ಕೋಲಾರ: ಮಂಗಳೂರು ಬಂದರಿನಿಂದ ಆಂಧ್ರ ಪ್ರದೇಶಕ್ಕೆ ತೆರಳುತ್ತಿದ್ದ ಮೀನುಗಾರರನ್ನು ಕೋಲಾರದ ಗಡಿ ಭಾಗವಾದ ನಂಗಲಿ ಚೆಕ್ ಪೋಸ್ಟ್ ಬಳಿ ಆಂಧ್ರಪ್ರದೇಶ ಪೊಲೀಸರು ತಡೆ ಹಿಡಿದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗಡಿಯಲ್ಲಿ ಆಂಧ್ರ ಪೊಲೀಸರು ಮೀನುಗಾರರಿಗೆ ತಡೆ ಮಾಡಿದ್ದು, ಆಂಧ್ರ ಮೂಲದ ನೂರಾರು ಮಂದಿ ಮೀನುಗಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇತ್ತ ಮಂಗಳೂರಿನಲ್ಲಿ ಮೀನುಗಾರಿಕೆ ಮಾಡಿಕೊಂಡು ಇವರು ಜೀವನ ನಡೆಸುತ್ತಿದ್ದರು. ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲೆಡೆ ಲಾಕ್‍ಡೌನ್ …
Read More »Yearly Archives: 2020
ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ರೆ ಸಿಂಗಾಪುರದಲ್ಲಿ 6 ತಿಂಗಳು ಜೈಲು
ಸಿಂಗಾಪುರ: ಕೊರೊನಾ ವೈರಸ್ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದರೆ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಿಂಗಾಪುರ ಸರ್ಕಾರ ಪ್ರಜೆಗಳಿಗೆ ಎಚ್ಚರಿಕೆ ನೀಡಿದೆ. ಜನತೆ ಕಡ್ಡಾಯವಾಗಿ 1 ಮೀಟರ್(3.2 ಅಡಿ) ಅಂತರ ಕಾಯ್ದುಕೊಳ್ಳಬೇಕು. ಶಾಲೆ ಅಥವಾ ಕಂಪನಿಯಲ್ಲಿ 10ಕ್ಕಿಂತ ಹೆಚ್ಚು ಜನ ಸೇರಿದರೆ 10 ಸಾವಿರ ಸಿಂಗಾಪುರ ಡಾಲರ್(ಅಂದಾಜು 5.24 ಲಕ್ಷ ರೂ.) ದಂಡ ಅಥವಾ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ …
Read More »ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ :ಸತೀಶ ಜಾರಕಿಹೊಳಿ
ಬೆಳಗಾವಿ: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಇಡೀ ಬೆಳಗಾವಿ ನಗರವನ್ನು ಲಾಕ್ ಡೌನ್ ಮಾಡಲಾಗಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ತಮ್ಮ ವಾಹನದಲ್ಲಿ ನಗರ ಪ್ರದಕ್ಷಿಣೆ ಹಾಕಿದ ಯಮಕನಮರಡಿ ಶಾಸಕರೂ ಆದ ಸತೀಶ ಜಾರಕಿಹೊಳಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕೆಲವೊಂದು ಸೂಚನೆಗಳನ್ನು ನೀಡಿದರು. ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ ಮತ್ತು ತಾವು ಸುರಕ್ಷಿತವಾಗಿ ಇರಲು ತಿಳಿಸಿದರು. ನಗರದಲ್ಲಿ ಸ್ವಚ್ಚತೆ ಕಾಪಾಡಿಕೊಂಡು ಮತ್ತು …
Read More »ಇಂದಿನಿಂದ ಲಾಠಿ ಇಲ್ಲದ ಕರ್ತವ್ಯ ನಿರ್ವಹಿಸುವಂತೆ ಪೊಲೀಸರಿಗೆ ಕಮಿಷನರ್ ಸೂಚನೆ
ಬೆಂಗಳೂರು: ಕೊರೋನಾ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಏಪ್ರಿಲ್ 14ರವರೆಗೆ ದೇಶವನ್ನು ಲಾಕ್‍ಡೌನ್ ಮಾಡಲಾಗಿದೆ. ಮದ್ದಿಲ್ಲದ ಕೊರೋನಾ ಕಾಯಿಲೆಗೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮಾರಕ ಸೋಂಕನ್ನು ತಡೆಗಟ್ಟಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆದರೆ, ಇಡೀ ದೇಶವನ್ನು ಲಾಕ್‍ಡೌನ್ ಮಾಡಿದ್ದರು ಜನರು ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದಾರೆ. ಇಂತಹವರಿಗೆ ಪೊಲೀಸರು ಕಂಡಕಂಡಲ್ಲಿ ಲಾಠಿ ರುಚಿ ತೋರಿಸುತ್ತಿದ್ದಾರೆ. ಕೆಲವರು ಬೇಕಾಬಿಟ್ಟಿಯಾಗಿ ರಸ್ತೆಯಲ್ಲಿ ಅಡ್ಡಾಡುತ್ತಾರೆ. ಆದರೆ, ಕೆಲವಷ್ಟು ಮಂದಿ ತುರ್ತು ಕೆಲಸ ಮೇಲೆ ಹೊರಗೆ …
