Breaking News

Yearly Archives: 2020

ಬೆಳಗಿನಿಂದ ಮಧ್ಯಾಹ್ನದವರೆಗೆ ಕೊರೋನಾಗೆ 7 ರಾಜ್ಯಗಳಲ್ಲಿ 7 ಸಾವು..!

ನವದೆಹಲಿ/ಮುಂಬೈ, ಏ.2-ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇಂದು ಬೆಳಗಿನಿಂದ ಮಧಾಹ್ಯದವರೆಗೆ ಒಟ್ಟು ಏಳು ರಾಜ್ಯಗಳಲ್ಲಿ ಏಳು ಸಾವು ಸಂಭವಿಸಿದ್ದು, ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹರಿಯಾಣ, ಪಂಜಾಬ್, ಮಹಾರಾಷ್ಟ್ರ, ಗುಜರಾತ್, ಅರುಣಾಚಲ ಪ್ರದೇಶ, ಮಧ್ಯಪ್ರದೇಶ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಈ ಸಾವುಗಳು ವರದಿಯಾಗಿವೆ. ಹರಿಯಾಣದಲ್ಲಿ ಪ್ರಥಮ ಕೋವಿಡ್-19 ಸಾವು ಸಂಭವಿಸಿದೆ. ಸಂಬಾಲ ಪ್ರದೇಶದ 67 ವರ್ಷದ ವೃದ್ದರೊಬ್ಬರನ್ನು ಹೆಮ್ಮಾರಿ ಬಲಿ ಪಡೆದಿದೆ. ಹರಿಯಾಣಗೆ ಹೊಂದಿಕೊಂಡಿರುವ …

Read More »

ಬೆಂಗಳೂರು :7, 8 ಮತ್ತು 9ನೇ ತರಗತಿಯ ವಾರ್ಷಿಕ ಪರೀಕ್ಷೆಗಳು ರದ್ದು..!

ಬೆಂಗಳೂರು : ಕೊರೊನಾ ಸೋಂಕಿನ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಏಳು, ಎಂಟು ಮತ್ತು ಒಂಭತ್ತನೇ ತರಗತಿಯ ವಾರ್ಷಿಕ ಪರೀಕ್ಷೆಗಳನ್ನ ರದ್ದು ಮಾಡಲಾಗಿದ್ದು,ಈ ಮೂರು ವರ್ಗದ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣ (ಪಾಸ್) ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ‌ ಗುರುವಾರ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ,‌ಎಸ್.ಸುರೇಶ್ ಕುಮಾರ್ ಈ ಹಿಂದೆ …

Read More »

ಶಿಕ್ಷಣ ಇಲಾಖೆಯ ತಪ್ಪು ನೀತಿಗಳಿಂದ ರಾಜ್ಯದ ವಿದ್ಯಾರ್ಥಿಗಳು ಮತ್ತು ಪೋಷಕರು ಕಂಗಾಲಾಗಿದ್ದಾರೆ” April 2, 2020 Ramesh Babu

ಬೆಂಗಳೂರು ಏ.2- ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ತಪ್ಪು ನೀತಿಗಳಿಂದ ರಾಜ್ಯದ ವಿದ್ಯಾರ್ಥಿಗಳು ಮತ್ತು ಪೋಷಕರು ಕಂಗಾಲಾಗಿದ್ದಾರೆ ವಿಧಾನ ಪರಿಷತ್ ನ ಮಾಜಿ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ‌. ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಇದೆ. ಇದರ ಪರಿಣಾಮವಾಗಿ ರಾಜ್ಯದ ಮುಂದಿನ ಶೈಕ್ಷಣಿಕ ವರ್ಷ ಹಳಿತಪ್ಪಲಿದೆ. ಕರೊನಾ ಹೆಮ್ಮಾರಿ ನಮ್ಮ ಎಲ್ಲಾ ವ್ಯವಸ್ಥೆಯನ್ನು ದಾರಿ ತಪ್ಪಿಸಿದೆ. ಅದಕ್ಕೆ ಶಿಕ್ಷಣ ಇಲಾಖೆ ಹೊರತಾಗಿಲ್ಲ. ಹಾಗೆಂದು …

Read More »

