Breaking News
Home / 2021

Yearly Archives: 2021

ಈ ದೇಶಗಳಲ್ಲಿ ಈಗಾಗಲೇ ಹೊಸ ವರ್ಷ ಬಂದಾಯ್ತು! ಕೊನೆಯದಾಗಿ 2022ನ್ನು ಸ್ವಾಗತಿಸೋದು ಯಾವ ರಾಷ್ಟ್ರ ಗೊತ್ತಾ?

New Year 2022: ಭಾರತದಲ್ಲಿ ಡಿಸೆಂಬರ್ 31ರ ಮಧ್ಯಾಹ್ನ 3.30 ದಾಟುತ್ತಿದ್ದಂತೆ ಪ್ರಪಂಚದ ಒಂದು ಮೂಲೆಯಲ್ಲಿ ಹೊಸ ವರ್ಷವನ್ನು ಜನರು ಸ್ವಾಗತಿಸಿರುತ್ತಾರೆ. ಇಲ್ಲಿ ಜನವರಿ 1ರ ಸಂಜೆ 5.30 ಆದಾಗ ಪ್ರಪಂಚದ ಮತ್ತೊಂದು ಮೂಲೆಯಲ್ಲಿ ಹೊಸ ವರ್ಷವನ್ನು ಆಗತಾನೇ ಬರಮಾಡಿಕೊಳ್ಳುತ್ತಿರುತ್ತಾರೆ!ಹೊಸ ವರ್ಷವನ್ನು ಸ್ವಾಗತಿಸಲು ಎಲ್ಲೆಡೆ ಸಿದ್ಧತೆಗಳು ಜೋರಾಗಿದ್ದು, ಸಂಭ್ರಮ ಮುಗಿಲುಮುಟ್ಟಿದೆ. ಕೊರೊನಾ ನಿಯಮಾವಳಿಗಳು ವಿಶ್ವಾದ್ಯಂತ ಸಂಭ್ರಮಾಚರಣೆಗೆ ತೊಡಕಾಗಿದ್ದರೂ, ಹೊಸ ವರ್ಷವನ್ನು ಸ್ವಾಗತಿಸುವ ಜನರ ಉತ್ಸಾಹ ಮರೆಯಾಗಿಲ್ಲ. 2021ರ ಕಹಿ-ಸಿಹಿ ನೆನಪುಗಳಿಗೆ …

Read More »

ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತ್ತು ಮಾಡುವಂತೆ ಒತ್ತಾಯ; ಶಾಲಾ‌ ಕೊಠಡಿಗೆ ಬೀಗ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

ಹಾವೇರಿ: ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತ್ತು ಅಥವಾ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿರಿ ಗ್ರಾಮಸ್ಥರು ಪ್ರತಿಭಟನೆ (Protest) ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದಲ್ಲಿ ನಡೆದಿದೆ. ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ ಅವರು ಶಾಲೆಗೆ (School) ಸರಿಯಾಗಿ ಬರುವುದಿಲ್ಲ. ಹೀಗಾಗಿ ಅಮಾನತ್ತು ಮಾಡಿ ಎಂದು ಶಾಲಾ‌ ಕೊಠಡಿಗೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ ವಿರುದ್ಧ ಶಾಲೆಗೆ ಸರಿಯಾಗಿ ಬರುವುದಿಲ್ಲ ಹಾಗೂ ಶಾಲೆಗೆ …

Read More »

ಕಮಲ್ ಪಂತ್​ಗೆ ಮುಂಬಡ್ತಿ, ಸದ್ಯದಲ್ಲೇ ಬೆಂಗಳೂರಿಗೆ ಹೊಸ ಕಮಿಷನರ್..!

ಬೆಂಗಳೂರು,ಡಿ.31- ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರನ್ನು ಇಂದು ಸಂಜೆ ಅಥವಾ ಯಾವುದೇ ಕ್ಷಣದಲ್ಲಿ ವರ್ಗಾವಣೆಗೊಳಿಸಲಿದ್ದು, ನಾಳೆ ನಗರಕ್ಕೆ ಹೊಸ ಕಮೀಷನರ್ ನೇಮಕವಾಗಲಿದ್ದಾರೆ. ತೆರವಾಗಲಿರುವ ಆಯುಕ್ತರ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳು ಕಣ್ಣಿಟ್ಟಿದ್ದು, ಅದೃಷ್ಟ ಯಾರಿಗೆ ಒಲಿದಲಿದೆ ಎಂಬುದು ಕೂತಹೂಲ ಮೂಡಿಸಿದೆ. ಹಾಲಿ ನಗರ ಪೊಲೀಸ್ ಆಯುಕ್ತರಾಗಿರುವ ಕಮಲ್ ಪಂಥ್ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ಮೂಲಗಳ ಪ್ರಕಾರ ಅವರಿಗೆ ಕೆಎಸ್‍ಆರ್‍ಪಿ ಘಟಕಕ್ಕೆ ವರ್ಗಾವಣೆ ಮಾಡುವ ಸಾಧ್ಯತೆಯಿದೆ. ಇನ್ನು …

