ದೆಹಲಿಯಲ್ಲಿ ನಡೆದ ಸಭೆಗೆ ತಮಿಳುನಾಡು ತತ್ತರ – ನಿನ್ನೆ 50 ಮಂದಿ, ಇಂದು 110 ಜನರಿಗೆ ಸೋಂಕು ದೃಢ ತಮಿಳುನಾಡಿನಲ್ಲಿ ಇಂದು 110 ಮಂದಿಗೆ ಕೊರೊನಾ – ಪಾಸಿಟಿವ್ ಬಂದವರೆಲ್ಲ ದೆಹಲಿ ಸಭೆಯಲ್ಲಿ ಭಾಗಿ ಚೆನ್ನೈ: ಇಂದು ಒಂದೇ 110 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಎಲ್ಲ 110 ಮಂದಿ ದೆಹಲಿ ಮಸೀದಿಯ ಕಾರ್ಯಕ್ರಮಕ್ಕೆ ತೆರಳಿದವರು ಎಂದು ತಮಿಳುನಾಡು ಸರ್ಕಾರ ಹೇಳಿದೆ. ಒಂದೇ ದಿನದಲ್ಲಿ 110 ಪ್ರಕರಣಗಳು ಬೆಳಕಿಗೆ ಬಂದ ಪರಿಣಾಮ …
Read More »Yearly Archives: 2020
ಮರ್ಕಜ್ ಧಾರ್ಮಿಕ ಸಭೆ: ಜಿಲ್ಲೆಯ ೬೨ ಜನರಲ್ಲಿ ಸೋಂಕಿನ ಲಕ್ಷಣಗಳಿಲ್ಲ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ
ಬೆಳಗಾವಿ -: ದೆಹಲಿಯ ಮರ್ಕಜ್ ಧಾರ್ಮಿಕ ಸಭೆಗೆ ಹೋಗಿಬಂದಿರುವ ಬೆಳಗಾವಿ ಜಿಲ್ಲೆಯ 62 ಜನರ ಮಾಹಿತಿ ಲಭಿಸಿದೆ. ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. 62 ಜನರ ಪೈಕಿ ಡಯಾಬಿಟಿಸ್, ಅಸ್ಥಮಾ, ಹೈಪರ್ ಟೆನ್ಷನ್ ಹೊಂದಿರುವ ಐವತ್ತಕ್ಕೂ ಅಧಿಕ ವಯೋಮಾನದ 27 ಜನರನ್ನು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ಕರೆತಂದು ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ. ಇದುವರೆಗೆ ನಡೆಸಲಾದ ವೈದ್ಯಕೀಯ ತಪಾಸಣೆಯ ಪ್ರಕಾರ ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ …
Read More »ಕೆಎಂಎಫ್ ಮೂಲಕ ಹಾಲು ಖರೀದಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಬಡವರಿಗೆ ಗುರುವಾರದಿಂದಲೇ ಉಚಿತವಾಗಿ ವಿತರಿಸಲಾಗುವುದು
ಬೆಂಗಳೂರು: ಕೆಎಂಎಫ್ ಮೂಲಕ ೭.೫ ಲಕ್ಷ ಲೀಟರ್ ಹಾಲನ್ನು ಸರ್ಕಾರ ಖರೀದಿಸಿ ಸ್ಲಂ ಹಾಗೂ ಬಡಜನರು ವಾಸಿಸುವ ಪ್ರದೇಶಗಳಲ್ಲಿ ಉಚಿತವಾಗಿ ಏಪ್ರಿಲ್ ೧೪ರವರೆಗೆ ಹಾಲು ವಿತರಣೆಗೆ ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಎಂಎಫ್ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದ್ದಾರೆ. ಕೊರೋನಾ ವೈರಾಣು ಸೋಂಕಿನ ತಡೆಗೆ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಎಂಎಫ್ ಮೂಲಕ ಹಾಲು ಖರೀದಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಬಡವರಿಗೆ …
Read More »ಕೊರೊನಾ ಹೋರಾಟದಲ್ಲಿ ಆರೋಗ್ಯ ಸಿಬ್ಬಂದಿ ಮೃತಪಟ್ಟರೆ 1 ಕೋಟಿ ಪರಿಹಾರ: ಕೇಜ್ರಿವಾಲ್