ಬೆಂಗಳೂರು:ಸರ್ವೇಗೆ ತೆರಳಿದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ

ಬೆಂಗಳೂರು: ನಗರದಲ್ಲಿ   ಕೊರೊನಾ ಸೋಂಕು ಸಂಬಂಧ ಸರ್ವೇಗೆ ತೆರಳಿದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು  ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಈ ಹಿನ್ನೆಲೆಯಲ್ಲಿ  ನಗರದ ನಿವಾಸಿಗಳ ಪರೀಕ್ಷೆಗೆ  ಆರೋಗ್ಯ ಇಲಾಖೆ ಮುಂದಾಗಿದೆ. ಅದರಂತೆ ಇಂದು ಸಾಧಿಕ ನಗರದಲ್ಲಿ  ಪರೀಕ್ಷೆ ನಡೆಸಲು  ತೆರಳಿದ್ದ ಸಿಬ್ಬಂದಿ ಮೇಲೇ 10 ಜನರ ಗುಂಪು  ಏಕಾಏಕಿ ಹಲ್ಲೆ ನಡೆಸಿದ್ದಾರೆ. ಆಶಾ …

Read More »

ಮೋದಿ ಎರಡನೇ ಬಾರಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಸರೆನ್ಸ್ ಲಾಕ್‍ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿ

ನವದೆಹಲಿ: ಕೊರೊನಾ ವೈರಸ್ ನಿಯಂತ್ರಿಸುವ ಸಲುವಾಗಿ ಪ್ರಧಾನಿ ಮೋದಿ ಎರಡನೇ ಬಾರಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಸರೆನ್ಸ್ ಮಾಡಿ ಮಾತನಾಡಿದ್ದು ಲಾಕ್‍ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿ ಎಂದು ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಏಪ್ರಿಲ್ 14ರ ನಂತರ ಲಾಕ್‍ಡೌನ್ ಇರುತ್ತಾ ಇಲ್ಲವೋ ಎನ್ನುವುದರ ಬಗ್ಗೆ ಸ್ಪಷ್ಟವಾಗಿ ಏನು ತಿಳಿಸಿಲ್ಲ. ಈ ವೇಳೆ ಮುಂದಿನ ವಾರವೂ ಕೊರೊನಾ ಪರೀಕ್ಷೆ, ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಬೇಕು. ಮೆಡಿಕಲ್ ಉತ್ಪನ್ನಗಳು ಯಾವುದೇ …

Read More »

ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ 3,800 ಜನರು ಬಂದಿದ್ದಾರೆ:ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಕೊರೋನಾದಿಂದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಾಗಿರುವ ಪರಿಣಾಮ, ಕ್ಷೇತ್ರಕ್ಕೆ ಹೊರದೇಶಗಳಿಂದ ಬಂದಿರುವವರ ಮೇಲೆ ತೆಗೆದುಕೊಂಡಿರುವ ಕ್ರಮ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಎಚ್ಚರಿಕೆಗಳ ಕುರಿತು ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಚರ್ಚಿಸಿದರು.  ಬೆಳಗಾವಿ ತಾಲೂಕಾ ಪಂಚಾಯತ ಸಭಾಗೃಹದಲ್ಲಿ  ಸಭೆ ಆಯೋಜಿಸಲಾಗಿತ್ತು. ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ 3,800 ಜನರು ಬಂದಿದ್ದಾರೆ. ಈ 3800 ಜನರ ಮೇಲೆ ನಿಗಾ …

Read More »

ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ 1 ವರ್ಷದ ವೇತನ ನೀಡಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ಕೋವಿಡ್-19 ಹಾವಳಿ ತಡೆಗಟ್ಟಲು ಸ್ಥಾಪಿಸಿರುವ ಪರಿಹಾರ ನಿಧಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಮ್ಮ 1 ವರ್ಷದ ವೇತನವನ್ನು ನೀಡಿದ್ದಾರೆ. ಈ ಕುರಿತಂತೆ ಸಚಿವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳುತ್ತಿದೆ. ಸೋಂಕು ಲಕ್ಷಣ ಇರುವ ಮಂದಿಗೆ ಮತ್ತು ರೋಗಿಗಳಿಗೆ ಸರ್ಕಾರವೇ ಚಿಕಿತ್ಸೆ ಒದಗಿಸುತ್ತಿದೆ. ಈ ಸಂಕಷ್ಟದ ಸಂದರ್ಭದಲ್ಲಿ …

Read More »

ಕನಕಪುರ ತಾಲೂಕಿನ ಬುಡಗಯ್ಯನದೊಡ್ಡಿ ಅರಣ್ಯ ಪ್ರದೇಶದಲ್ಲಿ ಆದಿವಾಸಿಗಳ ಶೆಡ್ ಗಳನ್ನು ತೆರವುಗೊಳಿಸಲಾಗಿದೆ.