Read More »ವಿದೇಶದಿಂದ ಬಂದವರು ಸುತ್ತಾಡಿದ್ರೆ ಪಾಸ್‍ಪೋರ್ಟ್ ಮುಟ್ಟುಗೋಲು
ಉಡುಪಿ: ವಿದೇಶದಿಂದ ಬಂದು 28 ದಿನ ಗೃಹ ಬಂಧನದಲ್ಲಿ ಇರದೇ ಬೇಕಾಬಿಟ್ಟಿ ಸುತ್ತಾಡಿದ್ರೆ ನಿಮ್ಮ ಪಾಸ್‍ಪೋರ್ಟ್ ಮುಟ್ಟುಗೋಲು ಹಾಕುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಗೃಹ ಬಂಧನದಲ್ಲಿರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಕೊರೊನಾ ಹರಡದಂತೆ ಕೇಂದ್ರ ಸರ್ಕಾರ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಿದೆ. ಆದರೆ ಆದೇಶ ಉಲ್ಲಂಘಿಸಿ ಶಂಕಿತರು ಸುತ್ತಾಡುವ ಮಾಹಿತಿ ಸಾರ್ವಜನಿಕರಿಂದ ಸಿಕ್ಕಿದೆ. ಒಂದೊಂದು ಮನೆಗೆ ಮೂರು ಬಾರಿ ಅಧಿಕಾರಿಗಳು, …
Read More »ಗೌರಿಬಿದನೂರಿನಲ್ಲಿ ಮತ್ತೆ ಐವರಿಗೆ ಕೊರೊನಾ – ಇಬ್ಬರ ವರದಿಗೆ ಕಾಯುತ್ತಿರುವ ವೈದ್ಯರು
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಸ್ಪಷ್ಟಪಡಿಸಿದ್ದಾರೆ. ಈ ಮೊದಲು 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಒಬ್ಬರೂ ಸಾವನ್ನಪ್ಪಿದ್ದರು. ಮೆಕ್ಕಾ ಪ್ರವಾಸ ಕೈಗೊಂಡು ವಾಪಸ್ ಆಗಿದ್ದ ನಂತರ ಮೊದಲು ಕೊರೊನಾ ಪತ್ತೆಯಾಗಿದ್ದ 31 ವರ್ಷದ ವ್ಯಕ್ತಿಯ ತಾಯಿ ಹಾಗೂ ಚಿಕ್ಕಮ್ಮ ಸೇರಿ ಮೂವರಿಗೆ ಸೋಂಕು ಧೃಢವಾಗಿತ್ತು. ಈ ಮೂವರು ಸಹ ಮೆಕ್ಕಾ …
Read More »ಕೆಆರ್ ಮಾರ್ಕೆಟ್ ಶಿಫ್ಟ್ ಪ್ಲಾನ್ ಠುಸ್- ಬಸವನಗುಡಿ ಮೈದಾನದಲ್ಲಿ ಸಾಮಾಜಿಕ ಅಂತರವೇ ಇಲ್
ಬೆಂಗಳೂರು: ಜನದಟ್ಟನೆ ಹಿನ್ನೆಲೆಯಲ್ಲಿ ಕೆಆರ್ ಮಾರ್ಕೆಟ್ ಅನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಶಿಫ್ಟ್ ಮಾಡಿದ್ದ ಪ್ಲಾನ್ ವಿಫಲವಾಗಿದೆ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನ ಕೆ.ಆರ್ ಮಾರುಕಟ್ಟೆಯಂತೆ ಆಗಿದೆ. ಬಸವನಗುಡಿ ಮೈದಾನದಲ್ಲಿ ಅನೇಕ ತರಕಾರಿ ಲೋಡ್ ಲಾರಿಗಳು ನಿಂತಿವೆ. ಅಷ್ಟೇ ಅಲ್ಲದೆ ಯಾವುದೇ ಸಾಮಾಜಿಕ ಅಂತರ ಇಲ್ಲದಂತಾಗಿದೆ. ಈ ಮೂಲಕ ಜನಸಂದಣಿ ಕಡಿಮೆ ಮಾಡುವ ಬಿಬಿಎಂಪಿ ಪ್ಲಾನ್ ಠುಸ್ ಆಗಿದೆ. 20 ಅಡಿ ಅಂತರದಲ್ಲಿ ಸ್ಟಾಲ್ ನಿರ್ಮಾಣ ಮಾಡಲಾಗುವುದು ಎಂದು …
Read More »ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬಂಧನೆ ಇಲ್ಲ : ಕೃಷಿ ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಮಾ.25: ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ರೈತರು ಬೆಳೆದಂತಹ ಬೆಳೆಗಳನ್ನು ಕೊಯ್ಲು ಮಾಡಲು ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ. ಮಾನ್ಸೂನ್ ಪ್ರಾರಂಭವಾದಲ್ಲಿ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸಲು ಕ್ರಮಗಳನ್ನು ಕೈಗೊಂಡಿದೆ. ಬೆಳೆಗಳನ್ನು …
Read More »ಕರೋನಾ ರುದ್ರನರ್ತನ : ಜಿ-20 ರಾಷ್ಟ್ರಗಳ ತುರ್ತು ಶೃಂಗಸಭೆ, ಮೋದಿ ಮಹತ್ವದ ಸಲಹೆ.!
