ಬೆಳಗಾವಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಗ್ರಾಮಕ್ಕೆ ತೆರಳಲು ಸಾಧ್ಯವಾಗದೇ ಬಾಣಂತಿ ಮತ್ತು ಆಕೆಯ ತಾಯಿ ಕಣ್ಣೀರು ಹಾಕಿರುವ ಘಟನೆ ನಗರದಲ್ಲಿ ನಡೆದಿದೆ. ಶನಿವಾರ ಬಾಣಂತಿಯನ್ನು ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಬೆಳಗಾವಿ ಜಿಲ್ಲೆ ಗೋಕಾಕ್ ನಿವಾಸಿ ಗೀತಾ ತನ್ನ ಮಗು, ತಂದೆ ತಾಯಿ ಜೊತೆ ಊರಿಗೆ ತೆರಳಲು ಪರದಾಡುತ್ತಿದ್ದರು. ಕರ್ನಾಟಕ ಲಾಕ್‍ಡೌನ್ ಹಿನ್ನೆಲೆ ಯಾವುದೇ ವಾಹನ ಸಿಗದಿದ್ದಕ್ಕೆ ಬಾಣಂತಿ ತಾಯಿ ಕಣ್ಣೀರು ಹಾಕಿದ್ದರು. ಇಂದು ಸಹ ಯಾವುದೇ ವಾಹನ ಸಿಗದಕ್ಕೆ …
Read More »Yearly Archives: 2020
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ: ಇಲ್ಲಿನ ಸದಾಶಿವ ನಗರದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಎಸ್.ಆರ್.ಕಳ್ಳಿಗುದ್ದಿ(16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಲಾಕ್ ಡೌನ್ ಹಿನ್ನೆಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇದರಿಂದ ಪೋಷಕರು ಸಮಯವನ್ನು ಹಾಳು ಮಾಡದೆ ಪರೀಕ್ಷೆಗೆ ಓದಿಕೊಳ್ಳುವಂತೆ ಬುದ್ದಿ ಹೇಳಿದ್ದಾರೆ. ಇದರಿಂದ ಮನನೊಂದು ಶನಿವಾರ ರಾತ್ರಿಯೇ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »16 ಹೊಸ ಪ್ರಕರಣ – ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 144ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 16 ಪ್ರಕರಣಗಳು ಬೆಳಕಿಗೆ ಬಂದಿದ್ದು ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 144ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾಟ್‍ಸ್ಪಾಟ್‍ಗಳಲ್ಲಿ ಒಂದಾಗಿರುವ ಮೈಸೂರಿನಲ್ಲಿ ಇಂದು ಒಂದೇ ದಿನಕ್ಕೆ 7 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರಲ್ಲಿ 5 ಮಂದಿ ದೆಹಲಿಗೆ ಹೋಗಿ ಬಂದವರಾಗಿದ್ದಾರೆ. ದೆಹಲಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಒಟ್ಟು 16 ಮಂದಿ ಕೊರೊನಾಗೆ ತುತ್ತಾಗಿದ್ದು, ಈ ಮೂಲಕ ಮೈಸೂರಿನಲ್ಲಿ ಸೊಂಕಿತರ ಸಂಖ್ಯೆ 28ಕ್ಕೆ ಏರಿದೆ. ದೆಹಲಿಯಲ್ಲಿ …
Read More »ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆಯಲ್ಲಿ ಹೋಗಿ ಬಂದಿದ್ದರೆ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ
ಗೋಕಾಕ: ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಿಂದ ಯಾರಾದರೂ ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆ ಸೇರಿದಂತೆ ಅನ್ಯ ರಾಜ್ಯ ಹಾಗೂ ರಾಷ್ಟ್ರಗಳಿಗೆ ಹೋಗಿ ಬಂದಿದ್ದರೆ ಅಂತವರು ತಾವಾಗಿಯೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ ಮಾಡಿಕೊಂಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಈಗಾಗಲೇ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಗೂ ಲಗ್ಗೆ ಇಟ್ಟಿದೆ. ಮೂರು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ದೆಹಲಿಯ …
Read More »ಸಿದ್ದಗಂಗಾ ಮಠದಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ
ತುಮಕೂರು: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಿದ್ದಗಂಗಾ ಮಠ ಹಾಗೂ ಸಿದ್ದಗಂಗಾ ವಿದ್ಯಾಸಂಸ್ಥೆ ವತಿಯಿಂದ 50 ಲಕ್ಷ ರೂ.ವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಲಾಗಿದೆ. ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಇಂದು ಮಠದಿಂದ 25 ಲಕ್ಷ ರೂ. ಹಾಗೂ ವಿದ್ಯಾಸಂಸ್ಥೆಯಿಂದ 25ಲಕ್ಷ ರೂ. ಸೇರಿ ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು. ಈ …
Read More »ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು
ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು ಮೃತರಾದ ಮನಕಲುಕುವ ಘಟನೆ ಸಮೀಪದ ಅಂಜನಕಟ್ಟಿ ಗ್ರಾಮದಲ್ಲಿ ನಡೆದಿದೆ. ಭಾಗವ್ವಾ ಜಕ್ಕನ್ನವರ(6), ತಾಯಮ್ಮ ಜಕ್ಕನ್ನವರ(5),ಮಾಳಪ್ಪ ಜಕ್ಕನ್ನವರ(4),ರಾಜಶ್ರೀ ಜಕ್ಕನ್ನವರ(3) ಮೃತ ಮಕ್ಕಳು ಎಂದು ಗುರುತಿಸಲಾಗಿದೆ. ಕರೆಪ್ಪಾ ಜಕ್ಕನ್ನವರ ಎಂಬುವರ ನಾಲ್ಕು ಮಕ್ಕಳು.ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆ ಕರೆಪ್ಪ ಮತ್ತು ತಾಯಿ ಸಮಯದಲ್ಲಿ ಮಕ್ಕಳು ಆಟವಾಡುತ್ತಾ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ನೀರು ತರಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. …
Read More »ಜಮಾತ್‍ಗೆ ಹೋದವರಿಂದಲೇ ದೇಶಾದ್ಯಂತ ಕೊರೊನಾ ಹಬ್ಬಿಸುವ ದುಷ್ಕೃತ್ಯ: ಕರಂದ್ಲಾಜೆ
