ಡಿಕೆಶಿಗೆ ತಿರುಗೇಟು ನೀಡಿದ ಸಚಿವ ಈಶ್ವರಪ್ಪ

ಬೆಂಗಳೂರು,ಏ.7- ರಾಜ್ಯದ 49 ಬರಪೀಡಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರಿಗಾಗಿ ತಾಲ್ಲೂಕಿಗೆ ತಲಾ ಒಂದು ಕೋಟಿ ರೂ ಅನುದಾನ ಒದಗಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ‌ ಗ್ರಾಮ ಪಂಚಾಯ್ತಿಗಳಲ್ಲಿ ಕೊರೋನಾ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ. ಗ್ರಾಮಗಳಲ್ಲೂ ಸಮಿತಿಗಳನ್ನು ಮಾಡಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ನರೇಗಾ ಯೋಜನೆಯಲ್ಲಿ ಕೇಂದ್ರದಿಂದ 1,861 ಕೋಟಿ …

Read More »