ನವದೆಹಲಿ: ಕೊರೊನಾ ವೈರಸ್ ರೋಗಿಗಳಿಗೆ ಸೇವೆ ಸಲ್ಲಿಸುತ್ತಿರುವವರು “ದೇಶವನ್ನು ರಕ್ಷಿಸುವ ಸೈನಿಕರಿಗಿಂತ ಕಡಿಮೆಯಿಲ್ಲ”. ಹೀಗಾಗಿ ಕೊವೀಡ್-19 ಹೋರಾಟದಲ್ಲಿ ಭಾಗಿಯಾಗಿರುವ ಆರೋಗ್ಯ ಸಿಬ್ಬಂದಿ ಮೃತಪಟ್ಟರೆ ಅವರ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. “ಯುದ್ಧದ ಸಮಯದಲ್ಲಿ ಸೈನಿಕ ತನ್ನ ಪ್ರಾಣವನ್ನು ಪಣಕ್ಕಿಟ್ಟು ದೇಶವನ್ನು ರಕ್ಷಿಸುತ್ತಾನೆ. ಆದ್ದರಿಂದ ನಮ್ಮ ಇಡೀ ರಾಷ್ಟ್ರವು ಅವರಿಗೆ ಋಣಿಯಾಗಿದೆ. ಇಂದು ಆರೋಗ್ಯ ಕಾರ್ಯಕರ್ತರು ಕೂಡ ದೇಶದ ಜನರನ್ನು ಉಳಿಸಲು …
Read More »ಕಲಬುರಗಿ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನ ಪತ್ನಿಗೆ ಕೊರೊನಾ ಸೋಂಕು
ಕಲಬುರಗಿ: ಕೊರೊನಾ ವೈರಸ್‍ನಿಂದಾಗಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನ ಪತ್ನಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಅಧಿಕೃತ ಪ್ರಕಟನೆ ಹೊರಡಿಸಿದೆ. ಆರಂಭದಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯರಲ್ಲಿ ಕೊರೊನಾ ಲಕ್ಷಣಗಳ ಕಂಡು ಬಂದ ಹಿನ್ನೆಲೆಯಲ್ಲಿ ಐಸೋಲೇಷನ್ ನಲ್ಲಿರಿಸಲಾಗಿತ್ತು. ಮೊದಲ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ 14 ದಿನಗಳ ಕಾಲ ಕಲಬುರಗಿಯ ಇಎಸ್‍ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ವೈದ್ಯನ ಕಫ ಹಾಗೂ ರಕ್ತದ ಮಾದರಿಯನ್ನು ಎರಡನೇ …
Read More »ಲಾಕ್‍ಡೌನ್ ನಡುವೆ ಕದ್ದು ಮುಚ್ಚಿ ಮದ್ಯದಂಗಡಿ ಓಪನ್:”………….
ತುಮಕೂರು: ಇಡೀ ದೇಶವೇ ಲಾಕ್‍ಡೌನ್ ಆಗಿ 8 ದಿನಗಳು ಕಳೆಯುತ್ತಾ ಬರುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಬಾರ್ ಮಾಲೀಕರು ರಾತ್ರಿ ವೇಳೆ ಬಾರ್‌ನ ಮೂಲಕ ಮದ್ಯ ವಿತರಣೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲೆಯ ತಿಮ್ಮಣ್ಣ ಗ್ರಾಮದಲ್ಲಿ ಬಾರ್ ಮಾಲೀಕನ ಜೊತೆ ಅಧಿಕಾರಿಗಳು ಕೈಜೋಡಿಸಿದ್ದಾರೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬಾರ್ ಮುಂದೆ ಜಯಾಯಿಸಿದ ಗ್ರಾಮಸ್ಥರು ಬಾರ್ ಬಾಗಿಲಿಗೆ ಸೀಲ್ ಹಾಕಿದನ್ನ ವ್ಯಂಗ್ಯ ಮಾಡಿದ್ದಾರೆ. ರಾತ್ರಿ ವೇಳೆ …
Read More »ಕೊರೊನಾದಿಂದ ಅಲ್ಲ ಊಟ ತಿಂಡಿ ಇಲ್ಲದೆ ಸಾಯೋ ಪರಿಸ್ಥಿತಿ ಬರುತ್ತೆ:ಹೆಚ್.ಡಿ.ರೇವಣ್ಣ
ಹಾಸನ: ಕೊರೊನಾದಿಂದ ಅಲ್ಲ ಊಟ ತಿಂಡಿ ಇಲ್ಲದೆ ಸಾಯೋ ಪರಿಸ್ಥಿತಿ ಬರುತ್ತೆ. ಸರ್ಕಾರದಲ್ಲಿ ಹಣ ಇಲ್ಲ ಎನ್ನುವ ಸಿಎಂ ಯಡಿಯೂರಪ್ಪ ಒಬ್ಬನೇ ಒಬ್ಬ ಗುತ್ತಿಗೆದಾರನಿಗೆ 1,200 ಕೋಟಿ ಹಣ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ 69 ಲಕ್ಷ ಲೀಟರ್ ಹಾಲು ಶೇಖರಣೆ ಆಗುತ್ತಿದೆ. ಅದರಲ್ಲಿ 40 ಲಕ್ಷ ಲೀಟರ್ ಮಾತ್ರ ಮಾರಾಟ ಮಾಡಲಾಗುತ್ತಿದೆ. ಉಳಿದ 29 ಲಕ್ಷ …