ರಾಮನಗರ: ಬನ್ನೇರುಘಟ್ಟ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯಲ್ಲಿನ ಕನಕಪುರ ತಾಲೂಕಿನ ಬುಡಗಯ್ಯನದೊಡ್ಡಿ ಅರಣ್ಯ ಪ್ರದೇಶದಲ್ಲಿ ಆದಿವಾಸಿಗಳ ಶೆಡ್ ಗಳನ್ನು ತೆರವುಗೊಳಿಸಲಾಗಿದೆ. 2006ರ ಅರಣ್ಯ ಕಾಯ್ದೆಯಡಿ ಕಳೆದ ಮೂರು ತಿಂಗಳಿನಿಂದ ಅರಣ್ಯದಲ್ಲಿ ಶೆಡ್ ಗಳನ್ನು ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಆದಿವಾಸಿಗಳ 76 ಕ್ಕೂ ಹೆಚ್ಚು ಶೆಡ್ ಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಬುಡುಗಯ್ಯನ ದೊಡ್ಡಿ ಗ್ರಾಮದ ಇರುಳಿಗ ಬುಡಕಟ್ಟು ಸಮುದಾಯದವರು ಕಳೆದ ಮೂರು ತಿಂಗಳಿನಿಂದ ಹಕ್ಕುಪತ್ರಗಳಿಗಾಗಿ ಹೋರಾಟ ನಡೆಸುತ್ತಿದ್ದರು. …

Read More »

ಮಂಗ್ಳೂರು-ಕಾಸರಗೋಡು ಗಡಿ ದಿಗ್ಬಂಧನ ತೆರವುಗೊಳಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ತಿರುವನಂತಪುರಂ: ಕೇರಳದ ರೋಗಿಗಳಿಗೆ ಕರ್ನಾಟಕದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಕೊಡಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಿಸಿರುವ ಗಡಿ ದಿಗ್ಬಂಧನವನ್ನು ತೆಗೆದುಹಾಕುವಂತೆ ಕೇರಳ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಮಧ್ಯಂತರ ಆದೇಶ ಪ್ರಕಟಿಸಿದೆ. ಕೇರಳ ಹೈಕೋರ್ಟ್ ಅಸೋಸಿಯೇಷನ್ ನವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು. ಮಂಗಳೂರು ಮತ್ತು ಕೇರಳದ ಕಾಸರಗೋಡು ನಡುವೆ ಸಂಪರ್ಕಿಸುವ ರಸ್ತೆಯು ರಾಷ್ಟ್ರೀಯ ಹೆದ್ದಾರಿಗಳ ಭಾಗವಾಗಿದೆ. ಆದ್ದರಿಂದ ಈ ರಸ್ತೆಗಳನ್ನು …

Read More »

ಹುಕ್ಕೇರಿ ಪಟ್ಟಣದ ಬಾಗವಾನ ಗಲ್ಲಿಯ ಓರ್ವ ವ್ಯಕ್ತಿ ಈ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿರುವುದು ಖಚಿತ

ಹುಕ್ಕೇರಿ ; ದೆಹಲಿಯ ನಿಜಾಮುದ್ದೀನ್ ತಬ್ಲೀಘ್ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡ ಓರ್ವ ಸೇರಿದಂತೆ ಇದೇ ವೇಳೆ ಅಂತಾರಾಜ್ಯಗಳಿಗೆ ಭೇಟಿ ನೀಡಿದ ತಾಲೂಕಿನ ಐವರಿಗೆ ಕಿಲ್ಲರ್ ಕೊರೋನಾ ವೈರಸ್ ಸೋಂಕು ತಗಲಿರುವ ಶಂಕೆಯ ಮೇಲೆ ನಿಗಾ ವಹಿಸಲಾಗಿದೆ. ಹುಕ್ಕೇರಿ ಪಟ್ಟಣದ ಬಾಗವಾನ ಗಲ್ಲಿಯ ಓರ್ವ ವ್ಯಕ್ತಿ ಈ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿರುವುದು ಖಚಿತಪಟ್ಟ ಹಿನ್ನೆಲೆಯಲ್ಲಿ ಆತನನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಜತೆಗೆ ಇದೇ ಸಮಯದಲ್ಲಿ …

Read More »