ನವದೆಹಲಿ, ಮಾ.27-ಕಿಲ್ಲರ್ ಕೊರೊನಾ (ಕೋವಿಡ್-19) ವಿರುದ್ಧ ಹೋರಾಟದಲ್ಲಿ ಸಂಯುಕ್ತ ರಂಗವಾಗಿ ಮುಂಚೂಣಿಯಲ್ಲಿರಲು ಪಣ ತೊಟ್ಟಿರುವ ಜಿ-20 ರಾಷ್ಟ್ರಗಳು, ಈ ಪಿಡುಗಿನಿಂದಾಗಿ ತೀವ್ರವಾಗಿ ಕುಸಿದಿರುವ ಜಾಗತಿಕ ಪುನ:ಶ್ಚೇತನಕ್ಕೆ 5 ಲಕ್ಷ ಕೋಟಿ ಡಾಲರ್ ನೆರವಿಗೆ ಮನವಿ ಮಾಡಿದೆ. ಮಾರಕ ಕೊರೊನಾ ವೈರಸ್ ಜಾಗತಿಕ ಪಿಡುಗಾಗಿ ಪರಿಣಮಿಸಿದ್ದು, ಈ ಪಿಡುಗಿನ ವಿರುದ್ಧ ಪರಸ್ಪರ ಸಹಕಾರದೊಂದಿಗೆ ಸಂಘಟಿತ ಹೋರಾಟ ನಡೆಸಲು ಜಿ-20 ರಾಷ್ಟ್ರಗಳ ತುರ್ತು ಶೃಂಗಸಭೆ ನಡೆಯಿತು. ಈ ತುರ್ತು ಸಭೆಯಲ್ಲಿ 20 ದೇಶಗಳ …
Read More »ಚಿಕ್ಕೋಡಿ :ಶಾನೂರಬಾಬಾ ದರ್ಗಾದ ಆವರಣದಲ್ಲಿ ಆಗಮಿಸಿದ ಕಟುಂಬ ತುತ್ತು ಅನ್ನಕ್ಕಾಗಿ ಪರದಾಟ.. Mar, 27 2020
ಚಿಕ್ಕೋಡಿ : ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್‍ಗೆ ಇಡೀ ಭಾರತ ಲಾಕ್‍ಡೌನ್ ಆಗಿದೆ. ಆದರೆ ಅಮವಾಸ್ಯೆಗೆ ಚಿಕ್ಕೋಡಿ ತಾಲೂಕಿನ ಕರೋಶಿ ಶಾನೂರಬಾಬಾ ದರ್ಗಾಕ್ಕೆ ದೇವರಿಗೆ ಬಂದಿದ್ದ ಬಡ ಕುಟುಂಬವೊಂದು ಹತ್ತಿರ ಹಣವೂ ಇಲ್ಲದೆ ಪರದಾಡುವಂತಾಗಿದೆ. ನೆರೆಯ ಮಹಾರಾಷ್ಟ್ರ ಸೋಲ್ಲಾಪೂರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಬೋರಗಾಂವ ಎಂಬ ದೂರದ ಊರಿಂದ ನವಾಜ ಮುಲ್ಲಾ ಎನ್ನುವ ಕುಟುಂಬ ಅಮವಾಸ್ಯೆಯೆಂದು ದರ್ಗಾಕ್ಕೆ ದೇವರ ದರ್ಶಕ್ಕೆಂದು ಆಗಮಿಸಿದ್ದರು. ಅಮವಾಸ್ಯೆ ಮತ್ತು ಅಮವಾಸ್ಯೆಯಾದ ನಂತರ ಒಂದೆರಡು …
Read More »