Read More »“ಇನ್ಸ್‌ಪೆಕ್ಟರ್ ಕಾಲಿಗೆ ಬಿದ್ದು ನಮಸ್ಕರಿಸಿದ ಶಾಸಕ”
ವಿಶಾಖಪಟ್ಟಣಂ: ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಪೊಲೀಸರು ಜನದಡ್ಡನೆ, ವಾಹನಗಳ ಸಂಚಾರ ತಡೆಯುವ ಕೆಲಸ ಮಾಡುತ್ತಿದ್ದಾರೆ. ಪೊಲೀಸ ಸೇವೆಗೆ ಆಂಧ್ರಪ್ರದೇಶದ ಶಾಸಕರೊಬ್ಬರು ಫುಲ್ ಫಿದಾ ಆಗಿ ಇನ್ಸ್‌ಪೆಕ್ಟರ್ ಒಬ್ಬರ ಕಾಲಿಗೆ ಮುಟ್ಟಿ ನಮಸ್ಕರಿಸಿದ್ದಾರೆ. ಆಂಧ್ರ ಪ್ರದೇಶದ ಅರಕು ಕ್ಷೇತ್ರದ ಶಾಸಕ ಚೆಟ್ಟಿ ಫಲ್ಗುನಾ ವಿಶಾಖಪಟ್ಟಣಂನ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ಕೆಲವರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಶಾಸಕರ …
Read More »ದೆಹಲಿಯ ಜಮಾತ್ ಸಮಾವೇಶಕ್ಕೆ ಉಡುಪಿ ಜಿಲ್ಲೆಯಿಂದ ಯಾರೂ ಪಾಲ್ಗೊಂಡಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್
ಉಡುಪಿ: ಕೊರೊನಾ ಹಾಟ್ ಸ್ಪಾಟ್ ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಉಡುಪಿ ಜಿಲ್ಲೆಯಿಂದ 16 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದಾರೆ ಎಂಬ ಮಾಹಿತಿಯಿದೆ. ಉಡುಪಿ, ಕುಂದಾಪುರ- ಬೈಂದೂರು, ಕಾರ್ಕಳ, ಪಡುಬಿದ್ರೆ ವ್ಯಾಪ್ತಿಯ ಯುವಕರು ಮತ್ತು ಮಧ್ಯವಯಸ್ಕರು ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆಂಬ ಮಾಹಿತಿ ರಾಜ್ಯದಿಂದ ಜಿಲ್ಲೆಗೆ ರವಾನೆಯಾಗಿದೆ. ಮಂಗಳವಾರ ರಾತ್ರಿ ಈ ಮಾಹಿತಿ ಬಂದಿದ್ದು, ಆಯಾ ಪೊಲೀಸ್ ಠಾಣೆಯ ಮೂಲಕ ಶಿಬಿರಾರ್ಥಿಗಳನ್ನು ಹಾಗೂ ಶಿಬಿರಾರ್ಥಿಗಳ ಸಂಪರ್ಕಕ್ಕೆ ಬಂದವರನ್ನು ಗುರುತಿಸುವ ಕೆಲಸ ನಡೆದಿದೆ. 16 …
Read More »ಬೆಳಗಾವಿ:ಆಹಾರ ಧಾನ್ಯ ವಿತರಿಸಿದ ಸತೀಶ ಜಾರಕಿಹೊಳಿ ಅಭಿಮಾನಿ ಬಳಗ,
ಬೆಳಗಾವಿ: ಸತೀಶ ಜಾರಕಿಹೊಳಿ ಅಭಿಮಾನಿ ಬಳಗ, ವಾಲ್ಮೀಕಿ ಯುವ ವೇದಿಕೆ ಕಾರ್ಯಕರ್ತರು ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕೀಡಾದ ಬಡ ಜನರಿಗೆ, ಕೂಲಿ ಕಾರ್ಮಿಕರಿಗೆ, ಆಹಾರ ಧಾನ್ಯ ಸೇರಿ ಅಗತ್ಯ ವಸ್ತುಗಳನ್ನು ವಿತರಿಸಿದರು. ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಕಾರ್ಯಕರ್ತರು, ಮಾಹಾನಗರ ಪಾಲಿಕೆ ಮೂಲಕ ಬಡವರಿಗೆ ಮತ್ತು ಅಗತ್ಯ ಸೇವೆ ಸಲ್ಲಿಸುತ್ತಿರುವ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಊಟ, ಹಣ್ಣು ಹಂಪಲ, ಹ್ಯಾಂಡ್ ವಾಷ್, ವಾಟರ್ ಬಾಟಲ್ …
Read More »