Read More »

ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣೆಗೆ ಹೋದ್ರೆ ಕಾಂಗ್ರೆಸ್ ಸಿಂಗಲ್ ಡಿಜಿಟ್​ಗೆ ಬರುತ್ತೆ: ಸಿಟಿ ರವಿ ವ್ಯಂಗ್ಯ

ಹುಬ್ಬಳ್ಳಿ: ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಂಎಲ್​ಸಿ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಕಾಮನ್ ಮ್ಯಾನ್ ಆಗಿ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ. ಕರ್ನಾಟಕ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​​ ಸಿಂಗ್ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಬಳಿಕ ಮಹೇಶ ಟೆಂಗಿನಕಾಯಿ ಹೇಳಿಕೆ ನೀಡಿದ್ದಾರೆ. 2022ರ ಮಾರ್ಚ್​ 28, …

Read More »

ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರಿಟ್ಟ ದಂಪತಿ;

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಪ್ರೀತಿಸುವ ಜನರ ಸಂಖ್ಯೆ ಅಪಾರ. ಆದರೆ ಇಂದು ಪುನೀತ್​ ನಮ್ಮ ಜೊತೆ ಇಲ್ಲ ಎಂಬ ಕೊರಗು ತೀವ್ರವಾಗಿದೆ. ಅದರ ನಡುವೆಯೂ ಕೆಲವು ವಿಶೇಷ ಘಟನೆಗಳು ವರದಿ ಆಗುತ್ತಿವೆ. ಪುನೀತ್​ ರಾಜ್​ಕುಮಾರ್​ ಅವರ ಹೆಸರನ್ನು ಅಮರವಾಗಿಸುವ ಕೆಲಸ ಎಲ್ಲೆಡೆ ನಡೆಯುತ್ತಿದೆ. ರಸ್ತೆ, ವೃತ್ತ, ಪಾರ್ಕ್​ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪುನೀತ್​ ರಾಜ್​ಕುಮಾರ್​ ಹೆಸರನ್ನು ಇಡುವ ಕಾರ್ಯ ನಡೆದಿದೆ. ಈಗ ಕಲಬುರಗಿಯ (Kalaburagi) ದಂಪತಿಗಳು …

Read More »

ರಾಜ್ಯದಲ್ಲಿ ಕೊರೋನಾ ಏರಿಕೆ, ಒಂದೇ ದಿನ 707 ಜನರಿಗೆ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ದಿಢೀರ್ ಏರಿಕೆ ಕಂಡಿದೆ. ಜಿಲ್ಲೆಗಳಲ್ಲಿ ಕೂಡ ಕೊರೋನಾ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳೂ ಕೂಡ ಹೆಚ್ಚಾಗಿವೆ.ಇಂದು ಒಂದೇ ದಿನ 707 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದು ದಿನ 565 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 104 ಜನ ಬಿಡುಗಡೆಯಾಗಿದ್ದು, 6846 ಸಕ್ರಿಯ ಪ್ರಕರಣಗಳಿವೆ. 252 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8223 ಸಕ್ರಿಯ ಪ್ರಕರಣಗಳು ಇವೆ. …

Read More »

ಹೊಸ ವರ್ಷಾಚರಣೆ: ನಂದಿ ಬೆಟ್ಟದ ಸುತ್ತ ಮೂರು ದಿನ ನಿಷೇಧಾಜ್ಞೆ

ಬೆಂಗಳೂರು : ಬೆಂಗಳೂರು ನಗರದಲ್ಲಿ ರಾತ್ರಿ 10 ಗಂಟೆಯ ನಂತರ ಎಲ್ಲ ಬಾರ್‌, ಪಬ್‌ ಬಂದ್‌ ಮಾಡುವಂತೆ ಆದೇಶ ನೀಡಲಾಗಿದ್ದು, ಟಫ್‌ ರೂಲ್ಸ್‌ ಜಾರಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿಯಲ್ಲಿದೆ ಎಂದು ನೆರೆಯ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರ ಉತ್ಸಾಹಕ್ಕೂ ಈಗ ಬೀಗ ಹಾಕಲಾಗಿದೆ. ನಂದಿ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಜ.3 ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸುವಂತೆ ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ …

Read More »

ವಿದೇಶದಿಂದ ಬೆಂಗಳೂರಿಗೆ ಬಂದ 9 ಮಂದಿಗೆ ಕೊರೊನಾ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಕೊರೊನಾ ಸ್ಫೋಟಗೊಂಡಿದೆ. ವಿದೇಶದಿಂದ ಬಂದ 9 ಮಂದಿ ಪ್ರಯಾಣಿಕರಿಗೆ ಪಾಸಿಟಿವ್‌ ಬಂದಿದೆ. ಇಂದು ಬೆಳಗ್ಗಿನ  ಜಾವ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 9 ಮಂದಿಯಲ್ಲಿ ಸೋಂಕು ಕಾಣಿಸಿದೆ. ಇಂಗ್ಲೆಂಡ್‌ 5, ಅಮೆರಿಕ 2, ಘಾನಾ 1, ಸ್ಕಾಟ್‌ಲ್ಯಾಂಡ್‌ನಿಂದ ಬಂದ ಒಬ್ಬರಿಗೆ ಕೊರೊನಾ ಬಂದಿದೆ.

Read More »

ಹೊಸ ವರ್ಷಾಚರಣೆಯಲ್ಲಿ ಕುಡಿದವರಿಗೆ ಡ್ರಾಪ್ ಹೋಮ್ ಸೌಲಭ್ಯ!

ಡಿಸ್ಪುರ್: ಎಲ್ಲೆಡೆ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ನೀಡುವ ಹಾಗೂ ಕಫ್ರ್ಯೂ ನಿಯಮಗಳ ಬಗ್ಗೆ ಕೇಳಿಬರುತ್ತಿದೆ. ಆದರೆ ಅಸ್ಸಾಂನ ಬಿಸ್ವಂತ್ ಜಿಲ್ಲೆಯಲ್ಲಿ ಮಾತ್ರ ಹೊಸ ವರ್ಷಾಚರಣೆಗೆ ಉತ್ತೇಜನ ನೀಡುತ್ತಿದ್ದು, ಕುಡುಕರಿಗೆ ಹೊಸದೊಂದು ಸೌಲಭ್ಯವನ್ನೂ ಒದಗಿಸುತ್ತಿದೆ. ಡ್ರಂಕ್ ಆಂಡ್ ಡ್ರೈವ್ ನಿಂದಾಗುವ ಅಪಘಾತಗಳನ್ನು ತಪ್ಪಿಸಲು ಅಸ್ಸಾಂನ ಬಿಸ್ವಂತ್ ಜಿಲ್ಲಾಡಳಿತ ಎರಡು ಸಹಾಯವಾಣಿಯನ್ನು ಸ್ಥಾಪಿಸಿದೆ. ಹೊಸವರ್ಷದಲ್ಲಿ ಮದ್ಯಪಾನ ಮಾಡಿದವರನ್ನು ಮನೆಗೆ ಬಿಡಲು ಈ ಸೌಲಭ್ಯ ಬಳಸಿಕೊಳ್ಳಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ. ಕುಡಿತದ ಅಮಲಿನಲ್ಲಿ ಸಂಭವಿಸುವ …

Read More »

ಪ್ರವಾಹದಿಂದ ಹಾನಿಯಾದ ಜನರಿಗೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು: ಗೋವಿಂದ ಕಾರಜೋಳ

ಬೆಂಗಳೂರು: ಪ್ರವಾಹದಿಂದ ಹಾನಿಯಾದ ಜನರಿಗೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಗಮನಕ್ಕೆ ತಂದರು. ಬೆಳಗಾವಿ, ಬಾಗಲಕೋಟೆ ಮತ್ತು ಕಾರವಾರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿ ಬೆಳೆ ಸೇರಿ ಮನೆಗಳಿಗೂ ಹಾನಿಯಾಗಿದೆ. ಈ ಪರಿಣಾಮ ಅಲ್ಲಿನ ಜನರು ಬಸ್ ಶೆಲ್ಟರ್ ಮತ್ತು ಸಮುದಾಯ ಭವನಗಳಲ್ಲಿ ಇನ್ನೂ ಜನ ವಾಸಿಸುತ್ತಿದ್ದಾರೆ. ಅಂಥವರಿಗೆ ಪರಿಹಾರ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗೋವಿಂದ …

Read More »