ಚಿಕ್ಕಮಗಳೂರು: ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಸಭೆಯಲ್ಲಿ ಭಾಗವಹಿಸಿದ್ದವರಿಂದ ದೇಶಾದ್ಯಂತ ಕೊರೊನಾ ವೈರಸ್ ಹಬ್ಬಿಸುವ ದುಷ್ಕೃತ್ಯ ನಡೆದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಮಗಳೂರಿನ ನಗರಸಭೆಯಲ್ಲಿ ಮಾತನಾಡಿದ ಅವರು, ಜಮಾತ್ ಸಭೆಗೆ ಹೋದ ಹಲವರು ನಾಪತ್ತೆಯಾಗಿದ್ದಾರೆ. ಇದರ ಹಿಂದೆ ಕೊರೊನಾ ಜಿಹಾದಿಯ ವಾಸನೆ ಕೂಡ ಬಡಿಯುತ್ತಿದೆ. ದೇಶವನ್ನು ಕೊರೊನಾ ಮುಕ್ತ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೋರಾಡುತ್ತಿವೆ. ಯಾರು ದೆಹಲಿಗೆ ಹೋಗಿದ್ದರೋ ಅವರನ್ನ ಪತ್ತೆ ಹಚ್ಚುವ …
Read More »ಗ್ರಾಹಕನ ಸೋಗಿನಲ್ಲಿ ಹೋಗಿ ಬಂಧಿಸಿದ ಪೊಲೀಸರು – 100 ರೂ. ಮೌಲ್ಯದ ಮದ್ಯ 400 ರೂ. ಗೆ ಮಾರಾಟ
ಚೆನ್ನೈ: ಲಾಕ್‍ಡೌನ್ ಮಧ್ಯೆಯೂ ವಾಟ್ಸಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚೆನ್ನೈನ ಹಮ್ಸಾ ಪಾರ್ಕ್ ನಿವಾಸಿ ಅಯ್ಯಪ್ಪನ್ ಎಂದು ಗುರುತಿಸಲಾಗಿದೆ. ಈತ ಲಾಕ್‍ಡೌನ್ ಆಗಿರುವುದನ್ನೇ ಬಂಡವಾಳ ಮಾಡಿಕೊಂಡು ಮದ್ಯವನ್ನು ಸಂಗ್ರಹಿಸಿ ಅದನ್ನು ವಾಟ್ಸಪ್ ಮೂಲಕ ಗ್ರಾಹಕರಿಗೆ ದುಬಾರಿ ಬೆಲೆಯಲ್ಲಿ ಮಾರುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗ್ರಾಹಕರ ಸೋಗಿನಲ್ಲಿ ಹೋಗಿ ಆತನನ್ನು ಬಂಧಿಸಿದ್ದಾರೆ. ಕೊರೊನಾ ಭಯದಿಂದ ಇಡೀ …
Read More »ಸ್ಯಾನಿಟೈಜರ್ ವಿತರಿಸಿದ ಕೆಪಿಸಿಸಿ ಕಾರ್ಯಾಅಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರ ಮಾಲೀಕತ್ವದ ಸತೀಶ ಶುಗರ್ಸ್ ವತಿಯಿಂದ ಸ್ಯಾನಿಟೈಜರ್ ಬಾಟಲಗಳನ್ನು ವಿತರಿಸಲಾಯಿತು. ಗೋಕಾಕ ಮತ್ತು ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಈ ಬಾಟಲಗಳನ್ನು ವಿತರಿಸಲಾಗುವುದು. ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು , ಪೌರ ಕಾರ್ಮಿಕರು ಮತ್ತು ಪೊಲಿಸ್ ಸಿಬ್ಬಂದಿಗಳ …
Read More »ಲಾಕ್‌ಡೌನ್ ಅನ್ನೇ ದುರ್ಬಳಕೆ ಮಾಡಿಕೊಂಡ ಪೊಲೀಸ್,ಪೊಲೀಸ್ ವಾಹನದ ದುರ್ಬಳಕೆ
ಲಾಕ್‌ಡೌನ್ ಅನ್ನೇ ದುರ್ಬಳಕೆ ಮಾಡಿಕೊಂಡ ಪೊಲೀಸ್ ಪೊಲೀಸ್ ವಾಹನದ ದುರ್ಬಳಕೆ ಸರ್ಕಾರ ಇವರಿಗೆ ವಾಹನ ಕೊಟ್ಟಿದ್ದು ಸಂತೆ ಮಾಡೋಕಾ…? ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ಸಿಪಿಐ ವಾಹನ ದುರ್ಬಳಕೆ ತರಕಾರಿ, ದಿನಬಳಕೆ ವಸ್ತು ಖರೀದಿಗೆ ಸರ್ಕಾರಿ ವಾಹನ ಬಳಕೆ ಬೆಂಡಿಗೇರಿ ಠಾಣೆ ಸಿಪಿಐ ಅರುಣಕುಮಾರ ಸಾಳಂಖೆ ವಾಹನ ದುರ್ಬಳಕೆ ಅಧಿಕಾರಿಗಳಿಲ್ಲದಿದ್ರೂ ಮಕ್ಕಳನ್ನ ಕರೆತಂದು ಎಣ್ಣೆ ಖರೀದಿಗೆ ಮುಂದಾದ ಪೊಲೀಸರು ಕಣ್ಮಚ್ಚಿ ಕುಳಿತ ಹು-ಧಾ ಮಹಾನಗರ ಪೊಲೀಸ್ ಆಯುಕ್ತರು ಈ ರೀತಿ …
Read More »